1 Samuel 21:1-6
ನೋಬ್ ಊರಲ್ಲಿ ದಾವೀದ
1ದಾವೀದನು ನೋಬಿನಲ್ಲಿರುವ ಯಾಜಕನಾದ ಅಹೀಮೆಲೆಕನ ಬಳಿಗೆ ಬಂದನು. ಅಹೀಮೆಲೆಕನು ದಾವೀದನನ್ನು ಎದುರುಗೊಳ್ಳಬಂದಾಗ ಹೆದರಿ, “ಒಬ್ಬರೂ ನಿನ್ನ ಸಂಗಡ ಬಾರದೆ, ನೀನು ಒಂಟಿಯಾಗಿ ಬಂದದ್ದೇನು?” ಎಂದು ಅವನನ್ನು ಕೇಳಿದನು. 2ದಾವೀದನು ಯಾಜಕನಾದ ಅಹೀಮೆಲೆಕನಿಗೆ, “ಅರಸನು ನನಗೆ ಒಂದು ಕಾರ್ಯವನ್ನು ಆಜ್ಞಾಪಿಸಿದ್ದು, ಇಂಥದ್ದೆಂದು ಒಬ್ಬರಿಗೂ ತಿಳಿಯಬಾರದೆಂದು ನನಗೆ ಹೇಳಿದನು. ಇಂಥಿಂಥ ಸ್ಥಳಗಳಿಗೆ ಹೋಗಬೇಕೆಂದು ನಾನು ನನ್ನ ಕೆಲಸದವರಿಗೆ ನೇಮಿಸಿದ್ದೇನೆ. 3ಈಗ ನಿನ್ನ ಕೈಯಲ್ಲಿ ಏನಾದರೂ ಉಂಟೋ? ಐದು ರೊಟ್ಟಿಗಳನ್ನಾದರೂ, ನಿನಗೆ ದೊರಕಿದ ಯಾವುದನ್ನಾದರೂ ನನಗೆ ಕೊಡು,” ಎಂದನು. 4ಯಾಜಕನು ದಾವೀದನಿಗೆ ಉತ್ತರವಾಗಿ, “ಪರಿಶುದ್ಧವಾಗಿಸಿದ ರೊಟ್ಟಿಯ ಹೊರತಾಗಿ, ನನ್ನ ಕೈಯಲ್ಲಿ ಸಾಧಾರಣವಾದ ಒಂದು ರೊಟ್ಟಿಯಾದರೂ ಇಲ್ಲ. ಆ ರೊಟ್ಟಿಗಳನ್ನು ಸ್ತ್ರೀಯರೊಂದಿಗೆ ಸಂಪರ್ಕ ಮಾಡದವರಿಗೆ ಕೊಡಬಹುದು,” ಎಂದನು. 5ದಾವೀದನು ಯಾಜಕನಿಗೆ ಉತ್ತರವಾಗಿ, “ನಾನು ಹೊರಡುವುದಕ್ಕಿಂತ ಮುಂಚೆ ನಿನ್ನೆಯೂ, ಮೊನ್ನೆಯೂ ಸ್ತ್ರೀಯರು ನಮಗೆ ದೂರವಾಗಿದ್ದರು. ಅಪವಿತ್ರವಾದ ಕಾರ್ಯಗಳಿಗೆ ಹೋಗುವಾಗಲೂ ಪುರುಷರು ಶುದ್ಧರಾಗಿರುತ್ತಾರೆ. ಇಂದು ಅದಕ್ಕಿಂತಲೂ ಹೆಚ್ಚಾಗಿರುವರಲ್ಲವೇ?” ಎಂದನು. 6ಆಗ ಯೆಹೋವ ದೇವರ ಸನ್ನಿಧಿಯಿಂದ ತೆಗೆಯಲಾದ ಸಮ್ಮುಖದ ರೊಟ್ಟಿಗಳ ಹೊರತು, ಬೇರೆ ರೊಟ್ಟಿ ಅಲ್ಲಿ ಇಲ್ಲದ್ದರಿಂದ ಯಾಜಕನು ಅವನಿಗೆ ಪರಿಶುದ್ಧವಾಗಿಸಿದ ರೊಟ್ಟಿಯನ್ನು ಕೊಟ್ಟನು. ಏಕೆಂದರೆ ಅವುಗಳನ್ನು ತೆಗೆದುಕೊಳ್ಳುವ ದಿನದಲ್ಲಿ ಅವುಗಳಿಗೆ ಬದಲಾಗಿ ಬಿಸಿ ರೊಟ್ಟಿಗಳನ್ನು ಇಡಲೇಬೇಕು.
Copyright information for
KanKSB