Jeremiah 31:31-34
31ಯೆಹೋವ ದೇವರು ಹೇಳುವುದನ್ನು ಕೇಳಿ:“ನಾನು ಇಸ್ರಾಯೇಲ್ ವಂಶದವರೊಂದಿಗೂ,
ಯೆಹೂದ ವಂಶದವರೊಂದಿಗೂ
ಒಂದು ಹೊಸ ಒಡಂಬಡಿಕೆಯನ್ನು ಮಾಡಿಕೊಳ್ಳುವ ದಿನಗಳು ಬರುವವು.
32ಈ ಒಡಂಬಡಿಕೆಯು ನಾನು
ಇವರ ಪೂರ್ವಜರನ್ನು ಕೈಹಿಡಿದು
ಈಜಿಪ್ಟ್ ದೇಶದಿಂದ ಕರೆದು ತಂದಾಗ,
ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ.
ನಾನು ಅವರಿಗೆ ಯಜಮಾನನಾಗಿ ಇದ್ದರೂ,
ಆ ನನ್ನ ಒಡಂಬಡಿಕೆಯನ್ನು ಅವರು ಮೀರಿ ನಡೆದರು,”
ಎಂದು ಯೆಹೋವ ದೇವರು ಹೇಳುತ್ತಾರೆ.
33“ಆ ದಿನಗಳು ಬಂದ ಮೇಲೆ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ
ಒಡಂಬಡಿಕೆಯು ಹೀಗಿರುವುದು,” ಎಂದು ಯೆಹೋವ ದೇವರು ಹೇಳುತ್ತಾರೆ.
“ನನ್ನ ನಿಯಮವನ್ನು ಅವರ ಅಂತರಂಗದಲ್ಲಿ ಇಡುವೆನು.
ಅವರ ಹೃದಯದ ಹಲಗೆಯ ಮೇಲೆ ಬರೆಯುವೆನು.
ನಾನು ಅವರಿಗೆ ದೇವರಾಗಿರುವೆನು,
ಅವರು ನನಗೆ ಪ್ರಜೆಯಾಗಿರುವರು.
34ಇದಲ್ಲದೆ ಪ್ರತಿಯೊಬ್ಬನು ತನ್ನ ನೆರೆಯವನಿಗೂ
ತನ್ನ ಸಹೋದರನಿಗೂ,
‘ಯೆಹೋವ ದೇವರನ್ನು ಅರಿತುಕೊಳ್ಳಿರಿ,’ ಎಂದು ಬೋಧಿಸಬೇಕಾಗಿಲ್ಲ.
ಏಕೆಂದರೆ ಚಿಕ್ಕವರಿಂದ ದೊಡ್ಡವರವರೆಗೂ ಎಲ್ಲರೂ ನನ್ನನ್ನು ಅರಿತುಕೊಳ್ಳುವರು.
ನಾನು ಅವರ ದುಷ್ಕೃತ್ಯಗಳನ್ನು ಕ್ಷಮಿಸುವೆನು,”
ಎಂದು ಯೆಹೋವ ದೇವರು ಹೇಳುತ್ತಾರೆ.
“ಅವರ ಪಾಪಗಳನ್ನು ಇನ್ನೆಂದಿಗೂ
ನನ್ನ ನೆನಪಿಗೆ ತಂದುಕೊಳ್ಳುವುದಿಲ್ಲ.”
Copyright information for
KanKSB