Jeremiah 47
ಫಿಲಿಷ್ಟಿಯರನ್ನು ಕುರಿತು ಸಂದೇಶ
1ಫರೋಹನು ಗಾಜಾ ಪಟ್ಟಣವನ್ನು ಮುತ್ತಿಗೆ ಹಾಕುವ ಮೊದಲು, ಫಿಲಿಷ್ಟಿಯರಿಗೆ ವಿರೋಧವಾಗಿ ಪ್ರವಾದಿಯಾದ ಯೆರೆಮೀಯನಿಗೆ ಬಂದ ಯೆಹೋವ ದೇವರ ವಾಕ್ಯವು: 2ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ಪ್ರವಾಹಗಳು ಉತ್ತರದಿಂದ ಬರುತ್ತವೆ,ಅದು ತುಂಬಿ ತುಳುಕುವ ಪ್ರಳಯವಾಗುವುದು;
ದೇಶವನ್ನೂ ಅದರಲ್ಲಿರುವ ಸಮಸ್ತ ಪಟ್ಟಣವನ್ನೂ,
ಅದರ ನಿವಾಸಿಗಳನ್ನೂ ಆಕ್ರಮಿಸುವುವು;
ಆಗ ಮನುಷ್ಯರು ಕೂಗುವರು;
ದೇಶದ ನಿವಾಸಿಗಳೆಲ್ಲರು ಗೋಳಾಡುವರು.
3ಅವನ ಬಲವಾದ ಕುದುರೆಗಳ ಗೊರಸುಗಳ
ತುಳಿಯುವಿಕೆಯ ಶಬ್ದದಿಂದಲೂ
ಅವನ ರಥಗಳ ಘೋಷದಿಂದಲೂ
ಅವನ ಚಕ್ರಗಳ ಧ್ವನಿಯಿಂದಲೂ ತಂದೆಗಳು ಕೈ ಬಲಹೀನತೆಯಿಂದಾಗಿ
ತಮ್ಮ ಮಕ್ಕಳ ಕಡೆಗೆ ಹಿಂದಿರುಗಿ ನೋಡರು.
4ಏಕೆಂದರೆ ಫಿಲಿಷ್ಟಿಯರೆಲ್ಲರನ್ನು
ಸೂರೆ ಮಾಡುವುದಕ್ಕೂ ಟೈರಿನಿಂದಲೂ
ಸೀದೋನಿನಿಂದಲೂ ಉಳಿದವರನ್ನು
ಕಡಿದುಬಿಡುವುದಕ್ಕೂ ಆ ದಿವಸ ಬಂತು.
ಏಕೆಂದರೆ ಯೆಹೋವ ದೇವರು ಫಿಲಿಷ್ಟಿಯರನ್ನು
ಕಫ್ತೋರಿನ ▼
▼ಅದು, ಕ್ರೇತ
ದೇಶದ ಉಳಿದವರನ್ನೂ ಸೂರೆಮಾಡುವನು.5ಗಾಜಾ ಊರು ಬೋಳಿಸಿಕೊಂಡಿದೆ.
ಅಷ್ಕೆಲೋನ್ ನಾಶನ ಹೊಂದಿದೆ.
ಫಿಲಿಷ್ಟಿಯದ ಬಯಲುಸೀಮೆಯಲ್ಲಿ ಉಳಿದ ಪಟ್ಟಣವೇ
ನಿನ್ನನ್ನು ಎಂದಿನವರೆಗೆ ಕತ್ತರಿಸಿಕೊಳ್ಳುತ್ತಿರುವಿ?
6“ಅಯ್ಯೋ, ಯೆಹೋವ ದೇವರ ಖಡ್ಗವೇ,
ಎಷ್ಟರವರೆಗೆ ವಿಶ್ರಮಿಸಿಕೊಳ್ಳದೇ ಇರುವಿ?
ನಿನ್ನ ಒರೆಯಲ್ಲಿ ಅಡಗಿಕೋ;
ವಿಶ್ರಮಿಸಿಕೋ, ಸುಮ್ಮನಿರು.
7ಅದು ಹೇಗೆ ಸುಮ್ಮನಿರುವುದು?
ಅಷ್ಕೆಲೋನಿಗೆ ವಿರೋಧವಾಗಿ ಮತ್ತು
ಸಮುದ್ರ ತೀರಕ್ಕೆ ವಿರೋಧವಾಗಿ ಯೆಹೋವ ದೇವರೇ ಅದಕ್ಕೆ ಆಜ್ಞಾಪಿಸಿದ್ದಾರಲ್ಲಾ?
ಅಲ್ಲಿ ಅದನ್ನು ನೇಮಿಸಿದ್ದಾನೆ.”
Copyright information for
KanKSB