Psalms 128
ಯಾತ್ರಾ ಗೀತೆ. 1ಯೆಹೋವ ದೇವರಿಗೆ ಭಯಪಟ್ಟು ಅವರ ಮಾರ್ಗಗಳಲ್ಲಿನಡೆದುಕೊಳ್ಳುವ ಪ್ರತಿಯೊಬ್ಬನು ಧನ್ಯನು.
2ನಿನ್ನ ಕೈಗಳ ಕಷ್ಟಾರ್ಜಿತವನ್ನು ನೀನು ಊಟಮಾಡಿ
ಆಶೀರ್ವಾದವನ್ನೂ ಅಭಿವೃದ್ಧಿಯನ್ನೂ ಹೊಂದುವಿ.
3ನಿನ್ನ ಹೆಂಡತಿಯು ನಿನ್ನ ಮನೆಯಲ್ಲಿರುವ
ಫಲಭರಿತವಾದ ದ್ರಾಕ್ಷಿಬಳ್ಳಿಯ ಹಾಗೆ ಇರುವಳು.
ನಿನ್ನ ಮೇಜಿನ ಸುತ್ತಲಿರುವ ನಿನ್ನ ಮಕ್ಕಳು,
ಓಲಿವ್ ಮರಗಳ ಸಸಿಗಳ ಹಾಗೆ ಇರುವರು.
4ಯೆಹೋವ ದೇವರಿಗೆ ಭಯಪಡುವ ಮನುಷ್ಯನು
ಹೀಗೆಯೇ ಆಶೀರ್ವಾದ ಹೊಂದುವನು.
5ಯೆಹೋವ ದೇವರು ನಿನ್ನನ್ನು ಚೀಯೋನಿನೊಳಗಿಂದ
ನಿನ್ನ ಜೀವಮಾನವೆಲ್ಲಾ ಆಶೀರ್ವದಿಸಲಿ;
ನೀನು ಯೆರೂಸಲೇಮಿನ ಸಮೃದ್ಧಿಯನ್ನು ಕಾಣುವಿ.
6ನೀನು ಮಕ್ಕಳ ಮಕ್ಕಳನ್ನು ಕಾಣುವ ಬದುಕು ನಿನಗಿರಲಿ
ಇಸ್ರಾಯೇಲರ ಮೇಲೆ ಸಮಾಧಾನವಿರಲಿ.
Copyright information for
KanKSB