‏ Exodus 3:5-10

5ಆಗ ದೇವರು ಅವನಿಗೆ, “ಇಲ್ಲಿ ಸಮೀಪಕ್ಕೆ ಬರಬೇಡ, ನಿನ್ನ ಪಾದರಕ್ಷೆಗಳನ್ನು ತೆಗೆದಿಡು. ನೀನು ನಿಂತಿರುವ ಸ್ಥಳ ಪರಿಶುದ್ಧ ಭೂಮಿ,” ಎಂದರು. 6ಇದಲ್ಲದೆ ಮೋಶೆಗೆ, “ನಾನು ನಿನ್ನ ಪಿತೃಗಳ ದೇವರೂ ಅಬ್ರಹಾಮನ ದೇವರೂ ಇಸಾಕನ ದೇವರೂ ಯಾಕೋಬನ ದೇವರೂ ಆಗಿದ್ದೇನೆ,” ಎಂದು ಹೇಳಿದರು. ಮೋಶೆಯು ದೇವರ ಕಡೆ ದೃಷ್ಟಿ ಇಡುವುದಕ್ಕೆ ಭಯಪಟ್ಟು ತನ್ನ ಮುಖವನ್ನು ಮುಚ್ಚಿಕೊಂಡನು.

7ಆಗ ಯೆಹೋವ ದೇವರು, “ಈಜಿಪ್ಟಿನಲ್ಲಿರುವ ನನ್ನ ಜನರ ವ್ಯಥೆಯನ್ನು ವಾಸ್ತವವಾಗಿಯೂ ಕಂಡಿದ್ದೇನೆ. ಬಿಟ್ಟೀ ಮಾಡಿಸುವವರ ವಿಷಯದಲ್ಲಿ ಅವರು ಇಟ್ಟ ಮೊರೆಯು ನನಗೆ ಕೇಳಿಸಿತು. ಅವರ ದುಃಖವನ್ನು ಬಲ್ಲೆನು. 8ಆದಕಾರಣ ಅವರನ್ನು ಈಜಿಪ್ಟನವರ ಕೈಯೊಳಗಿಂದ ಬಿಡುಗಡೆ ಮಾಡುವುದಕ್ಕೆ ಬಂದಿದ್ದೇನೆ. ನಾನು ಅವರನ್ನು ಆ ದೇಶದಿಂದ ಬಿಡಿಸಿ, ಹಾಲೂ ಜೇನೂ ಹರಿಯುವ ವಿಸ್ತಾರವಾದ ಒಳ್ಳೆಯ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡೆಸಿಕೊಂಡು ಹೋಗುವುದಕ್ಕೂ ಇಳಿದು ಬಂದಿದ್ದೇನೆ. 9ಈಗ ಇಸ್ರಾಯೇಲರ ಕೂಗು ನನಗೆ ಮುಟ್ಟಿದೆ. ಈಜಿಪ್ಟಿನವರು ಅವರಿಗೆ ಕೊಡುತ್ತಿರುವ ಉಪದ್ರವವನ್ನು ನಾನು ನೋಡಿದ್ದೇನೆ. 10ಆದ್ದರಿಂದ ಈಗ ಬಾ, ನಾನು ನಿನ್ನನ್ನು ಫರೋಹನ ಬಳಿಗೆ ಕಳುಹಿಸುತ್ತೇನೆ. ಇಸ್ರಾಯೇಲರಾದ ನನ್ನ ಜನರನ್ನು ನೀನು ಈಜಿಪ್ಟಿನೊಳಗಿಂದ ಹೊರಗೆ ಬರಮಾಡಬೇಕು,” ಎಂದರು.
Copyright information for KanKSB