‏ Genesis 19:24-29

24ಆಗ ಯೆಹೋವ ದೇವರು ಸೊದೋಮ್ ಮತ್ತು ಗೊಮೋರದ ಮೇಲೆ ಗಂಧಕವನ್ನೂ, ಬೆಂಕಿಯನ್ನೂ ಆಕಾಶದಿಂದ ಸುರಿಸಿದರು. 25ಹೀಗೆ ದೇವರು ಆ ಪಟ್ಟಣಗಳನ್ನೂ, ಅಲ್ಲಿಯ ಪ್ರದೇಶವನ್ನೂ, ಪಟ್ಟಣಗಳ ಎಲ್ಲಾ ನಿವಾಸಿಗಳನ್ನೂ, ಭೂಮಿಯ ಮೇಲೆ ಬೆಳೆದ ಬೆಳೆಯನ್ನೂ ಅಳಿಸಿಬಿಟ್ಟರು. 26ಆದರೆ ಲೋಟನ ಹಿಂದೆ ಬರುತ್ತಿದ್ದ ಅವನ ಹೆಂಡತಿಯು ಹಿಂದಿರುಗಿ ನೋಡಿ ಉಪ್ಪಿನ ಸ್ತಂಭವಾದಳು.

27ಅಬ್ರಹಾಮನು ಬೆಳಿಗ್ಗೆ ಎದ್ದು, ತಾನು ಯೆಹೋವ ದೇವರ ಸನ್ನಿಧಿಯಲ್ಲಿ ನಿಂತಿದ್ದ ಆ ಸ್ಥಳಕ್ಕೆ ಹೋದನು. 28ಅವನು ಸೊದೋಮ್ ಗೊಮೋರಗಳ ಕಡೆಗೂ ಮೈದಾನದ ಎಲ್ಲಾ ಪ್ರದೇಶಗಳ ಕಡೆಗೂ ನೋಡಿದನು. ಆ ಪ್ರದೇಶದಿಂದ ಹೊಗೆಯು ಕುಲುಮೆಯ ಹೊಗೆಯಂತೆ ಏರುತ್ತಿತ್ತು.

29ದೇವರು ಆ ಬಯಲುಸೀಮೆಯ ಪಟ್ಟಣಗಳನ್ನು ನಾಶಮಾಡಿದಾಗ, ಲೋಟನು ವಾಸವಾಗಿದ್ದ ಪಟ್ಟಣಗಳನ್ನು ನಾಶಮಾಡಿದರು. ಆದರೆ ಅಬ್ರಹಾಮನನ್ನು ಜ್ಞಾಪಕಮಾಡಿಕೊಂಡು, ಲೋಟನನ್ನು ಹೊರಗೆ ಕಳುಹಿಸಿ ಪಾರು ಮಾಡಿದರು.
Copyright information for KanKSB