Jeremiah 32:6-9
6ಆಗ ಯೆರೆಮೀಯನು ತಿಳಿಸಿದ್ದು, “ಯೆಹೋವ ದೇವರ ವಾಕ್ಯವು ನನಗೆ ಬಂತು, 7ಇಗೋ, ನಿನ್ನ ಚಿಕ್ಕಪ್ಪನಾದ ಶಲ್ಲೂಮನ ಮಗನಾದ ಹನಮೇಲನು ನಿನ್ನ ಬಳಿಗೆ ಬಂದು, ‘ಅನಾತೋತಿನಲ್ಲಿರುವ ನನ್ನ ಹೊಲವನ್ನು ನಿನಗೋಸ್ಕರ ಕೊಂಡುಕೋ. ಏಕೆಂದರೆ ಅದನ್ನು ಕೊಂಡುಕೊಳ್ಳುವ ಹಾಗೆ ವಿಮೋಚಿಸುವ ಅಧಿಕಾರ ನಿನಗುಂಟು,’ ಎಂದು ಹೇಳುವನು. 8“ಹಾಗೆಯೇ ನನ್ನ ಚಿಕ್ಕಪ್ಪನ ಮಗನಾದ ಹನಮೇಲನು, ಯೆಹೋವ ದೇವರ ವಾಕ್ಯದ ಪ್ರಕಾರ ನನ್ನ ಬಳಿಗೆ ಸೆರೆಮನೆಯ ಅಂಗಳಕ್ಕೆ ಬಂದು, ‘ಬೆನ್ಯಾಮೀನಿನ ದೇಶದಲ್ಲಿರುವ ಅನಾತೋತಿನಲ್ಲಿರುವ ನನ್ನ ಹೊಲವನ್ನು ನಿನಗೋಸ್ಕರ ಕೊಂಡುಕೋ. ಏಕೆಂದರೆ ಬಾಧ್ಯದ ಅಧಿಕಾರವೂ ನಿನ್ನದು; ವಿಮೋಚನೆಯೂ ನಿನ್ನದು; ಅದನ್ನು ನಿನಗೋಸ್ಕರ ಕೊಂಡುಕೋ,’ ಎಂದು ಬೇಡಿಕೊಂಡು ಹೇಳಿದನು. “ಆಗ ಅದು ಯೆಹೋವ ದೇವರ ವಾಕ್ಯವೆಂದು ನಾನು ತಿಳಿದುಕೊಂಡೆನು. 9ಹಾಗೆ ನಾನು ನನ್ನ ಚಿಕ್ಕಪ್ಪನ ಮಗನಾದ ಹನಮೇಲನಿಂದ ಅನಾತೋತಿನಲ್ಲಿದ್ದ ಹೊಲವನ್ನು ಕೊಂಡುಕೊಂಡು, ಅವನಿಗೆ ಹದಿನೇಳು ಬೆಳ್ಳಿನಾಣ್ಯ ▼▼ಹದಿನೇಳು ಬೆಳ್ಳಿನಾಣ್ಯ ಸುಮಾರು 200 ಗ್ರಾಂ ಬೆಳ್ಳಿ
ತೂಕಮಾಡಿ ಕ್ರಯಕೊಟ್ಟೆನು.
Copyright information for
KanKSB