Joel 2:28-32
ಯೆಹೋವ ದೇವರ ದಿನ
28“ಆಮೇಲೆ ನಾನು,ನನ್ನ ಆತ್ಮನನ್ನು ಎಲ್ಲಾ ಮನುಷ್ಯರ ಮೇಲೆ ಸುರಿಸುವೆನು,
ನಿಮ್ಮ ಗಂಡು ಹೆಣ್ಣುಮಕ್ಕಳು ಪ್ರವಾದಿಸುವರು.
ನಿಮ್ಮ ಹಿರಿಯರಿಗೆ ಕನಸುಗಳು ಬೀಳುವುವು.
ನಿಮ್ಮ ಯುವಜನರಿಗೆ ದರ್ಶನಗಳಾಗುವವು.
29ಆ ದಿನಗಳಲ್ಲಿ, ನನ್ನ ದಾಸ ದಾಸಿಯರ ಮೇಲೆ,
ನನ್ನ ಆತ್ಮವನ್ನು ಸುರಿಸುವೆನು.
30ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿ ಅದ್ಭುತಗಳನ್ನು,
ರಕ್ತ, ಬೆಂಕಿ, ಹಬೆಯನ್ನು ತೋರಿಸುವೆನು.
31ಯೆಹೋವ ದೇವರ ಭಯಂಕರವಾದ ಮಹಾದಿನವು ಬರುವುದಕ್ಕಿಂತ ಮೊದಲು,
ಸೂರ್ಯನು ಕತ್ತಲಾಗುವನು,
ಚಂದ್ರನು ರಕ್ತವಾಗುವನು.
32ಯೆಹೋವ ದೇವರ ಹೆಸರನ್ನು
ಕರೆಯುವವರೆಲ್ಲರಿಗೆ ರಕ್ಷಣೆ ಆಗುವುದು.
ಏಕೆಂದರೆ ಚೀಯೋನ್ ಪರ್ವತದಲ್ಲಿಯೂ ಯೆರೂಸಲೇಮಿನಲ್ಲಿಯೂ
ಅನೇಕರಿಗೆ ಮುಕ್ತಿ ದೊರಕುವುದು.
ಯೆಹೋವ ದೇವರು ಹೇಳಿದ ಪ್ರಕಾರ
ಯೆಹೋವ ದೇವರ ಕರೆಹೊಂದಿ ಉಳಿದವರಲ್ಲಿಯೂ ಬಿಡುಗಡೆ ಇರುವುದು.
Copyright information for
KanKSB