Leviticus 14:1-7
ಚರ್ಮರೋಗದ ಶುದ್ಧೀಕರಣ
1ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ: 2“ಚರ್ಮರೋಗಿಯು ತನ್ನ ಶುದ್ಧತೆಯ ದಿನದಲ್ಲಿ ಮಾಡತಕ್ಕ ನಿಯಮವು ಇದೇ. ಅವನನ್ನು ಯಾಜಕನ ಬಳಿಗೆ ಕರೆದುಕೊಂಡು ಬರಬೇಕು. 3ಯಾಜಕನು ಪಾಳೆಯದ ಆಚೆಗೆ ಹೊರಟು ಹೋಗಬೇಕು. ಚರ್ಮರೋಗದಿಂದ ರೋಗಿಯು ಗುಣವಾದನೆಂದು ಯಾಜಕನು ಪರೀಕ್ಷಿಸಿದರೆ, 4ಆಗ ಶುದ್ಧಮಾಡಿಕೊಳ್ಳುವವನಿಗೋಸ್ಕರ ಜೀವವುಳ್ಳ ಮತ್ತು ಶುದ್ಧವಾದ ಎರಡು ಪಕ್ಷಿಗಳನ್ನೂ, ದೇವದಾರು ಕಟ್ಟಿಗೆಯನ್ನೂ, ರಕ್ತವರ್ಣದ ದಾರವನ್ನೂ ಮತ್ತು ಹಿಸ್ಸೋಪನ್ನೂ ತೆಗೆದುಕೊಳ್ಳುವಂತೆ ಯಾಜಕನು ಆಜ್ಞಾಪಿಸಬೇಕು. 5ಆ ಪಕ್ಷಿಗಳಲ್ಲಿ ಒಂದನ್ನು ಹರಿಯುವ ನೀರಿನ ಮೇಲೆ ಮಣ್ಣಿನ ಪಾತ್ರೆಯಲ್ಲಿ ಕೊಲ್ಲಬೇಕೆಂದು ಯಾಜಕನು ಆಜ್ಞಾಪಿಸಬೇಕು. 6ಇದಲ್ಲದೆ ಜೀವವುಳ್ಳ ಪಕ್ಷಿಯನ್ನೂ, ದೇವದಾರು ಕಟ್ಟಿಗೆಯನ್ನೂ, ರಕ್ತವರ್ಣದ ದಾರವನ್ನೂ ಮತ್ತು ಹಿಸ್ಸೋಪನ್ನೂ ತೆಗೆದುಕೊಂಡು, ಹರಿಯುವ ನೀರಿನ ಬಳಿಯಲ್ಲಿ ವಧಿಸಿದ ಆ ಪಕ್ಷಿಯ ರಕ್ತದಲ್ಲಿ ಅದ್ದಿ, 7ಚರ್ಮರೋಗದಿಂದ ಶುದ್ಧಮಾಡಿಸಿಕೊಳ್ಳುವವನ ಮೇಲೆ ಏಳು ಸಾರಿ ಚಿಮುಕಿಸಿ, ಅವನನ್ನು ಶುದ್ಧನೆಂದು ನುಡಿದು, ಆ ಜೀವವುಳ್ಳ ಪಕ್ಷಿಯನ್ನು ಬಯಲಾದ ಹೊಲದಲ್ಲಿ ಬಿಟ್ಟುಬಿಡಬೇಕು.
Copyright information for
KanKSB