Psalms 16:8-11
8ನಾನು ಯೆಹೋವ ದೇವರನ್ನು ಯಾವಾಗಲೂ ನನ್ನೆದುರಿನಲ್ಲಿಯೇ ಇಟ್ಟುಕೊಂಡಿದ್ದೇನೆ.ಅವರು ನನ್ನ ಬಲಗಡೆಯಲ್ಲಿ ಇರುವುದರಿಂದ ನಾನು ಎಂದಿಗೂ ಕದಲೆನು.
9ಆದ್ದರಿಂದ ನನ್ನ ಹೃದಯ ಹರ್ಷಿಸುವುದು, ನನ್ನ ನಾಲಿಗೆ ಉಲ್ಲಾಸಗೊಳ್ಳುವುದು;
ನನ್ನ ಶರೀರವು ಸಹ ಸುರಕ್ಷಿತವಾಗಿ ವಿಶ್ರಮಿಸುವುದು.
10ಏಕೆಂದರೆ ನೀವು ನನ್ನ ಪ್ರಾಣವನ್ನು ಪಾತಾಳದಲ್ಲಿ ಬಿಟ್ಟುಬಿಡುವುದಿಲ್ಲ;
ನಿಮ್ಮ ನಂಬಿಗಸ್ತನನ್ನು ಕೊಳೆಯುವ ಅವಸ್ಥೆಗೆ ತರುವುದಿಲ್ಲ.
11ಜೀವಮಾರ್ಗವನ್ನು ನನಗೆ ತಿಳಿಯಪಡಿಸುವಿರಿ.
ನಿಮ್ಮ ಸನ್ನಿಧಿಯಲ್ಲಿ ಪರಿಪೂರ್ಣ ಸಂತೋಷವಿದೆ;
ನಿಮ್ಮ ಬಲಗಡೆಯಲ್ಲಿ ನಿತ್ಯಾನಂದವೂ ಇರುತ್ತದೆ.
Copyright information for
KanKSB