‏ Psalms 34:12-16

12ನಿಮ್ಮಲ್ಲಿ ಜೀವನವನ್ನು ಪ್ರೀತಿಸುವವನು
ಮತ್ತು ಬಹಳ ದಿನಗಳವರೆಗೆ ಬದುಕಬೇಕೆ?
13ನೀನು ಕೇಡಿನಿಂದ ನಿನ್ನ ನಾಲಿಗೆಯನ್ನು,
ಮೋಸವನ್ನು ನುಡಿಯದ ಹಾಗೆ ನಿನ್ನ ತುಟಿಗಳನ್ನೂ ನಿಯಂತ್ರಿಸಿಕೋ.
14ಕೇಡಿನಿಂದ ತೊಲಗಿ ಒಳ್ಳೆಯದನ್ನು ಮಾಡು;
ಸಮಾಧಾನವನ್ನು ಹುಡುಕಿ ಅದನ್ನು ಹಿಂಬಾಲಿಸು.

15ನೀತಿವಂತರ ಮೇಲೆ ಯೆಹೋವ ದೇವರು ದೃಷ್ಟಿ ಇಡುತ್ತಾರೆ,
ಅವರು ಮೊರೆಯಿಡುವಾಗ ದೇವರು ಕಿವಿಗೊಡುತ್ತಾರೆ.
16ಆದರೆ ಕೆಟ್ಟದ್ದನ್ನು ಮಾಡುವವರಿಗೆ ಯೆಹೋವ ದೇವರು ವಿಮುಖರಾಗಿದ್ದಾರೆ,
ಅಂಥವರ ಹೆಸರನ್ನು ಭೂಮಿಯೊಳಗಿಂದ ತೆಗೆದುಹಾಕುವರು.
Copyright information for KanKSB