1 Corinthians 10

ಕ್ರೈಸ್ತರ ಎಚ್ಚರಿಕೆಗಾಗಿ ಪೌಲನು ಇಸ್ರಾಯೇಲ್ಯರ ದೃಷ್ಟಾಂತವನ್ನು ಸೂಚಿಸಿದ್ದು

1ಪ್ರಿಯರೇ, ನಾನು ನಿಮಗೆ ತಿಳಿಸಲು ಅಪೇಕ್ಷಿಸುವ ಸಂಗತಿ ಏನೆಂದರೆ, ನಮ್ಮ ಪಿತೃಗಳೆಲ್ಲರೂ
10:1 ವಿಮೋ. 13:21
ಮೇಘದ ಅಡಿಯಲ್ಲಿದ್ದು ಸಮುದ್ರವನ್ನು ದಾಟಿಹೋದರು.
2
10:2 ವಿಮೋ. 14:22
ಅವರೆಲ್ಲರೂ ಮೋಶೆಯನ್ನು ಹಿಂಬಾಲಿಸುವುದಕ್ಕಾಗಿ ಮೇಘದಲ್ಲಿಯೂ ಸಮುದ್ರದಲ್ಲಿಯೂ ದೀಕ್ಷಾಸ್ನಾನವನ್ನು ಹೊಂದಿದರು.
3ಅವರೆಲ್ಲರೂ
10:3 ಯೋಹಾ 6:31
ಆತ್ಮಿಕವಾದ
10:3 ವಿಮೋ. 16:15,35
ಒಂದೇ ಆಹಾರವನ್ನು ತಿಂದರು.
4
10:4 ವಿಮೋ. 17:6
ಅವರೆಲ್ಲರೂ ದೈವಿಕವಾದ ಒಂದೇ ನೀರನ್ನು ಕುಡಿದರು. ಹೇಗೆಂದರೆ ಅವರನ್ನು ಹಿಂಬಾಲಿಸುತ್ತಿದ್ದ ದೈವಿಕವಾದ ಬಂಡೆಯೊಳಗಿಂದ ಬಂದ ನೀರನ್ನು ಕುಡಿಯುತ್ತಿದ್ದರು. ಆ ಬಂಡೆ ಕ್ರಿಸ್ತನೇ.

5ಆದರೂ ಅವರಲ್ಲಿ ಬಹು ಮಂದಿಯನ್ನು ದೇವರು ಮೆಚ್ಚಲಿಲ್ಲ.
10:5 ಅರಣ್ಯ. 14:16,19
ಆದ್ದರಿಂದ ಅವರು ಸಂಹರಿಸಲ್ಪಟ್ಟರು ಮತ್ತು ಅವರ ಶವಗಳು ಅಡವಿಯಲ್ಲೆಲ್ಲ ಬಿದ್ದವು.
6
10:6 ಅರಣ್ಯ. 11:4,33; ಕೀರ್ತ. 106:14
ಅವರು ಕೆಟ್ಟ ವಿಷಯಗಳನ್ನು ಮೋಹಿಸದಂತೆ ನಾವು ಮೋಹಿಸುವವರಾಗಬಾರದೆಂಬುದಕ್ಕಾಗಿ ಈ ಸಂಗತಿಗಳು ನಮಗೆ ನಿದರ್ಶನಗಳಾಗಿವೆ.

7ಅವರಲ್ಲಿ ಕೆಲವರು ವಿಗ್ರಹಾರಾಧಕರಾಗಿದ್ದರು,
10:7 ವಿಮೋ. 32:6
<<ಜನರು ತಿನ್ನುವುದಕ್ಕೂ, ಕುಡಿಯುವುದಕ್ಕೂ ಕುಳಿತುಕೊಂಡರು. ಕಾಮಾಭಿಲಾಷೆಯಿಂದ ಕುಣಿದಾಡುವುದಕ್ಕೆ ಎದ್ದರು>> ಎಂದು ಬರೆದಿದೆಯಲ್ಲಾ.
10:7 1 ಕೊರಿ. 10:14
ನೀವು ಅವರ ಹಾಗೆ ವಿಗ್ರಹಾರಾಧಕರಾಗಬೇಡಿರಿ.
8
10:8 ಅರಣ್ಯ. 25:1-9
ಅವರಲ್ಲಿ ಕೆಲವರು ಜಾರತ್ವ ಮಾಡಿ ಒಂದೇ ದಿನದಲ್ಲಿ ಇಪ್ಪತ್ತು ಮೂರು ಸಾವಿರ ಜನರು ಸಾವನ್ನಪ್ಪಿದರು.
10:8 1 ಕೊರಿ. 6:18
ಅವರ ಹಾಗೆ ನಾವು ಜಾರತ್ವ ಮಾಡದೆ ಇರೋಣ.

9
10:9 ಅರಣ್ಯ. 21:5,6
ಅವರಲ್ಲಿ ಕೆಲವರು ಕರ್ತನನ್ನು ಪರೀಕ್ಷಿಸಿ ಸರ್ಪಗಳಿಂದ ನಾಶವಾದರು. ನಾವು ಪರೀಕ್ಷಿಸದೆ ಇರೋಣ.
10
10:10 ಅರಣ್ಯ. 14:2, 29-37
ಇದಲ್ಲದೆ ಅವರಲ್ಲಿ ಕೆಲವರು ಗೊಣಗುಟ್ಟಿ ಸಂಹಾರಕ ದೂತನ ಕೈಯಿಂದ ನಾಶವಾದರು. ನೀವು ಗುಣಗುಟ್ಟಬೇಡಿರಿ.

11ಅವರಿಗೆ ಸಂಭವಿಸಿದ ಈ ಸಂಗತಿಗಳು ನಿದರ್ಶನರೂಪವಾಗಿವೆ. ಮತ್ತು ಯುಗಾಂತ್ಯಕ್ಕೆ ಬಂದಿರುವವರಾದ ನಮಗೆ ಇದು
10:11 ರೋಮಾ. 4:23,24
ಎಚ್ಚರಿಕೆಯ ಮಾತುಗಳಾಗಿ ಬರೆದಿವೆ.
12
10:12 ರೋಮಾ. 11:20
ಆದಕಾರಣ ನಿಂತಿದ್ದೇನೆಂದು ತಿಳಿದಿರುವವನು ಬೀಳದಂತೆ ಎಚ್ಚರಿಕೆಯಾಗಿರಲಿ.
13ಮನುಷ್ಯರಿಗೆ ಸಾಧಾರಣವಾಗಿ ಬರುವ ಶೋಧನೆಯೇ ಹೊರತು ಬೇರೆ ಯಾವುದೂ ನಿಮಗೆ ಸಂಭವಿಸಲಿಲ್ಲವಲ್ಲ.
10:13 1 ಕೊರಿ. 1:9
ದೇವರು ನಂಬಿಗಸ್ತನು. ನಿಮ್ಮ ಶಕ್ತಿಗೆ ಮೀರುವ ಶೋಧನೆಯನ್ನು ನಿಮಗೆ ಬರಗೊಡಿಸದೆ ನೀವು ಅದನ್ನು ಸಹಿಸುವುದಕ್ಕೆ ಶಕ್ತರಾಗುವಂತೆ ಶೋಧನೆಯಾಗುತ್ತಲೇ
10:13 2 ಪೇತ್ರ. 2:9
ತಪ್ಪಿಸಿಕೊಳ್ಳುವ ಮಾರ್ಗವನ್ನು ಸಿದ್ಧಮಾಡುವನು.

ಕ್ರಿಸ್ತ ಸೇವೆಗೂ ವಿಗ್ರಹಾರಾಧನೆಗೂ ಸಂಬಂಧವೇನೂ ಇರಬಾರದೆಂಬ ಬೋಧನೆ

14ಆದ್ದರಿಂದ ಪ್ರಿಯರೇ,
10:14 1 ಕೊರಿ. 10:7
ವಿಗ್ರಹಾರಾಧನೆಯನ್ನು ಬಿಟ್ಟು ದೂರವಾಗಿರಿ.
15ನೀವು ವಿವೇಕಿಗಳೆಂದು ಇದನ್ನು ಹೇಳುತ್ತೇನೆ. ನಾನು ಹೇಳುವುದನ್ನು ನೀವೇ ಯೋಚಿಸಿರಿ. 16
10:16 ಮತ್ತಾ 26:27,28
ನಾವು ದೇವರ ಸ್ತೋತ್ರಮಾಡಿ ಪಾನಪಾತ್ರೆಯಲ್ಲಿ ಪಾನ ಮಾಡುವುದು ಕ್ರಿಸ್ತನ ರಕ್ತದಲ್ಲಿ ಪಾಲುಗಾರರಾಗಿದ್ದೇವೆಂಬುದನ್ನು ಸೂಚಿಸುತ್ತದಲ್ಲವೇ?
10:16 ಮತ್ತಾ 26:27; 1 ಕೊರಿ. 11:23,24
ನಾವು ರೊಟ್ಟಿಯನ್ನು ಮುರಿದು ತಿನ್ನುವುದು ಕ್ರಿಸ್ತನ ದೇಹದಲ್ಲಿ ಪಾಲುಗಾರರಾಗಿದ್ದೇವೆಂಬುದನ್ನು ಸೂಚಿಸುತ್ತದಲ್ಲವೇ?
17ರೊಟ್ಟಿ ಒಂದೇ ಆಗಿರುವ ಹಾಗೆ ಅನೇಕರಾಗಿರುವ ನಾವೆಲ್ಲರು
10:17 1 ಕೊರಿ. 12:12,13; ರೋಮಾ. 12:5; ಕೊಲೊ. 3:15
ಒಂದೇ ದೇಹದಂತಿದ್ದೇವೆ. ಯಾಕೆಂದರೆ ನಾವೆಲ್ಲರೂ ಆ ಒಂದೇ ರೊಟ್ಟಿಯಲ್ಲಿ ಪಾಲು ತೆಗೆದುಕೊಂಡು ತಿನ್ನುತ್ತೇವೆ.

18ಇಸ್ರಾಯೇಲ್ಯ ಜನರ ಕುರಿತು ಯೋಚಿಸಿರಿ.
10:18 ಯಾಜ. 3:7,15
ಯಜ್ಞಮಾಡಿದ್ದನ್ನು ತಿನ್ನುವವರು ಯಜ್ಞವೇದಿಯೊಡನೆ ಪಾಲುಗಾರರಾಗಿದ್ದಾರಲ್ಲವೇ.
19ಹಾಗಾದರೆ ನಾನು ಏನು ಹೇಳಿದ ಹಾಗಾಯಿತು? ವಿಗ್ರಹಕ್ಕೆ ಅರ್ಪಿಸಿದ ಆಹಾರಪದಾರ್ಥವು ವಾಸ್ತವವೆಂದೋ ಅಥವಾ ವಿಗ್ರಹವು
10:19 ಅಥವಾ ವಿಶೇಷ
ವಾಸ್ತವವೆಂದು ನನ್ನ ಅಭಿಪ್ರಾಯವೋ? ಅಲ್ಲ,

20ಆದರೆ ಅನ್ಯಜನರು ತಾವು ಅರ್ಪಿಸುವ ಬಲಿಗಳನ್ನು ದೇವರಿಗಲ್ಲ,
10:20 ಧರ್ಮೋ. 32:17, ಕೀರ್ತ. 106:37
ದೆವ್ವಗಳಿಗೆ ಅರ್ಪಿಸುತ್ತಾರೆಂಬುದು ನನ್ನ ಅಭಿಪ್ರಾಯವು. ನೀವು ದೆವ್ವಗಳೊಡನೆ ಪಾಲುಗಾರರಾಗಿರಬೇಕೆಂಬುದು ನನ್ನ ಇಷ್ಟವಲ್ಲ.
21
10:21 2 ಕೊರಿ. 6:15,16
ನೀವು ಕರ್ತನ ಪಾನಪಾತ್ರೆಯಲ್ಲಿಯೂ ಹಾಗೂ ದೆವ್ವಗಳ ಪಾನಪಾತ್ರೆಯಲ್ಲಿಯೂ ಕುಡಿಯಲಾರಿರಿ. ಕರ್ತನ ಪಂಕ್ತಿಯಲ್ಲಿಯೂ ಮತ್ತು ದೆವ್ವಗಳ ಪಂಕ್ತಿಯಲ್ಲಿಯೂ ಊಟಮಾಡಲಾರಿರಿ.
22
10:22 ಧರ್ಮೋ. 32:21
ಕರ್ತನಿಗೆ ಕೋಪವನ್ನುಂಟುಮಾಡಿ ರೇಗಿಸಬೇಕೆಂದಿದ್ದೇವೋ? ಆತನಿಗಿಂತಲೂ ನಾವು ಬಲಿಷ್ಟರೋ?

ವಿಗ್ರಹಕ್ಕೆ ಅರ್ಪಿತವಾದದ್ದನ್ನು ತಿನ್ನಬಹುದೋ ಬಾರದೋ ಎಂಬ ವಿಚಾರದಲ್ಲಿ ಪರರ ಹಿತವನ್ನು ಲಕ್ಷಿಸುವುದೇ ಮುಖ್ಯವಾದದ್ದು

23
10:23 1 ಕೊರಿ. 6:18; 8:9
<<ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ನನಗೆ ಅಧಿಕಾರವುಂಟು.>> ಆದರೆ ಎಲ್ಲವೂ ಪ್ರಯೋಜನಕರವಾಗಿರುವುದಿಲ್ಲ. <<ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ಅಧಿಕಾರವುಂಟು>> ಆದರೆ ಎಲ್ಲವೂ ಜನರನ್ನು ಭಕ್ತಿಯಲ್ಲಿ ಬೆಳೆಸುವುದಿಲ್ಲ.
24
10:24 ವ 33 ನೋಡಿರಿ
ಪ್ರತಿಯೊಬ್ಬನು ತನ್ನ ಹಿತವನ್ನು ಚಿಂತಿಸದೇ ಪರಹಿತವನ್ನು ಚಿಂತಿಸಲಿ.

25
10:25 1 ಕೊರಿ. 8:7:
ಮಾಂಸದ ಅಂಗಡಿಯಲ್ಲಿ ಮಾರುವಂಥದ್ದು ಏನಿದ್ದರೂ ಅದನ್ನು ಮನಸಾಕ್ಷಿಯಲ್ಲಿ ಸಂಶಯ ಹುಟ್ಟಿಸುವಂತೆ ವಿಚಾರ ಮಾಡದೇ ತಿನ್ನಿರಿ.
26
10:26 ಕೀರ್ತ. 24:1; ಕೀರ್ತ. 50:12
<<ಭೂಮಿಯು ಅದರಲ್ಲಿರುವ ಸಮಸ್ತವೂ ಕರ್ತನದಲ್ಲವೇ.>>
27ಕ್ರಿಸ್ತನನ್ನು ನಂಬದವರಲ್ಲಿ ಒಬ್ಬನು ನಿಮ್ಮನ್ನು ಊಟಕ್ಕೆ ಕರೆಯುವಾಗ ಹೋಗುವುದಕ್ಕೆ ನಿಮಗಿಷ್ಟವಿದ್ದರೆ ನಿಮಗೇನು ಬಡಿಸಿದರೂ ಮನಸಾಕ್ಷಿಯನ್ನು ಪ್ರಶ್ನಿಸದೇ ಅದನ್ನು ತಿನ್ನಿರಿ.

28ಆದರೆ ಒಬ್ಬನು ನಿಮಗೆ <<ಇದು ವಿಗ್ರಹಾಲಯದಲ್ಲಿ ಬಲಿಕೊಟ್ಟದ್ದು>> ಎಂದು ಹೇಳಿದರೆ ಈ ಸಂಗತಿಯನ್ನು ತಿಳಿಸಿದವನ ನಿಮಿತ್ತವಾಗಿಯೂ ಮನಸಾಕ್ಷಿಯ ನಿಮಿತ್ತವಾಗಿಯೂ ಅದನ್ನು ತಿನ್ನಬೇಡಿರಿ. 29
10:29 1 ಕೊರಿ. 8:9-12:
ಅದು ನಿನ್ನ ಸ್ವಂತ ಮನಸಾಕ್ಷಿಗಾಗಿ ಅಲ್ಲ; ಮತ್ತೊಬ್ಬನ ಮನಸಾಕ್ಷಿಗಾಗಿಯೇ ಹೇಳಲಾಗಿದೆ.
10:29 ರೋಮಾ. 14:16:
ಮತ್ತೊಬ್ಬನ ಮನಸಾಕ್ಷಿಯ ನಿಮಿತ್ತ ನನ್ನ ಅಧಿಕಾರಕ್ಕೆ ಯಾಕೆ ತೀರ್ಪಾಗಬೇಕು?
30ನಾನು ಕೃತಜ್ಞತೆಯೊಡನೆ ಊಟಮಾಡಿ ದೇವರನ್ನು ಸ್ತುತಿಸಿದ ಮೇಲೆ ಆ ಪದಾರ್ಥಗಳ ನಿಮಿತ್ತ ನನಗೆ ಯಾಕೆ ದೂಷಣೆಯಾಗಬೇಕು?

31ಹೀಗಿರಲಾಗಿ ನೀವು ತಿಂದರೂ, ಕುಡಿದರೂ, ಇನ್ನೇನು ಮಾಡಿದರೂ
10:31 1 ಕೊರಿ. 9:22:
ಎಲ್ಲವನ್ನೂ ದೇವರ ಮಹಿಮೆಗಾಗಿ ಮಾಡಿರಿ.
32ಯೆಹೂದ್ಯರಿಗಾಗಲಿ ಗ್ರೀಕರಿಗಾಗಲಿ ದೇವರ ಸಭೆಗಾಗಲಿ ವಿಘ್ನವಾಗಬೇಡಿರಿ. ನಾನಂತೂ ಸ್ವಪ್ರಯೋಜನಕ್ಕಾಗಿ ಚಿಂತಿಸದೇ ಮನುಷ್ಯರೆಲ್ಲರು ರಕ್ಷಣೆ ಹೊಂದಬೇಕೆಂದು ಅವರ ಪ್ರಯೋಜನಕ್ಕಾಗಿ ಚಿಂತಿಸಿ, ಎಲ್ಲರನ್ನು ಎಲ್ಲಾ ವಿಷಯಗಳಲ್ಲಿ ಮೆಚ್ಚಿಸುವವನಾಗಿದ್ದೇನೆ.

33

Copyright information for KanULB