1 Corinthians 2

1ಪ್ರಿಯರೇ, ನಾನೂ ಸಹ ಗುಪ್ತವಾಗಿದ್ದ ದೇವರ ಸತ್ಯಾರ್ಥಗಳನ್ನು ತಿಳಿಸುವವನಾಗಿ ನಿಮ್ಮ ಬಳಿಗೆ ಬಂದಾಗ
2:1 1 ಕೊರಿ. 2:4,13; 1:17
ವಾಕ್ಚಾತುರ್ಯದಿಂದಾಗಲಿ, ಜ್ಞಾನದಿಂದಾಗಲಿ ಬರಲಿಲ್ಲ.
2
2:2 ಗಲಾ. 6:14
ನಾನು ಶಿಲುಬೆಗೆ ಹಾಕಲ್ಪಟ್ಟ ಯೇಸು ಕ್ರಿಸ್ತನನ್ನೇ ಹೊರತು ಬೇರೆ ಯಾವುದನ್ನೂ ತಿಳಿಯದವನಾಗಿ ನಿಮ್ಮಲ್ಲಿ ಇರುವೆನೆಂದು ತೀರ್ಮಾನಿಸಿಕೊಂಡೆನು.

3ಇದಲ್ಲದೆ ನಾನು ನಿಮ್ಮಲ್ಲಿಗೆ ಬಂದಾಗ
2:3 ಅ. ಕೃ. 18:1; 6:12
ನಿಮ್ಮ ಬಳಿಯಲ್ಲಿ ಬಲಹೀನನೂ, ಭಯಪಡುವವನೂ, ಬಹು ನಡುಗುವವನೂ ಆಗಿದ್ದೆನು.
4
This verse is empty because in this translation its contents have been moved to form part of verse 1Co 2:5.
In this translation, this verse contains text which in some other translations appears in verses 1Co 2:4-1Co 2:5.
5ನಿಮ್ಮ ನಂಬಿಕೆಯು ಮನುಷ್ಯಜ್ಞಾನವನ್ನು ಆಧಾರ ಮಾಡಿಕೊಳ್ಳದೆ ದೇವರ ಶಕ್ತಿಯನ್ನು ಆಧಾರಮಾಡಿಕೊಳ್ಳಬೇಕೆಂದು ನನ್ನ ಬೋಧನೆಯಲ್ಲಿಯೂ,
2:4-5 1 ಕೊರಿ. 1:21
ಪ್ರಸಂಗದಲ್ಲಿಯೂ ಮನವೊಲಿಸುವ ಜ್ಞಾನವಾಕ್ಯಗಳನ್ನು ನಾನು ಪ್ರಯೋಗಿಸದೇ ದೇವರಾತ್ಮನ ಬಲವನ್ನು ತೋರ್ಪಡಿಸುವ ವಾಕ್ಯಗಳ ಪ್ರದರ್ಶನವನ್ನೇ ಪ್ರಯೋಗಿಸಿದೆನು.

6ಆದರೆ ಪರಿಪಕ್ವತೆಯುಳ್ಳವರ ಮಧ್ಯದಲ್ಲಿ ಜ್ಞಾನವನ್ನೇ ಹೇಳುತ್ತೇವೆ. ಅದು ಇಹಲೋಕದ ಜ್ಞಾನವಲ್ಲ, ಗತಿಸಿ ಹೋಗುವ ಇಹಲೋಕಾಧಿಕಾರಿಗಳ ಜ್ಞಾನವೂ ಅಲ್ಲ. 7ಇದುವರೆಗೆ ಗುಪ್ತವಾಗಿದ್ದ ಸತ್ಯಾರ್ಥವನ್ನು ತಿಳಿಸುವಲ್ಲಿ ದೇವರ ಜ್ಞಾನವನ್ನೇ ಹೇಳುತ್ತೇವೆ. ಅದು ಯಾವುದೆಂದರೆ
2:7 ರೋಮಾ. 16:25,26; ಎಫೆ. 3:5-9; ಕೊಲೊ. 1:26
ದೇವರು ನಮ್ಮ ಮಹಿಮೆಗಾಗಿ ಲೋಕೋತ್ಪತ್ತಿಗಿಂತ ಮೊದಲೇ ನೇಮಿಸಿ ಮರೆಮಾಡಿದ್ದ ದೇವರ ಜ್ಞಾನದ ಮರ್ಮವೇ ಆಗಿದೆ.

8
2:8 ಅ. ಕೃ. 13:27
ಇದನ್ನು ಇಹಲೋಕಾಧಿಕಾರಿಗಳಲ್ಲಿ ಯಾರೂ ಅರಿತಿರಲಿಲ್ಲ;
2:8 ಅ. ಕೃ. 3:17
ಅರಿತಿದ್ದರೆ ಅವರು ಮಹಿಮೆಯುಳ್ಳ ಕರ್ತನನ್ನು ಶಿಲುಬೆಗೆ ಹಾಕಿಸುತ್ತಿರಲಿಲ್ಲ;
9ಆದರೆ ದೇವರ ವಾಕ್ಯಗಳಲ್ಲಿ ಬರೆದಿರುವ ಪ್ರಕಾರ,
2:9 ಯೆಶಾ. 64:4
<<ದೇವರು ತನ್ನನ್ನು ಪ್ರೀತಿಸುವವರಿಗಾಗಿ ಸಿದ್ಧಮಾಡಿರುವಂಥದೆಲ್ಲವನ್ನು ಕಣ್ಣು ಕಾಣಲಿಲ್ಲ, ಕಿವಿ ಕೇಳಲಿಲ್ಲ, ಅದರ ಭಾವನೆಯು ಮನುಷ್ಯನ ಹೃದಯದಲ್ಲಿ ಹುಟ್ಟಲಿಲ್ಲ.>>

10
2:10 ಮತ್ತಾ 16:17; ಗಲಾ. 1:12,16; ಎಫೆ. 3:3-5
ನಮಗಾದರೋ ದೇವರು ತನ್ನ ಆತ್ಮನ ಮೂಲಕ ಅದನ್ನು ಪ್ರಕಟಪಡಿಸಿದನು. ಆ ಆತ್ಮನು ಎಲ್ಲಾ ವಿಷಯಗಳನ್ನು, ದೇವರ ಅಗಾಧವಾದ ವಿಷಯಗಳನ್ನು ಕೂಡ ಪರಿಶೋಧಿಸುವವನಾಗಿದ್ದಾನೆ.
11ಮನುಷ್ಯನೊಳಗಿನ ಆಲೋಚನೆಗಳು
2:11 ಜ್ಞಾ. 20:27
ಅವನಲ್ಲಿರುವ ಮನುಷ್ಯತ್ಮನಿಗಲ್ಲದೆ ಮತ್ತಾರಿಗೆ ತಿಳಿಯುವುದು? ಹಾಗೆಯೇ ದೇವರಾಲೋಚನೆಗಳನ್ನು ದೇವರ ಆತ್ಮನೇ ಹೊರತು ಬೇರೆ ಯಾರಿಂದಲೂ ಗ್ರಹಿಸಲು ಸಾಧ್ಯವಿಲ್ಲ.

12ನಾವು ಇಹಲೋಕದ ಆತ್ಮವನ್ನು ಹೊಂದದೆ ದೇವರು ನಮಗೆ ಉಚಿತವಾಗಿ ದಯಪಾಲಿಸಿರುವ ವರಗಳನ್ನು ತಿಳಿದುಕೊಳ್ಳುವುದಕ್ಕಾಗಿ ದೇವರಿಂದ ಬಂದ ಆತ್ಮವನ್ನೇ ಹೊಂದಿದವರಾಗಿದ್ದೇವೆ. 13ಇವುಗಳನ್ನು ಮನುಷ್ಯ ಜ್ಞಾನವು ಕಲಿಸಿದ ಮಾತುಗಳಿಂದ ಹೇಳದೆ ಪವಿತ್ರಾತ್ಮನೇ ಕಲಿಸಿಕೊಟ್ಟ ಮಾತುಗಳಿಂದ ಹೇಳಿ ಆತ್ಮಿಕವಾದವುಗಳನ್ನು ಆತ್ಮಿಕರಾದವರಿಗೆ ಯುಕ್ತವಾದ ರೀತಿಯಲ್ಲಿ ಸ್ಪಷ್ಟಪಡಿಸುತ್ತೇವೆ.

14
2:14 ಪ್ರಾಪಂಚಿಕನು
ಪ್ರಾಪಂಚಿಕನಾದವನು ದೇವರಾತ್ಮನ ವಿಷಯಗಳನ್ನು ಬೇಡವೆನ್ನುತ್ತಾನೆ; ಅವು ಅವನಿಗೆ
2:14 1 ಕೊರಿ. 1:18
ಹುಚ್ಚುಮಾತನಾಗಿ ತೋರುತ್ತವೆ;
2:14 ರೋಮಾ. 8:7
ಅವು ಆಧ್ಯಾತ್ಮದ ಮೂಲಕ ತಿಳಿದುಕೊಳ್ಳ ಬೇಕಾಗಿರುವುದರಿಂದ ಅವನು ಅವುಗಳನ್ನು ಗ್ರಹಿಸಲಾರನು.
15ಪವಿತ್ರಾತ್ಮನಿಂದ ನಡಿಸಿಕೊಳ್ಳುವವನೋ ಎಲ್ಲವನ್ನೂ ವಿವೇಚಿಸಿ ತಿಳಿದುಕೊಳ್ಳುತ್ತಾನೆ; ಆದರೆ ಅವನಿಗೆ ಯಾರೂ ವಿವೇಚಿಸಿ ತಿಳಿಸಿಕೊಡಬೇಕಾಗಿಲ್ಲ.
2:16 ಯೆಶಾ. 40:13; ರೋಮಾ. 11:34
<<ಕರ್ತನ ಮನಸ್ಸನ್ನು ತಿಳಿದುಕೊಂಡು ಆತನಿಗೆ ಉಪದೇಶಿಸುವವನಾರು?>> ಎಂದು ಬರೆದಿದೆಯಲ್ಲಾ. ನಾವಾದರೋ ಕ್ರಿಸ್ತನ ಮನಸ್ಸನ್ನು ಹೊಂದಿದವರಾಗಿದ್ದೇವೆ.

16

Copyright information for KanULB