1 Corinthians 5

ಸಭೆಯಲ್ಲಿ ನಡೆದಿದ್ದ ವಿಪರೀತ ಜಾರತ್ವವನ್ನು ಕುರಿತದ್ದು

1ನಿಮ್ಮಲ್ಲಿ ಜಾರತ್ವವುಂಟೆಂಬ ಸುದ್ದಿಯನ್ನು ನಾನು ಕೇಳಿದ್ದೇನೆ.
5:1 ಯಾಜ. 18:8; ಧರ್ಮೋ. 22:30; 27:20
ಒಬ್ಬನು ತನ್ನ ತಂದೆಯ ಹೆಂಡತಿಯನ್ನು ಇಟ್ಟುಕೊಂಡಿದ್ದಾನಂತೆ. ಅಂಥ ಜಾರತ್ವವು ಅನ್ಯಜನರಲ್ಲಿಯೂ ಸಹ ಇಲ್ಲ.
2ಹೀಗಿದ್ದರೂ
5:2 2 ಕೊರಿ. 7:7
ನೀವು ದುಃಖಿಸದೆ, ಈ ಕಾರ್ಯಮಾಡಿದವನನ್ನು ನಿಮ್ಮೊಳಗಿಂದ ಬಹಿಷ್ಕರಿಸದೆ, ಉಬ್ಬಿಕೊಂಡಿದ್ದೀರಲ್ಲಾ.

3
5:3 2 ಕೊಲೊ. 2:5
ನಾನಂತೂ ಶಾರೀರಿಕವಾಗಿ ನಿಮ್ಮಿಂದ ದೂರವಾಗಿದ್ದರೂ, ಆತ್ಮದಿಂದ ಹತ್ತಿರದಲ್ಲಿದ್ದು ಈ ಕಾರ್ಯ ಮಾಡಿದವನನ್ನು ಕುರಿತು ಆಗಲೇ ನಿಮ್ಮ ಹತ್ತಿರವಿದ್ದವನಂತೆ ತೀರ್ಪು ಮಾಡಿದ್ದೇನೆ.
4
5:4 2 ಥೆಸ. 3:6; ಮತ್ತಾ 16:19; 18:18; ಯೋಹಾ 20:23; 2 ಕೊರಿ. 13:10
ನಮ್ಮ ಕರ್ತನಾದ ಯೇಸುವಿನ ನಾಮದಲ್ಲಿ ನೀವೆಲ್ಲರೂ ಸೇರಿ ಬರುವಾಗ ನಾನು
5:4 ಪೌಲನು ತನ್ನ ಯೋಚನೆ ಅಥವಾ ಅಭಿಪ್ರಾಯದ ಮೂಲಕ ಅವರೊಂದಿಗಿದ್ದಾನೆ.
ಆತ್ಮದಿಂದ ನಿಮ್ಮೊಂದಿಗಿರುತ್ತೇನೆ ಹಾಗೂ
5ಅವನನ್ನು ಸೈತಾನನಿಗೆ ಒಪ್ಪಿಸಿರಿ ಯಾಕೆಂದರೆ ಕರ್ತನಾದ ಯೇಸುವಿನ
5:5 1 ಕೊರಿ. 1:8
ಪ್ರತ್ಯಕ್ಷತೆಯ ದಿನದಲ್ಲಿ ಅಂಥವನ ಆತ್ಮವು ರಕ್ಷಣೆ ಹೊಂದುವುದಕ್ಕಾಗಿ ಅವನ ಶರೀರಭಾವವು ನಾಶವಾಗುವಂತೆ ಕರ್ತನಾದ ಯೇಸುವಿನ ಶಕ್ತಿಯಿಂದ ತೀರ್ಪು ಮಾಡಿದ್ದೇನೆ.

6ನೀವು ಹೊಗಳಿಕೊಳ್ಳುವುದು ಒಳ್ಳೆಯದಲ್ಲ.
5:6 ಗಲಾ. 5:9; 1 ಕೊರಿ. 15:33
ಸ್ವಲ್ಪ ಹುಳಿ ಕಲೆಸಿದರೆ ಕಣಕವೆಲ್ಲಾ ಹುಳಿಯಾಗುತ್ತದೆಂಬುದು ನಿಮಗೆ ತಿಳಿಯದೋ?
7ನೀವು ಹುಳಿಯಿಲ್ಲದವರೆನಿಸಿಕೊಂಡದ್ದರಿಂದ ಹಳೇ ಹುಳಿಯಿಂದ ತೆಗೆದುಹಾಕಿ ಹೊಸ ಕಣಕದಂತಾಗಿರಿ. ಯಾಕೆಂದರೆ ಈಗಾಗಲೇ ನಮ್ಮ ಪಸ್ಕ ಯಜ್ಞದ ಕುರಿಮರಿಯು ಬಲಿಯಾಗಿದೆ; ಆ ಕುರಿಮರಿ ಯಾವುದೆಂದರೆ ಕ್ರಿಸ್ತನೇ. 8ಆದಕಾರಣ ನಾವು
5:8 ವಿಮೋ. 12:15; 13:7; ಧರ್ಮೋ. 16:3
ಹಳೇ ಹುಳಿಯನ್ನು
5:8 ಮತ್ತಾ 16:6-12; ಮಾರ್ಕ. 8:15; ಲೂಕ. 12:1
ಅಂದರೆ ದುರ್ಮಾರ್ಗತ್ವ ಮತ್ತು ದುಷ್ಟತ್ವ ಎಂಬ ಹುಳಿಯನ್ನು ಇಟ್ಟುಕೊಳ್ಳದೇ ಪ್ರಾಮಾಣಿಕತೆ ಹಾಗೂ ಸತ್ಯತೆ ಎಂಬ ಹುಳಿಯಿಲ್ಲದ ರೊಟ್ಟಿಯನ್ನೇ ತೆಗೆದುಕೊಂಡು ಹಬ್ಬವನ್ನು ಆಚರಿಸೋಣ.

9ಜಾರರ ಸಹವಾಸ ಮಾಡಬಾರದೆಂದು ನನ್ನ ಪತ್ರಿಕೆಯಲ್ಲಿ ಬರೆದಿದ್ದೇನೆ. 10ಅದು ಈ ಲೋಕದಲ್ಲಿರುವ ಜಾರರು, ಆಸೆಬುರುಕರು, ಸುಲುಕೊಳ್ಳುವವರು, ವಿಗ್ರಹಾರಾಧಕರು, ಮೊದಲಾದವರ ಸಹವಾಸವನ್ನು ಬಿಟ್ಟುಬಿಡಬೇಕೆಂಬ ಅರ್ಥದಲ್ಲಿ ಅಲ್ಲ;
5:10 ಯೋಹಾ. 17:15
ಹಾಗೆ ಬಿಡಬೇಕಾದರೆ ನೀವು ಈ ಲೋಕವನ್ನೇ ಬಿಟ್ಟುಹೋಗಬೇಕಾದೀತು.

11ಆದರೆ
5:11 2 ಥೆಸ. 3:6
ಕ್ರೈಸ್ತ ಸಹೋದರನೆನಿಸಿಕೊಂಡವನು ಜಾರನು, ಲೋಭಿಯು, ವಿಗ್ರಹಾರಾಧಕನು, ಜಗಳಗಂಟನೂ, ಕುಡುಕನು, ಸುಲುಕೊಳ್ಳುವವನೂ ಆಗಿದ್ದ ಪಕ್ಷದಲ್ಲಿ ಅವನ ಸಹವಾಸ ಮಾಡಬಾರದು. ಅಂಥವನ ಸಂಗಡ ಊಟ ಸಹ ಮಾಡಬಾರದು ಎಂದು ಬರೆದಿದ್ದೇನೆ.
12ಸಭೆಯ ಹೊರಗಿರುವವರನ್ನು ತೀರ್ಪುಮಾಡುವುದಕ್ಕೆ ನನಗೇನಧಿಕಾರವಿದೆ?
5:12 1 ಕೊರಿ. 6:1-4
ಒಳಗಿನವರನ್ನು ತೀರ್ಪುಮಾಡುವವರು ನೀವೇ ಅಲ್ಲವೇ.
ಹೊರಗಿರುವವರನ್ನು ತೀರ್ಪುಮಾಡುವವನು ದೇವರು. <<ನಿಮ್ಮ ಮಧ್ಯದಲ್ಲಿರುವ
5:13 ಧರ್ಮೋ. 13:5; 17:7; 12:22-24
ಆ ದುಷ್ಟ ವ್ಯಕ್ತಿಯನ್ನು ತೆಗೆದುಹಾಕಿರಿ.>>

13

Copyright information for KanULB