1 Samuel 5

ದೇವರ ಮಂಜೂಷವು ಫಿಲಿಷ್ಟಿಯರ ದೇಶದಲ್ಲಿದ್ದದ್ದು

1ಫಿಲಿಷ್ಟಿಯರು ದೇವರ ಮಂಜೂಷವನ್ನು ಎಬೆನೆಜೆರಿನಿಂದ ಅಷ್ಡೋದಿನಲ್ಲಿರುವ 2
5:2 ನ್ಯಾಯ. 16:23.
ದಾಗೋನನ ಗುಡಿಗೆ ತೆಗೆದುಕೊಂಡು ಹೋಗಿ ಅಲ್ಲಿ ದಾಗೋನನ ಮಗ್ಗುಲಲ್ಲೇ ಇಟ್ಟರು.
3ಅಷ್ಡೋದಿನವರು ಮರುದಿನ ಬೆಳಿಗ್ಗೆ ಎದ್ದು ನೋಡಲಾಗಿ
5:3 ಯೆಶಾ. 46:1 -2
ದಾಗೋನ್ ವಿಗ್ರಹವು ಯೆಹೋವನ ಮಂಜೂಷದ ಮುಂದೆ ಬೋರಲಬಿದ್ದಿರುವುದನ್ನು ಕಂಡು ಅದನ್ನು ಎತ್ತಿ ತಿರುಗಿ ಅದರ ಸ್ಥಳದಲ್ಲಿಟ್ಟರು.

4ಮಾರನೆಯ ದಿನ ಬೆಳಿಗ್ಗೆ ನೋಡುವಾಗ ದಾಗೋನನ ತಲೆಯೂ, ಕೈಗಳೂ ಕಡಿಯಲ್ಪಟ್ಟು ಹೊಸ್ತಿಲಿನ ಮೇಲೆ ಬಿದ್ದಿದ್ದವು; ಮುಂಡ ಮಾತ್ರ ಯೆಹೋವನ ಮಂಜೂಷದ ಮುಂದೆ ಬಿದ್ದಿತ್ತು; 5ಆದ್ದರಿಂದ ಈ ದಿನದ ವರೆಗೂ ದಾಗೋನನ ಯಾಜಕರೂ ಮತ್ತು ದಾಗೋನನ ಮನೆಗೆ ಬರುವವರೆಲ್ಲರೂ
5:5 ಚೆಫ. 1:9.
ಅಷ್ಡೋದಿನ ಗುಡಿಯ ಹೊಸ್ತಿಲನ್ನು ಇಂದಿಗೂ ತುಳಿಯದಿರುವುದಕ್ಕೆ ಇದೇ ಕಾರಣ.

6
5:6 ಅ.ಕೃ. 13:11.
ಯೆಹೋವನ ಹಸ್ತವು ಅಷ್ಡೋದಿನವರಿಗೆ ಬಾಧಕವಾಗಿತ್ತು; ಆತನು ಆ ನಗರದಲ್ಲಿಯೂ, ಅದರ ಗ್ರಾಮಗಳಲ್ಲಿಯೂ ಗಡ್ಡೆ ರೋಗವನ್ನು ಬರಮಾಡಿ ಅವರನ್ನು ನಾಶಮಾಡಿದನು.
7ಅಷ್ಡೋದಿನ ಜನರು ಅದನ್ನು ನೋಡಿ, <<ಇಸ್ರಾಯೇಲಿನ ದೇವರ ಮಂಜೂಷವು ನಮ್ಮ ಬಳಿಯಲ್ಲಿ ಇರಬಾರದು; ಏಕೆಂದರೆ ಆತನ ಹಸ್ತವು ನಮಗೂ, ನಮ್ಮ ದೇವರಾದ ದಾಗೋನನಿಗೂ ಬಾಧಕವಾಗಿದೆ>> ಎಂದು ಹೇಳಿ

8
5:8 ಯೆಹೋ. 13:3.
ಫಿಲಿಷ್ಟಿಯ ಪ್ರಭುಗಳೆಲ್ಲರನ್ನೂ ಕೂಡಿಸಿ, <<ಇಸ್ರಾಯೇಲಿನ ದೇವರ ಮಂಜೂಷವನ್ನು ಏನು ಮಾಡೋಣ?>> ಎಂದು ಕೇಳಲು ಅವರು, <<ಅದನ್ನು ಗತ್ ಊರಿಗೆ ಕಳುಹಿಸಿ ಕೊಡಬೇಕೆಂದು ನಿರ್ಣಯಿಸಿದರು.>> ಅವರು ಹಾಗೆಯೇ ಇಸ್ರಾಯೇಲಿನ ದೇವರ ಮಂಜೂಷವನ್ನು ಅಲ್ಲಿಗೆ ಕಳುಹಿಸಿದರು.
9ಮಂಜೂಷವು ಅಲ್ಲಿ ಹೋದ ಮೇಲೆ
5:9 ಧರ್ಮೋ. 2:15.
ಯೆಹೋವನ ಹಸ್ತವು ಆ ಊರಿನವರಿಗೂ ಬಾಧಕವಾದುದರಿಂದ ಅಲ್ಲಿ ದೊಡ್ಡ ಗದ್ದಲವಾಯಿತು. ಯೆಹೋವನು ಊರಿನ ಚಿಕ್ಕವರಲ್ಲಿಯೂ, ದೊಡ್ಡವರಲ್ಲಿಯೂ ಗಡ್ಡೆಗಳನ್ನು ಬರಮಾಡಿದನು.

10ಆದ್ದರಿಂದ ಅವರು ದೇವರ ಮಂಜೂಷವನ್ನು ಎಕ್ರೋನಿಗೆ ಕಳುಹಿಸಿದರು. ಅದು ಅಲ್ಲಿಗೆ ಬಂದಾಗ ಆ ಊರಿನವರು, <<ನೋಡಿರಿ, ನಮ್ಮನ್ನೂ, ನಮಗೆ ಸೇರಿದವರನ್ನೂ ಕೊಲ್ಲುವುದಕ್ಕೋಸ್ಕರ ಇಸ್ರಾಯೇಲಿನ ದೇವರ ಮಂಜೂಷವನ್ನು ಇಲ್ಲಿಗೆ ಕಳುಹಿಸಿದ್ದಾರೆ>> ಎಂದು ಕೂಗಿಕೊಂಡರು.

11ದೇವರ ಹಸ್ತವು ಅವರಿಗೂ ಬಾಧಕವಾಗಿದ್ದುದರಿಂದ ಅವರಿಗೆ ಮರಣಭಯವುಂಟಾಯಿತು. ಅವರು ಫಿಲಿಷ್ಟಿಯ ಪ್ರಭುಗಳೆಲ್ಲರನ್ನೂ ಕೂಡಿಸಿ ಅವರಿಗೆ, <<ಇಸ್ರಾಯೇಲಿನ ದೇವರ ಮಂಜೂಷವನ್ನು ಹಾಗೆಯೇ ಅದರ ಸ್ಥಳಕ್ಕೆ ಕಳುಹಿಸಿಬಿಡಿರಿ>> ಅಂದರು. ಸಾಯದೆ ಉಳಿದ ಜನರಿಗೂ ಗಡ್ಡೆರೋಗ ಬಂದಿತ್ತು. ಪಟ್ಟಣದ ಗೋಳಾಟವು ಆಕಾಶವನ್ನು ಮುಟ್ಟಿತು.

12

Copyright information for KanULB