1 Thessalonians 2

ಪೌಲನು ಥೆಸಲೊನೀಕದಲ್ಲಿ ಮಾಡಿದ ಸೇವೆ

1ಸಹೋದರರೇ,
2:1 ಅಥವಾ, ನಾವು ನಿಮ್ಮಲ್ಲಿಗೆ ಬಂದದ್ದು ವ್ಯರ್ಥವಾಗಲಿಲ್ಲವೆಂತಲೂ.
ನಾವು ವ್ಯರ್ಥವಾಗಿ ನಿಮ್ಮಲ್ಲಿಗೆ ಬರಲಿಲ್ಲವೆಂಬುದು ನಿಮಗೆ ತಿಳಿದಿರುವ ಪ್ರಕಾರವೇ,
2ನಮಗೆ
2:2 ಅ. ಕೃ. 16:22-24:
ಫಿಲಿಪ್ಪಿ ಪಟ್ಟಣದಲ್ಲಿ ಹಿಂಸೆಯೂ ಅವಮಾನವೂ ಮೊದಲು ಸಂಭವಿಸಿತ್ತಾದರೂ, ನಾವು ನಮ್ಮ ದೇವರ ಮೂಲಕ ಧೈರ್ಯಗೊಂಡು ಬಹು ವಿರೋಧವನ್ನು ಎದುರಿಸುವವರಾಗಿ
2:2 ಅ. ಕೃ. 17:2-9:
ನಿಮಗೆ ದೇವರ ಸುವಾರ್ತೆಯನ್ನು ತಿಳಿಸಿದ್ದೇವೆಂಬುದನ್ನು ನೀವೇ ಬಲ್ಲಿರಿ.

3ಯಾಕೆಂದರೆ
2:3 2 ಕೊರಿ. 2:17:
ನಮ್ಮ ಬೋಧನೆಯು
2:3 2 ಥೆಸ. 2:11:
ತಪ್ಪಾದದ್ದಲ್ಲ,
2:3 1 ಥೆಸ 4:7:
ಅಶುದ್ಧವಾದದ್ದೂ ಅಲ್ಲ,
2:3 2 ಕೊರಿ. 4:2:
ಮೋಸವೂ ಅಲ್ಲ.
4ದೇವರು ನಮ್ಮನ್ನು ಯೋಗ್ಯರೆಂದೆಣಿಸಿ,
2:4 ಗಲಾ. 2:7:
ಸುವಾರ್ತೆಯನ್ನು ನಮ್ಮ ವಶಕ್ಕೆ ಒಪ್ಪಿಸಿದನು. ಆದುದರಿಂದ
2:4 ಗಲಾ. 1:10:
ಮನುಷ್ಯರನ್ನು ಮೆಚ್ಚಿಸುವುದಕ್ಕಾಗಿಯಲ್ಲ
2:4 ಕೀರ್ತ. 17:3; ರೋಮಾ. 8:27:
ಹೃದಯವನ್ನು ಪರಿಶೋಧಿಸುವ ದೇವರನ್ನೇ ಮೆಚ್ಚಿಸಬೇಕೆಂದು ಮಾತನಾಡುತ್ತಿದ್ದೇವೆ.

5ನಿಮಗೆ ತಿಳಿದಿರುವ ಪ್ರಕಾರ ನಾವು ಎಂದಿಗೂ ಯಾರ ಮುಖಸ್ತುತಿಯನ್ನೂ ಮಾಡಿಲ್ಲ ಮತ್ತು
2:5 ಅ. ಕೃ. 20:33:
ದುರಾಶೆಯನ್ನು ಮರೆಮಾಡುವುಕ್ಕಾಗಿ ವೇಷವನ್ನು ಹಾಕಿಕೊಂಡಿಲ್ಲ.
2:5 1 ಥೆಸ. 2:10; ರೋಮಾ. 1:9:
ಇದಕ್ಕೆ ದೇವರೇ ಸಾಕ್ಷಿ.
6ಇದಲ್ಲದೆ ನಾವು ಯೇಸು ಕ್ರಿಸ್ತನ
2:6 1 ಕೊರಿ. 9:1:
ಅಪೊಸ್ತಲರಾಗಿರುವುದರಿಂದ
2:6 ಅಥವಾ, ನಮ್ಮನ್ನು ಸಂರಕ್ಷಿಸಬೇಕಾದ ಹೊರೆಯನ್ನು ನಿಮ್ಮ ಮೇಲೆ ಹಾಕಬಹುದಾಗಿದ್ದರೂ. 1 ಕೊರಿ. 9:4; 2 ಥೆಸ. 3:9; 1 ಥೆಸ. 2:9; 2 ಕೊರಿ. 11:9:
ನಮಗೆ ಗೌರವವನ್ನು ತೋರಿಸಬೇಕೆಂದು ಹೇಳಬಹುದಾಗಿದ್ದರೂ,
2:6 2 ಕೊರಿ. 4:5; ಯೋಹಾ 5:41:
ಮನುಷ್ಯರಿಂದ ಬರುವ ಮಾನವನ್ನು ನಿಮ್ಮಿಂದಾಗಲಿ, ಇತರರಿಂದಾಗಲಿ ಪಡೆದುಕೊಳ್ಳಲು ಅಪೇಕ್ಷಿಸಲಿಲ್ಲ.

7ಆದರೆ
2:7 ವ. 11:
ತಾಯಿಯೂ ತನ್ನ ಮಕ್ಕಳನ್ನು ಪ್ರೀತಿಯಿಂದ ಪೋಷಿಸುವ ಹಾಗೆ ನಾವು ನಿಮ್ಮ ಮಧ್ಯದಲ್ಲಿ ವಾತ್ಸಲ್ಯದಿಂದ ನಡೆದುಕೊಂಡಿದ್ದೇವೆ.
8ನೀವು ನಮಗೆ ಅತಿಪ್ರಿಯರಾದ ಕಾರಣ ನಾವು ನಿಮ್ಮಲ್ಲಿ ಮಮತೆಯುಳ್ಳವರಾಗಿ ದೇವರ ಸುವಾರ್ತೆಯನ್ನು ಹೇಳುವುದಕ್ಕೆ ಮಾತ್ರವಲ್ಲದೆ
2:8 2 ಕೊರಿ. 12:15:
ನಿಮಗಾಗಿ ಪ್ರಾಣವನ್ನೇ ಕೊಡಲೂ ಸಂತೋಷದಿಂದ ಸಿದ್ಧರಾಗಿದ್ದೆವು.

9ಸಹೋದರರೇ, ನಾವು ನಿಮ್ಮಲ್ಲಿ ಯಾರಿಗೂ ಹೊರೆಯಾಗಬಾರದೆಂದು
2:9 ಅ. ಕೃ. 18:3:
ಹಗಲಿರುಳು ದುಡಿಯುತ್ತಾ ದೇವರ ಸುವಾರ್ತೆಯನ್ನು ನಿಮಗೆ ಸಾರಿದೆವು.
2:9 2 ಥೆಸ. 3:8:
ಆ ನಮ್ಮ ಕಷ್ಟವೂ ಪ್ರಯಾಸಗಳು ನಿಮ್ಮ ನೆನಪಿನಲ್ಲಿರಲಿ.

10ನಂಬುವವರಾದ ನಿಮ್ಮ ವಿಷಯದಲ್ಲಿ
2:10 1 ಥೆಸ. 1:5
ನಾವು ಎಷ್ಟೋ ನಿರ್ಮಲರಾಗಿಯೂ ನೀತಿವಂತರಾಗಿಯೂ ನಿರ್ದೋಷಿಗಳಾಗಿಯೂ ನಡೆದುಕೊಂಡೆವೆಂಬುದಕ್ಕೆ ನೀವು ಮತ್ತು
2:10 ವ. 5 ನೋಡಿರಿ.
ದೇವರೂ ಸಾಕ್ಷಿಗಳಾಗಿದ್ದೀರಿ.
11
2:11 ವ. 7:
ತಂದೆಯು ತನ್ನ ಮಕ್ಕಳಿಗೆ ಹೇಗೋ ಹಾಗೆಯೇ ನಾವು ನಿಮ್ಮಲ್ಲಿ ಪ್ರತಿಯೊಬ್ಬರಿಗೂ ಬುದ್ಧಿ ಹೇಳುತ್ತಾ,
12ಧೈರ್ಯಪಡಿಸುತ್ತಾ ತನ್ನ ರಾಜ್ಯದಲ್ಲಿ ಮತ್ತು ಆತನ ಮಹಿಮೆಯಲ್ಲಿ ಪಾಲುಗಾರರಾಗುವುದಕ್ಕಾಗಿ
2:12 1 ಥೆಸ. 5:24; 2 ಥೆಸ. 2:14; 1 ಪೇತ್ರ. 5:10:
ಕರೆಯುವ ದೇವರಿಗೆ ತಕ್ಕಹಾಗೆ
2:12 ಎಫೆ. 4:1:
ಯೋಗ್ಯರಾಗಿ ನೀವು ಜೀವಿಸಬೇಕೆಂದು ವಿಧಿಸಿದೆವೆಂಬುದು ನಿಮಗೇ ತಿಳಿದಿದೆ.

13ಹೀಗಿರಲಾಗಿ ನೀವು ದೇವರ ವಾಕ್ಯವನ್ನು ನಮ್ಮಿಂದ ಕೇಳಿದಾಗ ಅದನ್ನು
2:13 ಗಲಾ. 4:14:
ಮನುಷ್ಯರ ವಾಕ್ಯವೆಂದೆಣಿಸದೆ ದೇವರ ವಾಕ್ಯವೆಂದೇ ತಿಳಿದು ಅಂಗೀಕರಿಸಿದ್ದಕ್ಕಾಗಿ ನಾವಂತೂ
2:13 1 ಥೆಸ. 1:2, 3
ಎಡೆಬಿಡದೆ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ. ಅದು ಸತ್ಯವಾಗಿ ದೇವರ ವಾಕ್ಯವೇ.
2:13 ಇಬ್ರಿ. 4:12:
ಆ ವಾಕ್ಯವು, ನಂಬುವವರಾದ ನಿಮ್ಮೊಳಗೆ ಕೆಲಸ ಮಾಡುತ್ತದೆ.

14ಹೌದು, ಸಹೋದರರೇ, ನೀವು ಯೂದಾಯದಲ್ಲಿ ಕ್ರಿಸ್ತ ಯೇಸುವಿನಲ್ಲಿರುವ ದೇವರ ಸಭೆಗಳನ್ನು
2:14 1 ಥೆಸ. 1:6:
ಅನುಸರಿಸುವವರಾಗಿದ್ದಿರಿ.
2:14 ಇಬ್ರಿ. 10:33,34:
ಅವರು ಯೆಹೂದ್ಯರಿಂದ ಅನುಭವಿಸಿದಂಥ ಕಷ್ಟಗಳನ್ನು
2:14 1 ಥೆಸ. 3:4; ಅ. ಕೃ. 17:5; 2 ಥೆಸ. 1:4,5:
ನೀವೂ ನಿಮ್ಮ ಸ್ವದೇಶದವರಿಂದ ಅನುಭವಿಸಿದಿರಿ.
15
2:15 ಲೂಕ 24:20:
ಆ ಯೆಹೂದ್ಯರು ಕರ್ತನಾದ ಯೇಸುವನ್ನು ಮತ್ತು
2:15 ಯೆರೆ. 2:30; ಮತ್ತಾ 23:29-34; 5:12:
ಪ್ರವಾದಿಗಳನ್ನೂ ಕೊಂದರು ಹಾಗು ನಮ್ಮನ್ನೂ ಅಟ್ಟಿಬಿಟ್ಟರು. ಅವರು ದೇವರನ್ನು ಮೆಚ್ಚಿಸುವವರಲ್ಲ ಮತ್ತು ಎಲ್ಲಾ ಮನುಷ್ಯರಿಗೂ ವಿರೋಧಿಗಳಾಗಿದ್ದಾರೆ.
16
2:16 ಅ. ಕೃ 13:45, 50; 14:2, 19; 17:5, 13; 18:12; 22:21 22:
ಅನ್ಯಜನರಿಗೆ ರಕ್ಷಣೆಯಾಗುವಂತೆ ಸುವಾರ್ತೆಯನ್ನು ಹೇಳುವ ನಮಗೂ ಅಡ್ಡಿಮಾಡುತ್ತಾರೆ. ಹೀಗೆ ತಮ್ಮ ಪಾಪಕೃತ್ಯಗಳನ್ನು ಎಲ್ಲಾ ಕಾಲಗಳಲ್ಲಿಯೂ ಸಂಪೂರ್ಣಮಾಡುತ್ತಾರೆ. ಕಡೆಗೆ
2:16 1 ಥೆಸ. 1:10:
ದೇವರ ಕೋಪವು ಅವರ ಮೇಲೆ ಬರುತ್ತದೆ.

ಪೌಲನು ಥೆಸಲೋನಿಕದವರನ್ನು ನೋಡುವುದಕ್ಕೆ ಆಸೆಪಟ್ಟದ್ದು

17ಸಹೋದರರೇ, ನಾವಂತೂ ಸ್ವಲ್ಪಕಾಲ ಮಾತ್ರ ನಿಮ್ಮಿಂದ ದೂರವಾಗಿದ್ದರೂ
2:17 1 ಕೊರಿ. 5:3; ಕೊಲೊ. 2:5:
ಹೃದಯದಲ್ಲಿ ಅಗಲದೆ
2:17 1 ಥೆಸ. 3:10:
ನಿಮ್ಮನ್ನು ಮುಖಾಮುಖಿಯಾಗಿ ನೋಡುವುದಕ್ಕೆ ಅತಿಯಾದ ಆಸೆಯಿಂದ ಬಹಳ ಪ್ರಯತ್ನಿಸಿದೆವು.
18ಯಾಕೆಂದರೆ ನಿಮ್ಮ ಬಳಿಗೆ ಬರುವುದಕ್ಕೆ ನಮಗೆ ಮನಸ್ಸಿತ್ತು. ಹೇಗೂ ಪೌಲನೆಂಬ ನಾನು ಒಂದೆರಡು ಸಾರಿ ಬರುವುದಕ್ಕೆ ಪ್ರಯತ್ನ ಮಾಡಿದ್ದೆನು. ಆದರೆ ಸೈತಾನನು ನನಗೆ
2:18 ರೋಮಾ. 1:13; 15:22:
ಅಡ್ಡಿ ಮಾಡಿದನು.
19
2:19 1 ಥೆಸ. 3:13; 4:15; 5:23; ಮತ್ತಾ 24:3; 1 ಕೊರಿ. 15:23; 2 ಥೆಸ. 2:1,8; ಯಾಕೋಬ 5:7,8; 2 ಪೇತ್ರ 1:16; 3:4, 12; 1 ಯೋಹಾ 2:28:
ನಮ್ಮ ಕರ್ತನಾದ ಯೇಸು ಹಿಂತಿರುಗಿ ಬರುವಾಗ ಆತನ ಮುಂದೆ ನಮ್ಮ ನಿರೀಕ್ಷೆಯೂ,
2:19 ಫಿಲಿ. 4:1:
ನಮ್ಮ ಸಂತೋಷವೂ, ನಾವು ಹೊಗಳಿಕೊಳ್ಳುವ ಕಿರೀಟವೂ ಯಾರು?
2:19 1 ಕೊರಿ. 15:31; 2 ಥೆಸ. 1:4:
ನೀವೇ ಅಲ್ಲವೇ.
ಹೀಗಿರಲಾಗಿ ನೀವೇ ನಮ್ಮ ಮಹಿಮೆ ಮತ್ತು ಸಂತೋಷವೂ ಆಗಿದ್ದೀರಿ.

20

Copyright information for KanULB