1 Thessalonians 3

1ಆದುದರಿಂದ ನಾನು ಇನ್ನು ತಾಳಲಾರದೆ
3:1 ಅ. ಕೃ. 17:15, 16:
ಅಥೇನೆಯಲ್ಲಿ ಒಬ್ಬಂಟಿಗನಾಗಿಯೇ ಇರುವುದು ಒಳ್ಳೆಯದೆಂದು ಯೋಚಿಸಿ,
2ನಿಮ್ಮ ಮೇಲೆ ಬಂದಿರುವ ಸಂಕಟಗಳಲ್ಲಿ ಒಬ್ಬರೂ ಚಂಚಲರಾಗದಂತೆ ನಿಮ್ಮನ್ನು ದೃಢಪಡಿಸುವುದಕ್ಕೂ ನಿಮ್ಮ ನಂಬಿಕೆಯ ವಿಷಯವಾಗಿ ಉತ್ತೇಜನಪಡಿಸುವುದಕ್ಕೂ
3:2 2 ಕೊರಿ. 1:1; ಕೊಲೊ. 1:1; ಫಿಲೆ. 1; ಇಬ್ರಿ. 13:23:
ನಮ್ಮ ಸಹೋದರನೂ, ಕ್ರಿಸ್ತನ ಸುವಾರ್ತೆಯ ಕಾರ್ಯದಲ್ಲಿ ದೇವರ ಸೇವಕನೂ ಆಗಿರುವ
3:2 ಫಿಲಿ. 2:19:
ತಿಮೊಥೆಯನನ್ನು ನಿಮ್ಮ ಬಳಿಗೆ ಕಳುಹಿಸಿದೆವು.
3
3:3 ಅ. ಕೃ. 9:16; 14:22:
ಸಂಕಟಗಳನ್ನು ಅನುಭವಿಸುವುದಕ್ಕಾಗಿಯೇ ನಾವು ನೇಮಿಸಲ್ಪಟ್ಟವರೆಂದು ನೀವೇ ಬಲ್ಲಿರಷ್ಟೆ.

4ನಾವು ನಿಮ್ಮ ಬಳಿಯಲ್ಲಿದ್ದಾಗ ಸಂಕಟವನ್ನು ಅನುಭವಿಸಲೇಬೇಕೆಂದು ಈ ಮೊದಲೇ ಹೇಳಿದ್ದೆವಲ್ಲಾ.
3:4 1 ಥೆಸ. 2:14:
ಅದರಂತೆಯೇ ಆಯಿತು, ಅದು ನಿಮ್ಮ ಅನುಭವಕ್ಕೂ ಬಂದಿತು.
5ಆದ್ದರಿಂದ ಇನ್ನು ತಡೆಯಲಾರದೆ ಒಂದು ವೇಳೆ ಶೋಧಕನು ನಿಮ್ಮನ್ನು ಶೋಧಿಸಿದ್ದರಿಂದ
3:5 ಫಿಲಿ. 2:16:
ನಮ್ಮ ಪ್ರಯಾಸವು ವ್ಯರ್ಥವಾಯಿತೋ ಏನೋ ಎಂದು ನಿಮ್ಮ ನಂಬಿಕೆಯನ್ನು ಕುರಿತು ನಾನು ತಿಳಿದುಕೊಳ್ಳುವುದಕ್ಕಾಗಿ ಅವನನ್ನು ನಿಮ್ಮ ಬಳಿಗೆ ಕಳುಹಿಸಿದೆನು.

6
3:6 ಅ. ಕೃ. 18:5; 2 ಕೊರಿ. 7:6, 9:
ಆದರೆ ತಿಮೊಥೆಯನು ನಿಮ್ಮ ಬಳಿಯಿಂದ ಬಂದು
3:6 1 ಥೆಸ 1:3:
ನಿಮ್ಮ ನಂಬಿಕೆ ಮತ್ತು ಪ್ರೀತಿಯ ಕುರಿತಾಗಿ ಶುಭವರ್ತಮಾನವನ್ನು ಹೇಳಿ,
3:6 1 ಕೊರಿ. 11:2:
ನೀವು ನಮ್ಮನ್ನು ಯಾವಾಗಲೂ ಪ್ರೀತಿಪೂರ್ವಕವಾಗಿ ನೆನಪುಮಾಡಿಕೊಂಡು ನಾವು ನಿಮ್ಮನ್ನು ಹೇಗೋ ಹಾಗೆಯೇ ನೀವೂ ಸಹ ನಮ್ಮನ್ನು ನೋಡುವುದಕ್ಕಾಗಿ ಅಪೇಕ್ಷಿಸುತ್ತಿದ್ದೀರೆಂಬುದನ್ನು ತಿಳಿಸಿದ್ದಾನೆ.

7ಸಹೋದರರೇ, ಈ ವಾರ್ತೆಯನ್ನು ಕೇಳಿ
3:7 2 ಕೊರಿ. 1:4:
ನಮ್ಮ ಎಲ್ಲಾ ಕಷ್ಟದಲ್ಲಿಯೂ ಸಂಕಟದಲ್ಲಿಯೂ ನಿಮ್ಮ ನಂಬಿಕೆಯ ಮುಖಾಂತರ ನಮಗೆ ಸಮಾಧಾನವಾಯಿತು.

8
3:8 1 ಕೊರಿ. 16:13:
ನೀವು ಕರ್ತನಲ್ಲಿ ದೃಢವಾಗಿ ನಿಂತಿದ್ದೀರಿ ಎಂಬುದೇ ನಮ್ಮ ಜೀವವು ಚೈತನ್ಯವಾಗಿದೆ.
9ನಿಮ್ಮ ನಿಮಿತ್ತ ನಮ್ಮ ದೇವರ ಮುಂದೆ ನಮಗಿರುವ ಎಲ್ಲಾ ಸಂತೋಷಗಳಿಗಾಗಿ
3:9 1 ಥೆಸ. 1:2:
ದೇವರಿಗೆ ಅಷ್ಟೊಂದು ಸ್ತೋತ್ರ ಮಾಡುವುದು ನಮ್ಮಿಂದಾದಿತೇ?
10
3:10 1 ಥೆಸ. 2:17:
ನಿಮ್ಮ ಮುಖವನ್ನು ನೋಡುವುದಕ್ಕೂ
3:10 ಎಫೆ. 4:12,13:
ನಿಮ್ಮ ನಂಬಿಕೆಯ ಕೊರತೆಗಳನ್ನು ನೀಗುವುದಕ್ಕೂ ನಾವು
3:10 2 ತಿಮೊ. 1:3:
ಹಗಲಿರುಳು ದೇವರನ್ನು ತುಂಬಾ ಕಳಕಳಿಯಿಂದ ಬೇಡುವವರಾಗಿದ್ದೇವೆ.

11ನಮ್ಮ ತಂದೆಯಾದ ದೇವರೂ ನಮ್ಮ ಕರ್ತನಾದ ಯೇಸು, ನಾವು ನಿಮ್ಮ ಬಳಿಗೆ ಬರುವುದಕ್ಕೆ ಮಾರ್ಗವನ್ನು ಸರಾಗಮಾಡಿಕೊಡಲಿ.

12ನಿಮ್ಮಲ್ಲಿ ನಮ್ಮ ಪ್ರೀತಿಯು ಹೆಚ್ಚಾದ ಹಾಗೆಯೇ ನಿಮ್ಮ ಪ್ರೀತಿಯು
3:12 1 ಥೆಸ. 4:9; 5:15
ಒಬ್ಬರಿಂದೊಬ್ಬರಿಗೆ ಹರಡಿ ಎಲ್ಲಾ ಮನುಷ್ಯರ ಮೇಲೆಯೂ ಅಭಿವೃದ್ಧಿ ಹೊಂದಿ ಅತ್ಯಧಿಕವಾಗುವಂತೆ ಕರ್ತನು ಆಶೀರ್ವದಿಸಲಿ.
ನಮ್ಮ ಕರ್ತನಾದ ಯೇಸು ತನ್ನ
3:13 ಜೆಕ. 14:5; ಯೂದ 14:
ಪರಿಶುದ್ಧ ಪರಿವಾರ ಸಮೇತ ಪುನರಾಗಮಿಸುವಾಗ ತಂದೆಯಾದ ದೇವರ ಸಮಕ್ಷಮದಲ್ಲಿ
3:13 ಯಾಕೋಬ 5:8; 1 ಪೇತ್ರ 5:10:
ನೀವು ಪರಿಶುದ್ಧರೂ, ನಿರ್ದೋಷಿಗಳೂ ಆಗಿರುವಂತೆ ನಿಮ್ಮ ಹೃದಯಗಳನ್ನು ದೃಢಪಡಿಸಲಿ.

13

Copyright information for KanULB