1 Timothy 1

1ನಮ್ಮ ರಕ್ಷಕನಾದ ದೇವರಿಂದಲೂ
1:1 ಕೊಲೊ 1:27
ನಮ್ಮ ನಿರೀಕ್ಷೆಗೆ ಆಧಾರನಾಗಿರುವ ಕ್ರಿಸ್ತ ಯೇಸುವಿನಿಂದಲೂ ಆಜ್ಞೆಯ ಮೇರೆಗೆ ನೇಮಿಸಲ್ಪಟ್ಟ ಕ್ರಿಸ್ತ ಯೇಸುವಿನ
1:1 2 ಕೊರಿ 1:1
ಅಪೊಸ್ತಲನಾದ ಪೌಲನು
2
1:2 ತೀತ 1:4
ನಂಬಿಕೆಯ ವಿಷಯದಲ್ಲಿ ನಿಜಕುಮಾರನಾಗಿರುವ ತಿಮೊಥೆಯನಿಗೆ ಬರೆಯುವುದೇನೆಂದರೆ,
1:2 2 ತಿಮೊ 1:2; 2 ಯೊಹಾ 3; ಯೂದ 2
ತಂದೆಯಾದ ದೇವರಿಂದಲೂ ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಿಂದಲೂ ನಿನಗೆ ಕೃಪೆಯೂ ಕರುಣೆಯೂ ಶಾಂತಿಯೂ ಉಂಟಾಗಲಿ.

ಸುಳ್ಳುಬೋಧನೆಯ ಬಗ್ಗೆ ಎಚ್ಚರಿಕೆ

3ನಾನು ಮಕೆದೋನ್ಯಕ್ಕೆ ಹೋಗುತ್ತಿದ್ದಾಗ ನೀನು ಎಫೆಸದಲ್ಲೇ ಇದ್ದುಕೊಂಡು ಅಲ್ಲಿರುವ ಕೆಲವರಿಗೆ,
1:3 1 ತಿಮೊ 6:3 ಗಲಾ 1:6,7
ನೀವು ಬೇರೆ ಉಪದೇಶವನ್ನು ಮಾಡಬಾರದೆಂತಲೂ,
4
1:4 1 ತಿಮೊ 4:7; 2 ತಿಮೊ 4:4; ತೀತ 1:14; 2 ಪೇತ್ರ 1:16
ಕಲ್ಪಿತಕಥೆಗಳಿಗೂ, ಕೊನೆಮೊದಲಿಲ್ಲದ ವಂಶಾವಳಿಗಳಿಗೂ ಲಕ್ಷ್ಯ ಕೊಡಬಾರದೆಂತಲೂ, ಆಜ್ಞಾಪಿಸಬೇಕೆಂಬುದಾಗಿ ನಿನಗೆ ಖಂಡಿತವಾಗಿ ಹೇಳಿದ ಪ್ರಕಾರ ಈಗಲೂ ಹೇಳುತ್ತಿದೇನೆ. ಅಂತಹ ಕಥೆಗಳೂ,
1:4 ತೀತ 3:9
ವಂಶಾವಳಿಗಳೂ
1:4 1 ತಿಮೊ. 6:4
ವಿವಾದಕ್ಕೆ ಎಡೆಮಾಡಿಕೊಡುತ್ತದೆಯೇ ಹೊರತು ದೇವರ ಯೋಜನೆಗಳಿಗೆ ಅನುಕೂಲವಾಗಿರುವುದಿಲ್ಲ. ನಂಬಿಕೆಯಿಂದ ಮಾತ್ರ ಅದು ಸಾಧ್ಯವಾಗುತ್ತದೆ.

5
1:5 2 ತಿಮೊ. 2:22
ಶುದ್ಧಹೃದಯ,
1:5 1 ಪೇತ್ರ. 3:16, 21
ಒಳ್ಳೆಯ ಮನಸ್ಸಾಕ್ಷಿ,
1:5 2 ತಿಮೊ 1:5
ಪ್ರಾಮಾಣಿಕವಾದ ನಂಬಿಕೆ ಎಂಬಿವುಗಳಿಂದ ಹುಟ್ಟಿದ ಪ್ರೀತಿಯೇ ದೇವಾಜ್ಞೆಯ ಗುರಿಯಾಗಿದೆ.
6ಕೆಲವರು ಈ ಗುರಿಯನ್ನು ಬಿಟ್ಟು
1:6 ತೀತ 1:10
ವ್ಯರ್ಥವಾದ ವಿಚಾರಗಳ ಕಡೆಗೆ ತಿರುಗಿಕೊಂಡಿದ್ದಾರೆ.
7ಅವರು ಧರ್ಮೋಪದೇಶಕರಾಗಬೇಕೆಂದು ಬಯಸುತ್ತಿದ್ದರೂ ತಾವು ಹೇಳುವುದಾಗಲಿ,
1:7 1 ತಿಮೊ 6:4; ಕೊಲೊ 2:18
ತಾವು ದೃಢವಾಗಿ ಮಾತನಾಡುವ ವಿಷಯವಾಗಲಿ ಇಂಥದೆಂದು ತಿಳಿಯದವರಾಗಿದ್ದಾರೆ.
8
1:7 ರೋಮ 7:16
ಧರ್ಮಶಾಸ್ತ್ರವು ಒಳ್ಳೆಯದೆಂದು ಬಲ್ಲೆವು. ಆದರೆ ಅದನ್ನು ಅದರ ಉದ್ದೇಶಕ್ಕೆ ತಕ್ಕ ಹಾಗೆ ಉಪಯೋಗಿಸಬೇಕು.

9ಧರ್ಮಶಾಸ್ತ್ರವು
1:9 ಗಲಾ 5:23
ನೀತಿವಂತರಿಗೋಸ್ಕರ ಅಲ್ಲ, ಆದರೆ ಅಕ್ರಮಗಾರರು, ಅವಿಧೇಯರು, ಭಕ್ತಿಹೀನರು, ಪಾಪಿಷ್ಠರು, ಅಪವಿತ್ರರು, ಪ್ರಾಪಂಚಿಕರು, ತಂದೆತಾಯಿಗಳನ್ನು ಕೊಲ್ಲುವವರು, ನರಹತ್ಯಮಾಡುವವರು,
10ಜಾರರು, ಸಲಿಂಗಕಾಮಿಗಳು, ನರಚೋರರು, ಸುಳ್ಳುಗಾರರು, ಅಸತ್ಯವಾದಿಗಳು,
1:10 2 ತಿಮೊ 4:3; ತೀತ 1:9; 2:1; 1 ತಿಮೊ 6:3; 2 ತಿಮೊ 1:13; ತೀತ 1:13, 2:2
ಸ್ವಸ್ಥಬೋಧನೆಗೆ ವಿರುದ್ಧವಾಗಿರುವಂಥವುಗಳನ್ನು ಮಾಡುವವರು, ಈ ಮೊದಲಾದ ಅನೀತಿವಂತರಿಗಾಗಿ ನೇಮಕವಾಗಿದೆ ಎಂದು ನಮಗೆ ತಿಳಿದಿದೆ.
11ಈ ಬೋಧನೆಯು
1:11 1 ತಿಮೊ 6:15
ಭಾಗ್ಯವಂತನಾದ
1:11 2 ಕೊರಿ 4:4
ದೇವರ ಮಹಿಮೆಯನ್ನು ಪ್ರದರ್ಶಿಸುವ ಸುವಾರ್ತೆಗೆ ಅನುಸಾರವಾಗಿದೆ.
1:12-13 ತೀತ 1:3,4; ಗಲಾ 2:7
ಈ ಸುವಾರ್ತೆಯ ಸೇವೆಯು ನನಗೆ ಕೊಡಲ್ಪಟ್ಟಿತು.

12
This verse is empty because in this translation its contents have been moved to form part of verse 1Ti 1:13.
In this translation, this verse contains text which in some other translations appears in verses 1Ti 1:12-1Ti 1:13.
13
1:12-13 ಆ. ಕೃ 9:22; ಫಿಲಿ 4:13; 2 ತಿಮೊ 4:17
ನನಗೆ ಬಲವನ್ನು ದಯಪಾಲಿಸಿದವನು ನಮ್ಮ ಕರ್ತನಾದ ಯೇಸು ಕ್ರಿಸ್ತನೇ. ಅದಕ್ಕಾಗಿ ನಾನು ಕೃತಜ್ಞತೆಯುಳ್ಳವನಾಗಿದ್ದೇನೆ. ಮೊದಲು ದೂಷಕನೂ,
1:13 ಆ. ಕೃ 8:3
ಹಿಂಸಕನೂ, ಕೇಡುಮಾಡುವವನೂ ಆಗಿದ್ದ ನನ್ನನ್ನು ಆತನು ನಂಬಿಗಸ್ತನೆಂದು ಎಣಿಸಿ,
1:13 2 ಕೊರಿ. 3:6
ತನ್ನ ಸೇವೆಗೆ ನೇಮಿಸಿಕೊಂಡದ್ದಕ್ಕಾಗಿ ನಾನು ಆತನಿಗೆ ಸ್ತೋತ್ರಮಾಡುತ್ತೇನೆ. ನಾನು ಅಜ್ಞಾನಿಯಾಗಿ
1:13 ಆ. ಕೃ. 3:17
ತಿಳಿಯದೆ ಅಪನಂಬಿಕೆಯಲ್ಲಿ ಆ ರೀತಿ ನಡೆದುಕೊಂಡದ್ದರಿಂದ
1:13 1 ಕೊರಿ 7:25; 2 ಕೊರಿ 4:1
ನನ್ನ ಮೇಲೆ ಆತನಿಗೆ ಕರುಣೆ ಉಂಟಾಯಿತು;
14ಆದರೆ
1:14 ರೋಮ 5:20
ನಮ್ಮ ಕರ್ತನ ಕೃಪೆಯು ಅತ್ಯಧಿಕವಾಗಿದ್ದು ಕ್ರಿಸ್ತಯೇಸುವಿನಲ್ಲಿರುವ
1:14 ಲೂಕ 7:47, 50; 1 ಥೆಸ. 1:3
ನಂಬಿಕೆಯನ್ನೂ ಪ್ರೀತಿಯನ್ನೂ ನನ್ನಲ್ಲಿ ಉಕ್ಕಿಸಿತ್ತು.

15
1:15 ಮತ್ತಾ 9:13; ಯೋಹಾ 3:17; ರೋಮ 4:25
ಕ್ರಿಸ್ತಯೇಸು ಪಾಪಿಗಳನ್ನು ರಕ್ಷಿಸುವುದಕ್ಕೋಸ್ಕರ ಈ ಲೋಕಕ್ಕೆ ಬಂದನು ಎಂಬ ವಾಕ್ಯವು
1:15 1 ತಿಮೊ 3:1; 4:9; 2 ತಿಮೊ. 2:11; ತೀತ 3:8
ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಇದ, ಯಾಕೆಂದರೆ
1:15 1 ಕೊರಿ 15:9
ಆ ಎಲ್ಲಾ ಪಾಪಿಗಳಲ್ಲಿ ನಾನೇ ಪ್ರಮುಖನು.
16ಆದರೆ ಇನ್ನು ಮುಂದೆ ನಿತ್ಯಜೀವಕ್ಕಾಗಿ ತನ್ನ ಮೇಲೆ ನಂಬಿಕೆಯಿಡುವವರಿಗೆ, ತನ್ನ ದೀರ್ಘಶಾಂತಿಯ ದೃಷ್ಟಾಂತವಿರಬೇಕೆಂದು ಕ್ರಿಸ್ತ ಯೇಸುವು ಪಾಪಿಗಳಲ್ಲಿ ಪ್ರಮುಖನಾಗಿದ್ದ ನನ್ನನ್ನು ಕರುಣಿಸಿ, ನನ್ನಲ್ಲಿ ತನ್ನ ಪೂರ್ಣ ದೀರ್ಘಶಾಂತಿಯನ್ನು ತೋರ್ಪಡಿಸಿದನು. 17
1:17 ಪ್ರಕ 15:3; 4:9,10
ಸರ್ವಯುಗಗಳ ಅರಸನೂ,
1:17 1 ತಿಮೊ 6:15,16; ರೋಮ 1:23
ಅಮರನೂ,
1:17 ಯೋಹಾ. 1:18; ಕೊಲೊ 1:15; ಇಬ್ರಿ 11:27; 1 ಯೋಹಾ. 4:12
ಅದೃಶ್ಯನೂ ಆಗಿರುವ
1:17 ಯೂದ 25
ಏಕದೇವರಿಗೆ ಘನವೂ ಮಹಿಮೆಯೂ ಯುಗಯುಗಾಂತರಗಳಲ್ಲಿಯೂ ಇರಲಿ. ಆಮೆನ್.

18ಮಗನಾದ ತಿಮೊಥೆಯನೇ,
1:18 1 ತಿಮೊ 4:14
ನಿನ್ನ ವಿಷಯದಲ್ಲಿ ಮೊದಲು ಉಂಟಾಗಿದ್ದ ಪ್ರವಾದನೆಗಳನ್ನು ನೆನಪಿಸಿಕೊಂಡು,
1:18 1 ಕೊರಿ 9:7; 2 ಕೊರಿ 10:4; 2 ತಿಮೊ 2:3,4
ನೀನು ಅವುಗಳಿಂದ ಧೈರ್ಯಹೊಂದಿ ಒಳ್ಳೆಯ ಯುದ್ಧವನ್ನು ನಡೆಸಬೇಕೆಂದು ನಿನಗೆ ಆಜ್ಞಾಪಿಸುತ್ತಿದ್ದೇನೆ.
19
1:19 1 ತಿಮೊ 3:9
ನಂಬಿಕೆಯನ್ನೂ ಒಳ್ಳೆಯ ಮನಸ್ಸಾಕ್ಷಿಯನ್ನೂ ಗಟ್ಟಿಯಾಗಿ ಹಿಡಿದುಕೊಂಡಿರು. ಕೆಲವರು ಒಳ್ಳೆಯ ಮನಸ್ಸಾಕ್ಷಿಯನ್ನು ತಳ್ಳಿಬಿಟ್ಟು ನಂಬಿಕೆಯೆಂಬ ಹಡಗು ಒಡೆದು, ನಷ್ಟಪಟ್ಟವರಂತೆ ಇದ್ದಾರೆ.
1:19 2 ತಿಮೊ 2:7;
ಹುಮೆನಾಯನೂ
1:19 1 ತಿಮೊ 4:14
ಅಲೆಕ್ಸಾಂದರನೂ ಇಂಥವರೇ. ಇವರು ದೇವದೂಷಣೆ ಮಾಡಬಾರದೆಂಬುದನ್ನು ಕಲಿತುಕೊಳ್ಳುವಂತೆ
1:20 ಕೊರಿ 5:5
ಇವರನ್ನು ಸೈತಾನನಿಗೆ ಒಪ್ಪಿಸಿಕೊಟ್ಟೆನು.

20

Copyright information for KanULB