1 Timothy 3

ಸಭಾಧ್ಯಕ್ಷರೂ ಸಭಾಸೇವಕರೂ ಯೋಗ್ಯರಾಗಿರಬೇಕು

1
3:1 ಅ. ಕೃ 20:28
ಸಭಾಧ್ಯಕ್ಷನ ಉದ್ಯೋಗವನ್ನು ಪಡೆದುಕೊಳ್ಳಬೇಕೆಂದಿರುವವನು ಒಳ್ಳೆಯ ಕೆಲಸವನ್ನು ಅಪೇಕ್ಷಿಸುವವನಾಗಿದ್ದಾನೆಂಬ ಮಾತು ನಂಬತಕ್ಕದ್ದಾಗಿದೆ.
2
3:2 ತೀತ 1:6-9
ಸಭಾಧ್ಯಕ್ಷನು ದೋಷಾರೋಪಣೆಯಿಲ್ಲದವನೂ, ಏಕಪತ್ನಿಯುಳ್ಳವನೂ,
3:2 ವ. 11
ಶಾಂತನೂ, ಜಿತೇಂದ್ರಿಯನೂ, ಮಾನಸ್ಥನೂ,
3:2 1 ಪೇತ್ರ 4:9
ಅತಿಥಿಸತ್ಕಾರಮಾಡುವವನೂ,
3:2 2 ತಿಮೊ 2:24
ಬೋಧಿಸಲು ಶಕ್ತನಾಗಿರಬೇಕು.
3ಅವನು ಕುಡಕನು, ಜಗಳವಾಡುವವನೂ ಆಗಿರದೆ,
3:3 ತೀತ 3:2
ಸಾತ್ವಿಕನೂ, ಹೊಡೆದಾಡದವನೂ
3:3 1 ತಿಮೊ 6:10; ಇಬ್ರಿ. 13:5
ದ್ರವ್ಯಾಶೆಯಿಲ್ಲದವನೂ ಆಗಿರಬೇಕು.

4ಪೂರ್ಣಗೌರವದಿಂದ ತನ್ನ ಮಕ್ಕಳನ್ನು ಅಧೀನದಲ್ಲಿಟ್ಟುಕೊಂಡು, ಸ್ವಂತ ಮನೆಯವರನ್ನು ಚೆನ್ನಾಗಿ ನಡೆಸುವವನಾಗಿರಬೇಕು. 5
3:5 ವ 12
ಸ್ವಂತ ಮನೆಯವರನ್ನು ನಡೆಸುವುದಕ್ಕೆ ತಿಳಿಯದವನು ದೇವರ ಸಭೆಯನ್ನು ಹೇಗೆ ಪರಾಂಬರಿಸುವನು?

6ಅವನು ಹೊಸದಾಗಿ ಸಭೆಯಲ್ಲಿ ಸೇರಿದವನಾಗಿರಬಾರದು, ಅಂಥವನಾದರೆ ಉಬ್ಬಿಕೊಂಡು ಸೈತಾನನಿಗೆ ಪ್ರಾಪ್ತವಾದ ಶಿಕ್ಷಾವಿಧಿಗೆ ಒಳಗಾದಾನು. 7ಇದಲ್ಲದೆ ಅವನು
3:7 ಮಾರ್ಕ 4:11; ಕೊಲೊ 4:5
ಹೊರಗಣವರಿಂದ ಒಳ್ಳೆಯವನೆನ್ನಿಸಿಕೊಂಡಿರಬೇಕು, ಇಲ್ಲದಿದ್ದರೆ ನಿಂದೆಗೆ ಗುರಿಯಾಗುವನು ಮತ್ತು
3:7 2 ತಿಮೊ 2:26; 1 ತಿಮೊ 6:9
ಸೈತಾನನ ತಂತ್ರಗಳೊಳಗೆ ಸಿಕ್ಕಿಬಿದ್ದಾನು.

8ಅದೇ ರೀತಿಯಾಗಿ
3:8 1 ತಿಮೊ 6:9
ಸಭಾಸೇವಕರು ಗೌರವವುಳ್ಳವರಾಗಿರಬೇಕು. ಅವರು ಎರಡು ಮಾತಿನವರೂ,
3:8 ತೀತ 2:3; 1 ತಿಮೊ 5:23
ಮದ್ಯಾಸಕ್ತರೂ,
3:9 ತೀತ 1:7; 1 ಪೇತ್ರ 5:2
ನೀಚಲಾಭವನ್ನು ಅಪೇಕ್ಷಿಸುವವರೂ ಆಗಿರದೆ,
9ನಂಬಿಕೆಯಿಂದ ಪ್ರಕಟವಾಗಿರುವ
3:9 1 ತಿಮೊ 1:19
ಸತ್ಯಾರ್ಥವನ್ನು ಶುದ್ಧ ಮನಸಾಕ್ಷಿಯಿಂದ ಕೈಕೊಳ್ಳುವವರಾಗಿರಬೇಕು.
10ಇದಲ್ಲದೆ
3:10 1 ತಿಮೊ 5:22
ಅವರು ಮೊದಲು ಪರೀಕ್ಷಿಸಲ್ಪಡಬೇಕು, ತರುವಾಯ ಅವರ ಮೇಲೆ ಯಾರೂ ತಪ್ಪುಹೊರಿಸದಿದ್ದರೆ ಸಭಾಸೇವಕರ ಉದ್ಯೋಗವನ್ನು ನೆರವೇರಿಸಲಿ.

11ಹಾಗೆಯೇ
3:11 ಅವರ ಹೆಂಡತಿಯರಾದ
ಸಭಾಸೇವಕಿಯರಾದ ಸ್ತ್ರೀಯರೂ
3:11 ತೀತ 2:3
ಗೌರವವುಳ್ಳವರಾಗಿರಬೇಕು, ಚಾಡಿಹೇಳುವವರಾಗಿರದೆ, ಸ್ವಸ್ಥಬುದ್ಧಿಯುಳ್ಳವರೂ, ಎಲ್ಲಾ ವಿಷಯಗಳಲ್ಲಿ ನಂಬಿಗಸ್ತರಾಗಿಯೂ ಇರಬೇಕು.
12ಸಭಾಸೇವಕರು ಏಕಪತ್ನಿಯುಳ್ಳವರೂ,
3:12 1 ತಿಮೊ 3:2,4
ತಮ್ಮ ಮಕ್ಕಳನ್ನೂ ಮನೆಯವರನ್ನೂ ಚೆನ್ನಾಗಿ ನಡಿಸುವವರೂ ಆಗಿರಬೇಕು.
13
3:13 ಮತ್ತಾ 25:21
ಸಭಾಸೇವಕರಾಗಿ ಚೆನ್ನಾಗಿ ಕೆಲಸ ಮಾಡಿರುವವರು ತಮಗೆ ಒಳ್ಳೆಯ ಪದವಿಯನ್ನೂ, ಕ್ರಿಸ್ತಯೇಸುವಿನಲ್ಲಿರುವ ನಂಬಿಕೆಯ ಸಂಬಂಧವಾಗಿ ಬಹುಧೈರ್ಯವನ್ನೂ ಸಂಪಾದಿಸಿಕೊಳ್ಳುತ್ತಾರೆ.

ಮಹಾ ರಹಸ್ಯ

14ಬೇಗನೆ ನಿನ್ನ ಬಳಿಗೆ ಬರುವೆನೆಂಬ ನಿರೀಕ್ಷೆಯಿಂದಲೇ ನಿನಗೆ ಈ ವಿಷಯಗಳನ್ನು ಬರೆದಿದ್ದೇನೆ. 15ಆದರೆ ಒಂದು ವೇಳೆ ನಾನು ತಡಮಾಡಿದರೂ,
3:15 ಎಫೆ 2:21; 2 ತಿಮೊ 2:20; ಇಬ್ರಿ 3:6
ದೇವರ ಮನೆಯಲ್ಲಿ ಅಂದರೆ ಜೀವಸ್ವರೂಪನಾದ ದೇವರ ಸಭೆಯಲ್ಲಿ ನಡೆದುಕೊಳ್ಳಬೇಕಾದ ರೀತಿಯು ನಿನಗೆ ತಿಳಿದಿರಬೇಕೆಂದು ಈ ಸಂಗತಿಗಳನ್ನು ಬರೆದಿದ್ದೇನೆ. ಯಾಕೆಂದರೆ ಸಭೆಯು ಸತ್ಯಕ್ಕೆ ಸ್ತಂಭವೂ ಆಧಾರವೂ ಆಗಿದೆ.

ದೇವಭಕ್ತಿಗೆ ಆಧಾರವಾಗಿರುವ ಸತ್ಯಾರ್ಥದ ರಹಸ್ಯವು ಗಂಭೀರವಾದದ್ದೆಂಬುದನ್ನು ನಾವೆಲ್ಲರೂ ಒಪ್ಪಿಕೊಳ್ಳುತ್ತೇವೆ, ಅದೇನಂದರೆ-

3:16 ಯೋಹ 1:14; 1 ಪೇತ್ರ 1:20; 1 ಯೋಹಾ. 1:2,3,4,5,8
ಕ್ರಿಸ್ತನು ಶರೀರಧಾರಿಯಾಗಿ ಪ್ರತ್ಯಕ್ಷನಾದನು,
ಆತ್ಮಸಂಬಂಧವಾಗಿ ಕ್ರಿಸ್ತನೇ ನೀತಿವಂತನೆಂದು ಪರಿಗಣಿಸಲ್ಪಟ್ಟನು,
ದೇವದೂತರಿಗೆ ಕಾಣಿಸಿಕೊಂಡನು,
3:16 ಗಲಾ 2:2
ಅನ್ಯಜನರ ಮಧ್ಯದಲ್ಲಿ ಸಾರಲ್ಪಟ್ಟನು,
3:16 2 ಥೆಸ 1:10
ಲೋಕದಲ್ಲಿ ನಂಬಲ್ಪಟ್ಟನು,
3:16 ಅ. ಕೃ 1:2
ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.
16

Copyright information for KanULB