1 Timothy 5

ವಿಶ್ವಾಸಿಗಳೊಂದಿಗಿನ ಕರ್ತವ್ಯಗಳು

1
5:1 ಯಾಜ. 19:32
ವೃದ್ಧರನ್ನು ಗದರಿಸದೆ ತಂದೆಯೆಂದು ಭಾವಿಸಿ ಬುದ್ಧಿಹೇಳು. ಯೌವನಸ್ಥರನ್ನು ಅಣ್ಣತಮ್ಮಂದಿರೆಂದೂ,
2ವೃದ್ಧಸ್ತ್ರೀಯರನ್ನು ತಾಯಿಯಂತೆಯೂ, ಯೌವನಸ್ತ್ರೀಯರನ್ನು ಪೂರ್ಣ ಶುದ್ಧಭಾವದಿಂದ ಅಕ್ಕತಂಗಿಯರೆಂದೂ ಎಣಿಸಿ ಅವರವರಿಗೆ ತಕ್ಕ ಹಾಗೆ ಬುದ್ಧಿಹೇಳು.

3
This verse is empty because in this translation its contents have been moved to form part of verse 1Ti 5:4.
In this translation, this verse contains text which in some other translations appears in verses 1Ti 5:3-1Ti 5:4.
4ದಿಕ್ಕಿಲ್ಲದ ವಿಧವೆಯರನ್ನು ಸಂರಕ್ಷಿಸು. ಆದರೆ ಒಬ್ಬ ವಿಧವೆಗೆ ಮಕ್ಕಳಾಗಲಿ ಮೊಮ್ಮಕ್ಕಳಾಗಲಿ ಇದ್ದರೆ ಅವರೇ
5:3-4 ಮತ್ತಾ 15:4-6; ಮಾರ್ಕ 7:10-13; ಎಫೆ. 6:1,2; ಆದಿ. 45:9-11
ಮೊದಲು ತಮ್ಮ ಮನೆಯವರಿಗೆ ಭಕ್ತಿತೋರಿಸುವುದಕ್ಕೂ ತಂದೆತಾಯಿಗಳಿಗೆ ಪ್ರತ್ಯುಪಕಾರ ಮಾಡುವುದಕ್ಕೂ ಕಲಿತುಕೊಳ್ಳಲಿ.
5:3-4 1 ತಿಮೊ. 2:3
ಇದು ದೇವರ ದೃಷ್ಟಿಯಲ್ಲಿ ಮೆಚ್ಚಿಕೆಯಾಗಿದೆ.

5ದಿಕ್ಕಿಲ್ಲದೆ ಒಬ್ಬೊಂಟಿಗಳಾಗಿರುವ ವಿಧವೆಯು, ದೇವರ ಮೇಲೆ ನಿರೀಕ್ಷೆಯನ್ನಿಟ್ಟು,
5:5 ಲೂಕ. 2:37; 18:15
ಹಗಲಿರುಳು ವಿಜ್ಞಾಪನೆಗಳಲ್ಲಿಯೂ ಪ್ರಾರ್ಥನೆಗಳಲ್ಲಿಯೂ ನೆಲೆಗೊಂಡಿರುವಳು.
6ಆದರೆ ಸುಖಭೋಗದಲ್ಲಿರುವ ವಿಧವೆಯು
5:6 ಪ್ರಕ. 3:1
ಬದುಕಿದ್ದರೂ ಸತ್ತಂತೆಯೇ.

7ವಿಧವೆಯರು ನಿಂದೆಗೆ ಗುರಿಯಾಗದಂತೆ
5:7 1 ತಿಮೊ. 4:11; 6:2
ಈ ವಿಷಯಗಳನ್ನು ಆಜ್ಞಾಪಿಸು.
8ಯಾವನಾದರೂ ಸ್ವಂತ ಜನರನ್ನು,
5:8 ಗಲಾ. 6:10
ವಿಶೇಷವಾಗಿ ತನ್ನ ಮನೆಯವರನ್ನು ಸಂರಕ್ಷಿಸದೆ ಹೋದರೆ ಅವನು ಕ್ರಿಸ್ತ ನಂಬಿಕೆಯನ್ನು ತಿರಸ್ಕರಿಸಿದವನೂ ನಂಬದವನಿಗಿಂತ ಕೀಳಾದವನೂ ಆಗಿದ್ದಾನೆ.

9ವಯಸ್ಸಿನಲ್ಲಿ ಅರುವತ್ತು ವರ್ಷ ಮೇಲ್ಪಟ್ಟ, ವಿಧವೆಯನ್ನು ವಿಧವೆಯರ ಪಟ್ಟಿಯಲ್ಲಿ ಸೇರಿಸಬಹುದು. ಅಂಥವಳಾದರೂ
5:9 1 ತಿಮೊ. 3:2
ಒಬ್ಬ ಗಂಡನಿಗೆ ಮಾತ್ರ ಹೆಂಡತಿಯಾಗಿದ್ದವಳಾಗಿ,
10ಸತ್ಕ್ರಿಯೆಗಳನ್ನು ಮಾಡುವವಳೆಂದು ಹೆಸರುಗೊಂಡವಳೂ ಆಗಿದ್ದಲ್ಲಿ, ಅವರು ಮಕ್ಕಳನ್ನು ಸಾಕಿಕೊಂಡು, ಅತಿಥಿಸತ್ಕಾರವನ್ನು ಮಾಡುತ್ತಾ,
5:10 ದೇವಜನರ ಕಾಲುಗಳನ್ನು ತೊಳೆಯುವುದು; ಆದಿ. 18:4
ದೇವಜನರಿಗೆ ಉಪಚಾರಮಾಡಿದವಳಾಗಲಿ, ಸಂಕಟದಲ್ಲಿ ಬಿದ್ದವರಿಗೆ ಸಹಾಯಮಾಡುತ್ತಾ ಎಲ್ಲಾ ಸತ್ಕಾರ್ಯಗಳಲ್ಲಿ ಆಸಕ್ತಿಯುಳ್ಳವಳಾಗಿರಲಿ.

11ಯೌವನ ಪ್ರಾಯದ ವಿಧವೆಯರನ್ನು ಪಟ್ಟಿಯಲ್ಲಿ ಸೇರಿಸಬೇಡ, ಅವರು ದೈಹಿಕ ಆಸೆಗಳಿಂದ ಸೋಲಿಸಲ್ಪಟ್ಟು, ಕ್ರಿಸ್ತನಿಗೆ ವಿಮುಖರಾಗಿ ಮದುವೆಮಾಡಿಕೊಳ್ಳಬೇಕೆಂದು ಇಷ್ಟಪಟ್ಟಾರು. 12ಅಂಥವರು ತಾವು ಮೊದಲು ಮಾಡಿದ ಪ್ರತಿಜ್ಞೆಯನ್ನು ಉಲ್ಲಂಘಿಸಿ ತೀರ್ಪಿಗೆ ಗುರಿಯಾಗಿರುವರು. 13ಇದಲ್ಲದೆ ಅವರು ಮನೆಮನೆಗೆ ತಿರುಗಾಡುತ್ತಾ ಮೈಗಳ್ಳತನವನ್ನು ಕಲಿಯುತ್ತಾರೆ. ಮೈಗಳ್ಳರಾಗುವುದಲ್ಲದೆ,
5:13 3 ಯೋಹಾ. 10
ಹರಟೆಮಾತನಾಡುವವರೂ,
5:13 2 ಥೆಸ. 3:11; 1 ಪೇತ್ರ 4:15
ಇತರರ ವಿಷಯಗಳಲ್ಲಿ ತಲೆ ಹಾಕುವವರೂ ಆಗಿ ಆಡಬಾರದ ಮಾತುಗಳನ್ನಾಡುತ್ತಾರೆ.

14ಆದ್ದರಿಂದ ಯೌವನ
5:14 1 ಕೊರಿ. 7:9
ಪ್ರಾಯದ ವಿಧವೆಯರು ಮದುವೆಮಾಡಿಕೊಂಡು ಮಕ್ಕಳನ್ನು ಹೆತ್ತು ಮನೆಯನ್ನು ನಿರ್ವಹಿಸುವವರಾಗಿರುವುದು ನನಗೆ ಒಳ್ಳೆಯದಾಗಿ ತೋಚುತ್ತದೆ. ಹಾಗೆ ಮಾಡುವುದರಿಂದ
5:14 1 ತಿಮೊ 1:20
ವಿರೋಧಿಗಳ ನಿಂದೆಗೆ ಆಸ್ಪದಕೊಡದೆ ಇರುವರು.
15ಇಷ್ಟರೊಳಗೆ ಕೆಲವರು ಅಡ್ಡದಾರಿ ಹಿಡಿದು ಸೈತಾನನನ್ನು ಹಿಂಬಾಲಿಸಿದ್ದಾರೆ. 16ನಂಬುವವಳಾದ ಸ್ತ್ರೀಯ ಬಂಧುಭಾಂಧವರಲ್ಲಿ ವಿಧವೆಯರಿದ್ದರೆ ಆಕೆಯೇ ಅವರನ್ನು ಸಂರಕ್ಷಿಸಲಿ. ಸಭೆಯು ದಿಕ್ಕಿಲ್ಲದ ವಿಧವೆಯರಿಗೆ ಸಹಾಯ ಮಾಡಬೇಕಾಗಿರುವುದರಿಂದ ಆಕೆಯು ಆ ಭಾರವನ್ನು ಸಭೆಯ ಮೇಲೆ ಹಾಕಬಾರದು.

ಹಿರಿಯರ ವಿಷಯದಲ್ಲಿ ನಡೆಯಬೇಕಾದ ರೀತಿ

17ಚೆನ್ನಾಗಿ
5:17 ರೋಮಾ. 12:8; 1 ಥೆಸ. 5:12; 1 ಕೊರಿ. 12:28; ಇಬ್ರಿ. 13:7, 17
ಅಧಿಕಾರ ನಡಿಸುವ ಸಭೆಯ ಹಿರಿಯರನ್ನು, ಅವರೊಳಗೆ ವಿಶೇಷವಾಗಿ ದೇವರ ವಾಕ್ಯವನ್ನು ಸಾರುವುದರಲ್ಲಿಯೂ ಉಪದೇಶಿಸುವುದರಲ್ಲಿಯೂ ಕಷ್ಟಪಡುವವರನ್ನು ಎರಡುಪಟ್ಟು ಗೌರವಕ್ಕೆ ಯೋಗ್ಯರೆಂದು ಎಣಿಸಬೇಕು.
18
5:18 ಧರ್ಮೋ. 25:4; 1 ಕೊರಿ 9:9
<<ಕಣತುಳಿಯುವ ಎತ್ತಿನ ಬಾಯಿ ಕಟ್ಟಬಾರದು,>> ಮತ್ತು <<
5:18 ಮತ್ತಾ 10:10; ಲೂಕ 10:7; ಯಾಜ. 19:13; ಧರ್ಮೋ. 19:15; 1 ಕೊರಿ. 9:4 7-14
ಆಳು ತನ್ನ ಕೂಲಿಗೆ ಯೋಗ್ಯನಾಗಿದ್ದಾನೆ>> ಎಂದು ಶಾಸ್ತ್ರದಲ್ಲಿ ಹೇಳಿದೆಯಲ್ಲಾ.

19ಸಭೆಯ ಹಿರಿಯನ ಮೇಲೆ ಯಾರಾದರೂ ದೂರು ಹೇಳಿದರೆ ಇಬ್ಬರು ಮೂವರು ಸಾಕ್ಷಿಗಳಿದ್ದ ಹೊರತಾಗಿ ಅದನ್ನು ಒಪ್ಪಿಕೊಳ್ಳಬೇಡ. 20ಪಾಪದಲ್ಲಿ ನಡೆಯುವವರನ್ನು
5:20 ತೀತ 1:13; 2:15
ಎಲ್ಲರ ಮುಂದೆಯೇ ಗದರಿಸು.
5:20 ಧರ್ಮೋ. 13:11
ಇವರಿಂದ ಉಳಿದವರಿಗೂ ಭಯವುಂಟಾಗುವುದು.

21ನೀನು ವಿಚಾರಿಸುವುದಕ್ಕೆ ಮೊದಲೇ ತಪ್ಪುಹೊರಿಸದೆಯೂ, ಪಕ್ಷಪಾತದಿಂದ ಏನೂ ಮಾಡದೆಯೂ, ನಾನು ಹೇಳಿರುವ ಮಾತುಗಳ ಪ್ರಕಾರವೇ ನಡೆಯಬೇಕೆಂದು ದೇವರ ಮುಂದೆಯೂ, ಕ್ರಿಸ್ತ ಯೇಸುವಿನ ಮುಂದೆಯೂ, ಆರಿಸಲ್ಪಟ್ಟಿರುವ ದೇವದೂತರ ಮುಂದೆಯೂ ಖಂಡಿತವಾಗಿ ಹೇಳುತ್ತೇನೆ. 22
5:22 1 ತಿಮೊ. 3:10
ಅವಸರದಿಂದ
5:22 ಅ. ಕೃ. 6:6
ಯಾರ ತಲೆಯ ಮೇಲೆಯಾದರೂ
5:22 ಹಸ್ತವನ್ನಿಡಬೇಡ
ಹಸ್ತವನ್ನಿಟ್ಟು ಸಭೆಯ ನಾಯಕತ್ವಕ್ಕೆ ನೇಮಿಸಬೇಡ.
5:22 2 ಯೋಹಾ. 11
ಮತ್ತೊಬ್ಬರು ಮಾಡಿದ ಪಾಪದಲ್ಲಿ ನೀನು ಪಾಲುಗಾರನಾಗದೆ, ನೀನು ಶುದ್ಧನಾಗಿರುವ ಹಾಗೆ ನೋಡಿಕೋ.

23ಇನ್ನು ಮೇಲೆ ನೀರನ್ನು ಮಾತ್ರ ಕುಡಿಯುವವನಾಗಿರದೆ, ನಿನ್ನ ಅಜೀರ್ಣದ ಮತ್ತು ನಿನಗೆ ಆಗಾಗ್ಗೆ ಉಂಟಾಗುವ ಅಸ್ವಸ್ಥತೆಯ ಪರಿಹಾರಕ್ಕಾಗಿ ದ್ರಾಕ್ಷಾರಸವನ್ನು
5:23 1 ತಿಮೊ. 3:8
ಸ್ವಲ್ಪವಾಗಿ ತೆಗೆದುಕೊ.
24ಕೆಲವರ ಪಾಪಕೃತ್ಯಗಳು ತೀರ್ಪಿಗೆ ಮುಂಚೆಯೇ ಬಯಲಾಗುತ್ತವೆ, ಬೇರೆ ಕೆಲವರ ಪಾಪಕೃತ್ಯಗಳು ಮರೆಯಾಗಿದ್ದು ತರುವಾಯ ತಿಳಿದುಬರುತ್ತವೆ. ಹಾಗೆಯೇ ಕೆಲವು ಸತ್ಕ್ರಿಯೆಗಳು ಪ್ರಸಿದ್ಧವಾಗಿವೆ, ಬೇರೆ ಕೆಲವು ಸತ್ಕ್ರಿಯೆಗಳು ಬೆಳಕಿಗೆ ಬಾರದ್ದಿದ್ದರೂ
5:25 ಕೀರ್ತ 37:6
ಮರೆಯಾಗಿರಲಾರವು.

25

Copyright information for KanULB