1 Timothy 6
1 ▼▼ 6:1 1 ಪೇತ್ರ 2:18
ದಾಸತ್ವ ನೊಗದ ಅಧೀನದಲ್ಲಿರುವವರು ತಮ್ಮ ಯಜಮಾನರನ್ನು ಪೂರ್ಣ ಗೌರವಕ್ಕೂ ಯೋಗ್ಯರೆಂದೆಣಿಸಲಿ, ▼▼6:1 ಯೆಶಾ. 52:5; ರೋಮಾ. 2:24; ತೀತ 2:5
ಇಲ್ಲದಿದ್ದರೆ ದೇವರ ನಾಮಕ್ಕೂ ನಾವು ಹೊಂದಿರುವ ಉಪದೇಶಕ್ಕೂ ನಿಂದನೆ ಉಂಟಾಗುತ್ತದೆ. 2ಯಾರಿಗಾದರೂ ಕ್ರಿಸ್ತನನ್ನು ನಂಬುವವರಾದ ಯಜಮಾನರಿದ್ದರೆ, ಅವರು ಆ ಯಜಮಾನರನ್ನು ▼▼6:2 ಫಿಲಿ. 16
ಸಹೋದರರೆಂದು ಉದಾಸೀನಮಾಡದೆ, ತಮ್ಮ ಸೇವೆಯ ಫಲವನ್ನು ಹೊಂದುವವರು, ನಂಬಿಗಸ್ತರು, ಪ್ರಿಯರೂ ಆಗಿದ್ದಾರೆಂದು ತಿಳಿದು ಅವರಿಗೆ ಇನ್ನು ಹೆಚ್ಚಾದ ಸಂತೋಷದಿಂದಲೇ ಸೇವೆಮಾಡಬೇಕು. ▼▼6:2 1 ತಿಮೊ 4:11,13; 5:7
ಈ ಉಪದೇಶವನ್ನು ಮಾಡಿ ಅವರನ್ನು ಎಚ್ಚರಿಸು. ತಪ್ಪಾದ ಬೋಧನೆಯೂ ನಿಜವಾದ ಐಶ್ವರ್ಯವೂ
3ಯಾವನಾದರೂ ▼▼6:3 1 ತಿಮೊ. 1:3
ಭಿನ್ನವಾದ ಉಪದೇಶವನ್ನು ಮಾಡಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ▼▼6:3 1 ತಿಮೊ. 1:10
ಸ್ವಸ್ಥವಾದ ಮಾತುಗಳಿಗೂ, ಭಕ್ತಾನುಸಾರವಾದ ಉಪದೇಶಗಳಿಗೂ ಸಮ್ಮತಿಸದೆ ಹೋದರೆ, 4ಅವನು ಅಹಂಭಾವಿಯೂ ಅಜ್ಞಾನಿಯೂ ಆಗಿದ್ದು, ▼▼6:4 1 ತಿಮೊ. 1:4; 2 ತಿಮೊ. 2:33; ತೀತ 3:9;
ನಿಂದನೆ ▼▼6:4 2 ತಿಮೊ. 2:14
ವಾಗ್ವಾದಗಳನ್ನುಂಟು ಮಾಡುವ ಭ್ರಾಂತಿಯಲ್ಲಿದ್ದಾನೆ. ಇವುಗಳಿಂದ ಹೊಟ್ಟೆಕಿಚ್ಚು, ಜಗಳ, ದೂಷಣೆ, ದುಸ್ಸಂಶಯ ಮುಂತಾದವುಗಳು ಉಂಟಾಗುತ್ತವೆ. 5ಇದಲ್ಲದೆ ಬುದ್ಧಿಗೆಟ್ಟು ಸತ್ಯವಿಹೀನರಾಗಿದ್ದು ▼▼6:5 ತೀತ 1:11; 2 ಪೇತ್ರ 2:3
ದೇವಭಕ್ತಿಯನ್ನು ಲಾಭಸಾಧನವೆಂದೆಣಿಸುವ ಈ ಮನುಷ್ಯರಲ್ಲಿ ನಿತ್ಯವಾದ ಕಚ್ಚಾಟಗಳು ಉಂಟಾಗುತ್ತವೆ. 6 ▼▼ 6:6 1 ತಿಮೊ. 4:8; ಕೀರ್ತ 37:16; ಜ್ಞಾ. 15:16; 16:8; ಫಿಲಿ. 4:11; ಇಬ್ರಿ. 13:5
ಸಂತುಷ್ಟಿಸಹಿತವಾದ ಭಕ್ತಿಯು ದೊಡ್ಡ ಲಾಭವೇ ಸರಿ. 7 ▼▼6:7 ಯೋಬ 1:21; ಕೀರ್ತ 49:17; ಪ್ರಸಂಗಿ 5:15,16
ನಾವು ಲೋಕದೊಳಕ್ಕೆ ಏನೂ ತೆಗೆದುಕೊಂಡು ಬರಲಿಲ್ಲವಾದ್ದರಿಂದ, ಅದರೊಳಗಿಂದ ಏನೂ ತೆಗೆದುಕೊಂಡು ಹೋಗಲಾರೆವು. 8 ▼▼6:8 ಜ್ಞಾ. 30:8
ನಮಗೆ ಅನ್ನ ವಸ್ತ್ರಗಳಿದ್ದರೆ ಸಾಕು, ನಾವು ಸಂತುಷ್ಟರಾಗುತ್ತವೆ. 9 ▼▼ 6:9 ಜ್ಞಾ. 15:27; 23:4; 28:20; ಮತ್ತಾ 13:22; ಲೂಕ 12:15
ಐಶ್ವರ್ಯವಂತರಾಗಬೇಕೆಂದು ಮನಸ್ಸುಮಾಡುವವರು ದುಷ್ಟ್ರೇರಣೆಯೆಂಬ ಬಲೆಯಲ್ಲಿ ಸಿಕ್ಕಿಕೊಂಡು, ಬುದ್ಧಿಗೆ ವಿರುದ್ಧವಾಗಿಯೂ ಹಾನಿಕರವಾಗಿಯೂ ಇರುವ ಅನೇಕ ಆಸೆಗಳಲ್ಲಿ ಬೀಳುತ್ತಾರೆ. ಇಂಥ ಆಸೆಗಳು ಮನುಷ್ಯರನ್ನು ಸಂಹಾರ ವಿನಾಶಗಳಲ್ಲಿ ಸಿಕ್ಕಿಸುತ್ತವೆ. 10 ▼▼6:10 ವಿಮೋ. 23:8; ಧರ್ಮೋ. 16:19
ಹಣದಾಸೆಯು ಸಕಲವಿಧವಾದ ಕೆಟ್ಟತನಕ್ಕೆ ಮೂಲವಾಗಿದೆ. ಕೆಲವರು ಅದಕ್ಕಾಗಿ ಆತುರಪಟ್ಟು, ಅದರಿಂದ ಕ್ರಿಸ್ತ ನಂಬಿಕೆಯನ್ನು ಬಿಟ್ಟು, ಅಲೆದಾಡಿ ಅನೇಕ ವೇದನೆಗಳಿಂದ ತಮ್ಮನ್ನು ತಿವಿಸಿಕೊಳ್ಳುತ್ತಾರೆ. ವೈಯುಕ್ತಿಕ ಸಲಹೆಗಳು
11ಎಲೈ, ▼▼6:11 2 ತಿಮೊ. 3:17
ದೇವರ ಮನುಷ್ಯನೇ, ನೀನಾದರೋ ▼▼6:11 2 ತಿಮೊ. 2:22
ಇವುಗಳಿಗೆ ದೂರವಾಗಿರು. ನೀತಿ, ಭಕ್ತಿ, ನಂಬಿಕೆ, ಪ್ರೀತಿ, ಸ್ಥಿರಚಿತ್ತ ಹಾಗೂ ಸಾತ್ವಿಕತ್ವ ಇವುಗಳನ್ನು ಸಂಪಾದಿಸುವುದಕ್ಕೆ ಪ್ರಯಾಸಪಡು. 12 ▼▼6:12 ನಂಬಿಕೆಯ
ಕ್ರಿಸ್ತ ನಂಬಿಕೆಯ ▼▼6:12 1 ತಿಮೊ. 1:18
ಶ್ರೇಷ್ಠ ಹೋರಾಟವನ್ನು ಮಾಡು, ▼▼6:12 ಫಿಲಿ. 3:12
ನಿತ್ಯಜೀವವನ್ನು ಹಿಡಿದುಕೋ. ▼▼6:12 1 ಪೇತ್ರ 5:10
ಅದಕ್ಕಾಗಿ ನೀನು ದೇವರಿಂದ ಕರೆಯಲ್ಪಟ್ಟಿದಿ ಮತ್ತು ನೀನು ಅನೇಕ ಸಾಕ್ಷಿಗಳ ಮುಂದೆ ಒಳ್ಳೆಯ ಪ್ರತಿಜ್ಞೆಯನ್ನು ಮಾಡಿದಿಯಲ್ಲಾ. 13ಸರ್ವ ಸೃಷ್ಟಿಗೆ ಜೀವಾಧಾರಕನಾದ ದೇವರ ಮುಂದೆಯೂ, ಪೊಂತ್ಯ ಪಿಲಾತನ ▼▼6:13 ಎದುರಿನಲ್ಲಿ
ಕಾಲದಲ್ಲಿ ▼▼6:13 ಮತ್ತಾ 27:11; ಯೋಹಾ. 18:37; ಪ್ರಕ. 1:5; 3:14
ಶ್ರೇಷ್ಠ ಪ್ರತಿಜ್ಞೆಯನ್ನು ತಾನೇ ಸಾಕ್ಷಿಯಾಗಿದ್ದು ಸ್ಥಾಪಿಸಿದ ಕ್ರಿಸ್ತ ಯೇಸುವಿನ ಮುಂದೆಯೂ ನಾನು ನಿನಗೆ ಆಜ್ಞಾಪಿಸುವುದೇನಂದರೆ, 14ನಮ್ಮ ಕರ್ತನಾದ ಯೇಸು ಕ್ರಿಸ್ತನ ▼▼6:14 2 ಥೆಸ. 2:8
ಪ್ರತ್ಯಕ್ಷತೆಯ ತನಕ ನೀನು ಈ ಆಜ್ಞೆಯನ್ನು ನಿಷ್ಕಳಂಕವಾಗಿಯೂ ನಿಂದಾರಹಿತವಾಗಿಯೂ ಕಾಪಾಡಿಕೊಂಡಿರಬೇಕು. 15 ▼▼ 6:15 1 ತಿಮೊ. 1:11
ಭಾಗ್ಯವಂತನಾದ ಏಕಾಧಿಪತಿಯು ತಾನು ನಿಗದಿಪಡಿಸಿರುವ ಸೂಕ್ತ ಸಮಯದಲ್ಲೇ ಆತನನ್ನು ಪ್ರತ್ಯಕ್ಷಪಡಿಸುವನು. ಆ ಏಕಾಧಿಪತಿಯು, ▼▼6:15 ಪ್ರಕ. 17:14
ರಾಜಾಧಿರಾಜನೂ, ಕರ್ತಾಧಿಕರ್ತನೂ, 16 ▼▼6:16 1 ತಿಮೊ. 1:17
ತಾನೊಬ್ಬನೇ ಅಮರತ್ವವುಳ್ಳವನೂ ಅಗಮ್ಯವಾದ ಬೆಳಕಿನಲ್ಲಿ ವಾಸಮಾಡುವವನೂ ಆಗಿದ್ದಾನೆ. ▼▼6:16 ವಿಮೋ. 33:20; ಯೋಹಾ. 1:18; 5:37; 6:46; ಕೊಲೊ. 1:15; 1 ಯೋಹಾ 4:12, 20
ಮನುಷ್ಯರಲ್ಲಿ ಯಾರೂ ಆತನನ್ನು ಕಾಣಲಿಲ್ಲ, ಯಾರೂ ಕಾಣಲಾರರು. ಆತನಿಗೆ ಮಾನವೂ ನಿತ್ಯಾಧಿಪತ್ಯವೂ ಎಂದೆಂದಿಗೂ ಇರಲಿ. ಆಮೆನ್. 17 ▼▼ 6:17 2 ತಿಮೊ. 4:10; ತೀತ 2:12
ಇಹಲೋಕ ವಿಷಯದಲ್ಲಿ ಐಶ್ವರ್ಯವುಳ್ಳವರು ▼▼6:17 ರೋಮಾ. 11:20; 12:3, 16
ಅಹಂಕಾರಿಗಳಾಗಿರದೆ, ▼▼6:17 ಜ್ಞಾ. 23:5
ಅಸ್ಥಿರವಾದ ಐಶ್ವರ್ಯದ ಮೇಲೆ ▼▼6:17 ಮಾರ್ಕ 10:24
ನಿರೀಕ್ಷೆಯನ್ನಿಡದೆ, ನಮ್ಮ ಅನುಭೋಗಕ್ಕೋಸ್ಕರ ನಮಗೆ ▼▼6:17 ಅ. ಕೃ. 14:17
ಎಲ್ಲವನ್ನೂ ಹೇರಳವಾಗಿ ದಯಪಾಲಿಸುವ ದೇವರ ಮೇಲೆ ನಿರೀಕ್ಷೆಯನ್ನಿಡಬೇಕು. 18 ▼▼This verse is empty because in this translation its contents have been moved to form part of verse 1Ti 6:19.
▼▼In this translation, this verse contains text which in some other translations appears in verses 1Ti 6:18-1Ti 6:19.
19ವಾಸ್ತವವಾದ ಜೀವವನ್ನು ಹೊಂದುವುದಕ್ಕೋಸ್ಕರ ಅವರು ಒಳ್ಳೆಯದನ್ನು ಮಾಡುವವರೂ, ▼▼6:18-19 ಲೂಕ 12:21
ಸತ್ಕಾರ್ಯಗಳನ್ನು ಮಾಡುವುದರಲ್ಲಿ ಐಶ್ವರ್ಯವಂತರೂ, ಉದಾರಶೀಲರೂ, ▼▼6:18-19 ರೋಮಾ. 12:13
ಪರೋಪಕಾರಮಾಡುವವರೂ ಆಗಿದ್ದು, ▼▼6:18-19 ಮತ್ತಾ. 6:19, 20
ಮುಂದಿನ ಕಾಲಕ್ಕೆ ಒಳ್ಳೆ ಅಸ್ತಿವಾರವಾಗುವಂಥವುಗಳನ್ನು ತಮಗೆ ಕೂಡಿಸಿಟ್ಟುಕೊಳ್ಳಬೇಕೆಂದು ಅವರಿಗೆ ಆಜ್ಞಾಪಿಸು. 20ಎಲೈ ತಿಮೊಥೆಯನೇ, ಜ್ಞಾನೋಪದೇಶವೆಂದು ಸುಳ್ಳಾಗಿ ಹೇಳಿಕೊಳ್ಳುವ ಬೋಧನೆಗೆ ಸಂಬಂಧಪಟ್ಟ, ▼▼6:20 2 ತಿಮೊ 2:16
ಪ್ರಾಪಂಚಿಕವಾದ ಆ ಹರಟೆ ಮಾತುಗಳಿಗೂ, ವಿವಾದಗಳಿಗೂ ನೀನು ದೂರವಾಗಿದ್ದು ▼▼6:20 2 ತಿಮೊ. 1:12,14
ನಿನ್ನ ವಶಕ್ಕೆ ಕೊಟ್ಟಿರುವುದನ್ನು ಕಾಪಾಡಿಕೋ. 21ಕೆಲವರು ಆ ಸುಳ್ಳಾದ ಜ್ಞಾನವನ್ನು ಒಪ್ಪಿಕೊಂಡು ಕ್ರಿಸ್ತ ನಂಬಿಕೆಯಿಂದ ಭ್ರಷ್ಟರಾಗಿ ಹೋದರು. ▼▼6:21 ಕೊಲೊ. 4:18
ಕೃಪೆಯು ನಿಮ್ಮೊಂದಿಗಿರಲಿ.
Copyright information for
KanULB