2 Corinthians 13

1ನಾನು ನಿಮ್ಮ ಬಳಿಗೆ ಮೂರನೆಯ ಸಾರಿ ಬರುತ್ತಿದ್ದೇನೆ.
13:1 ಧರ್ಮೋ. 19:15; ಅರಣ್ಯ. 35:30
<<ಯಾವ ದೂರಿದ್ದರೂ ಅದಕ್ಕೆ ಇಬ್ಬರು ಮೂವರು ಸಾಕ್ಷಿಗಳ ಆಧಾರವಿರಬೇಕು,>> ಎಂದು ಲಿಖಿತವಾಗಿದೆ.
2ನಾನು ಎರಡನೆಯ ಸಾರಿ ನಿಮ್ಮಲ್ಲಿದ್ದಾಗ
13:2 2 ಕೊರಿ. 13:10; 1 ಕೊರಿ. 4:21
ತಿರುಗಿ ಬಂದರೆ ನಿಮ್ಮನ್ನು ಶಿಕ್ಷಿಸದೆ ಬಿಡುವುದಿಲ್ಲವೆಂದು ಹೇಗೆ ಹೇಳಿದೆನೋ, ಹಾಗೆಯೇ ಈಗಲೂ ನಿಮಗೆ:
13:2 2 ಕೊರಿ. 12:21
ಪೂರ್ವ ಪಾಪಕೃತ್ಯಗಳನ್ನು ಇನ್ನೂ ನಡಿಸುವವರಿಗೂ ಮತ್ತು ಮಿಕ್ಕಾದವರೆಲ್ಲರಿಗೂ ಹೇಳುತ್ತೇನೆ.

3ಕ್ರಿಸ್ತನು ನನ್ನಲ್ಲಿ ಮಾತನಾಡುತ್ತಾನೆಂಬುವುದಕ್ಕೆ ನೀವು ಸಾಕ್ಷಿ ಕೇಳಿದ್ದರಿಂದ ನಾನು ಹೀಗೆ ಹೇಳುತ್ತೇನೆ. ಆತನು ನಿಮ್ಮನ್ನು ಕುರಿತು ದುರ್ಬಲನಾಗಿರದೆ
13:3 2 ಕೊರಿ. 10:4
ಶಕ್ತನೇ ಆಗಿದ್ದಾನೆ. ಬಲವಾದ ಕೆಲಸಗಳನ್ನು ನಿಮ್ಮಲ್ಲಿ ನಡಿಸುವವನಾಗಿದ್ದಾನೆ.
4
13:4 ಫಿಲಿ. 2:7,8; 1 ಪೇತ್ರ 3:18
ಆತನು ಬಲಹೀನಾವಸ್ಥೆಯಲ್ಲಿ ಶಿಲುಬೆಗೆ ಹಾಕಲ್ಪಟ್ಟನು ನಿಜ;
13:4 ರೋಮಾ. 1:4; 6:4
ಆದರೂ ದೇವರ ಬಲದಿಂದ ಜೀವಿಸುವವನಾಗಿದ್ದಾನೆ.
13:4 2 ಕೊರಿ. 12:10
ನಾವೂ ಸಹ ಆತನ ಬಲಹೀನಾವಸ್ಥೆಯಲ್ಲಿ ಪಾಲುಗಾರರಾಗಿದ್ದೇವೆ,
13:4 ರೋಮಾ. 6:8
ಆದರೂ ಆತನೊಂದಿಗೆ ದೇವರ ಬಲದಿಂದ ನಿಮಗಾಗಿ ಬದುಕುವವರಾಗಿದ್ದೇವೆ.

5ನೀವು ಕ್ರಿಸ್ತ ನಂಬಿಕೆಯಲ್ಲಿ ಇದ್ದೀರೋ ಇಲ್ಲವೋ ಎಂದು ನಿಮ್ಮನ್ನು ನೀವೇ ಪರೀಕ್ಷಿಸಿಕೊಳ್ಳಿರಿ, ನಿಮ್ಮನ್ನು ನೀವೇ ಪರಿಶೋಧಿಸಿಕೊಳ್ಳಿರಿ. ನೀವು ಒಳ್ಳೆಯವರಾಗಿದ್ದರೆ,
13:5 ರೋಮಾ. 8:10; ಗಲಾ. 4:19
ಯೇಸು ಕ್ರಿಸ್ತನು ನಿಮ್ಮಲ್ಲಿದ್ದಾನೆಂಬುದು ನಿಮಗೆ ತಿಳಿಯುವುದಿಲ್ಲವೋ? ಆತನು ನಿಮ್ಮಲ್ಲಿಲ್ಲದಿದ್ದರೆ ನೀವು ಆ ಪರೀಕ್ಷಿಗೆ ಒಳ್ಳಗಾದವರೇ.
6ನಾವಂತೂ ಆ ಪರೀಕ್ಷಿಗೆ ಒಳ್ಳಗಾದವರೆಂದು ನಿಮಗೆ ಗೊತ್ತಾಗುವುದೆಂಬುದಾಗಿ ನನಗೆ ಭರವಸೆವುಂಟು.

7ನೀವು ಕೆಟ್ಟದ್ದೇನೂ ಮಾಡಬಾರದೆಂದು ನಾವು ದೇವರನ್ನು ಪ್ರಾರ್ಥಿಸುತ್ತೇವೆ. ಇದರಲ್ಲಿ ನಾವೇ ಆ ಪರೀಕ್ಷಿಗೆ ಒಳ್ಳಗಾದವರೆಂದು ತೋರಿ ಬರಬೇಕೆಂಬುದು ನಮ್ಮ ಉದ್ದೇಶವಲ್ಲ. ನಾವು ಆ ಪರೀಕ್ಷಿಗೆ ಒಳ್ಳಗಾದವರೆನಿಸಿಕೊಂಡರೂ ನೀವು ಒಳ್ಳೆಯದನ್ನು ಮಾಡುವವರಾಗಬೇಕೆಂಬುದೇ ನಮ್ಮ ಉದ್ದೇಶ. 8ಸತ್ಯಕ್ಕೆ ವಿರೋಧವಾಗಿ ನಾವೇನೂ ಮಾಡಲಾರೆವು, ಸತ್ಯಾಭಿವೃದ್ದಿಗೋಸ್ಕರವೇ ಸಮಸ್ತವನ್ನು ಮಾಡುತ್ತೇವೆ.

9
13:9 1 ಕೊರಿ. 4:10; 2 ಕೊರಿ. 4:12; 12:5; 9:10
ನಾವು ಬಲಹೀನರಾಗಿದ್ದರೂ ನೀವು ಬಲಿಷ್ಠರಾಗಿದ್ದ ಪಕ್ಷಕ್ಕೆ ಸಂತೋಷಪಡುತ್ತೇವೆ; ಇದಲ್ಲದೆ ನೀವು ಪೂರ್ಣ ಕ್ರಮಕ್ಕೆ ಬರಬೇಕೆಂದು ಪ್ರಾರ್ಥಿಸುತ್ತೇವೆ.

10ಇದಕ್ಕಾಗಿಯೇ ನಾನು ನಿಮ್ಮಲ್ಲಿ ಇಲ್ಲದಿರುವಾಗಲೇ ನಿಮ್ಮನ್ನು ಕೆಡವಿಹಾಕುವುದಕ್ಕಲ್ಲ ಬದಲಾಗಿ ಕಟ್ಟುವುದಕ್ಕಾಗಿಯೇ ಬರೆದಿದ್ದೇನೆ.
13:10 2 ಕೊರಿ. 10:8
ಕರ್ತನು ನನಗೆ ಕೊಟ್ಟಿರುವ ಅಧಿಕಾರದ ಪ್ರಯೋಗದಲ್ಲಿ
13:10 2 ಕೊರಿ. 2:3
ನಿಮ್ಮ ಬಳಿಗೆ ಬಂದಾಗ ಕಾಠಿಣ್ಯವನ್ನು ತೋರಿಸುವುದಕ್ಕೆ ಅವಕಾಶವಿರಬಾರದೆಂದು ಇದನ್ನು ಬರೆಯುತ್ತಿದ್ದೇನೆ.

ಕಡೆ ಮಾತುಗಳು

11ಕಡೆಯದಾಗಿ ಪ್ರಿಯರೇ,
13:11 ನಿಮಗೆ ಕ್ಷೇಮವಾಗಲಿ
ಸಂತೋಷಪಡಿರಿ! ಕ್ರಮಪಡಿಸಿಕೊಳ್ಳಿರಿ. ಧೈರ್ಯವುಳ್ಳವರಾಗಿರಿ,
13:11 ರೋಮಾ. 12:16
ಏಕ ಮನಸ್ಸುಳ್ಳವರಾಗಿರಿ,
13:11 ಮಾರ್ಕ. 9:50
ಸಮಾಧಾನದಿಂದ ಇರಿ; ಆಗ ಪ್ರೀತಿಸ್ವರೂಪನೂ,
13:11 ರೋಮಾ. 15:33
ಶಾಂತಿದಾಯಕನೂ ಆದ ದೇವರು ನಿಮ್ಮ ಸಂಗಡ ಇರುವನು.
12
13:12 ರೋಮಾ. 16:16
ಪವಿತ್ರವಾದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ.

13
13:13 ಫಿಲಿ. 4:22
ದೇವಜನರೆಲ್ಲರೂ ನಿಮಗೆ ವಂದನೆ ಹೇಳುತ್ತಾರೆ.
14
13:14 ರೋಮಾ. 16:20; 1 ಕೊರಿ. 16:23
ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯೂ,
13:14 ಯೂದ. 21
ದೇವರ ಪ್ರೀತಿಯೂ,
13:14 ಫಿಲಿ. 2:1
ಪವಿತ್ರಾತ್ಮನ ಅನ್ಯೋನ್ಯತೆಯೂ ನಿಮ್ಮೆಲ್ಲರ ಸಂಗಡವಿರಲಿ.

Copyright information for KanULB