2 Corinthians 2

1ಇನ್ನೊಮ್ಮೆ ನಿಮ್ಮ ಬಳಿಗೆ ಬಂದು, ನಿಮ್ಮನ್ನು ದುಃಖಕ್ಕೆ ಈಡುಮಾಡಬಾರದೆಂದು ನಾನು ನಿರ್ಧರಿಸಿಕೊಂಡೆ. 2ನಾನೇ ನಿಮ್ಮನ್ನು ದುಃಖಪಡಿಸಿದರೆ, ನನ್ನನ್ನು ಸಂತೋಷ ಪಡಿಸುವವರು ಯಾರು? ನನ್ನಿಂದ ದುಃಖಕ್ಕೆ ಒಳಗಾದ ನೀವೇ ಅಲ್ಲವೇ?

3ಆದಕಾರಣ ನಾನು ಆ ಪತ್ರವನ್ನು ಬರೆದದ್ದು: ನನ್ನನ್ನು ಸಂತೋಷಪಡಿಸಬೇಕಾದವರೇ ನನ್ನನ್ನು ದುಃಖಕ್ಕೆ ಈಡುಮಾಡಬಾರದೆಂದು ನಾನು ಬರಲಿಲ್ಲ. ನನ್ನ ಸಂತೋಷವೇ ನಿಮ್ಮೆಲ್ಲರ ಸಂತೋಷವೆಂದು ನೀವು ಭಾವಿಸುತ್ತೀರೆಂದು
2:3 2 ಕೊರಿ. 7:16
ನಂಬಿದ್ದೇನೆ.
4ನಿಮ್ಮ ಮೇಲೆ ನನಗಿರುವ ಅಧಿಕವಾದ ಪ್ರೀತಿಯನ್ನು ನೀವು ತಿಳಿದುಕೊಳ್ಳಬೇಕೆಂತಲೇ
2:4 2 ಕೊರಿ. 7:8-12
ನಾನು ಬಹಳವಾಗಿ ಕಣ್ಣೀರಿಡುತ್ತಾ ಹೃದಯದ ಬಹು ಸಂಕಟದಿಂದಲೂ ವ್ಯಾಕುಲದಿಂದಲೂ ನಿಮಗೆ ಬರೆದೆನೇ ಹೊರತು ನಿಮ್ಮನ್ನು ನೋಯಿಸುವುದಕ್ಕಾಗಿಯಲ್ಲ.

5
2:5 1 ಕೊರಿ. 5:1-2
ಮನಸ್ಸಿಗೆ ನೋವುಂಟುಮಾಡಿದವನು ಒಬ್ಬನು ನಿಮ್ಮಲ್ಲಿ ಇದ್ದರೂ ಅವನು ನನ್ನನ್ನು ಮಾತ್ರ ದುಃಖಪಡಿಸದೆ ನಿಮ್ಮಲ್ಲಿ ಬಹುಜನರನ್ನೂ ನೋಯಿಸಿದ್ದಾನೆ. ಆ ದುಃಖವು ಎಲ್ಲರಲ್ಲಿಯೂ ಉಂಟಾಯಿತೆಂದು ನಾನು ಹೇಳುವುದಿಲ್ಲ.
6ಇಂಥವನಿಗೆ ನಿಮ್ಮಲ್ಲಿ ಬಹುಜನರಿಂದಾದ
2:6 1 ಕೊರಿ. 5:4-5, 2 ಕೊರಿ. 7:11
ಆ ಶಿಕ್ಷೆಯೇ ಸಾಕು.
7
2:7 ಗಲಾ. 6:1, ಎಫೆ. 4:32
ಇನ್ನೂ ಅವನನ್ನು ಶಿಕ್ಷಿಸದೇ ಮನ್ನಿಸಿರಿ, ಸಂತೈಸಿರಿ. ಇಲ್ಲವಾದರೆ ಅವನು ಅಧಿಕವಾದ ದುಃಖದಲ್ಲಿ ಮುಳುಗಿ ಹೋಗುವನು.

8ಆದ್ದರಿಂದ ಅವನಿಗೆ ನಿಮ್ಮ ಪ್ರೀತಿಯನ್ನು ತೋರಿಸಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. 9
2:9 2 ಕೊರಿ. 7:15, 10:6
ಎಲ್ಲಾ ವಿಷಯದಲ್ಲೂ ನೀವು ವಿಧೇಯರಾಗಿದ್ದೀರೋ ಎಂದು ನಿಮ್ಮ ಗುಣವನ್ನು ಪರೀಕ್ಷಿಸಿ ತಿಳಿದುಕೊಳ್ಳಬೇಕೆಂಬುವ ಉದ್ದೇಶದಿಂದಲೇ ಹೀಗೆ ಬರೆದೆನು.

10ನೀವು ಯಾರನ್ನು ಕ್ಷಮಿಸುತ್ತೀರೋ ನಾನು ಸಹ ಅವನನ್ನು ಕ್ಷಮಿಸುತ್ತೇನೆ. ನಿಮಗೋಸ್ಕರವೇ ಅವನನ್ನು ಕ್ರಿಸ್ತನ ಸನ್ನಿಧಾನದಲ್ಲಿ ಕ್ಷಮಿಸಿದ್ದೇನೆ. 11ಸೈತಾನನು ನಮ್ಮನ್ನು ವಂಚಿಸಬಾರದೆಂದು ಹೀಗೆ ಮಾಡಿದೆನು.
2:11 1 ಪೇತ್ರ. 5:8
ಅವನ ಕುತಂತ್ರಗಳನ್ನು ನಾವು ಚೆನ್ನಾಗಿ ತಿಳಿದಿದ್ದೇವಲ್ಲಾ.

ಸುವಾರ್ತಾ ಸೇವೆಯ ಶ್ರೇಷ್ಠತೆಯನ್ನು ಕುರಿತದ್ದು

12ದೇವರು ನನಗಾಗಿ ಬಾಗಿಲನ್ನು ತೆರೆದಿದ್ದಾನೆಂದು ಯೋಚಿಸಿ ಕ್ರಿಸ್ತನ ಸುವಾರ್ತೆಯನ್ನು ಸಾರುವುದಕ್ಕಾಗಿ
2:12 ಅ. ಕೃ. 16:8, 20:6
ನಾನು ತ್ರೋವ ಪಟ್ಟಣಕ್ಕೆ ಬಂದೆನು.
13ಆದರೂ ನನ್ನ ಸಹೋದರ ತೀತನು ನನಗೆ ಅಲ್ಲಿ ಸಿಕ್ಕಲಿಲ್ಲವಾದ ಕಾರಣ
2:13 2 ಕೊರಿ. 7:5
ನನ್ನ ಮನಸ್ಸಿಗೆ ಸಮಾಧಾನವಿಲ್ಲದೆ ಅಲ್ಲಿದ್ದವರಿಗೆ ವಂದಿಸಿ ಅಲ್ಲಿಂದ ಹೊರಟು ಮಕೆದೋನ್ಯಕ್ಕೆ ಬಂದೆನು.

14ಕ್ರಿಸ್ತನ ಮುಖಾಂತರ ನಮ್ಮನ್ನು
2:14 ಕೊಲೊ. 2:15
ವಿಜಯೋತ್ಸವದತ್ತ ನಡೆಸುವ ಹಾಗೂ ನಮ್ಮ ಮೂಲಕವಾಗಿ ತನ್ನ ಜ್ಞಾನವೆಂಬ
2:14 ಎಫೆ. 5:2, ಫಿಲಿ. 4:18
ಸುವಾಸನೆಯನ್ನು ಎಲ್ಲಾ ಸ್ಥಳಗಳಲ್ಲಿ ಹರಡಿಸಿದ ದೇವರಿಗೆ ಸ್ತೋತ್ರವಾಗಲಿ.
15ರಕ್ಷಣಾ ಮಾರ್ಗದಲ್ಲಿರುವವರಲ್ಲಿಯೂ ಮತ್ತು
2:15 2 ಕೊರಿ. 4:3
ನಾಶನದ ಮಾರ್ಗದಲ್ಲಿರುವವರಲ್ಲಿಯೂ ನಾವು ದೇವರಿಗೆ ಕ್ರಿಸ್ತನ ಪರಿಮಳವಾಗಿದ್ದೇವೆ.

16
2:16 ಲೂಕ. 2:34, ಯೋಹಾ 9:39, 1 ಪೇತ್ರ. 2:7-8
ನಾವು ವಿನಾಶಮಾರ್ಗದಲ್ಲಿರುವವರಿಗೆ ಮೃತ್ಯುಕಾರಕ ಗಂಧ; ರಕ್ಷಣಾಮಾರ್ಗದಲ್ಲಿರುವವರಿಗೆ ಸಜೀವದಾಯಕ ಸುಗಂಧ.
2:16 2 ಕೊರಿ. 3:5-6
ಇಂಥ ಕಾರ್ಯಗಳಿಗೆ ಯಾರು ಯೋಗ್ಯರು?
ಎಷ್ಟೋ ಮಂದಿ ದೇವರ ವಾಕ್ಯವನ್ನು ಕಲಬೆರಕೆ ಮಾಡಿ ವ್ಯಾಪಾರಮಾಡುತ್ತಾರೆ. ನಾವು ಹಾಗಲ್ಲ; ದೇವರಿಂದಲೇ ನಿಯೋಜಿತರಾಗಿ, ದೇವರ ಸಮಕ್ಷಮದಲ್ಲಿ, ಕ್ರಿಸ್ತಯೇಸುವಿನ ಅನ್ಯೋನ್ಯತೆಯಲ್ಲಿ ನಾವು ಯಥಾರ್ಥವಾದುದನ್ನೇ ಉಪದೇಶಿಸುವವರು.

17

Copyright information for KanULB