2 Corinthians 4

ಮಣ್ಣಿನ ಪಾತ್ರೆಯಲ್ಲಿ ಇರುವ ನಿಕ್ಷೇಪ

1ಆದ್ದರಿಂದ ದೇವರ ಕರುಣೆಯಿಂದ
4:1 2 ಕೊರಿ. 3:6
ಈ ಸೇವೆಯನ್ನು ಹೊಂದಿದವರಾದ ನಾವು ಧೈರ್ಯಗೆಟ್ಟು ಹಿಂಜರಿಯುವುದಿಲ್ಲ.
2
4:2 ರೋಮಾ. 6:21
ನಾಚಿಕೆಪಡುವಂತಹ ಗುಪ್ತಕಾರ್ಯಗಳನ್ನು ಬಿಟ್ಟು ಕುತಂತ್ರದಲ್ಲಿ ನಡೆಯದೆ
4:2 2 ಕೊರಿ. 2:17
ದೇವರ ವಾಕ್ಯವನ್ನು ಬೆರಕೆ ಮಾಡದೆ, ಸತ್ಯವನ್ನು ಪ್ರಾಮಾಣಿಕವಾಗಿ ಬೋಧಿಸುತ್ತಾ
4:2 2 ಕೊರಿ. 5:11-12
ನಾವು ನೀತಿವಂತರೆಂದು ಪ್ರತಿ ಮನುಷ್ಯನ ಮನಸಾಕ್ಷಿಯು ದೇವರ ಮುಂದೆ ಒಪ್ಪಬೇಕಾದ ರೀತಿಯಲ್ಲಿ ನಡೆಯುತ್ತೇವೆ.

3
4:3 2 ಕೊರಿ. 3:14
ನಾವು ಸಾರುವ ಸುವಾರ್ತೆಯು ಕೆಲವರಿಗೆ ಮರೆಯಾಗಿರುವುದಾದರೆ
4:3 1 ಕೊರಿ. 1:18, 2 ಕೊರಿ. 2:15
ನಾಶಮಾರ್ಗದಲ್ಲಿರುವವರಿಗೇ ಅದು
4:3 ಮತ್ತಾ 13:15
ಮರೆಯಾಗಿರುವುದು.
4ಇವರಲ್ಲಿ
4:4 ಕೊಲೊ. 1:15, ಫಿಲಿ. 2:, ಯೋಹಾ. 14:9
ದೇವರ ಪ್ರತಿರೂಪವಾಗಿರುವ ಕ್ರಿಸ್ತನ ತೇಜಸ್ಸನ್ನು ತೋರಿಸುವ
4:4 ಅ. ಕೃ. 26:18
ಸುವಾರ್ತೆಯ ಬೆಳಕನ್ನು ನೋಡಬಾರದೆಂದು
4:4 ಯೋಹಾ. 12:31
ಈ ಲೋಕದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಕುರುಡು ಮಾಡಿದ್ದಾನೆ.

5ನಮ್ಮನ್ನೇ ನಾವು ಪ್ರಚಾರಮಾಡಿಕೊಳ್ಳದೆ ನಮ್ಮನ್ನು ಯೇಸುವಿನ ನಿಮಿತ್ತ
4:5 1 ಕೊರಿ. 9:19, 2 ಕೊರಿ. 1:24
ನಿಮ್ಮ ದಾಸರೆಂತಲೂ ಕ್ರಿಸ್ತೇಸುವನ್ನೇ ಕರ್ತನೆಂತಲೂ ಘೋಷಿಸುತ್ತೇವೆ.
6ಯಾಕೆಂದರೆ
4:6 ಆದಿ. 1:3
<<ಕತ್ತಲೆಯೊಳಗಿನಿಂದ ಬೆಳಕು ಪ್ರಕಾಶಿಸಲಿ>> ಎಂದು ಹೇಳಿದ ದೇವರು ತಾನೇ
4:6 ವ 4 ನೋಡಿರಿ
ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಮಹಿಮೆಯ ಜ್ಞಾನವೆಂಬ ಪ್ರಕಾಶವು ಅನೇಕರಿಗೆ ಉಂಟಾಗುವುದಕ್ಕಾಗಿ
4:6 2 ಪೇತ್ರ. 1:19
ನಮ್ಮ ಹೃದಯಗಳಲ್ಲಿ ಪ್ರಕಾಶಿಸಿದನು.

7
4:7 2 ತಿಮೊ. 2:20, 2 ಕೊರಿ. 5:1
ಮಣ್ಣಿನ ಮಡಿಕೆಯಂತಿರುವ ನಮ್ಮಲ್ಲಿ ಈ ನಿಕ್ಷೇಪವನ್ನು ಇಟ್ಟಿರುವುದರಿಂದ ಇಂತಹ
4:7 1 ಕೊರಿ. 2:5
ಮಹಾಶಕ್ತಿಯು ದೇವರದೇ ಹೊರತು ನಮ್ಮೊಳಗಿಂದ ಬಂದದ್ದಲ್ಲವೆಂಬುದು ಸ್ಪಷ್ಟವಾಗಿದೆ.
8
4:8 2 ಕೊರಿ. 7:5
ಎಲ್ಲಾದರಲ್ಲಿಯೂ ನಮಗೆ ಇಕ್ಕಟ್ಟು ಇದ್ದರೂ ನಾವು ಸಂಕಟಪಡುವವರಲ್ಲ. ನಾವು ಗೊಂದಲಕ್ಕೀಡಾಗಿದ್ದರೂ ಹತಾಶರಾಗುವವರಲ್ಲ.
9ಹಿಂಸೆಪಡುವವರಾಗಿದ್ದರೂ ಕೈಬಿಡಲ್ಪಟ್ಟವರಲ್ಲ. ಕೆಡವಲ್ಪಟ್ಟವರಾಗಿದ್ದರೂ ನಶಿಸಿಹೊಗುವವರಲ್ಲ. 10
4:10 2 ತಿಮೊ. 2:11
ಯೇಸುವಿನ ಜೀವವು ನಮ್ಮ ದೇಹದಲ್ಲಿ ಉಂಟೆಂದು ಪ್ರಕಟಪಡಿಸುವುದಕ್ಕಾಗಿ
4:10 2 ಕೊರಿ. 6:9, 1 ಕೊರಿ. 4:9; 15:31
ಯೇಸುವಿನ ಮರಣಾವಸ್ಥೆಯನ್ನು ನಾವು ಯಾವಾಗಲೂ ದೇಹದಲ್ಲಿ ಅನುಭವಿಸುವವರಾಗಿದ್ದೇವೆ.

11ಯೇಸುವಿನ ಜೀವವು ನಮ್ಮ ಮರ್ತ್ಯ ಶರೀರದಲ್ಲಿ ಉಂಟೆಂದು ತೋರಿಬರುವುದಕ್ಕಾಗಿ ಬದುಕಿರುವ ನಾವು ಯೇಸುವಿನ ನಿಮಿತ್ತ ಯಾವಾಗಲೂ ಮರಣಕ್ಕೆ ಒಪ್ಪಿಸಲ್ಪಡುತ್ತಾ ಇದ್ದೇವೆ. 12ಹೀಗೆ ನಮ್ಮಲ್ಲಿ ಮರಣವು ನಿಮ್ಮಲ್ಲಿ ಜೀವವು ವ್ಯಾಪಿಸುತ್ತಿದೆ.

13<<ನಾನು
4:13 ಕೀರ್ತ. 116:10
ನಂಬಿದೆನು. ಆದ್ದರಿಂದ ಮಾತನಾಡಿದೆನು.>> ಎಂಬ ಶಾಸ್ತ್ರೋಕ್ತಿಯಲ್ಲಿ ಕಾಣುವಹಾಗೆ ನಂಬಿಕೆಯ ಅದೇ ಆತ್ಮನು ನಮ್ಮಲ್ಲಿರುವುದರಿಂದ ನಾವು ನಂಬಿದವರಾಗಿ ಮಾತನಾಡುತ್ತೇವೆ.
14
4:14 1 ಥೆಸ. 4:14, 1 ಕೊರಿ. 1:9, ಅ. ಕೃ. 2:24
ಕರ್ತನಾದ ಯೇಸುವನ್ನು ಎಬ್ಬಿಸಿದಾತನು ನಮ್ಮನ್ನು ಸಹ ಯೇಸುವಿನೊಂದಿಗೆ ಎಬ್ಬಿಸಿ ನಿಮ್ಮ ಜೊತೆಯಲ್ಲಿ ತನ್ನ ಮುಂದೆ ನಿಲ್ಲಿಸುವನೆಂದು ತಿಳಿದವರಾಗಿದ್ದೇವೆ.
15ಆ ಬಾಧೆಗಳೆಲ್ಲಾ ನಿಮ್ಮ ಹಿತಕ್ಕಾಗಿಯೇ ನಮಗೆ ಸಂಭವಿಸುತ್ತವೆ.
4:15 2 ಕೊರಿ. 1:19, 9:11-12
ಅವುಗಳಲ್ಲಿ ಅಧಿಕವಾಗಿ ದೊರಕುವ ದೈವಕೃಪೆಯು ಬಹು ಜನರೊಳಗೆ ಕೃತಜ್ಞತೆಯನ್ನು ಹುಟ್ಟಿಸುವುದರಿಂದ ದೇವರ ಮಹಿಮೆಗೆ ಅಧಿಕವಾದ ಸ್ತುತಿ ಸ್ತೋತ್ರಗಳು ಉಂಟಾಗುವುದು.

ಪರಲೋಕ ಭಾಗ್ಯವನ್ನು ಆಲೋಚಿಸುವಾಗ ಕ್ರಿಸ್ತನಲ್ಲಿರುವವರಿಗೆ ಧೈರ್ಯವಾಗುತ್ತದೆ ಎಂಬುದು

16ಆದ್ದರಿಂದ ನಾವು ಧೈರ್ಯಗೆಡುವುದಿಲ್ಲ. ನಮ್ಮ ದೇಹವು ನಾಶವಾಗುತ್ತಾ ಇದ್ದರೂ
4:16 ರೋಮಾ. 12:2, ಯೆಶಾ. 40:30-31
ನಮ್ಮ ಅಂತರಂಗವು ದಿನೇ ದಿನೇ ಹೊಸದಾಗುತ್ತಾ ಬರುತ್ತದೆ.
17ಹೇಗೆಂದರೆ ಕ್ಷಣಮಾತ್ರವಿರುವ ನಮ್ಮ ಈ ಸ್ವಲ್ಪ ಸಂಕಟವು ಅತ್ಯಂತಾಧಿಕವಾಗಿ ಪ್ರತಿಫಲವನ್ನು ಉಂಟುಮಾಡಿ ನಮಗೆ ನಿರಂತರವಾಗಿರುವ ಅತಿಶ್ರೇಷ್ಟ ತೇಜಸ್ಸನ್ನು ದೊರಕಿಸುತ್ತದೆ. ನಾವು
4:18 2 ಕೊರಿ. 5:7, ರೋಮಾ. 8:24
ಕಾಣುವಂಥದ್ದನ್ನು ಲೆಕ್ಕಿಸದೇ ಕಾಣದಿರುವಂಥದ್ದನ್ನು ಎದುರು ನೋಡದೆ ಕಾಣದಿರುವಂಥದ್ದನ್ನು ಲೆಕ್ಕಿಸುವವರಾಗಿದ್ದೇವೆ. ಕಾಣುವಂಥದ್ದು ಸ್ವಲ್ಪ ಕಾಲ ಮಾತ್ರ ಇರುವುದು ಕಾಣದಿರುವಂಥದ್ದು ಸದಾಕಾಲವೂ ಇರುವುದು. ನಿತ್ಯನಿರಂತರವಾದುದೂ ಆಗಿದೆ.

18

Copyright information for KanULB