2 Corinthians 6

1ದೇವರೊಡನೆ ದುಡಿಯುತ್ತಿರುವ ನಾವು ನಿಮ್ಮಲ್ಲಿ ವಿಜ್ಞಾಪಿಸುವುದೆನೆಂದರೆ; ದೇವರಿಂದ ಪಡೆದ ಕೃಪೆಯನ್ನು ವ್ಯರ್ಥಮಾಡಬೇಡಿರಿ. 2
6:2 ಯೆಶಾ. 49:8; ಲೂಕ. 4:19
<<ಸುಪ್ರಸನ್ನತೆಯ ಕಾಲದಲ್ಲಿ ನಿನ್ನ ಮನವಿಯನ್ನು ಕೇಳಿದೆನು, ರಕ್ಷಣೆಯ ದಿನದಲ್ಲಿ ನಿನಗೆ ಸಹಾಯ ಮಾಡಿದೆನು>> ಎಂದು ದೇವರು ಹೇಳುತ್ತಾನಲ್ಲಾ. ನೋಡಿ,
6:2 ಯೆಶಾ. 55:6; ಇಬ್ರಿ. 3:13
ಈಗಲೇ ಆ ಸುಪ್ರಸನ್ನತೆಯ ಕಾಲವು; ಇಂದೇ ಆ ರಕ್ಷಣೆಯ ದಿನ.
3ನಮ್ಮ ಸೇವೆಯು ಯಾರ ಮುಂದೆಯೂ ಅವಹೇಳನಕ್ಕೆ ಗುರಿಯಾಗದಂತೆ, ನಾವು ಯಾರಿಗೂ ಅಡ್ಡಿಯನ್ನು ಒಡ್ಡಲಿಲ್ಲ.

4ಬದಲಾಗಿ, ಎಲ್ಲಾ ವಿಷಯಗಳಲ್ಲಿ ದೇವರ ಸೇವಕರೆಂದು ನಮ್ಮ ಸೇವೆಯನ್ನು ಸಮ್ಮತ ಮಾಡಿಕೊಂಡು, ನಾವು
6:4 ಅ. ಕೃ. 9:16
ಸಂಕಟದಲ್ಲಿಯೂ,
6:4 2 ಕೊರಿ. 12:10
ಕೊರತೆಗಳಲ್ಲಿಯೂ, ಇಕ್ಕಟ್ಟುಗಳಲ್ಲಿಯೂ,
6:4 2 ಕೊರಿ. 11:23-27; ಅ. ಕೃ. 16:23
ಪೆಟ್ಟುಗಳಲ್ಲಿಯೂ,
5ದೊಂಬಿ, ಕಲಹ, ಸೆರೆಮನೆ, ಶಿಕ್ಷೆ ಇವುಗಳನ್ನು ಅನುಭವಿಸಿದ್ದೇವೆ. ಮೈಮುರಿದು ಕೆಲಸ ಮಾಡಿದ್ದೇವೆ. ನಿದ್ದೆಗೆಟ್ಟು ಬಳಲಿದ್ದೇವೆ; ಹಸಿವಿನಲ್ಲಿ ಸೊರಗಿದ್ದೇವೆ;
6:5 ಅ. ಕೃ. 17:5
ಈ ಎಲ್ಲಾ ವಿಷಯಗಳಲ್ಲಿ ಬಹು ಸಮಾಧಾನವನ್ನು ತೋರಿಸಿದ್ದೇವೆ.
6
6:6 1 ಥೆಸ. 2:10
ಶುದ್ಧಮನಸ್ಸು,
6:6 2 ಕೊರಿ. 11:6
ಜ್ಞಾನ, ದೀರ್ಘಶಾಂತಿ, ದಯೆ,
6:6 ರೋಮಾ. 15:19; 1 ಥೆಸ. 1:5
ಪವಿತ್ರಾತ್ಮನಲ್ಲಿ,
6:6 ರೋಮಾ. 12:9
ನಿಷ್ಕಪಟವಾದ ಪ್ರೀತಿ,
7
6:7 ಎಫೆ. 1:13; ಕೊಲೊ. 1:5
ಸತ್ಯವಾಕ್ಯ, ದೇವರ ಮಹತ್ವ ಇವುಗಳಿಂದ ಕೂಡಿದವರಾಗಿ,
6:7 2 ಕೊರಿ. 10:4; ಎಫೆ. 6:11-17
ಎಡಬಲಗೈಗಳಲ್ಲಿ ನೀತಿಯೆಂಬ ಆಯುಧಗಳನ್ನು ಧರಿಸಿಕೊಂಡಿದ್ದೇವೆ.

8ನಾವು ಮಾನ ಮತ್ತು
6:8 ರೋಮಾ. 3:8
ಅವಮಾನ, ಕೀರ್ತಿ ಮತ್ತು ಅಪಕೀರ್ತಿಗಳಲ್ಲಿಯೂ ಸೇವೆಮಾಡಿದ್ದೇವೆ. ಸತ್ಯವಂತರಾದರೂ ಮೋಸಗಾರರೆನಿಸಿಕೊಂಡಿದ್ದೇವೆ.
9ನಾವು ಪ್ರಸಿದ್ಧರಾಗಿದ್ದರೂ ಅಪರಿಚಿತರೆನಿಸಿಕೊಂಡು ಸೇವೆ ಮಾಡಿದ್ದೇವೆ.
6:9 2 ಕೊರಿ. 4:10
ಸಾಯುವವರಾಗಿ ತೋರಿದರೂ, ಬದುಕಿದ್ದೇವೆ! ನೋಡಿ, ಶಿಕ್ಷೆಗೆ ಗುರಿಯಾದರೂ ಕೊಲ್ಲಲ್ಪಡದವರಾಗಿದ್ದೇವೆ,
10
6:10 ಯೋಹಾ. 16:22; 2 ಕೊರಿ. 7:4
ದುಃಖಪಡುವವರಾಗಿದ್ದರೂ ಸೇವೆಯಲ್ಲಿ ಯಾವಾಗಲೂ ಸಂತೋಷಪಡುತ್ತೇವೆ,
6:10 2 ಕೊರಿ. 8:9; ಜ್ಞಾ. 13:7
ಬಡವರಾಗಿದ್ದರೂ ಅನೇಕರನ್ನು ಐಶ್ವರ್ಯವಂತರಾಗಿ ಮಾಡಿದ್ದೇವೆ;
6:10 ಅ. ಕೃ. 3:6
ಏನೂ ಇಲ್ಲದವರಾಗಿದ್ದರೂ ಎಲ್ಲಾ ಹೊಂದಿದವರಾಗಿದ್ದೇವೆ.

11ಕೊರಿಂಥದವರೇ, ಬಿಚ್ಚುಮನದಿಂದಲೂ ತೆರೆದ ಹೃದಯದಿಂದಲೂ ನಾವು ನಿಮ್ಮೊಡನೆ ಮಾತನಾಡಿದ್ದೇವೆ. 12ನಮ್ಮಲ್ಲಿ ಸಂಕುಚಿತ ಭಾವನೆಯೇನೂ ಇಲ್ಲ. ಇದು ಇರುವುದಾದರೆ ನಿಮ್ಮಲ್ಲೇ. 13ಆದ್ದರಿಂದ ಮಕ್ಕಳಿಗೆ ಹೇಳುವಂತೆ ಹೇಳುತ್ತಿದ್ದೇವೆ; ನಾವು ನಿಮ್ಮನ್ನು ಪೂರ್ಣ ಹೃದಯದಿಂದ ಪ್ರೀತಿಸಿದಂತೆ, ನೀವು ನಮ್ಮನ್ನು ಪೂರ್ಣ ಹೃದಯದಿಂದ ಪ್ರೀತಿಸಿರಿ.

ಕ್ರೈಸ್ತರು ಅನ್ಯಜನಗಳ ಅನ್ಯೋನ್ಯತೆಯಲ್ಲಿ ಕೆಡಬಾರದು

14ನೀವು ಕ್ರಿಸ್ತ ನಂಬಿಕೆಯಿಲ್ಲದವರೊಂದಿಗೆ ಸೇರಿ
6:14 ಧರ್ಮೋ. 7:3; ಯೋಹಾ 23:12; ಎಜ್ರ. 9:2; ನೆಹೆ. 13:25
ಇಜ್ಜೋಡಿಯಾಗಬೇಡಿರಿ. ಧರ್ಮಕ್ಕೂ,
6:14 ಎಫೆ. 5:7,11; 1 ಯೋಹಾ. 1:6
ಅಧರ್ಮಕ್ಕೂ ಸಹವಾಸವೇನು?
15
6:15 ಅ. ಕೃ. 26:18
ಬೆಳಕಿಗೂ, ಕತ್ತಲೆಗೂ ಅನ್ಯೋನ್ಯತೆಯೇನು?
6:15 1 ಕೊರಿ. 10:21
ಕ್ರಿಸ್ತನಿಗೂ ಸೈತಾನನಿಗೂ ಒಪ್ಪಂದವೇನು? ವಿಶ್ವಾಸಿಗೂ ಅವಿಶ್ವಾಸಿಗೂ ಪಾಲುಗಾರಿಕೆಯೇನು?
16ದೇವ ಮಂದಿರಕ್ಕೂ, ವಿಗ್ರಹಗಳಿಗೂ ಒಪ್ಪಿಗೆಯೇನು?
6:16 ಎಫೆ. 2:22; 1 ಕೊರಿ. 3:16
ನಾವು ದೇವರೇ ಹೇಳಿರುವಂತೆ ಜೀವಸ್ವರೂಪನಾದ ದೇವರ ಮಂದಿರವಾಗಿದ್ದೇವಲ್ಲಾ,
6:16 ಯಾಜ. 26:11,12; ವಿಮೋ. 29:45; ಪ್ರಕ. 2:1; 21:3
<<ನನ್ನ ಜನರಲ್ಲೇ ನಾ ಮನೆಮಾಡುವೆನು, ಅವರ ನಡುವೆಯೇ ನಾ ತಿರುಗಾಡುವೆನು
6:16 ವಿಮೋ. 6:7; ಯೆರೆ. 31:33; ಯೆಹೆ. 11:20; ಜೆಕ. 8:8
ಅವರಿಗೆ ನಾನೇ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು>> ಎಂದು ಹೇಳಿದ್ದಾನೆ.

17ಆದ್ದರಿಂದ,
6:17 ಯೆಶಾ. 52:11
<<ಅನ್ಯಜನರನ್ನು ಬಿಟ್ಟು ಹೊರಬನ್ನಿರಿ ಅವರಿಂದ ಬೇರ್ಪಟ್ಟು ಬಾಳಿರಿ ಮಲಿನವಾದುದನ್ನು ಮುಟ್ಟದಿರಿ>> ಎಂದು ಕರ್ತನು ಹೇಳುತ್ತಾನೆ.
ಇದಲ್ಲದೆ,
6:18 2 ಸಮು. 7:8, 14; ಯೆಶಾ. 43:6; ಹೋಶೇ. 1:10
<<ನಾನು ನಿಮ್ಮನ್ನು ಸ್ವೀಕರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ, ಕುಮಾರಿಯರು ಆಗಿರುವಿರೆಂದು>> ಸರ್ವಶಕ್ತನಾದ ಕರ್ತನು ಹೇಳುತ್ತಾನೆ.

18

Copyright information for KanULB