2 Peter 1

ಪೀಠಿಕೆ

1ಯೇಸು ಕ್ರಿಸ್ತನ ದಾಸನೂ ಅಪೊಸ್ತಲನೂ ಆಗಿರುವ ಸಿಮೆಯೋನ ಪೇತ್ರನು
1:1 ರೋಮಾ. 3:21-26:
ನಮ್ಮ ದೇವರು ಮತ್ತು ರಕ್ಷಕನಾದ ಯೇಸು ಕ್ರಿಸ್ತನ ನೀತಿಯಿಂದ
1:1 ರೋಮಾ. 1:12; ತೀತ. 1:4:
ನಮ್ಮಂತೆಯೇ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ ಬರೆಯುವುದೇನಂದರೆ,
2ದೇವರನ್ನು ಕುರಿತಾಗಿಯೂ, ನಮ್ಮ ಕರ್ತನಾದ ಯೇಸು ಕ್ರಿಸ್ತನ ವಿಷಯವಾಗಿಯೂ ಇರುವ
1:2 2 ಪೇತ್ರ. 1:3,8; 2:20; 3:18. ಯೋಹಾ. 173; ಫಿಲಿ. 3:8:
ಪರಿಜ್ಞಾನದಲ್ಲಿ ನಿಮಗೆ
1:2 1 ಪೇತ್ರ. 1:2; ಯೂದ. 2:
ಕೃಪೆಯೂ, ಶಾಂತಿಯೂ ಹೆಚ್ಚುಹೆಚ್ಚಾಗಿ ದೊರೆಯಲಿ.

ಭಕ್ತಿವೃದ್ಧಿಗೆ ಅನುಕೂಲವಾದ ಪ್ರೇರಣೆಗಳು

3ನಮ್ಮನ್ನು ತನ್ನ ಮಹಿಮೆಯಿಂದಲೂ, ಗುಣಾತಿಶಯದಿಂದಲೂ
1:3 1 ಥೆಸ. 2:12; 2 ಥೆಸ. 2:14; 2 ತಿಮೊ. 1:9; 1 ಪೇತ್ರ. 5:10:
ಕರೆದ ದೇವರ ವಿಷಯವಾಗಿ ಯೇಸುವಿನ ದಿವ್ಯಶಕ್ತಿಯು ನಮಗೆ ದೈವಿಕ ಪರಿಜ್ಞಾನವನ್ನು ಕೊಟ್ಟಿರುವುದರ ಮೂಲಕ ಜೀವಕ್ಕೂ, ಭಕ್ತಿಗೂ ಬೇಕಾದದ್ದೆಲ್ಲವನ್ನೂ ದಾನಮಾಡಲಾಗಿದೆಯೆಂದು ನಾವು ಬಲ್ಲೆವು.
4ನೀವು ಲೋಕದಲ್ಲಿ
1:4 2 ಪೇತ್ರ. 2:18,20:
ದುರಾಶೆಯಿಂದುಂಟಾಗುವ ಕೆಟ್ಟತನದಿಂದ ದೂರವಾಗಿ
1:4 ಎಫೆ. 4:24; ಇಬ್ರಿ. 12:10; 1 ಯೋಹಾ 3:2:
ದೈವಸ್ವಭಾವದಲ್ಲಿ ಪಾಲನ್ನು ಹೊಂದುವವರಾಗಬೇಕೆಂಬ ಉದ್ದೇಶದಿಂದ ದೇವರು ತನ್ನ ಅತ್ಯಂತ ಮಹತ್ವವುಳ್ಳ ಮತ್ತು ಅಮೂಲ್ಯವಾದ ವಾಗ್ದಾನಗಳನ್ನು ನಮಗೆ ದಯಪಾಲಿಸಿದ್ದಾನೆ.

5ಈ ಕಾರಣದಿಂದಲೇ ನೀವು ಪೂರ್ಣಾಸಕ್ತಿಯುಳ್ಳವರಾಗಿ ನಿಮಗಿರುವ ನಂಬಿಕೆಗೆ
1:5 ಫಿಲಿ. 4:8:
ಸದ್ಗುಣವನ್ನೂ, ಸದ್ಗುಣಕ್ಕೆ ಜ್ಞಾನವನ್ನೂ,
6ಜ್ಞಾನಕ್ಕೆ
1:6 ಅ. ಕೃ. 24:25; ಗಲಾ. 5:22-23:
ದಮೆಯನ್ನೂ, ದಮೆಗೆ
1:6 ಇಬ್ರಿ. 10:36; ಯಾಕೋಬ. 1:3;
ತಾಳ್ಮೆಯನ್ನೂ,
7ತಾಳ್ಮೆಗೆ ಭಕ್ತಿಯನ್ನೂ, ಭಕ್ತಿಗೆ
1:7 ಇಬ್ರಿ. 13:1:
ಸಹೋದರ ಸ್ನೇಹವನ್ನೂ, ಸಹೋದರ ಸ್ನೇಹಕ್ಕೆ
1:7 1 ಕೊರಿ. 13; 1 ಯೋಹಾ 4:16:
ಪ್ರೀತಿಯನ್ನೂ ಕೂಡಿಸಿರಿ.

8ಇವು ನಿಮ್ಮಲ್ಲಿದ್ದು ಬೆಳೆದು ಬಂದರೆ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಕುರಿತಾದ ಪರಿಜ್ಞಾನದಲ್ಲಿ ನೀವು ನಿರುತ್ಸಾಹಿಗಳೂ,
1:8 ಯೋಹಾ. 15:2; ತೀತ. 3:14:
ನಿಷ್ಪ್ರಯೋಜಕರೂ ಆಗದಂತೆ ಮಾಡುತ್ತವೆ.
9ಇವುಗಳಿಲ್ಲದವನು
1:9 ಯೋಬ. 5:14; 12:25; ಚೆಫ. 1:17;
ಕುರುಡನಾಗಿದ್ದಾನೆ. ಅವನು ದೂರ ದೃಷ್ಟಿಯಿಲ್ಲದವನಾಗಿದ್ದು ತನ್ನ ಹಿಂದಣ ಪಾಪಗಳು ಪರಿಹಾರವಾಗಿ
1:9 ಎಫೆ. 5:26; ತೀತ. 2:14; 1 ಯೋಹಾ. 1:7; ಪ್ರಕ. 7:14:
ತಾನು ಶುದ್ಧನಾದದ್ದನ್ನು ಮರೆತುಬಿಟ್ಟಿದ್ದಾನೆ.

10ಆದ್ದರಿಂದ ಪ್ರಿಯರೇ, ದೇವರಲ್ಲಿ ನಿಮ್ಮ ಕರೆಯುವಿಕೆಯನ್ನೂ,
1:10 1 ಥೆಸ. 1:4:
ಆಯ್ಕೆಯನ್ನೂ ದೃಢಪಡಿಸಿಕೊಳ್ಳುವುದಕ್ಕೆ
1:10 ಫಿಲಿ. 2:12; ಇಬ್ರಿ. 3:14:
ಮತ್ತಷ್ಟು ಪ್ರಯಾಸಪಡಿರಿ. ಏಕೆಂದರೆ ನೀವು ಹೀಗೆ ಮಾಡುವುದಾದರೆ ಎಂದಿಗೂ ಎಡುವುದಿಲ್ಲ.
11ಹೀಗಿರುವುದರಿಂದ ನಮ್ಮ ಕರ್ತನೂ, ರಕ್ಷಕನೂ ಆಗಿರುವ
1:11 ಕೊಲೊ. 1:13; ಅ. ಕೃ. 14:22:
ಯೇಸುಕ್ರಿಸ್ತನ ನಿತ್ಯ ರಾಜ್ಯದಲ್ಲಿ ನಿಮಗೆ ಧಾರಾಳವಾಗಿ ಪ್ರವೇಶವು ದೊರೆಯುವುದು.

ಕರ್ತನಾದ ಯೇಸುಕ್ರಿಸ್ತನ ಪ್ರತ್ಯಕ್ಷತೆಯನ್ನು ಎದುರುನೋಡುವುದಕ್ಕೆ ದೃಢವಾದ ಆಧಾರ ಉಂಟು

12ಆದ್ದರಿಂದ ನೀವು ಈ ಸಂಗತಿಗಳನ್ನು ತಿಳಿದವರಾಗಿ
1:12 2 ಯೋಹಾ 2:
ನಿಮಗೆ ದೊರೆತಿರುವ ಸತ್ಯದಲ್ಲಿ ಸ್ಥಿರವಾಗಿದ್ದರೂ ಅವುಗಳನ್ನು ನಿಮಗೆ
1:12 ಯೂದ. 5. ಫಿಲಿ. 3:1:
ನೆನಪಿಸಿಕೊಡುವುದಕ್ಕೆ ನಾನು ಯಾವಾಗಲೂ ಸಿದ್ಧವಾಗಿರುವೆನು.
13ನಾನು
1:13 2 ಕೊರಿ. 5:1,4:
ನನ್ನ ದೇಹವೆಂಬ ಗುಡಾರದಲ್ಲಿರುವ ತನಕ
1:13 2 ಪೇತ್ರ. 3:1:
ನಿಮ್ಮನ್ನು ನೆನಪುಮಾಡಿಸಿ ಪ್ರೇರೇಪಿಸುವುದು ಯುಕ್ತವೆಂದೆಣಿಸಿದ್ದೇನೆ.
14ಏಕೆಂದರೆ
1:14 ಯೋಹಾ 21:18,19:
ನಮ್ಮ ಕರ್ತನಾದ ಯೇಸು ಕ್ರಿಸ್ತನು ನನಗೆ ತಿಳಿಸಿದ ಪ್ರಕಾರ ನಾನು
1:14 2 ತಿಮೊ. 4:6:
ಈ ಗುಡಾರವನ್ನು ಬಿಟ್ಟುಹೋಗುವ ಕಾಲವು ಸಮೀಪವಾಗಿದೆಯೆಂದು ಬಲ್ಲೆನು.
15ನೀವು ನನ್ನ ಮರಣಾನಂತರ ಇವುಗಳನ್ನು ಯಾವಾಗಲೂ ಜ್ಞಾಪಕ ಮಾಡಿಕೊಳ್ಳುವುದಕ್ಕಾಗಿ ನಾನು ಆಸಕ್ತಿವಹಿಸುವೆನು.

16ನಮ್ಮ ಕರ್ತನಾದ ಯೇಸುಕ್ರಿಸ್ತನ ಶಕ್ತಿಯನ್ನೂ,
1:16 1 ಥೆಸ. 2:19:
ಪ್ರತ್ಯಕ್ಷತೆಯನ್ನೂ ನಿಮಗೆ ತಿಳಿಯಪಡಿಸಿದ್ದರಲ್ಲಿ
1:16 1 ಕೊರಿ. 1:17:
ಚಮತ್ಕಾರದಿಂದ ಕಲ್ಪಿಸಿದ
1:16 1 ತಿಮೊ. 1:4:
ಕಟ್ಟುಕಥೆಗಳನ್ನು ನಾವು ಅನುಸರಿಸಲಿಲ್ಲ.
1:16 ಮತ್ತಾ 17:1,2,6; ಮಾರ್ಕ. 9:2; ಯೋಹಾ. 1:14:
ಆತನ ಮಹತ್ತನ್ನು ಕಣ್ಣಾರೆ ಕಂಡವರಾಗಿಯೇ ಅದನ್ನು ತಿಳಿಯಪಡಿಸಿದೆವು.
17ಏಕೆಂದರೆ,
1:17 ಮತ್ತಾ 17:5; 3:17; ಲೂಕ. 9:35:
<<ಈತನು ಪ್ರಿಯನಾಗಿರುವ ನನ್ನ ಮಗನು, ಈತನನ್ನು ನಾನು ಮೆಚ್ಚಿದ್ದೇನೆ>> ಎಂಬ ವಾಣಿಯು ಮಹೋನ್ನತವಾದ ಮಹಿಮೆಯಿಂದ ಆತನಿಗೆ ಉಂಟಾದದ್ದರಲ್ಲಿ ಆತನು ತಂದೆಯಾದ ದೇವರಿಂದ ಗೌರವವನ್ನೂ, ಮಹಿಮೆಯನ್ನೂ ಹೊಂದಿದನಲ್ಲವೇ.
18ನಾವು
1:18 ವಿಮೋ. 3:5; ಯೆಹೋ. 5:15:
ಪರಿಶುದ್ಧ ಪರ್ವತದ ಮೇಲೆ ಆತನ ಸಂಗಡ ಇದ್ದಾಗ ಪರಲೋಕದಿಂದ ಬಂದ ಆ ವಾಣಿಯನ್ನು ನಾವು ಕೇಳಿಸಿಕೊಂಡೆವು.

19ಇದಲ್ಲದೆ
1:19 1 ಪೇತ್ರ. 1:10:
ಪ್ರವಾದನವಾಕ್ಯವು ನಮಗೆ ಬಹುದೃಢವಾಗಿ ದೊರೆತಿದೆ. ಆ ದಿನವು ಅರುಣೋದಯವಾಗುವರೆಗೆ ಮತ್ತು
1:19 ಅಥವಾ, ಸೂರ್ಯನು, ದಿವಾಕರನು; ಮಲಾ. 4:2; ಪ್ರಕ. 2:28; 22:16:
ಉದಯ ನಕ್ಷತ್ರವು ನಿಮ್ಮ ಹೃದಯಗಳಲ್ಲಿ ಮೂಡುವತನಕ
1:19 ಕೀರ್ತ. 119:105; ಯೋಹಾ 5:35:
ಅದನ್ನು ಕತ್ತಲೆಯಾದ ಸ್ಥಳದಲ್ಲಿ ಪ್ರಕಾಶಿಸುವ ದೀಪವೆಂದೆಣಿಸಿ ಅದಕ್ಕೆ ಲಕ್ಷ್ಯಕೊಟ್ಟರೆ ಒಳ್ಳೆಯದು.
20ಯಾವ ಪ್ರವಾದನಾ ವಾಕ್ಯವೂ ಕೇವಲ ಮನುಷ್ಯನ ಸ್ವಬುದ್ಧಿಯಿಂದ ವಿವರಿಸತಕ್ಕಂಥದ್ದಲ್ಲವೆಂಬುದನ್ನು ಮುಖ್ಯವಾಗಿ ಮೊದಲು ತಿಳಿದುಕೊಳ್ಳಿರಿ. ಏಕೆಂದರೆ
1:21 2 ತಿಮೊ. 3:16:
ಯಾವ ಪ್ರವಾದನೆಯೂ ಎಂದೂ ಮನುಷ್ಯರ ಚಿತ್ತದಿಂದ ಉಂಟಾಗಲಿಲ್ಲ. ಆದರೆ ಮನುಷ್ಯರು
1:21 1 ಪೇತ್ರ. 1:11; 2 ಸಮು. 23:2; ಅ. ಕೃ. 1:16; ಯಾಕೋಬ. 5:10:
ಪವಿತ್ರಾತ್ಮಪ್ರೇರಿತರಾಗಿ ದೇವರಿಂದ ಹೊಂದಿದ್ದನ್ನೇ ಮಾತನಾಡಿರುವುದು.

21

Copyright information for KanULB