2 Peter 3

ದೇವರ ದಿನವು ತಡವಾದರೂ ಅದು ಬರುವುದು ನಿಶ್ಚಯ

1ಪ್ರಿಯರೇ, ನಿಮಗೀಗ ಬರೆಯುವುದು ಎರಡನೆಯ ಪತ್ರ. 2
3:2 ಲೂಕ. 1:70; ಅ. ಕೃ. 3:21:
ಪರಿಶುದ್ಧ ಪ್ರವಾದಿಗಳು ಪೂರ್ವದಲ್ಲಿ ಹೇಳಿದ ಮಾತುಗಳನ್ನೂ ಕರ್ತನಾದ ರಕ್ಷಕನು ನಿಮ್ಮ ಅಪೊಸ್ತಲರ ಮೂಲಕ ಕೊಟ್ಟ ಅಪ್ಪಣೆಯನ್ನೂ
3:2 ಯೂದ. 17:
ನೀವು ಜ್ಞಾಪಕಮಾಡಿಕೊಳ್ಳಬೇಕೆಂದು ಈ ಎರಡು ಪತ್ರಿಕೆಗಳ ಮೂಲಕ ನಿಮಗೆ
3:2 2 ಪೇತ್ರ. 1:13:
ತಿಳಿಸಿಕೊಡುತ್ತಾ ನಿಮ್ಮ ನಿರ್ಮಲವಾದ ಮನಸ್ಸನ್ನು ಎಚ್ಚರಗೊಳಿಸುತ್ತಿದ್ದೇನೆ.

3ಕಡೆ ದಿನಗಳಲ್ಲಿ
3:3 ಯೂದ. 18:
ತಮ್ಮ ದುರಾಶೆಗಳ ಪ್ರಕಾರ ನಡೆಯುವ ಕುಚೋದ್ಯಗಾರರು ಬಂದು ಕುಚೋದ್ಯ ಮಾಡುತ್ತಾ,
4
3:4 1 ಥೆಸ. 2:19:
<<ಆತನ ಪ್ರತ್ಯಕ್ಷತೆಯ ವಿಷಯವಾದ
3:4 ಯೆಶಾ. 5:19; ಯೆರೆ. 17:15; ಯೆಹೆ. 11:3; 12:22, 27; ಮಲಾ. 2:17:
ವಾಗ್ದಾನವು ಏನಾಯಿತು? ನಮ್ಮ ಪಿತೃಗಳು ನಿದ್ರೆಹೊಂದಿದ ನಂತರದಿಂದ; ಸಮಸ್ತವೂ ಸೃಷ್ಟಿಯ ಆರಂಭದಲ್ಲಿ ಇದ್ದ ಹಾಗೆಯೇ ಇದೆಯಲ್ಲಾ?>> ಎಂದು ಪರಿಹಾಸ್ಯಮಾಡುತ್ತಾ ಕೇಳುವರೆಂಬುದಾಗಿ ನೀವು ಮೊದಲು ತಿಳಿದುಕೊಳ್ಳಬೇಕು.

5ಆದರೆ ಪೂರ್ವಕಾಲದಲ್ಲಿ ಭೂಮ್ಯಾಕಾಶಗಳು
3:5 ಆದಿ. 1:6, 7, 9; ಕೀರ್ತ. 33:6; ಇಬ್ರಿ. 11:3:
ದೇವರ ವಾಕ್ಯದ ಮೂಲಕ
3:5 ಕೀರ್ತ. 24:2; 136:6:
ನೀರಿನೊಳಗಿನಿಂದ ಹಾಗೂ ನೀರಿನಿಂದ ರೂಪಿಸಲ್ಪಟ್ಟಿತೆಂಬುದನ್ನು ಅವರು ಉದ್ದೇಶರ್ಪೂವಕವಾಗಿಯೇ ಮರೆತುಬಿಡುತ್ತಾರೆ.
6
3:6 ಆದಿ. 7:11, 21; 2 ಪೇತ್ರ. 2:5:
ಆ ನೀರಿನಿಂದಲೇ ಅಂದಿನ ಲೋಕವು ಜಲಪ್ರಳಯದಲ್ಲಿ ನಾಶವಾಯಿತು.
7ಆದರೆ ಈಗಿನ ಭೂಮ್ಯಾಕಾಶಗಳು ಅದೇ ವಾಕ್ಯದಿಂದ ಅಗ್ನಿನಾಶಕ್ಕಾಗಿ ಕಾದಿರಿಸಲ್ಪಟ್ಟಿವೆ. ಅವು ನ್ಯಾಯ ತೀರ್ಪಿನ ದಿನಕ್ಕಾಗಿ ಮತ್ತು
3:7 2 ಥೆಸ. 1:9:
ಭಕ್ತಿಹೀನರ ನಾಶಕ್ಕಾಗಿ ಉಳಿಸಲ್ಪಟ್ಟಿವೆ.

8ಪ್ರಿಯರೇ, ಕರ್ತನ ಎಣಿಕೆಯಲ್ಲಿ ಒಂದು ದಿನವು ಸಾವಿರ ವರ್ಷಗಳಂತೆಯೂ
3:8 ಕೀರ್ತ. 90. 4:
ಸಾವಿರ ವರ್ಷಗಳು ಒಂದು ದಿನದಂತೆಯೂ ಇವೆ ಎಂಬುದನ್ನು ಮಾತ್ರ ಮರೆಯಬೇಡಿರಿ.
9
3:9 ಹಬ. 2:3; ಇಬ್ರಿ. 10:37; ಪ್ರಸಂಗಿ. 8:11:
ಕರ್ತನು ತನ್ನ ವಾಗ್ದಾನಗಳನ್ನು ನೆರವೇರಿಸುವುದಕ್ಕೆ ತಡಮಾಡುತ್ತಾನೆಂಬುದಾಗಿ ಕೆಲವರು ತಿಳಿದುಕೊಂಡಿರುವ ಪ್ರಕಾರ ಆತನು ತಡಮಾಡುವವನಲ್ಲ.
3:9 ಯೆಹೆ. 18:23, 32; 33:11:
ಯಾರೊಬ್ಬನೂ ನಾಶವಾಗುವುದರಲ್ಲಿ ಆತನು ಇಷ್ಟಪಡದೆ
3:9 1 ತಿಮೊ. 2:4:
ಎಲ್ಲರೂ ಪಶ್ಚಾತ್ತಾಪ ಪಡಬೇಕೆಂದು ಅಪೇಕ್ಷಿಸುವವನಾಗಿದ್ದು ನಿಮ್ಮ ವಿಷಯದಲ್ಲಿ
3:9 ಯೆಶಾ. 30. 18; ಲೂಕ. 18:7; 1 ಪೇತ್ರ. 3:20:
ದೀರ್ಘಶಾಂತಿಯುಳ್ಳವನಾಗಿದ್ದಾನೆ.

10ಆದರೂ
3:10 ಮತ್ತಾ 24:42-51; ಲೂಕ. 12:39-46; 1 ಥೆಸ. 5:2; ಪ್ರಕ. 3:3:
ಕರ್ತನ ದಿನವು ಕಳ್ಳನು ಬರುವಂತೆ ಬರುತ್ತದೆ.
3:10 ಮತ್ತಾ 24:35; ಇಬ್ರಿ. 12:26, 27; ಪ್ರಕ. 6:14; 20:11; 21:1:
ಆ ದಿನದಲ್ಲಿ ಆಕಾಶ ಮಂಡಲವು ಮಹಾಘೋಷದಿಂದ ಇಲ್ಲದೆ ಹೋಗುವವು.
3:10 ಯೆಶಾ. 34:4:
ಮೂಲಧಾತುಗಳು ಉರಿದು ಲಯವಾಗಿ ಹೋಗುವವು.
3:10 ಕೆಲವು ಪ್ರತಿಗಳಲ್ಲಿ ಭೂಮಿಯೂ ಅದರಲ್ಲಿರುವ ಕೆಲಸಗಳೂ ಕಾಣುವವೇ? ಎಂದು ಬರೆದದೆ.
ಭೂಮಿಯೂ ಅದರಲ್ಲಿರುವ ಕೆಲಸಗಳೂ ಸುಟ್ಟು ಹೋಗುವವು.

ಲೋಕಾಂತ್ಯವನ್ನು ಎದುರುನೋಡುತ್ತಾ ಪರಿಶುದ್ಧರಾಗಿ ನಡೆಯಿರಿ ಎಂಬ ಬೋಧನೆ

11ಇವೆಲ್ಲವುಗಳು ಹೀಗೆ ನಾಶವಾಗಿ ಹೋಗುವುದರಿಂದ ನೀವು ಎಂಥವರಾಗಿರಬೇಕು?
3:11 1 ಪೇತ್ರ. 1:15:
ಪರಿಶುದ್ಧವಾಗಿಯೂ ಭಕ್ತಿಯುಳ್ಳವರಾಗಿಯೂ ಜೀವಿಸಬೇಕು.
12ದೇವರ ದಿನದ ಪ್ರತ್ಯಕ್ಷತೆಯನ್ನು ಎದುರುನೋಡುತ್ತಾ
3:12 ಅಥವಾ, ಬೇಗ ಬರುವಂತೆ ಪ್ರಯತ್ನಿಸುತ್ತಾ.
ಆತುರಪಡುವ ಆ ದಿನದಲ್ಲಿ ಆಕಾಶಮಂಡಲವು ಬೆಂಕಿಯಿಂದ ನಾಶವಾಗಿ ಹೋಗುವವು. ಅತಿ ಉಷ್ಣದಿಂದ ಮೂಲಧಾತುಗಳು ಉರಿದು ಕರಗಿ ಹೋಗುವವು.
13ಆದರೂ ನಾವು ದೇವರ ವಾಗ್ದಾನದ ಪ್ರಕಾರ
3:13 ಯೆಶಾ. 65:17; 66:22; ಪ್ರಕ. 21:1:
ನೂತನ ಆಕಾಶ ಮಂಡಲವನ್ನೂ ಮತ್ತು ನೂತನ ಭೂಮಂಡಲವನ್ನೂ ಎದುರುನೋಡುತ್ತಾ ಇದ್ದೇವೆ.
3:13 ಯೆಶಾ. 60. 21; ಪ್ರಕ. 21:27:
ಅವುಗಳಲ್ಲಿ ನೀತಿಯು ವಾಸವಾಗಿರುವುದು.

14
3:14 1 ಕೊರಿ. 15:58; 1 ಥೆಸ. 3:13; 5:23:
ಆದಕಾರಣ ಪ್ರಿಯರೇ, ನೀವು ಇವುಗಳನ್ನು ಎದುರುನೋಡುವವರಾಗಿರುವುದರಿಂದ ಆತನೊಂದಿಗೆ ಸಮಾಧಾನದಲ್ಲಿದ್ದು
3:14 ಯಾಕೋಬ 1:27; ಫಿಲಿ. 2:15:
ನಿರ್ಮಲರಾಗಿಯೂ ನಿರ್ದೋಷಿಗಳಾಗಿಯೂ ಆತನಿಗೆ ಕಾಣಿಸಿಕೊಳ್ಳುವಂತೆ ಪ್ರಯತ್ನಿಸಿರಿ.
15
3:15 ವ. 9:
ನಮ್ಮ ಕರ್ತನ ದೀರ್ಘಶಾಂತಿಯು ನಮ್ಮ ರಕ್ಷಣಾರ್ಥವಾಗಿ ಇದೆ ಎಂದು ಪರಿಗಣಿಸಿರಿ.
3:15 ಅ. ಕೃ. 15:25:
ನಮ್ಮ ಪ್ರಿಯ ಸಹೋದರನಾದ ಪೌಲನು ಸಹ
3:15 1 ಕೊರಿ. 3:10:
ತನಗೆ ಅನುಗ್ರಹಿಸಿರುವ ಜ್ಞಾನದ ಪ್ರಕಾರ
3:15 ರೋಮಾ. 2:4:
ನಿಮಗೆ ಬರೆದಿದ್ದಾನೆ.
16ಅವನು ತನ್ನ ಎಲ್ಲಾ ಪತ್ರಿಕೆಗಳಲ್ಲಿಯೂ
3:16 ರೋಮಾ. 8:19; 1 ಕೊರಿ. 15:24; 1 ಥೆಸ. 4:15:
ಈ ವಿಷಯಗಳನ್ನು ಕುರಿತು ಹೇಳಿದ್ದಾನೆ. ಆ ಪತ್ರಗಳಲ್ಲಿರುವ ಕೆಲವು ಸಂಗತಿಗಳು ನಿಮಗೆ ಅರ್ಥಮಾಡಿಕೊಳ್ಳುವುದಕ್ಕೆ ಕಠಿಣವಾಗಿವೆ. ಅಜ್ಞಾನಿಗಳೂ, ಚಂಚಲಚಿತ್ತರೂ ಆದವರು ಉಳಿದ ಗ್ರಂಥಗಳ ಹಾಗೆ ಇದನ್ನೂ ತಪ್ಪಾಗಿ ಅರ್ಥ ಕೊಟ್ಟು
3:16 ಯೆಶಾ. 28:13:
ತಮಗೆ ನಾಶವನ್ನುಂಟು ಮಾಡಿಕೊಳ್ಳುತ್ತಾರೆ.

17ಆದಕಾರಣ ಪ್ರಿಯರೇ,
3:17 2 ಪೇತ್ರ. 1:12:
ನೀವು ಈ ಸಂಗತಿಗಳನ್ನು ಮುಂಚಿತವಾಗಿ ತಿಳಿದುಕೊಂಡಿರುವುದರಿಂದ ದುಷ್ಟರ ವಂಚನೆಯಲ್ಲಿ ಸಿಕ್ಕಿ
3:17 2 ಪೇತ್ರ. 1:10; 1:1 ಕೊರಿ. 10:12:
ನಿಮ್ಮ ಸ್ಥಿರವಾದ ನಂಬಿಕೆಯನ್ನು ಬಿಟ್ಟು ಭ್ರಷ್ಟರಾಗದಂತೆಯೂ ಎಚ್ಚರಿಕೆಯಾಗಿರಿ.
18ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ಕುರಿತಾದ
3:18 2 ಪೇತ್ರ. 1:5; ಎಫೆ. 4:15; ಕೊಲೊ. 1:10; 2:19; 1 ಪೇತ್ರ. 2:2:
ಕೃಪೆಯಲ್ಲಿಯೂ ಜ್ಞಾನದಲ್ಲಿಯೂ ನೀವು ಅಭಿವೃದ್ಧಿ ಹೊಂದಿರಿ.
3:18 ರೋಮಾ. 11:36:
ಆತನಿಗೆ ಈಗಲೂ ಸದಾಕಾಲವೂ ಮಹಿಮೆಯುಂಟಾಗಲಿ. ಆಮೆನ್.

Copyright information for KanULB