2 Thessalonians 2

ಅಧರ್ಮ ಪುರುಷನು

1ಸಹೋದರರೇ, ನಮ್ಮ ಕರ್ತನಾದ
2:1 1 ಥೆಸ. 2:19:
ಯೇಸು ಕ್ರಿಸ್ತನ ಆಗಮನದ ವಿಷಯವಾಗಿಯೂ ಮತ್ತು
2:1 ಮತ್ತಾ 24:31; 1 ಥೆಸ. 4:15-17:
ನಾವು ಆತನ ಎದುರಿನಲ್ಲಿ ಕೂಡಿಕೊಳ್ಳುವುದರ ವಿಷಯವಾಗಿಯೂ ನಿಮ್ಮನ್ನು ವಿನಂತಿಸುವುದೇನಂದರೆ,
2ಕರ್ತನ ಆಗಮನದ ದಿನವು ಈಗಾಗಲೇ ಬಂದಿದೆಯೆಂಬುದಾಗಿ
2:2 1 ಯೋಹಾ. 4:1:
ಆತ್ಮದಿಂದಾಗಲಿ
2:2 ವ. 15:
ಮಾತಿನಿಂದಾಗಲಿ ಅಥವಾ ನಮ್ಮ ಪತ್ರದಿಂದಾಗಲಿ ನೀವು ಬೇಗನೆ ಮನದಲ್ಲಿ ಚಂಚಲರಾಗಿ ಕಳವಳಪಡಬೇಡಿರಿ.

3ಯಾರೂ ಯಾವ ವಿಧದಲ್ಲಿಯೂ ನಿಮ್ಮನ್ನು ಮೋಸಗೊಳಿಸದಂತೆ ನೋಡಿಕೊಳ್ಳಿರಿ, ಯಾಕೆಂದರೆ
2:3 1 ತಿಮೊ. 4:1:
ಮೊದಲು ನಂಬಿಕೆಯ ಭ್ರಷ್ಟತೆಯುಂಟಾಗಿ
2:3 ವ. 8; ದಾನಿ. 7:25; 8:25; 11:36; ಪ್ರಕ. 13:5, 6. ವಿಧ್ವಂಸಕನು
ನಾಶನದ ಮಗನಾದ ಅಧರ್ಮ ಪುರುಷನು ಬಯಲಿಗೆ ಬಾರದ ಹೊರತು ಆ ದಿನವು ಬರುವುದಿಲ್ಲ.
4ಯಾವುದು ದೇವರೆನಿಸಿಕೊಳ್ಳುತ್ತದೋ ಯಾವುದು ಆರಾಧಿಸಲ್ಪಡುತ್ತದೋ ಅದನ್ನೆಲ್ಲಾ
2:4 ಯೋಹಾ. 17:12:
ನಾಶನಕ್ಕೆ ಅಧೀನನಾದ ಆ ಪುರುಷನು ಎದುರಿಸಿ ಅದಕ್ಕಿಂತ ಮೇಲಾಗಿ ತನ್ನನ್ನು ತಾನೇ ಹೆಚ್ಚಿಸಿಕೊಂಡು
2:4 ಯೆಶಾ. 14:14; ಯೆಜೆ. 28:2:
ತಾನು ದೇವರೆಂದು ಘೋಷಿಸಿಕೊಂಡು ದೇವರ ಗರ್ಭಗುಡಿಯಲ್ಲೇ ಕುಳಿತುಕೊಳ್ಳುತ್ತಾನೆ.

5ನಾನು ನಿಮ್ಮ ಸಂಗಡ ಇದ್ದಾಗ ಈ ಸಂಗತಿಗಳನ್ನು ಹೇಳಿದ್ದು ಜ್ಞಾಪಕವಿಲ್ಲವೋ? 6ಇದಲ್ಲದೆ ಅವನು ನೇಮಕವಾದ ಸಮಯದಲ್ಲೇ ಹೊರತು ಬಯಲಿಗೆ ಬರುವುದಕ್ಕೆ ಏನು ಅಡ್ಡಿ ಮಾಡುತ್ತದೋ ಅದು ನಿಮಗೆ ತಿಳಿದೇ ಇದೆ. 7
2:7 1 ಯೋಹಾ. 2:18; 4:3:
ಅಧರ್ಮವು ಈಗಲೂ ಗುಪ್ತವಾಗಿ ತನ್ನ ಕಾರ್ಯವನ್ನು ಸಾಧಿಸುತ್ತದೆ, ಆದರೆ ತಡೆಗಟ್ಟುವವನು ದಾರಿಬಿಡುವ ತನಕ ಅದು ಗುಪ್ತವಾಗಿಯೇ ಇರುವುದು.

8ಆಗ
2:8 ವ. 3:
ಅಧರ್ಮಸ್ವರೂಪನು ಕಾಣಿಸಿಕೊಳ್ಳುವನು, ಅವನನ್ನು ಯೇಸು ಕರ್ತನು
2:8 ಯೆಶಾ. 11:4:
ತನ್ನ ಬಾಯಿಯ ಉಸಿರಿನಿಂದ
2:8 ದಾನಿ. 7:10, 11:
ಕೊಲ್ಲುವನು,
2:8 1 ತಿಮೊ. 6:14; 2 ತಿಮೊ. 1:10; 4:1, 8; ತೀತ. 2:13:
ತನ್ನ ಬರುವಿಕೆಯ ಪ್ರತ್ಯಕ್ಷತೆಯಿಂದ ಸಂಹರಿಸುವನು.
9ಆ ಅಧರ್ಮಸ್ವರೂಪನು, ಸೈತಾನನ ಕಾರ್ಯಕ್ಕೆ ಅನುಸಾರವಾಗಿ, ಅದು ಸುಳ್ಳಾದ
2:9 ಮತ್ತಾ 24:24; ಪ್ರಕ. 13:14:
ಸಕಲವಿಧವಾದ ಮಹತ್ಕಾರ್ಯ, ಸೂಚಕಕಾರ್ಯ, ಅದ್ಭುತಕಾರ್ಯ ಇವುಗಳಿಂದಲೂ,
10ದುರ್ನೀತಿಯ ಎಲ್ಲಾ ವಂಚನೆಯಿಂದಲೂ ಕೂಡಿ
2:9 1 ಕೊರಿ. 1:18:
ನಾಶದ ಮಾರ್ಗದಲ್ಲಿರುವವರಿಗೋಸ್ಕರವಾಗಿ ಬರುವನು. ಯಾಕೆಂದರೆ ಅವರು ಸತ್ಯವನ್ನು ಪ್ರೀತಿಸದೆ ನಿರಾಕರಿಸಿದ್ದರಿಂದ ರಕ್ಷಣೆಯನ್ನು ಹೊಂದದೆ ನಾಶವಾಗುತ್ತಾರೆ.

11ಇದೇ ಕಾರಣದಿಂದ
2:11 1 ಅರಸು 22:22; ಯೆಹೆ. 14:9:
ದೇವರು ಗಾಢಭ್ರಮೆಯನ್ನು ಅವರಲ್ಲಿಗೆ ಕಳುಹಿಸಿ ಅವರು
2:11 ರೋಮಾ. 1:25:
ಆ ಸುಳ್ಳನ್ನು ನಂಬುವಂತೆ ಒಳಪಡಿಸುತ್ತಾನೆ.
12
2:12 ರೋಮಾ. 1:32; 2:8:
ಸತ್ಯವನ್ನು ನಂಬದೆ ಅನೀತಿಯಲ್ಲಿ ಆನಂದಪಡುವವರೆಲ್ಲರೂ ಈ ಪ್ರಕಾರ ನ್ಯಾಯತೀರ್ಪಿಗೆ
2:12 ಅಥವಾ, ಒಳಗಾಗಬೇಕೆಂಬುದೇ ದೇವರ ಉದ್ದೇಶ.
ಗುರಿಯಾಗುವರು.

ದೃಢವಾಗಿ ನಿಲ್ಲಿರಿ

13
2:13 1 ಥೆಸ. 1:4:
ಕರ್ತನಿಗೆ ಪ್ರಿಯರಾಗಿರುವ ಸಹೋದರರೇ,
2:13 1 ಥೆಸ. 4:3:
ನೀವು ಪವಿತ್ರಾತ್ಮನಿಂದ ಶುದ್ಧೀಕರಿಸಲ್ಪಟ್ಟವರಾಗಿ, ಸತ್ಯದ ಮೇಲೆ ನಂಬಿಕೆಯನ್ನಿಟ್ಟು,
2:13 1 ಥೆಸ. 5:9; 2 ತಿಮೊ. 1:9:
ರಕ್ಷಣೆಯನ್ನು ಪಡೆಯುವುದಕ್ಕಾಗಿ ದೇವರು ನಿಮ್ಮನ್ನು
2:13 ಕೆಲವು ಪ್ರತಿಗಳಲ್ಲಿ, ಪ್ರಥಮಫಲವಾಗಿ ಎಂದು ಬರೆದದೆ.
ಆದಿಯಿಂದ ಆರಿಸಿಕೊಂಡಿದ್ದರಿಂದ ನಾವು
2:13 1 ಥೆಸ. 1:3:
ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರಿಗೆ ಕೃತಜ್ಞತಾಸ್ತುತಿಮಾಡುವುದಕ್ಕೆ ಬದ್ಧರಾಗಿದ್ದೇವೆ.
14ನೀವು ಹೀಗೆ
2:14 1 ಥೆಸ. 5:9; 2 ತಿಮೊ. 1:9:
ರಕ್ಷಿಸಲ್ಪಟ್ಟು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮಹಿಮೆಯನ್ನು ಸಂಪಾದಿಸಿಕೊಳ್ಳಬೇಕೆಂದು ದೇವರು ನಮ್ಮ ಸುವಾರ್ತೆಯ ಮೂಲಕವಾಗಿ ನಿಮ್ಮನ್ನು ಕರೆದನು.
15ಹೀಗಿರುವುದರಿಂದ ಸಹೋದರರೇ,
2:15 1 ಕೊರಿ. 16:13:
ದೃಢವಾಗಿ ನಿಲ್ಲಿರಿ.
2:15 ವ. 2:
ನಾವು ಮಾತಿನಿಂದಾಗಲಿ, ಪತ್ರದ ಮೂಲಕವಾಗಲಿ ನಿಮಗೆ ಬೋಧಿಸಿದ ಸಂಪ್ರದಾಯಗಳನ್ನು ಭದ್ರವಾಗಿ ಹಿಡಿದುಕೊಂಡಿರಿ.

16ಮತ್ತು
2:16 ಯೋಹಾ 3:16; 1 ಯೋಹಾ. 4:10; ಪ್ರಕ. 1:5
ನಮ್ಮನ್ನು ಪ್ರೀತಿಸಿ ನಮಗೆ ನಿತ್ಯವಾದ ಆದರಣೆಯನ್ನೂ
2:16 1 ಪೇತ್ರ. 1:3:
ಉತ್ತಮವಾದ ನಿರೀಕ್ಷೆಯನ್ನೂ ಕೃಪೆಯಿಂದ ಅನುಗ್ರಹಿಸಿದ ನಮ್ಮ ತಂದೆಯಾದ ದೇವರೂ ನಮ್ಮ ಕರ್ತನಾದ ಯೇಸು ಕ್ರಿಸ್ತನೂ ತಾನೇ ನಿಮ್ಮ ಹೃದಯಗಳನ್ನು ಸಂತೈಸಿ,
ಸಕಲ ಸತ್ಕಾರ್ಯದಲ್ಲಿಯೂ, ಸದ್ವಾಕ್ಯದಲ್ಲಿಯೂ
2:17 1 ಥೆಸ. 3:13; 2 ಥೆಸ. 3:3:
ದೃಢಪಡಿಸಲಿ.

17

Copyright information for KanULB