2 Thessalonians 3

ಪ್ರಾರ್ಥನೆಗಾಗಿ ವಿನಂತಿ

1ಕಡೆಯದಾಗಿ,
3:1 1 ಥೆಸ. 5:25:
ಸಹೋದರರೇ, ನಮಗೋಸ್ಕರ ಪ್ರಾರ್ಥನೆಮಾಡಿರಿ. ಕರ್ತನ ವಾಕ್ಯವು ನಿಮ್ಮಲ್ಲಿ ಹಬ್ಬಿಹರಡಿದ ಪ್ರಕಾರವೇ
3:1 ಕೀರ್ತ. 147:15; 1 ಥೆಸ. 1:8:
ಅದು ಬೇಗನೆ ಪಸರಿಸಿ ಮಹಿಮೆ ಹೊಂದಲಿ,
2
3:2 ರೋಮಾ. 15:31:
ದೇವರು ನಮ್ಮನ್ನು ಮೂರ್ಖರಾದ ದುಷ್ಟಜನರ ಕೈಯಿಂದ ತಪ್ಪಿಸುವ ಹಾಗೆಯೂ ಪ್ರಾರ್ಥಿಸಿರಿ, ಕ್ರಿಸ್ತ ನಂಬಿಕೆಯು ಎಲ್ಲರಲ್ಲಿ ಇರುವುದಿಲ್ಲವಲ್ಲಾ.
3ಆದರೆ
3:3 1 ಕೊರಿ. 1:9:
ಕರ್ತನು ನಂಬಿಗಸ್ತನು, ಆತನು ನಿಮ್ಮನ್ನು ದೃಢಪಡಿಸಿ ನೀವು
3:3 1 ಯೋಹಾ. 2:14:
ಕೆಡುಕನ ಕೈಗೆ
3:3 ಮತ್ತಾ 6:13; ಯೋಹಾ. 17:15:
ಸಿಕ್ಕದಂತೆ ಕಾಪಾಡುವನು.

4ನಾವು ಆಜ್ಞಾಪಿಸುವ ಪ್ರಕಾರ ನೀವು ಮಾಡುತ್ತೀರೆಂತಲೂ ಮುಂದೆಯೂ ಮಾಡುವಿರೆಂತಲೂ, ನಿಮ್ಮ ವಿಷಯದಲ್ಲಿ ಕರ್ತನ ಮೂಲಕವಾಗಿ ನಮಗೆ ಭರವಸವುಂಟು. 5ನೀವು ದೇವರ ಪ್ರೀತಿಯಲ್ಲಿಯೂ
3:5 ಅಥವಾ, ಕ್ರಿಸ್ತನನ್ನು ಎದುರುನೋಡುವ.
ಕ್ರಿಸ್ತನ ತಾಳ್ಮೆಯಲ್ಲಿಯೂ ಸೇರುವಂತೆ ಕರ್ತನೇ ನಿಮ್ಮನ್ನು ನಡಿಸಲಿ.

ಮೈಗಳ್ಳರಿಗೆ ಎಚ್ಚರಿಕೆ

6ಸಹೋದರರೇ, ನಾವು ಬೋಧಿಸಿದ ಸಂಪ್ರದಾಯವನ್ನು ಅನುಸರಿಸದೆ
3:6 ವ. 11; 1 ಥೆಸ. 5:14:
ಸೋಮಾರಿಯಾಗಿ ನಡೆಯುವ ಪ್ರತಿ
3:6 1 ಕೊರಿ. 5:11:
ಸಹೋದರನಿಗೆ ನೀವು
3:6 ವ. 14; ಮತ್ತಾ 18:17; 2 ತಿಮೊ. 3:5; 1 ಕೊರಿ. 5:9; 2 ಯೋಹಾ. 10:
ದೂರವಾಗಿರಬೇಕೆಂದು
3:6 1 ಕೊರಿ. 5:4:
ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಿಮಗೆ ಆಜ್ಞಾಪಿಸುತ್ತೇವೆ.
7
3:7 ಅ. ಕೃ. 20:35; 1 ಥೆಸ. 1:6:
ನೀವು ನಮ್ಮನ್ನು ಅನುಸರಿಸಿ ಹೇಗೆ ನಡೆಯಬೇಕೆಂಬುದನ್ನು ನೀವೇ ಬಲ್ಲಿರಿ,
3:7 1 ಥೆಸ. 1:5
ನಾವು ನಿಮ್ಮಲ್ಲಿ ಸೋಮಾರಿಯಾಗಿ ನಡೆಯಲಿಲ್ಲ.
8ನಾವು ಹಣಕೊಡದೆ ಯಾರ ಬಳಿಯಲ್ಲಿಯೂ ಊಟ ಮಾಡಲಿಲ್ಲ,
3:8 1 ಥೆಸ. 2:9:
ನಿಮ್ಮಲ್ಲಿ ಯಾರಿಗೂ ಭಾರವಾಗಬಾರದೆಂದು ಹಗಲಿರುಳು ಕಷ್ಟದಿಂದಲೂ ಪ್ರಯಾಸದಿಂದಲೂ ದುಡಿದು ಜೀವನ ಮಾಡಿದೆವು.
9
3:9 1 ಕೊರಿ. 9:4; 1 ಥೆಸ. 2:6:
ನಿಮ್ಮಿಂದ ಪೋಷಣೆ ಹೊಂದುವುದಕ್ಕೆ ನಮಗೆ ಹಕ್ಕಿಲ್ಲವೆಂದು ಹಾಗೆ ಮಾಡಲಿಲ್ಲ,
3:9 ವ. 7; 1 ಪೇತ್ರ. 5:3:
ನೀವು ನಮ್ಮನ್ನು ಅನುಸರಿಸುವುದಕ್ಕಾಗಿ ನಿಮಗೆ ಮಾದರಿಯಾಗಿರಬೇಕೆಂದೇ ಹಾಗೆ ಮಾಡಿದೆವು.

10ಇದಲ್ಲದೆ ನಾವು ನಿಮ್ಮ ಸಂಗಡ ಇದ್ದಾಗ,
3:10 ಆದಿ. 3:19; 1 ಥೆಸ. 4:11:
<<ಕೆಲಸ ಮಾಡಲೊಲ್ಲದವನು ಊಟಮಾಡಬಾರ>> ಎಂದು ನಿಮಗೆ ಆಜ್ಞಾಪಿಸಿದೆವಷ್ಟೆ.
11ಆದರೆ ನಿಮ್ಮಲ್ಲಿ ಕೆಲವರು ಯಾವ ಕೆಲಸವನ್ನೂ ಮಾಡದೆ,
3:11 1 ತಿಮೊ. 5:13; 1 ಪೇತ್ರ. 4:15:
ಇತರರ ವಿಷಯದಲ್ಲಿ ಮಾತ್ರ ತಲೆ ಹಾಕಿ ಸೋಮಾರಿಯಾಗಿ ನಡೆಯುತ್ತಾರೆಂಬ ಸುದ್ದಿಯನ್ನು ಕೇಳಿದ್ದೇವೆ.
12ಇಂಥವರು ತಮ್ಮ ಕೆಲಸಕಾರ್ಯಗಳನ್ನು ನೋಡುತ್ತಾ ತಾವೇ ಸಂಪಾದಿಸಿದ್ದನ್ನು ಊಟಮಾಡಬೇಕೆಂದು ಕರ್ತನಾದ ಯೇಸು ಕ್ರಿಸ್ತನಲ್ಲಿ ನಾವು ಆಜ್ಞಾಪಿಸಿ ಬುದ್ಧಿ ಹೇಳುತ್ತೇವೆ.

13ಸಹೋದರರೇ,
3:13 ಗಲಾ. 6:9; 1 ಕೊರಿ. 15:58:
ನೀವಾದರೋ ಒಳ್ಳೆಯದನ್ನು ಮಾಡುವುದರಲ್ಲಿ ಬೇಸರಗೊಳ್ಳಬೇಡಿರಿ.
14ಈ ಪತ್ರಿಕೆಯ ಮೂಲಕವಾಗಿ ಹೇಳಿರುವ ನಮ್ಮ ಮಾತಿಗೆ ಯಾವನಾದರೂ ಒಳಗಾಗದಿದ್ದರೆ ಅವನನ್ನು ಗುರುತಿಸಿ ಅವನಿಗೆ ನಾಚಿಕೆಯಾಗುವಂತೆ
3:14 ವ. 6:
ಅವನ ಸಹವಾಸದಲ್ಲಿ ಸೇರಬೇಡಿರಿ.
15ಆದರೂ
3:15 ಯಾಜಕ. 19:17; ಮತ್ತಾ 18:15:
ಅವನನ್ನು ವೈರಿಯೆಂದು ಭಾವಿಸದೆ ಸಹೋದರನೆಂದು ಎಣಿಸಿಕೊಂಡು ಬುದ್ಧಿಹೇಳಿರಿ.

ಸಮಾಪ್ತಿ ವಾಕ್ಯಗಳು

16
3:16 ರೋಮಾ. 15:33:
ಶಾಂತಿದಾಯಕನಾದ ಕರ್ತನು ತಾನೇ ಸದಾಕಾಲದಲ್ಲಿಯೂ ಸಕಲವಿಧದಲ್ಲಿಯೂ
3:16 ಅರಣ್ಯ. 6:26:
ನಿಮಗೆ ಶಾಂತಿಯನ್ನು ದಯಪಾಲಿಸಲಿ. ಕರ್ತನು ನಿಮ್ಮೆಲ್ಲರೊಂದಿಗಿರಲಿ.

17
3:17 1 ಕೊರಿ. 16:21:
ಪೌಲನೆಂಬ ನಾನು ಸ್ವಂತ ಕೈಯಿಂದ ವಂದನೆಯನ್ನು ಬರೆದಿದ್ದೇನೆ. ಎಲ್ಲಾ ಪತ್ರಿಕೆಗಳಲ್ಲಿಯೂ ಇದೇ ನನ್ನ ಗುರುತು, ಹೀಗೆಯೇ ನನ್ನ ಕೈ ಬರಹ.

18
3:18 ರೋಮಾ. 16:20:
ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೆಲ್ಲರ ಸಂಗಡವಿರಲಿ.

Copyright information for KanULB