2 Timothy 1

ಪೌಲನು ತಿಮೊಥೆಯನಿಗೆ ಬರೆದ ಎರಡನೇ ಪತ್ರಿಕೆ

ಪೀಠಿಕೆ

1ಕ್ರಿಸ್ತಯೇಸುವಿನಲ್ಲಿರುವ
1:1 ತೀತ. 1:2; ಇಬ್ರಿ. 9:15
ಜೀವ ವಾಗ್ದಾನವನ್ನು ತಿಳಿಯಪಡಿಸುವುದಕ್ಕೋಸ್ಕರ
1:1 1 ಕೊರಿ. 1:1
ದೇವರ ಚಿತ್ತಾನುಸಾರವಾಗಿ ಕ್ರಿಸ್ತಯೇಸುವಿನ
1:1 2 ಕೊರಿ. 1:1
ಅಪೊಸ್ತಲನಾದ ಪೌಲನು,
2
1:2 1 ಕೊರಿ. 4:17, 2 ತಿಮೊ. 2:1; ಅ. ಕೃ. 16:1
ತನ್ನ ಪ್ರಿಯ ಕುಮಾರನಾದ ತಿಮೊಥೆಯನಿಗೆ ಬರೆಯುವುದೇನಂದರೆ,
1:2 1 ತಿಮೊ. 1:2
ತಂದೆಯಾದ ದೇವರಿಂದಲೂ ನಮ್ಮ ಕರ್ತನಾದ ಕ್ರಿಸ್ತಯೇಸುವಿನಿಂದಲೂ ನಿನಗೆ ಕೃಪೆಯೂ, ಕರುಣೆಯೂ, ಶಾಂತಿಯೂ ಆಗಲಿ.

ತಿಮೊಥೆಯನು ಸುವಾರ್ತಾಸೇವೆಯಲ್ಲಿ ನಂಬಿಗಸ್ತನಾಗಿರಬೇಕೆಂದು ಬೋಧನೆ

3
1:3 ರೋಮಾ. 1:9
ನಾನು ಹಗಲಿರುಳು ನನ್ನ ಪ್ರಾರ್ಥನೆಗಳಲ್ಲಿ ನಿನ್ನನ್ನು ತಪ್ಪದೆ ಜ್ಞಾಪಿಸಿಕೊಳ್ಳುತ್ತೇನೆ. ಇದಲ್ಲದೆ
1:3 ಅ. ಕೃ. 22:3; 24:14
ನಾನು ಪೂರ್ವಿಕರ ಭಕ್ತಿಮಾರ್ಗವನ್ನೇ ಅನುಸರಿಸಿ.
1:3 1 ತಿಮೊ. 3:9; ಅ. ಕೃ. 23:1
ಶುದ್ಧ ಮನಸ್ಸಾಕ್ಷಿಯಿಂದ ಸೇವಿಸುವ ದೇವರಿಗೆ ನಿನ್ನ ವಿಷಯವಾಗಿ
1:3 ರೋಮಾ. 1:8
ಸ್ತೋತ್ರಸಲ್ಲಿಸುತ್ತೇನೆ.
4ನಾನು
1:4 ಅ. ಕೃ. 20:37
ನಿನ್ನ ಕಣ್ಣೀರನ್ನು ನೆನಪಿಗೆ ತಂದು
1:4 ಫಿಲಿ. 1:8
ನಿನ್ನನ್ನು ನೋಡಿ ಸಂತೋಷಭರಿತನಾಗಬೇಕೆಂದು ಬಯಸುತ್ತೇನೆ.
5ನಿನ್ನಲ್ಲಿರುವ
1:5 1 ತಿಮೊ. 1:5
ಯಥಾರ್ಥವಾದ ನಂಬಿಕೆಯು ನನ್ನ ನೆನಪಿಗೆ ಬಂದಿತು. ಆ ನಂಬಿಕೆಯು ನಿನ್ನ ಅಜ್ಜಿಯಾದ ಲೋವಿಯಳಲ್ಲಿಯೂ
1:5 ಅ. ಕೃ. 16:1; 1 ತಿಮೊ. 3:15
ನಿನ್ನ ತಾಯಿಯಾದ ಯೂನೀಕೆಯಲ್ಲಿಯೂ ವಾಸವಾಗಿತ್ತು. ಹಾಗೆಯೇ ಅದು ನಿನ್ನಲ್ಲಿಯೂ ವಾಸವಾಗಿದೆ ಎಂದು ದೃಢವಾಗಿ ನಂಬಿದ್ದೇನೆ.

6ಆದಕಾರಣ ನಾನು ನಿನ್ನ ತಲೆಯ ಮೇಲೆ ಹಸ್ತವನ್ನಿಟ್ಟದರ ಮೂಲಕ ನಿನಗೆ ದೊರಕಿದ
1:6 1 ತಿಮೊ. 4:14, 1 ಥೆಸ. 5:19
ದೇವರ ಕೃಪಾವರವನ್ನು ಪ್ರಜ್ವಲಿಸುವಂತೆ ಮಾಡಬೇಕೆಂದು ನಿನ್ನನ್ನು ಜ್ಞಾಪಿಸುತ್ತಿದ್ದೇನೆ.
7ದೇವರು ನಮಗೆ ಕೊಟ್ಟಿರುವ ಆತ್ಮವು
1:7 ಲೂಕ 24:49; ಅ. ಕೃ. 1:8
ಬಲ, ಪ್ರೀತಿ, ಸಂಯಮಗಳ ಆತ್ಮವೇ ಹೊರತು
1:7 ರೋಮಾ. 8:15; ಯೋಹಾ. 14:27; ಪ್ರಕ. 21:8
ಹೇಡಿತನದ ಆತ್ಮವಲ್ಲ.

8ಆದ್ದರಿಂದ ನೀನು ನಮ್ಮ ಕರ್ತನನ್ನು ಕುರಿತು ಹೇಳುವ
1:8 1 ಕೊರಿ. 1:6
ಸಾಕ್ಷಿಯ ವಿಷಯದಲ್ಲಾಗಲಿ ಆತನ
1:8 2 ತಿಮೊ. 1:16; ಎಫೆ. 3:1
ಸೆರೆಯವನಾದ ನನ್ನ ವಿಷಯದಲ್ಲಾಗಲಿ
1:8 ರೋಮಾ. 1:16; ಇಬ್ರಿ. 11:16; 1 ಯೋಹಾ 2:28
ನಾಚಿಕೆ ಪಡದೆ, ದೇವರ ಬಲವನ್ನು ಆಶ್ರಯಿಸಿ ನನ್ನೊಂದಿಗೆ
1:8 2 ತಿಮೊ. 2:3,9; 4:5
ಸುವಾರ್ತೆಗೋಸ್ಕರ ಕಷ್ಟವನ್ನನುಭವಿಸು.
9
1:9 ತೀತ. 3:5, ರೋಮಾ. 3:27
ಆತನು ನಮ್ಮಲ್ಲಿರುವ ಸುಕೃತ್ಯಗಳನ್ನು ನೋಡಿದ್ದರಿಂದಲ್ಲ,
1:9 ಇಬ್ರಿ. 3:11; ರೋಮಾ. 8:28
ತನ್ನ ಸಂಕಲ್ಪವನ್ನು ಅನುಸರಿಸಿ ಕೃಪೆಯಿಂದಲೇ
1:9 1 ತಿಮೊ. 1:1; ತೀತ. 3:4
ನಮ್ಮನ್ನು ರಕ್ಷಿಸಿ ಪರಿಶುದ್ಧರಾಗುವುದಕ್ಕೆ ಕರೆದನು. ಆತನು
1:10 ತೀತ. 1:2, ರೋಮಾ. 16:25; ಎಫೆ. 1:4
ಅನಾದಿಕಾಲದಲ್ಲಿ ಆ ಕೃಪೆಯನ್ನು ಕ್ರಿಸ್ತ ಯೇಸುವಿನಲ್ಲಿ ನಮಗೆ ಅನುಗ್ರಹಿಸಿ,
10ಈಗ ನಮ್ಮ ರಕ್ಷಕನಾದ ಕ್ರಿಸ್ತ ಯೇಸುವಿನ
1:10 2 ಥೆಸ. 2:8
ಪ್ರತ್ಯಕ್ಷತೆಯ ಮೂಲಕ ಅದನ್ನು ಪ್ರಕಟಪಡಿಸಿದ್ದಾನೆ.
1:10 1 ಕೊರಿ. 15:26, 54, 55; ಇಬ್ರಿ. 2:14,15
ಈತನು ಮರಣವನ್ನು ನಿರ್ಮೂಲಗೊಳಿಸಿ ಸುವಾರ್ತೆಯ ಮೂಲಕ ಜೀವವನ್ನೂ ಅಮರತ್ವವನ್ನೂ ಬೆಳಕಿಗೆ ತಂದಿದ್ದಾನೆ.

11
1:11 1 ತಿಮೊ. 2:7
ಆ ಸುವಾರ್ತೆಗೋಸ್ಕರ ನಾನು ಪ್ರಚಾರಕನಾಗಿಯೂ, ಅಪೊಸ್ತಲನಾಗಿಯೂ ಮತ್ತು ಬೋಧಕನಾಗಿಯೂ ನೇಮಿಸಲ್ಪಟ್ಟೆನು.

12
1:12 2 ತಿಮೊ. 2:9
ಅದರ ನಿಮಿತ್ತದಿಂದಲೇ ಈ ಕಷ್ಟಗಳನ್ನು ಅನುಭವಿಸುತ್ತಾ ಇದ್ದೇನೆ. ಆದರೂ ನಾನು ನಾಚಿಕೆಪಡುವುದಿಲ್ಲ.
1:12 1 ಪೇತ್ರ 4:19
ನಾನು ನಂಬಿರುವಾತನನ್ನು ಬಲ್ಲೆನು. ಆತನು ನನಗೆ ಒಪ್ಪಿಸಿಕೊಟ್ಟಿರುವುದನ್ನು
1:12 ನಾನು ಆತನ
ಆತನು
1:12 2 ತಿಮೊ. 1:18; 4:8; 1 ಕೊರಿ. 3:13
ಆ ದಿನದವರೆಗೆ ಕಾಪಾಡುವುದಕ್ಕೆ ಶಕ್ತನಾಗಿದ್ದಾನೆಂದು ದೃಢವಾಗಿ ನಂಬಿದ್ದೇನೆ.
13ನೀನು
1:13 1 ತಿಮೊ. 1:14
ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯೂ ಪ್ರೀತಿಯೂ ಉಳ್ಳವನಾಗಿ, ನನ್ನಿಂದ ಕೇಳಿದ
1:13 1 ತಿಮೊ. 1:10
ಸ್ವಸ್ಥಬೋಧನಾ ವಾಕ್ಯಗಳನ್ನು ಮಾದರಿಯಾಗಿಟ್ಟುಕೊಂಡು ಅನುಸರಿಸು.
14
1:14 1 ತಿಮೊ. 6:20
ನಿನ್ನ ವಶಕ್ಕೆ ಒಪ್ಪಿಸಿಕೊಟ್ಟಿರುವ ಒಳ್ಳೆಯ ವಿಷಯವನ್ನು
1:14 ರೋಮ. 8:9
ನಮ್ಮಲ್ಲಿ ವಾಸವಾಗಿರುವ ಪವಿತ್ರಾತ್ಮನ ಮೂಲಕವಾಗಿ ಕಾಪಾಡಿಕೋ.

15
1:15 ಅ. ಕೃ. 19:10
ಆಸ್ಯಸೀಮೆಯಲ್ಲಿರುವವರೆಲ್ಲರೂ ನನ್ನನ್ನು ಕೈಬಿಟ್ಟರೆಂಬುದನ್ನು ನೀನು ಬಲ್ಲೆ. ಅವರಲ್ಲಿ ಪುಗೇಲನೂ ಹೆರ್ಮೊಗೇನನೂ ಸೇರಿದ್ದಾರೆ.
16
1:16 2 ತಿಮೊ. 4:19
ಒನೇಸಿಪೊರನ ಮನೆಯವರಿಗೆ ಕರ್ತನು ಕರುಣೆಯನ್ನು ತೋರಿಸಲಿ, ಅವನು ಹಲವುಬಾರಿ ನನ್ನನ್ನು ಉಪಚರಿಸಿದನು.
1:17 ವ. 8; ಅ. ಕೃ. 28:20
ನನ್ನ ಬೇಡಿಗಳಿಗೆ ನಾಚಿಕೆಪಡದೆ,
17ರೋಮಾಪುರಕ್ಕೆ ಬಂದಕೂಡಲೆ
1:17 ಮತ್ತಾ 25:36-40
ಬಹು ಆಸಕ್ತಿಯಿಂದ ವಿಚಾರಿಸಿ ನನ್ನನ್ನು ಹುಡುಕಿ ಕಂಡುಕೊಂಡನು.
ಅವನು ಆ ದಿನದಲ್ಲಿ ಕರ್ತನಿಂದ ಕರುಣೆಯನ್ನು ಹೊಂದುವಂತೆ ಕರ್ತನು ಅವನಿಗೆ ಅನುಗ್ರಹಿಸಲಿ. ಎಫೆಸದಲ್ಲಿ ಅವನು ನನಗೆ ಎಷ್ಟೋ ಉಪಚಾರಮಾಡಿದನೆಂಬದು ನಿನಗೆ ಚೆನ್ನಾಗಿ ಗೊತ್ತಿದೆ.

18

Copyright information for KanULB