2 Timothy 4

1ನಾನು ದೇವರ ಸಮಕ್ಷಮದಲ್ಲಿ ಮತ್ತು
4:1 ಅ. ಕೃ 10:42; 17:31; 24:25; ಯೋಹಾ 5:22, 27; 2 ಕೊರಿ 5:10; 1 ಪೇತ್ರ 4:5
ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರಿಸುವುದಕ್ಕೆ ಬರುವ ಕ್ರಿಸ್ತ ಯೇಸುವಿನ ಪ್ರತ್ಯಕ್ಷತೆಯನ್ನೂ,
4:1 ವ. 8; 2 ಥೆಸ. 2:8
ಆತನ ರಾಜ್ಯವನ್ನೂ ಮುಂದಿಟ್ಟು ನಿನಗೆ ಖಂಡಿತವಾಗಿ ಹೇಳುವುದೇನಂದರೆ,
2ದೇವರ ವಾಕ್ಯವನ್ನು ಸಾರು, ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಅದರಲ್ಲಿ ಆಸಕ್ತನಾಗಿರು. ಪೂರ್ಣ ದೀರ್ಘಶಾಂತಿಯಿಂದ ಉಪದೇಶಿಸುತ್ತಾ
4:2 1 ತಿಮೊ 5:20; ತೀತ 1:13; 2:15
ಖಂಡಿಸು, ಗದರಿಸು, ಎಚ್ಚರಿಸು.

3ಯಾಕೆಂದರೆ ಜನರು
4:3 1 ತಿಮೊ 1:10
ಸ್ವಸ್ಥಬೋಧನೆಯನ್ನು ಒಪ್ಪಲಾರದ
4:3 2 ತಿಮೊ 3:1
ಕಾಲವು ಬರುತ್ತದೆ. ಅದರಲ್ಲಿ ಅವರು ಕಿವಿಗೆ ಇಂಪಾಗುವ ಹಾಗೆ ತಮ್ಮ ದುರಾಶೆಗಳಿಗೆ ಅನುಕೂಲವಾದ ಉಪದೇಶಗಳನ್ನು ನೀಡುವ ಅನೇಕ ಉಪದೇಶಕರನ್ನು ಇಟ್ಟುಕೊಳ್ಳುವರು.
4ಅವರು ಸತ್ಯ ಬೋಧನೆಗೆ ಕಿವಿಗೊಡದೆ
4:4 1 ತಿಮೊ 1:4,6
ಕಟ್ಟುಕಥೆಗಳನ್ನು ಕೇಳುವುದಕ್ಕೆ ಇಚ್ಛಿಸುವರು.
5ಆದರೆ ನೀನು ಎಲ್ಲಾ ವಿಷಯಗಳಲ್ಲಿಯೂ
4:5 1 ಪೇತ್ರ 1:13
ಸ್ವಸ್ಥಚಿತ್ತನಾಗಿರು,
4:5 2 ತಿಮೊ 1:8; 2:3; 9
ಹಿಂಸೆಯನ್ನು ತಾಳಿಕೋ,
4:5 ಅ. ಕೃ 21:8; ಎಫೆ 4:11
ಸುವಾರ್ತಿಕನ ಕೆಲಸವನ್ನು ಮಾಡು, ನಿನಗೆ ನೇಮಿಸಿರುವ ಸೇವೆಯನ್ನು ಲೋಪವಿಲ್ಲದೆ ಮಾಡು.

6ಯಾಕೆಂದರೆ ನಾನಂತೂ
4:6 ಫಿಲಿ 2:17
ಈಗಲೇ ಪಾನದ್ರವ್ಯವಾಗಿ ಅರ್ಪಿತನಾಗುತ್ತಾ ಇದ್ದೇನೆ.
4:6 ಫಿಲಿ 1:23
ನನ್ನ ನಿರ್ಗಮನದ ಸಮಯವು ಸಮೀಪವಾಗುತ್ತಾ ಬಂದಿದೆ.
7
4:7 1 ತಿಮೊ 6:12
ಶ್ರೇಷ್ಠ ಹೋರಾಟವನ್ನು ಮಾಡಿದ್ದೇನೆ,
4:7 ಅ ಕೃ 20:24
ನನ್ನ ಓಟವನ್ನು ಓಡಿಮುಗಿಸಿದ್ದೇನೆ, ಕ್ರಿಸ್ತ ನಂಬಿಕೆಯನ್ನು ಕಾಪಾಡಿಕೊಂಡಿದ್ದೇನೆ.
8
4:8 ಮೂಲ:ನೀತಿಯೆಂಬ
ನೀತಿವಂತರಿಗೆ ದೊರಕುವ ಜಯಮಾಲೆಯು ಮುಂದೆ ನನಗಾಗಿ ಸಿದ್ಧವಾಗಿದೆ, ಅದನ್ನು
4:8 ಕೀರ್ತ 7:11
ನೀತಿವಂತನಾದ ನ್ಯಾಯಾಧಿಪತಿಯಾಗಿರುವ ಕರ್ತನು
4:8 2 ತಿಮೊ 1:12
ಆ ದಿನದಲ್ಲಿ ನನಗೆ ಕೊಡುವನು, ನನಗೆ ಮಾತ್ರವಲ್ಲದೆ ತನ್ನ ಪ್ರತ್ಯಕ್ಷತೆಯನ್ನು ಪ್ರೀತಿಸುವವರೆಲ್ಲರಿಗೂ ಕೊಡುವನು.

ಪೌಲನ ವೈಯುಕ್ತಿಕ ಆದೇಶಗಳು

9ನೀನು
4:9 2 ತಿಮೊ. 1:4
ನನ್ನ ಬಳಿಗೆ ಬೇಗನೇ ಬರುವುದಕ್ಕೆ ಪ್ರಯತ್ನಪಡು,
10ಯಾಕೆಂದರೆ
4:10 ಕೊಲೊ 4:14; ಫಿಲಿ 24
ದೇಮನು ಇಹಲೋಕವನ್ನು
4:10 1 ಯೋಹಾ 2:15
ಪ್ರೀತಿಸಿ,
4:10 2 ತಿಮೊ 1:15
ನನ್ನನ್ನು ಬಿಟ್ಟು ಥೆಸಲೋನಿಕಕ್ಕೆ ಹೋದನು. ಕ್ರೆಸ್ಕನು ಗಲಾತ್ಯಕ್ಕೂ
4:10 ತೀತ 3:12
ತೀತನು ದಲ್ಮಾತ್ಯಕ್ಕೂ ಹೋದರು.

11
4:10 1 ತಿಮೊ 1:15
ಲೂಕನು ಮಾತ್ರ ನನ್ನ ಜೊತೆಯಲ್ಲಿದ್ದಾನೆ.
4:11 ಅ. ಕೃ 12:12
ಮಾರ್ಕನನ್ನು ನಿನ್ನ ಸಂಗಡ ಕರೆದುಕೊಂಡು ಬಾ, ಅವನು ನನಗೆ ಸೇವೆಯಲ್ಲಿ ಉಪಯುಕ್ತನಾಗಿದ್ದಾನೆ.
12
This verse is empty because in this translation its contents have been moved to form part of verse 2Ti 4:13.
In this translation, this verse contains text which in some other translations appears in verses 2Ti 4:12-2Ti 4:13.
13
4:12-13 ಅ. ಕೃ 20:4; ಎಫೆ 6:21; ಕೊಲೊ 4:7; ತೀತ 3:12
ತುಖಿಕನನ್ನು ಎಫೆಸಕ್ಕೆ ಕಳುಹಿಸಿದೆನು. ತ್ರೋವದಲ್ಲಿ ನಾನು ಕರ್ಪನ ಬಳಿಯಲ್ಲಿ ಬಿಟ್ಟು ಬಂದ ಮೇಲಂಗಿಯನ್ನೂ, ಪುಸ್ತಕಗಳನ್ನೂ, ಮುಖ್ಯವಾಗಿ ಚರ್ಮದ ಕಾಗದಗಳನ್ನೂ ನೀನು ಬರುವಾಗ ತೆಗೆದುಕೊಂಡು ಬಾ.

14
4:14 1 ತಿಮೊ 1:20
ಕಂಚುಗಾರನಾದ ಅಲೆಕ್ಸಾಂದ್ರನು ನನಗೆ ಬಹಳ ಕೇಡುಮಾಡಿದನು.
4:14 ಕೀರ್ತ 62:12; ಜ್ಞಾ 24:12
ಕರ್ತನು ಅವನ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಅವನಿಗೆ ಕೊಡುವನು.
15ನೀನು ಸಹ ಅವನ ವಿಷಯದಲ್ಲಿ ಎಚ್ಚರಿಕೆಯಾಗಿರು, ಅವನು ನಮ್ಮ ಮಾತುಗಳನ್ನು ಬಹಳವಾಗಿ ಎದುರಿಸಿದನು. 16ನಾನು ಮೊದಲನೆ ಸಾರಿ ಪ್ರತಿವಾದ ಮಾಡಿದಾಗ ಯಾರೂ ನನ್ನ ಸಂಗಡ ಇರಲಿಲ್ಲ, ಎಲ್ಲರೂ ನನ್ನನ್ನು ಕೈಬಿಟ್ಟರು.
4:16 ಅ. ಕೃ 7:60
ಇದು ಅವರಿಗೆ ದೋಷವಾಗಿ ಎಣಿಸಲ್ಪಡದೆ ಇರಲಿ.

17
4:17 ಅ. ಕೃ 23:11; 27:23; ಮತ್ತಾ 10:19
ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸುವಾರ್ತೆಯು ಸಂಪೂರ್ಣವಾಗಿ ಸಾರಲ್ಪಡುವಂತೆಯೂ,
4:17 ಅ. ಕೃ 9:15
ಅನ್ಯ ಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು. ಇದಲ್ಲದೆ ಆತನು ನನ್ನನ್ನು
4:17 1 ಪೇತ್ರ 5:8; ಕೀರ್ತ 22:21
ಸಿಂಹದ ಬಾಯೊಳಗಿಂದ ತಪ್ಪಿಸಿದನು.
18
4:18 ಮತ್ತಾ 6:13
ಪ್ರತಿಯೊಂದು ದುಷ್ಕೃತ್ಯದಿಂದ ಕರ್ತನು ನನ್ನನ್ನು ಕಾಪಾಡಿ ತನ್ನೊಂದಿಗೆ ಪರಲೋಕ ರಾಜ್ಯಕ್ಕೆ ಸೇರಿಸುವನು.
4:18 ರೋಮಾ 11:36
ಯುಗಯುಗಾಂತರಗಳಲ್ಲಿಯೂ ಆತನಿಗೆ ಸ್ತೋತ್ರ. ಆಮೆನ್.

ಅಂತಿಮ ವಂದನೆಗಳು

19
4:19 ಅ. ಕೃ. 18:2
ಪ್ರಿಸ್ಕಿಲ್ಲಳಿಗೂ, ಅಕ್ವಿಲ್ಲನಿಗೂ,
4:19 2 ತಿಮೊ 1:16
ಒನೇಸಿಪೊರನ ಮನೆಯವರಿಗೂ ವಂದನೆಹೇಳು.
20
4:20 ಅ. ಕೃ. 19:22; ರೋಮಾ 16:23
ಎರಸ್ತನು ಕೊರಿಂಥದಲ್ಲಿ ನಿಂತನು.
4:20 ಅ. ಕೃ 20:4; 21:29
ತ್ರೊಫಿಮನು ಅಸ್ವಸ್ಥನಾಗಿದ್ದುದರಿಂದ ಅವನನ್ನು ಮಿಲೇತದಲ್ಲಿ ಬಿಟ್ಟೆನು.
21
4:21 ವ. 9
ಚಳಿಗಾಲಕ್ಕೆ ಮುಂಚೆಯೇ ಬರುವುದಕ್ಕೆ ಪ್ರಯತ್ನಿಸು. ಯುಬೂಲನು, ಪೊದೆಯನೂ, ಲೀನನೂ, ಕ್ಲೌದ್ಯಳೂ ಉಳಿದ ಸಹೋದರರೆಲ್ಲರೂ ನಿನಗೆ ವಂದನೆ ಹೇಳುತ್ತಾರೆ.

22ಕರ್ತನು
4:22 ಗಲಾ 6:18; ಫಿಲಿ 25
ನಿನ್ನ ಆತ್ಮದೊಂದಿಗೆ ಇರಲಿ. ಆತನ
4:22 ಕೊಲೊ 4:18
ಕೃಪೆಯು ನಿಮ್ಮೊಂದಿಗಿರಲಿ.

Copyright information for KanULB