Colossians 4

1ಯಜಮಾನರೇ, ಪರಲೋಕದಲ್ಲಿ ನಿಮಗೂ ಒಬ್ಬ ಯಜಮಾನನೊಬ್ಬನಿದ್ದಾನೆಂದು ತಿಳಿದು ನಿಮ್ಮ ದಾಸರೊಂದಿಗೆ ನೀತಿಯಿಂದಲೂ ನ್ಯಾಯದಿಂದಲೂ ವರ್ತಿಸಿರಿ.

ಪ್ರಾರ್ಥಿಸಲು ಉತ್ತೇಜನ

2
4:2 ವ. 2-4; ಎಫೆ. 6:18-20
ಪ್ರಾರ್ಥನೆಯನ್ನು ತಪ್ಪದೆ ಮಾಡುವವರಾಗಿ, ಎಚ್ಚರವಾಗಿದ್ದು ದೇವರಿಗೆ ಕೃತಜ್ಞತಾಸ್ತುತಿಮಾಡಿರಿ.
3ಕ್ರಿಸ್ತನ ಮರ್ಮವನ್ನು ಅಂದರೆ ಸುರ್ವಾತೆಯನ್ನು ನಾವು ಸಾರುವುದಕ್ಕೆ ದೇವರು ನಮಗೆ ಬಾಗಿಲನ್ನು ತೆರೆದು ಕೊಡುವುದಕ್ಕಾಗಿ ನಮಗೋಸ್ಕರವಾಗಿ ಪ್ರಾರ್ಥಿಸಿರಿ. ಈ ಸುರ್ವಾತೆಯ ನಿಮಿತ್ತವೇ
4:3 ಕೊಲೊ. 4:18; ಎಫೆ. 6:20; ಫಿಲಿ. 1:7
ನಾನು ಸೆರೆಯಲ್ಲಿದ್ದೇನಲ್ಲಾ.
4ನಾನು ಆ
4:4 ರೋಮಾ. 16:25
ಸತ್ಯಾರ್ಥವನ್ನು ಹೇಳಬೇಕಾದ ರೀತಿಯಲ್ಲಿ ಸ್ಪಷ್ಟವಾಗಿ ಹೇಳುವಂತೆ ಪ್ರಾರ್ಥಿಸಿರಿ.

5ಸಮಯವನ್ನು ಸರಿಯಾಗಿ ಸದುಪಯೋಗಿಸಿಕೊಂಡು
4:5 ಮಾರ್ಕ. 4:11
ಹೊರಗಿನವರೊಂದಿಗೆ
4:5 ಎಫೆ. 5:15-17
ಜ್ಞಾನವುಳ್ಳವರಾಗಿ ನಡೆದುಕೊಳ್ಳಿರಿ.
6ನಿಮ್ಮ ಸಂಭಾಷಣೆಯು ಯಾವಾಗಲೂ ಕೃಪೆಯುಳ್ಳದ್ದಾಗಿಯೂ, ಉಪ್ಪಿನಂತೆ
4:6 ಉಪ್ಪಾಗಿಯೂ
ರುಚಿಕರವಾಗಿಯೂ ಇರಲಿ.
4:6 1 ಪೇತ್ರ 3:15
ಹೀಗೆ ನೀವು ಪ್ರತಿಯೊಬ್ಬರಿಗೂ ಯಾವಾವ ರೀತಿಯಲ್ಲಿ ಉತ್ತರಹೇಳಬೇಕು ಎಂಬುದನ್ನು ತಿಳಿದುಕೊಳ್ಳುವಿರಿ.

ವಂದನೆಗಳು ಹಾಗೂ ಕಡೆ ಮಾತುಗಳು

7
4:7 ವ. 7-9; ಎಫೆ. 6:21-22
ಪ್ರಿಯ ಸಹೋದರನೂ, ನಂಬಿಗಸ್ತನಾದ ಸೇವಕನೂ ಮತ್ತು ಕರ್ತನಲ್ಲಿ ಜೊತೆಯ ದಾಸನೂ ಆಗಿರುವ ತುಖಿಕನು ನನ್ನ ವಿಷಯಗಳನ್ನೆಲ್ಲಾ ನಿಮಗೆ ತಿಳಿಸುವನು.
8ನೀವು ನಮ್ಮ ಕುರಿತು ತಿಳಿದುಕೊಳ್ಳುವಂತೆ, ಅವನು ನಿಮ್ಮ ಹೃದಯಗಳನ್ನು ಉರಿದುಂಬಿಸುವಂತೆ, 9ಅವನನ್ನು ನಂಬಿಗಸ್ತನು ಮತ್ತು
4:9 ಫಿಲೆ. 16
ಪ್ರಿಯ ಸಹೋದರನಾಗಿರುವ ನಿಮ್ಮ ಊರಿನವನೇ ಆದ
4:9 ಫಿಲೆ. 10
ಓನೇಸಿಮನ ಜೊತೆಯಲ್ಲಿ ಕಳುಹಿಸಿದ್ದೇನೆ. ಅವರು ಇಲ್ಲಿ ನಡೆಯುತ್ತಿರುವ ವಿಷಯಗಳನ್ನೆಲ್ಲಾ ನಿಮಗೆ ತಿಳಿಸುವರು.

10ನನ್ನ ಜೊತೆ ಸೆರೆಯವನಾದ
4:10 ಅ. ಕೃ. 19:29; 20:4; 7:2; ಫಿಲೆ. 24
ಅರಿಸ್ತಾರ್ಕನೂ ಮತ್ತು
4:10 ಅ. ಕೃ. 15:37-39
ಬಾರ್ನಬನ ಸೋದರಸಂಬಂಧಿಯಾಗಿರುವ ಮಾರ್ಕನೂ ನಿಮಗೆ ವಂದನೆ ಹೇಳುತ್ತಾರೆ.
4:10 ಅ. ಕೃ. 12:12
ಅವನು ನಿಮ್ಮ ಬಳಿಗೆ ಬಂದರೆ ಅವನನ್ನು ಸೇರಿಸಿಕೊಳ್ಳಿರಿ. ಅವನ ವಿಷಯದಲ್ಲಿ ಅಪ್ಪಣೆಗಳನ್ನು ಹೊಂದಿದ್ದೀರಲ್ಲಾ.
11ಯುಸ್ತನೆನಿಸಿಕೊಳ್ಳುವ ಯೇಸು ಸಹ ನಿಮಗೆ ವಂದನೆ ಹೇಳುತ್ತಾನೆ.
4:11 ಅ. ಕೃ. 11:2
ಸುನ್ನತಿಯವರೊಳಗೆ ಇವರು ಮಾತ್ರವೇ ದೇವರ ರಾಜ್ಯಕ್ಕಾಗಿ ನನ್ನ ಜೊತೆಸೇವಕರಾಗಿದ್ದಾರೆ, ಇವರಿಂದ ನನಗೆ ಆದರಣೆ ಉಂಟಾಯಿತು.

12ಕ್ರಿಸ್ತಯೇಸುವಿನ ದಾಸನಾಗಿರುವ ನಿಮ್ಮ ಊರಿನವನಾದ
4:12 ಕೊಲೊ. 1:7; ಫಿಲೆ. 23
ಎಪಫ್ರನು ನಿಮಗೆ ವಂದನೆ ಹೇಳುತ್ತಾನೆ, ನೀವು
4:12 ಮತ್ತಾ 5:48
ಪ್ರವೀಣರಾಗಿಯೂ ದೇವರ ಎಲ್ಲಾ ಚಿತ್ತದಲ್ಲಿ ಪೂರ್ಣ ನಿಶ್ಚಯವುಳ್ಳವರಾಗಿರಬೇಕೆಂದು ನಿಮಗೋಸ್ಕರ ಯಾವಾಗಲೂ ಪ್ರಾರ್ಥನೆಯಲ್ಲಿ ಹೋರಾಡುತ್ತಾನೆ.
13ಇವನು ನಿಮಗಾಗಿಯೂ, ಲವೊದಿಕೀಯದವರಿಗಾಗಿಯೂ ಮತ್ತು ಹಿರಿಯಾಪೋಲಿಯದವರಿಗಾಗಿಯೂ ಬಹಳ ಪ್ರಯಾಸ ಪಡುತ್ತಾನೆಂದು ನಾನು ಸಾಕ್ಷಿಹೇಳುತ್ತೇನೆ. 14ಪ್ರಿಯ ವೈದ್ಯನಾಗಿರುವ
4:14 2 ತಿಮೊ. 4:11; ಅ. ರು. 16:10
ಲೂಕನು ಮತ್ತು
4:14 2 ತಿಮೊ. 4:10; ಫಿಲೆ. 24
ದೇಮನು ನಿಮಗೆ ವಂದನೆ ಹೇಳುತ್ತಾರೆ.

15ಲವೊದಿಕೀಯದಲ್ಲಿರುವ ಸಹೋದರರಿಗೂ ಮತ್ತು ನುಂಫಳಿಗೂ ಹಾಗೂ ಆಕೆಯ
4:15 ರೋಮಾ. 16:5
ಮನೆಯಲ್ಲಿ ಸೇರಿಬರುವ ಸಭೆಯವರಿಗೂ ವಂದನೆ ಹೇಳಿರಿ.

16ನಿಮ್ಮಲ್ಲಿ ಈ ಪತ್ರವನ್ನು ಓದಿದ ತರುವಾಯ ಲವೊದಿಕೀಯದವರ ಸಭೆಯಲ್ಲಿಯೂ ಇದನ್ನು ಓದಿಸಿರಿ ಮತ್ತು ನಾನು ಬರೆದ ಪತ್ರವನ್ನು ಲವೊದಿಕೀಯದಿಂದ ತರಿಸಿ ನೀವೂ ಓದಿಕೊಳ್ಳಿರಿ. 17
4:17 ಫಿಲೆ. 2
ಅರ್ಖಿಪ್ಪನಿಗೆ, <<ನೀನು ಕರ್ತನಿಂದ ಹೊಂದಿರುವ ಸೇವೆಯನ್ನು ಎಚ್ಚರವಾಗಿದ್ದು ನೆರವೇರಿಸಬೇಕೆಂದು>> ಹೇಳಿರಿ.

18
4:18 1 ಕೊರಿ. 16:21
ಇದು ಪೌಲನೆಂಬ ನಾನು ಸ್ವಂತ ಕೈಯಿಂದಲೇ ಬರೆದ ವಂದನೆ.
4:18 ಫಿಲಿ. 1:7; ಕೊಲೊ. 4:3; ಇಬ್ರಿ. 13:3
ನಾನು ಸೆರೆಯಲ್ಲಿದ್ದೇನೆಂಬುದನ್ನು ಜ್ಞಾಪಕ ಮಾಡಿಕೊಳ್ಳಿರಿ.
4:18 1 ತಿಮೊ. 6:21; 2 ತಿಮೊ. 4:22; ತೀತ. 3:15; ಇಬ್ರಿ. 13:25
ಕೃಪೆಯು ನಿಮ್ಮೊಂದಿಗಿರಲಿ.

Copyright information for KanULB