Ephesians 1

ಪೀಠಿಕೆ

1
1:1 1 ಕೊರಿ. 1:1 ನೋಡಿರಿ
ದೇವರ ಚಿತ್ತಾನುಸಾರವಾಗಿ
1:1 ಕೊರಿ. 1:1 ನೋಡಿರಿ
ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನು
1:1 ಕೆಲವು ಪ್ರತಿಗಳಲ್ಲಿ ಎಫೆಸದಲ್ಲಿರುವ ಎಂಬ ಪದ ಇಲ್ಲ; ಕೊಲೊ. 4:16 ನೋಡಿರಿ.
ಎಫೆಸದಲ್ಲಿರುವ ದೇವಜನರಿಗೂ ಕ್ರಿಸ್ತ ಯೇಸುವಿನಲ್ಲಿ
1:1 ಕೊಲೊ 1:2:
ನಂಬಿಕೆಯಿಟ್ಟಿರುವವರಿಗೂ ಬರೆಯುವುದೇನಂದರೆ,
2
1:2 ರೋಮಾ. 1:7 ನೋಡಿರಿ.
ನಮ್ಮ ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯು ಶಾಂತಿಯೂ ಉಂಟಾಗಲಿ.

ಕ್ರಿಸ್ತನಲ್ಲಿರುವ ಆತ್ಮಿಕ ಆಶೀರ್ವಾದಗಳು

3ನಮ್ಮ ಕರ್ತನಾದ ಯೇಸುಕ್ರಿಸ್ತನ
1:3 ರೋಮಾ. 15:6 ನೋಡಿರಿ.
ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರವಾಗಲಿ, ಆತನು
1:3 ಎಫೆ. 1:20; 2:6; 3:10:
ಪರಲೋಕದಲ್ಲಿನ ಸಕಲ ಆತ್ಮಿಕ ಆಶೀರ್ವಾದಗಳನ್ನು ನಮಗೆ ಕ್ರಿಸ್ತನಲ್ಲಿ ಅನುಗ್ರಹಿಸಿದ್ದಾನೆ.
4ನಾವು ಆತನ ಸನ್ನಿಧಿಯಲ್ಲಿ
1:4 ಎಫೆ. 5:27; ಕೊಲೊ. 1:22; 1 ಥೆಸ. 4:7:
ಪರಿಶುದ್ಧರೂ ದೋಷವಿಲ್ಲದವರೂ ಆಗಿರಬೇಕೆಂದು, ಜಗತ್ತು ಸೃಷ್ಟಿಯಾಗುವುದಕ್ಕಿಂತ ಮೊದಲೇ ದೇವರು
1:4 ಎಫೆ. 2:10; 2 ಥೆಸ. 2:13; 1 ಪೇತ್ರ 1:2:
ಕ್ರಿಸ್ತನಲ್ಲಿ ನಮ್ಮನ್ನು ಆರಿಸಿಕೊಂಡನು.

5
1:5-6 ಎಫೆ. 1:12,14:
ದೇವರು ತನ್ನ ದಯಾಪೂರ್ವಕವಾದ ಚಿತ್ತಕ್ಕನುಸಾರವಾಗಿ ಯೇಸು ಕ್ರಿಸ್ತನ ಮೂಲಕ
1:5-6 ರೋಮಾ. 8 15:
ನಮ್ಮನ್ನು ತನ್ನ ಮಕ್ಕಳನ್ನಾಗಿ ದತ್ತು ತೆಗೆದುಕೊಳ್ಳಲು ಪ್ರೀತಿಯಿಂದ
1:5-6 ಎಫೆ 1:9,11; ರೋಮಾ. 8:29,30.
ಮೊದಲೇ ಸಂಕಲ್ಪಮಾಡಿದ್ದನು.
6ತನ್ನ ಪ್ರಿಯನಲ್ಲಿಯೇ ನಮಗೆ ಉಚಿತವಾಗಿ ಅನುಗ್ರಹಿಸಿರುವ ತನ್ನ ಮಹಿಮೆಯುಳ್ಳ ಕೃಪೆಯ ಸ್ತುತಿಗಾಗಿ ಇದೆಲ್ಲಾವನ್ನು ಮಾಡಿದನು.

7ಯೇಸುಕ್ರಿಸ್ತನು ನಮಗೋಸ್ಕರ ಸುರಿಸಿದ
1:7 ಅ. ಕೃ. 20:28:
ರಕ್ತದ ಮೂಲಕ ನಮಗೆ ಆತನ ಕೃಪೆಯ ಐಶ್ವರ್ಯಕ್ಕನುಸಾರವಾಗಿ
1:7 ಕೊಲೊ. 1:14; ಅ. ಕೃ. 2:38:
ಪಾಪ ಕ್ಷಮಾಪಣೆಯೆಂಬ
1:7 ರೋಮಾ. 3:24; 1 ಕೊರಿ. 1:30.
ವಿಮೋಚನೆಯು ಉಂಟಾಯಿತು.
8ಈ ಕೃಪೆಯನ್ನು ಆತನು
1:8 ರೋಮಾ. 16:25:
ಎಲ್ಲಾ ಜ್ಞಾನ ವಿವೇಕಗಳೊಂದಿಗೆ ನಮಗೆ ಹೇರಳವಾಗಿ ಸುರಿಸಿದ್ದಾನೆ.

9ದೇವರು ಆತನಲ್ಲಿ ಮೊದಲೇ ನಿರ್ಣಯಿಸಿಕೊಂಡಿದ್ದ ಕೃಪೆಯುಳ್ಳ ಸಂಕಲ್ಪದ ಪ್ರಕಾರ ತನ್ನ ಚಿತ್ತದ ರಹಸ್ಯವನ್ನು ನಮಗೆ ತಿಳಿಯಪಡಿಸಿದ್ದಾನೆ. 10ಕಾಲವು ಪರಿಪೂರ್ಣವಾದಾಗ, ಆತನು
1:10 ಕೊಲೊ. 1:16, 20:
ಭೂಪರಲೋಕಗಳಲ್ಲಿರುವ ಸಮಸ್ತವನ್ನು
1:10 ಕ್ರಿಸ್ತನ ಅಧಿಪತ್ಯಕ್ಕೆ ಅಥವಾ ಪ್ರಭುತ್ವಕ್ಕೆ ಅಧೀನಪಡಿಸಬೇಕೆಂದಿದ್ದನು.
ಕ್ರಿಸ್ತನಲ್ಲಿ ಒಂದುಗೂಡಿಸುವುದೇ ಆ ಸಂಕಲ್ಪವಾಗಿತ್ತು.

11ಇದಲ್ಲದೆ ತನ್ನ ಚಿತ್ತದ ಉದ್ದೇಶಕ್ಕನುಸಾರವಾಗಿ ಎಲ್ಲಾ ಕಾರ್ಯಗಳನ್ನು ನಡೆಸುವಾತನು
1:11-12 ಎಫೆ. 1:5; 3:11; ರೋಮ. 8:28:
ತನ್ನ ಸಂಕಲ್ಪದ ಪ್ರಕಾರ ಮೊದಲೇ ನೇಮಿಸಲ್ಪಟ್ಟವರಾದ ನಮ್ಮನ್ನು ಕ್ರಿಸ್ತನಲ್ಲಿ ತನ್ನ ಸ್ವಕೀಯ ಜನರನ್ನಾಗಿ ಅರಿಸಿಕೊಂಡನು.
12ಕ್ರಿಸ್ತನಲ್ಲಿ ಮೊಟ್ಟ ಮೊದಲು ನಿರೀಕ್ಷೆಯನ್ನಿಟ್ಟ ನಾವು ಆತನ ಮಹಿಮೆಯನ್ನು ಸ್ತುತಿಸುವವರಾಗಿರಬೇಕೆಂದು ಹೀಗೆ ಮಾಡಿದನು.

13ನೀವು ಸಹ ನಿಮ್ಮ ರಕ್ಷಣಾ
1:13 ಕೊಲೊ. 1:7:
ಸುವಾರ್ತೆಯ ಸತ್ಯವಾಕ್ಯವನ್ನು ಕೇಳಿ, ಕ್ರಿಸ್ತನಲ್ಲಿ ನಂಬಿಕೆಯಿಟ್ಟು,
1:13 ಅ. ಕೃ. 1:4:
ವಾಗ್ದಾನಮಾಡಲ್ಪಟ್ಟ
1:13 ಎಫೆ. 4:30.
ಪವಿತ್ರಾತ್ಮನಿಂದ ಮುದ್ರೆಯನ್ನು ಹೊಂದಿದ್ದೀರಿ.
14
1:14 1 ಪೇತ್ರ. 2:9; ತೀತ. 2:14:
ದೇವರು ತನ್ನ ಸ್ವಕೀಯ ಜನರಿಗೆ ವಿಮೋಚನೆಯುಂಟಾಗುತ್ತದೆ ಎಂಬುದಕ್ಕೆ
1:14 ಕೆಲವು ಪ್ರತಿಗಳಲ್ಲಿ, ಪವಿತ್ರಾತ್ಮವರವು ನಮ್ಮ ಬಾಧ್ಯತೆಗೆ ಸಂಚಕಾರವಾಗಿದೆ ಎಂದು ಬರೆದಿದೆ.
ಪವಿತ್ರಾತ್ಮನು
1:14 ಅ. ಕೃ. 20:32; ಎಫೆ. 1:18; 2 ಕೊರಿ. 1:22; ಎಫೆ. 4:30.
ನಮ್ಮ ಬಾಧ್ಯತೆಗೆ ಸಂಚಕಾರವಾಗಿದ್ದಾನೆ
1:14 ಮುಂಚಿತವಾಗಿ ಕೊಟ್ಟ ಹಣ ಅಥವಾ ಕಳುಹಿಸಿದ ಸಹಾಯಕ, ಮುಂಚಿತವಾಗಿ ಗೊತ್ತುಮಾಡಿದ ವ್ಯವಸ್ಥೆ ಅಥವಾ ಜಮೀನುದಾರ.
.
1:14 ಎಫೆ. 1:6, 12:
ಈ ಕಾರಣ ದೇವರಿಗೆ ಮಹಿಮೆಯನ್ನು ಸಲ್ಲಿಸೋಣ.

ಕೃತಜ್ಞತೆಯೂ ಪ್ರಾರ್ಥನೆಯೂ

15ಹೀಗಿರಲಾಗಿ
1:15 ಕೊಲೊ. 1:4; ಫಿಲೆ. 5:
ಕರ್ತನಾದ ಯೇಸುವಿನಲ್ಲಿ ನೀವು ಇಟ್ಟಿರುವ ನಂಬಿಕೆಯನ್ನು ಮತ್ತು ದೇವಜನರೆಲ್ಲರಿಗೆ ನೀವು ತೋರಿಸುವ ಪ್ರೀತಿಯ ವಿಷಯವನ್ನು ಕೇಳಿ,
16
1:15 ಕೊಲೊ. 1:9:
ನಾನು ನಿಮಗೋಸ್ಕರ ನನ್ನ ಪ್ರಾರ್ಥನೆಗಳಲ್ಲಿ ವಿಜ್ಞಾಪನೆ ಮಾಡುವಾಗ ದೇವರಿಗೆ ಎಡೆಬಿಡದೆ ಸ್ತೋತ್ರ ಮಾಡುತ್ತೇನೆ.

17
1:17 ರೋಮಾ. 15:6:
ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ಮಹಿಮಾಸ್ವರೂಪನಾದ ತಂದೆಯೂ
1:17 ಕೊಲೊ. 1:9, 10:
ಆಗಿರುವಾತನು ತನ್ನ ವಿಷಯವಾಗಿ ಪೂರ್ಣವಾದ ತಿಳುವಳಿಕೆಯನ್ನು ಕೊಟ್ಟು, ಜ್ಞಾನ ಮತ್ತು ಪ್ರಕಟಣೆಗಳ ಆತ್ಮವನ್ನು ನಿಮಗೆ ದಯಪಾಲಿಸಬೇಕೆಂದು ಪ್ರಾರ್ಥಿಸುತ್ತೇನೆ.
18
1:18 ಅ. ಕೃ. 26:18:
ಆತನೇ ನಿಮ್ಮ ಮನೋನೇತ್ರಗಳನ್ನು ಬೆಳಗಿಸಿ, ಆತನ ಕರೆಯ ನಿರೀಕ್ಷೆಯು ಎಂಥದೆಂಬುದನ್ನೂ ಮತ್ತು
1:18 ಎಫೆ. 3:8,16, 17; 1:7; ಕೊಲೊ. 1:27;
ದೇವಜನರಲ್ಲಿರುವ ಆತನ ಸ್ವಾಸ್ಥ್ಯದ ಮಹಿಮಾತಿಶಯವು ಎಂಥದೆಂಬುದನ್ನೂ,

19ಮತ್ತು ನಂಬುವವರಾದ ನಮ್ಮಲ್ಲಿ ಕಾರ್ಯ ಸಾಧಿಸುವ ಆತನ ಪರಾಕ್ರಮ ಶಕ್ತಿಯ ಅಪಾರವಾದ ಮಹತ್ವವು ಎಂಥದೆಂಬುದನ್ನೂ ನೀವು ತಿಳಿಯುವಂತೆ ದೇವರು ನಿಮಗೆ ಅನುಗ್ರಹಿಸಲಿ. 20ಈ ಪರಾಕ್ರಮ ಶಕ್ತಿಯಿಂದಲೇ ದೇವರು ಕ್ರಿಸ್ತನನ್ನು ಮರಣದಿಂದ ಎಬ್ಬಿಸಿ,
1:20 ಎಫೆ. 4:10; ಕೊರಿ. 15:24; ಯೋಹಾ 3:31:
ಸಕಲ ರಾಜತ್ವ, ಅಧಿಕಾರ, ಅಧಿಪತ್ಯ ಮತ್ತು ಪ್ರಭುತ್ವಗಳ ಮೇಲೆಯೂ
21ಈ ಲೋಕದಲ್ಲಿ ಮಾತ್ರವಲ್ಲದೆ ಮುಂಬರುವ ಲೋಕದಲ್ಲಿಯೂ ಹೆಸರುಗೊಂಡವರೆಲ್ಲರ ಎಲ್ಲಾ
1:21 ಫಿಲಿ. 2:9
ನಾಮಗಳ ಮೇಲೆಯೂ ಪರಲೋಕದಲ್ಲಿ ಆತನನ್ನು ತನ್ನ ಬಲಗಡೆಯಲ್ಲಿ ಕೂರಿಸಿಕೊಂಡನು.

22ಇದಲ್ಲದೆ
1:22 ಕೀರ್ತ. 8:6; 1 ಕೊರಿ. 15:27
ದೇವರು ಸಮಸ್ತವನ್ನೂ ಯೇಸುಕ್ರಿಸ್ತನ ಪಾದದ ಕೆಳಗೆ ಅಧೀನಮಾಡಿ,
1:22 ಎಫೆ. 4:15; 5:23; ಕೊಲೊ. 1:18; 2:10,19.
ಸಭೆಗಾಗಿ ಎಲ್ಲಾದರ ಮೇಲೆ ಆತನನ್ನು ಶಿರಸ್ಸಾಗಿ ನೇಮಿಸಿದನು.
1:23 ಎಫೆ. 4:12,16; 5:30; ಕೊಲೊ. 1:18. 1 ಕೊರಿ. 12:27:
ಸಭೆಯು ಕ್ರಿಸ್ತನ ದೇಹವಾಗಿದೆ, ಎಲ್ಲವನ್ನೂ ಎಲ್ಲಾ ವಿಧದಲ್ಲೂ ಪೂರೈಸುವಾತನಿಂದ
1:23 ಅಥವಾ, ಅದು ಆತನನ್ನು ಪರಿಪೂರ್ಣ ಮಾಡುತ್ತದೆ; ಮತ್ತು ಆತನ ದೊರೆತನವು ಅದರ ಎಲ್ಲಾ ಭಾಗಗಳಲ್ಲಿ ಪರಿಪೂರ್ಣವಾಗಿದೆ. ಎಫೆ. 3:19; 4:10; ಕೊಲೊ. 3:11:
ಅದು ಸಂಪೂರ್ಣತೆಯುಳ್ಳದ್ದಾಗಿದೆ.

23

Copyright information for KanULB