Ephesians 5

ಪ್ರೀತಿಯಲ್ಲಿ ನಡೆಯಿರಿ

1ಆದುದರಿಂದ ದೇವರ ಪ್ರಿಯರಾದ ಮಕ್ಕಳಿಗೆ ತಕ್ಕ ಹಾಗೆ
5:1 ಎಫೆ. 4:32; ಮತ್ತಾ 5:7, 48; ಲೂಕ 6:36 ನೋಡಿರಿ.
ಆತನನ್ನು ಅನುಸರಿಸುವವರಾಗಿರಿ.
2
5:2 ರೋಮಾ. 8:37:
ಕ್ರಿಸ್ತನು ನಮ್ಮನ್ನು ಪ್ರೀತಿಸಿ
5:2 ರೋಮಾ. 4:25:
ನಮ್ಮೆಲ್ಲರಿಗೋಸ್ಕರ ತನ್ನನ್ನೇ ದೇವರಿಗೆ ಸುವಾಸನೆಯಾದ ಕಾಣಿಕೆಯಾಗಿಯೂ,
5:2 ಇಬ್ರಿ. 7:27; 9:14; 10:10, 12:
ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ
5:2 ರೋಮಾ. 14:15; ಕೊಲೊ. 3:14; ಯೋಹಾ. 13:34:
ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.

3
5:3 1 ಕೊರಿ. 6:9, 18; ಗಲಾ. 5:19:
ಜಾರತ್ವ ಮತ್ತು ಯಾವ ವಿಧವಾದ ಅಶುದ್ಧತ್ವ ಅಥವಾ ದ್ರವ್ಯಾಶೆ
5:3 ವ. 12 ನೋಡಿರಿ.
ಇವುಗಳ ಸುದ್ದಿಯಾದರೂ ನಿಮ್ಮಲ್ಲಿ ಇರಬಾರದು, ಇವುಗಳಿಗೆ ದೂರವಾಗಿರುವುದೇ ದೇವಜನರಿಗೆ ಯೋಗ್ಯವಾದದ್ದು.
4
5:4 ಎಫೆ. 4:29:
ಹೊಲಸು ಮಾತು, ಹುಚ್ಚು ಮಾತು, ಕುಚೋದ್ಯ ಇವು ಬೇಡ. ಇವು ಅಯುಕ್ತವಾಗಿವೆ. ಆದರೆ ಇವುಗಳಿಗೆ ಪ್ರತಿಯಾಗಿ
5:4 ವ. 20 ನೋಡಿರಿ.
ದೇವರಿಗೆ ಕೃತಜ್ಞತಾಸ್ತುತಿಮಾಡಿರಿ.

5
5:5 1 ಕೊರಿ. 6:9:
ಜಾರನಿಗಾಗಲಿ, ದುರಾಚಾರಿಗಾಗಲಿ,
5:5 ಕೊಲೊ. 3:5:
ವಿಗ್ರಹಾರಾಧಕನಾಗಿರುವ ಲೋಭಿಗಾಗಲಿ ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಬಾಧ್ಯತೆ ಇಲ್ಲವೆಂದು ನಿಮಗೆ ನಿಶ್ಚಯವಾಗಿ ತಿಳಿದಿರಲಿ.
6
5:6 ಕೊಲೊ. 2:8:
ಹುರುಳಿಲ್ಲದ ಮಾತುಗಳಿಂದ ಯಾರು ನಿಮ್ಮನ್ನು ವಂಚಿಸದಿರಲಿ,
5:6 ಕೊಲೊ. 3:6; ರೋಮಾ. 1:18:
ಇಂಥ ಕೃತ್ಯಗಳ ನಿಮಿತ್ತ ದೇವರ ಕೋಪವು ಆತನಿಗೆ ಅವಿಧೇಯರಾಗಿರುವವರ ಮೇಲೆ ಬರುತ್ತದೆ.
7ಆದುದರಿಂದ ನೀವು ಅವರೊಂದಿಗೆ ಪಾಲುಗಾರರಾಗಿರಬೇಡಿರಿ.

8ಏಕೆಂದರೆ
5:8 ಎಫೆ. 2:1, 2; ಅ. ಕೃ. 26:18:
ನೀವು ಹಿಂದಿನ ಕಾಲದಲ್ಲಿ ಕತ್ತಲೆಯಾಗಿದ್ದಿರಿ, ಆದರೆ ಈಗ ನೀವು ಕರ್ತನಲ್ಲಿದ್ದು ಬೆಳಕಾಗಿದ್ದೀರಿ.
5:8 ಯೆಶಾ. 2:5; ಯೋಹಾ. 12:35,36:
ಬೆಳಕಿನವರಂತೆ ನಡೆದುಕೊಳ್ಳಿರಿ.
9
5:9 ಗಲಾ. 5:22:
ಬೆಳಕಿನ ಫಲವು ಉಪಕಾರದಲ್ಲಿಯೂ ನೀತಿಯಲ್ಲಿಯೂ ಸತ್ಯದಲ್ಲಿಯೂ ಕಾಣಿಸಿಕೊಳ್ಳುತ್ತದೆ.
10
5:10 ರೋಮಾ. 12:2:
ಕರ್ತನಿಗೆ ಮೆಚ್ಚಿಕೆಯಾದದ್ದು ಏನೆಂಬುದನ್ನು ಪರಿಶೋಧಿಸಿ ತಿಳಿದುಕೊಳ್ಳಿರಿ.
11ನಿಷ್ಪ್ರಯೋಜಕವಾದ
5:11 ರೋಮಾ. 13:12; 6:21:
ಕತ್ತಲೆಯ ಕೃತ್ಯಗಳಲ್ಲಿ ಪಾಲುಗಾರರಾಗಿರದೆ ಅವುಗಳನ್ನು ಬಯಲಿಗೆಳೆದು ಖಂಡಿಸಿರಿ.
12
5:12 ವ. 3:
ಆ ಜನರು ರಹಸ್ಯವಾಗಿ ನಡಿಸುವ ಕೆಲಸಗಳನ್ನು ಕುರಿತು ಹೇಳುವುದಕ್ಕೂ ಅವಮಾನಕರವಾಗಿದೆ.

13
5:13 ಯೋಹಾ 3:20, 21; ಎಫೆ. 5:9:
ಬೆಳಕಿನಿಂದ ಎಲ್ಲಾ ಕೃತ್ಯಗಳ ನಿಜಗುಣ ಬಹಿರಂಗವಾಗುತ್ತದೆ. ಯಾಕೆಂದರೆ ಎಲ್ಲಾವನ್ನೂ
5:13 ಅಥವಾ, ಪ್ರಕಟವಾಗುವಂತದೆಲ್ಲವೂ ಬೆಳಕೇ.
ಬಹಿರಂಗಪಡಿಸುವಂಥದ್ದು ಬೆಳಕೇ.

14ಆದ್ದರಿಂದ,
5:14 ಯೆಶಾ. 51:17; 52:1; 60. 1; ಮಲಾ. 4:2; ರೋಮಾ. 13:11:
<<ನಿದ್ರೆ ಮಾಡುವವನೇ, ಎಚ್ಚರವಾಗು!
5:14 ಯೆಶಾ. 26:19:
ಸತ್ತವರನ್ನು ಬಿಟ್ಟು ಏಳು!
ಆಗ
5:14 ಲೂಕ. 1:78, 79:
ಕ್ರಿಸ್ತನು ನಿನ್ನಲ್ಲಿ ಪ್ರಕಾಶಿಸುವನು>> ಎಂದು ಹೇಳಿಯದೆಯಲ್ಲಾ.

15
5:15 ಕೊಲೊ. 4:5:
ಆದಕಾರಣ ನೀವು ನಡೆದುಕೊಳ್ಳುವ ರೀತಿಯನ್ನು ಕುರಿತು ಚೆನ್ನಾಗಿ ನೋಡಿಕೊಳ್ಳಿರಿ. ಅಜ್ಞಾನಿಗಳಾಗಿರದೆ ಜ್ಞಾನವಂತರಾಗಿರಿ.
16ಈ ದಿನಗಳು ಕೆಡುಕಿನಿಂದ ಕೂಡಿದವುಗಳಾಗಿರುವುದ್ದರಿಂದ
5:16 ಕೊಲೊ. 4:5:
ಕಾಲವನ್ನು ಸದುಪಯೋಗಪಡಿಸಿಕೊಳ್ಳಿರಿ.
17ಮತ್ತು ಬುದ್ಧಿಹೀನರಾಗಿ ನಡೆಯದೆ
5:17 ರೋಮಾ. 12:2; 1 ಥೆಸ. 4:3; 5:18:
ಕರ್ತನ ಚಿತ್ತವೇನೆಂಬುದನ್ನು ತಿಳಿದುಕೊಳ್ಳಿರಿ.

18
5:18 ಜ್ಞಾ. 20:1; 23:20,21; 1 ಕೊರಿ. 5:11:
ಮದ್ಯಪಾನ ಮಾಡಿ ಮತ್ತರಾಗಬೇಡಿರಿ. ಅದರಿಂದ ಪಟಿಂಗತನವು ಹುಟ್ಟುತ್ತದೆ. ಆದರೆ
5:18 ಲೂಕ. 1:15:
ಪವಿತ್ರಾತ್ಮಭರಿತರಾಗಿದ್ದು,
19
5:19 ಅ. ಕೃ. 16:25; ಕೊಲೊ. 3 16; ಯಾಕೋಬ 5:13; 1 ಕೊರಿ. 14:26:
ಕೀರ್ತನೆಗಳಿಂದಲೂ, ಸ್ತುತಿಪದಗಳಿಂದಲೂ, ಆತ್ಮೀಕ ಹಾಡುಗಳಿಂದಲೂ ಒಬ್ಬರಿಗೊಬ್ಬರು ಮಾತನಾಡಿಕೊಳ್ಳುತ್ತಾ ನಿಮ್ಮ ಹೃದಯಗಳಲ್ಲಿ ಕರ್ತನನ್ನು ಹಾಡಿ ಕೊಂಡಾಡಿರಿ.
20ಯಾವಾಗಲೂ ಎಲ್ಲಾ ಕಾರ್ಯಗಳಿಗಾಗಿ
5:20 ಇಬ್ರಿ. 13:15; ಕೊಲೊ. 3:17:
ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ತಂದೆಯಾದ ದೇವರಿಗೆ ಸ್ತೋತ್ರವನ್ನು ಮಾಡಿರಿ.
21ಕ್ರಿಸ್ತನಿಗೆ ಭಯಪಡುವವರಾಗಿದ್ದು,
5:21 ಫಿಲಿ. 2:3:
ಒಬ್ಬರಿಗೊಬ್ಬರು ವಿನಯವುಳ್ಳವರಾಗಿ ನಡೆದುಕೊಳ್ಳಿರಿ.

ಗಂಡಹೆಂಡತಿಯರು

(ಕೊಲೊ. 3:18—4:1)

22
5:22 ಎಫೆ. 5:22-6 9; ಕೊಲೊ. 3:18, 4:1.
ಸತಿಯರೇ, ನೀವು
5:22 ಎಫೆ. 6:5:
ಕರ್ತನಿಗೆ ಹೇಗೋ ಹಾಗೆಯೇ
5:22 ಆದಿ. 3:16:
ನಿಮ್ಮ ಗಂಡಂದಿರಿಗೆ ಅಧೀನರಾಗಿರಿ.
23
5:23 ಎಫೆ. 1:22, 23:
ಕ್ರಿಸ್ತನು ಸಭೆಗೆ ತಲೆಯಾಗಿರುವ ಪ್ರಕಾರವೇ
5:23 1 ಕೊರಿ. 11:3:
ಗಂಡನು ಹೆಂಡತಿಗೆ ತಲೆಯಾಗಿದ್ದಾನೆ.
5:23 1 ಕೊರಿ. 6:13:
ಕ್ರಿಸ್ತನು ತಾನೇ ಸಭೆಯೆಂಬ ದೇಹಕ್ಕೆ ರಕ್ಷಕನಾಗಿದ್ದಾನೆ.
24ಸಭೆಯು ಕ್ರಿಸ್ತನಿಗೆ ಹೇಗೆ ಅಧೀನವಾಗಿದೆಯೋ ಹಾಗೆಯೇ ಸ್ತ್ರೀಯರು ತಮ್ಮ ಗಂಡಂದಿರಿಗೆ ಎಲ್ಲಾ ವಿಷಯಗಳಲ್ಲಿ ಅಧೀನರಾಗಿರಬೇಕು.

25ಪತಿಯರೇ, ಕ್ರಿಸ್ತನು ಸಭೆಯನ್ನು ಪ್ರೀತಿಸಿದ ಪ್ರಕಾರವೇ
5:25 ಎಫೆ. 5:28, 33; ಕೊಲೊ. 3:19; 1 ಪೇತ್ರ 3:7:
ನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ.
26ಆತನು ಅದನ್ನು ಪಾವನಗೊಳಿಸುವುದಕ್ಕಾಗಿ
5:26 ವ. 2 ನೋಡಿರಿ.
ತನ್ನನ್ನು ತಾನೇ ಒಪ್ಪಿಸಿಕೊಟ್ಟನು.
27ಅದನ್ನು
5:27 ಗೀತೆ. 4:7:
ಕಳಂಕ ಸುಕ್ಕು ಮುಂತಾದದ್ದೊಂದೂ ಇಲ್ಲದಂತೆ ಪರಿಶುದ್ಧವೂ, ನಿರ್ದೋಷವೂ, ಮಹಿಮೆಯುಳ್ಳದ್ದೂ ಆಗಿರುವ ಸಭೆಯನ್ನಾಗಿ
5:27 2 ಕೊರಿ. 11:2; ಎಫೆ. 1:4:
ತನ್ನೆದುರಿನಲ್ಲಿ ನಿಲ್ಲಿಸಿಕೊಳ್ಳಬೇಕೆಂದು
5:27 ಯೋಹಾ. 15:3:
ವಾಕ್ಯೋಪದೇಶ ಸಹಿತವಾದ
5:27 ತೀತ. 3:5; ಪ್ರಕ. 7:14:
ಜಲಸ್ನಾನವನ್ನು ಮಾಡಿಸಿ ಶುದ್ಧಿಮಾಡಿದನು.

28ಹಾಗೆಯೇ
5:28 ಎಫೆ. 5:25, 33:
ಗಂಡದಿರು ಸಹ ತನ್ನ ಸ್ವಂತ ಶರೀರವನ್ನು ಪ್ರೀತಿಸಿಕೊಳ್ಳುವ ಪ್ರಕಾರವೇ ತಮ್ಮ ಹೆಂಡತಿಯರನ್ನು ಪ್ರೀತಿಸುವ ಹಂಗಿನವರಾಗಿದ್ದಾರೆ. ತನ್ನ ಹೆಂಡತಿಯನ್ನು ಪ್ರೀತಿಸುವವನು ತನ್ನನ್ನೇ ಪ್ರೀತಿಸಿಕೊಳ್ಳುವವನಾಗಿದ್ದಾನೆ.
29ಯಾರೂ ಎಂದೂ ಸ್ವಂತ ಶರೀರವನ್ನು ಹಗೆಮಾಡಿದ್ದಿಲ್ಲವಲ್ಲ, ಎಲ್ಲರೂ ತಮ್ಮ ಶರೀರಗಳನ್ನು ಪೋಷಿಸಿ ಪಾಲನೆ ಮಾಡುತ್ತಾರಷ್ಟೇ. 30
5:30 ಆದಿ. 2:23; 1 ಕೊರಿ. 6:15:
ಸಭೆಯೆಂಬ ದೇಹಕ್ಕೆ ನಾವು ಅಂಗಗಳಾಗಿದ್ದೇವೆ ಸಭೆಯೆಂಬ ಈ ದೇಹವನ್ನು ಕ್ರಿಸ್ತನು ಹಾಗೆಯೇ ಪೋಷಿಸಿ ಪಾಲನೆ ಮಾಡುತ್ತಾ ಬಂದಿದ್ದಾನೆ.

31<<ಈ ಕಾರಣದಿಂದ
5:31 ಆದಿ. 2, 24; ಮತ್ತಾ 19:5; ಮಾರ್ಕ. 10, 7, 8; 1 ಕೊರಿ. 6:16:
ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು, ಅವರಿಬ್ಬರೂ ಒಂದೇ ಶರೀರವಾಗಿರುವರು.>> ಎಂದು ಬರೆದದೆಯಲ್ಲಾ.
32ನಾನು ಕ್ರಿಸ್ತನಿಗೂ ಸಭೆಗೂ ಇರುವ ಸಂಬಂಧವನ್ನು ಕುರಿತು ಮಾತನಾಡುತ್ತಿದ್ದೇನೆ, ಇದುವರೆಗೆ ಗುಪ್ತವಾಗಿದ್ದ ಈ ಮರ್ಮವು ಬಹು ಗಂಭೀರವಾದದ್ದು. ಆದರೆ
5:33 ಎಫೆ. 5:25, 28:
ನಿಮ್ಮಲ್ಲಿ ಪ್ರತಿ ಪುರುಷನು ತನ್ನನ್ನು ಪ್ರೀತಿಸಿಕೊಳ್ಳುವಂತೆಯೇ ತನ್ನ ಹೆಂಡತಿಯನ್ನೂ ಪ್ರೀತಿಸಬೇಕು.
5:33 1 ಪೇತ್ರ. 3:2, 6:
ಪ್ರತಿ ಹೆಂಡತಿಯೂ ತನ್ನ ಗಂಡನಿಗೆ ಗೌವರದಿಂದ ನಡೆದುಕೊಳ್ಳಬೇಕು.

33

Copyright information for KanULB