Ephesians 6

ತಂದೆತಾಯಿಗಳೂ ಮಕ್ಕಳೂ

1
6:1 ಜ್ಞಾ. 1:8; 6:20; 23:22; ಕೊಲೊ. 3:20:
ಮಕ್ಕಳೇ, ನೀವು ಕರ್ತನಲ್ಲಿರುವವರಿಗೆ ತಕ್ಕ ಹಾಗೆ ನಿಮ್ಮ ತಂದೆತಾಯಿಗಳ ವಿಧೇಯರಾಗಿರಿ. ಇದು ನ್ಯಾಯವಾದದ್ದು.
2ವಾಗ್ದಾನಸಹಿತವಾದ ಮೊದಲನೆಯ ಆಜ್ಞೆಯನ್ನು ಕೇಳಿರಿ,
6:2 ವಿಮೋ. 20:12; ಧರ್ಮೋ. 5:16:
<<ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು,
3ಗೌರವಿಸಿದರೆ ನಿನಗೆ ಶುಭವಾಗುವುದು, ನೀನು ಭೂಮಿಯ ಮೇಲೆ ಬಹುಕಾಲ ಬದುಕುವಿ.>>

4
6:4 ಆದಿ. 18:19; ಧರ್ಮೋ. 4:9; 6:7; 11:19; ಜ್ಞಾ. 19:18; 22:6; 29:17 ಇತ್ಯಾದಿ.
ತಂದೆಗಳೇ, ನಿಮ್ಮ ಮಕ್ಕಳಿಗೆ ಕೋಪವನ್ನೆಬ್ಬಿಸದೆ, ಕರ್ತನಿಗೆ ಮೆಚ್ಚಿಗೆಯಾಗುವ ರೀತಿಯಲ್ಲಿ ಅವರನ್ನು ಶಿಸ್ತಿನಲ್ಲಿಯೂ ಉಪದೇಶದಲ್ಲಿಯೂ ಸಾಕಿ ಸಲಹಿರಿ.

ಯಜಮಾನರೂ ದಾಸರೂ

5
6:5 ಅಥವಾ. ಗುಲಾಮರೇ, ದಾಸರೇ. ಕೊಲೊ. 3:22; ತಿಮೊ. 6:1; 1 ಪೇತ್ರ. 2:18:
ದಾಸರೇ, ಈ ಲೋಕದಲ್ಲಿ ನಿಮಗೆ ಯಜಮಾನರಾಗಿರುವವರಿಗೆ
6:5 ಎಫೆ. 5:22:
ಕ್ರಿಸ್ತನಿಗೆ ವಿಧೇಯರಾಗುವ ಹಾಗೆಯೇ ಮನೋಭೀತಿಯಿಂದ ನಡುಗುವವರಾಗಿಯೂ ಸರಳಹೃದಯರಾಗಿಯೂ ವಿಧೇಯರಾಗಿರಿ.
6
6:6 ಗಲಾ. 1:10.
ಮನುಷ್ಯರನ್ನು ಮೆಚ್ಚಿಸುವವರಂತೆ ತೋರಿಕೆಗೆ ಯಜಮಾನರು ನೋಡುತ್ತಿರುವಾಗ ಮಾತ್ರ ಸೇವೆಮಾಡದೇ, ಕ್ರಿಸ್ತನ ದಾಸರಿಗೆ ತಕ್ಕ ಹಾಗೆ ದೇವರ ಚಿತ್ತವನ್ನು ಮನಃಪೂರ್ವಕವಾಗಿ ನಡಿಸಿರಿ.
7ಮನುಷ್ಯರಿಗೋಸ್ಕರವಲ್ಲ, ಕರ್ತನಿಗೋಸ್ಕರ ಸೇವೆಮಾಡುತ್ತೇವೆಂದು ಮನಃಪೂರ್ವಕವಾಗಿ ಸೇವೆಮಾಡಿರಿ. 8ಯಾಕೆಂದರೆ
6:8 ಗಲಾ. 3:28. ಕೊಲೊ. 3:11.
ಒಬ್ಬನು ದಾಸನಾಗಲಿ ಸ್ವತಂತ್ರನಾಗಲಿ
6:8 ಕೀರ್ತ. 62:12.
ತಾನು ಯಾವ ಸತ್ಕಾರ್ಯವನ್ನು ಮಾಡುತ್ತಾನೋ ಅದರ ಪ್ರತಿಫಲವನ್ನು ಕರ್ತನಿಂದ ಹೊಂದುವನೆಂಬುದನ್ನು ನೀವು ತಿಳಿದವರಾಗಿದ್ದೀರಿ.

9ಯಜಮಾನರೇ, ನಿಮ್ಮ ದಾಸರ ವಿಷಯದಲ್ಲಿ ಅದೇ ರೀತಿಯಾಗಿ ನಡೆದುಕೊಳ್ಳಿರಿ.
6:9 ಯೋಹಾ. 13:13. ಯೋಬ. 31:13-15.
ಪರಲೋಕದಲ್ಲಿ ನಿಮಗೂ ಅವರಿಗೂ ಯಜಮಾನನಾಗಿರುವಾತನು ಇದ್ದಾನೆಂತಲೂ
6:9 ರೋಮಾ. 2:11; ಗಲಾ. 2:6:
ಆತನಲ್ಲಿ ಪಕ್ಷಪಾತವಿಲ್ಲವೆಂತಲೂ ತಿಳಿದು ನಿಮ್ಮ ದಾಸರನ್ನು ಬೆದರಿಸುವ ಪದ್ಧತಿಯನ್ನು ಬಿಟ್ಟುಬಿಡಿರಿ.

ದೇವರ ಸರ್ವಾಯುಧಗಳು

10ಕಡೆಯದಾಗಿ, ನೀವು
6:10 2 ತಿಮೊ. 2:1; 1 ಯೊಹಾ. 2:14; ಎಫೆ. 3:16:
ಕರ್ತನಲ್ಲಿಯೂ
6:10 ಎಫೆ. 1:19:
ಆತನ ಅತ್ಯಧಿಕವಾದ ಶಕ್ತಿಯಲ್ಲಿಯೂ ಬಲಗೊಳ್ಳಿರಿ.
11ಸೈತಾನನ ತಂತ್ರೋಪಾಯಗಳನ್ನು ನೀವು ಎದುರಿಸಿ ನಿಲ್ಲುವುದಕ್ಕೆ ಶಕ್ತರಾಗುವಂತೆ ದೇವರು ದಯಪಾಲಿಸುವ
6:11 ಎಫೆ. 6:13; 2 ಕೊರಿ. 10:4:
ಸರ್ವಾಯುಧಗಳನ್ನು
6:11 ವ. 14. ರೋಮಾ. 13:12:
ಧರಿಸಿಕೊಳ್ಳಿರಿ.

12ನಮಗೆ ಹೋರಾಟವಿರುವುದು ಮನುಷ್ಯಮಾತ್ರದವರ ಸಂಗಡವಲ್ಲ.
6:12 ಎಫೆ. 1:21:
ರಾಜತ್ವಗಳ ಮೇಲೆಯೂ, ಅಧಿಕಾರಿಗಳ ಮೇಲೆಯೂ,
6:12 ಲೂಕ. 22:53; ಕೊಲೊ. 1:13:
ಈ ಅಂಧಕಾರದ
6:12 ಎಫೆ. 2:2:
ಲೋಕಾಧಿಪತಿಗಳ ಮೇಲೆಯೂ,
6:12 ಎಫೆ. 3:10:
ಆಕಾಶ ಮಂಡಲಗಳಲ್ಲಿರುವ ದುರಾತ್ಮಗಳ ಸೇನೆಯ ಮೇಲೆಯೂ ನಾವು ಹೋರಾಡುವವರಾಗಿದ್ದೇವೆ.
13ಆದ್ದರಿಂದ ಆ ದುಷ್ಟ ದಿನದಲ್ಲಿ ವೈರಿಗಳನ್ನು ಎದುರಿಸುವುದಕ್ಕೂ ಮಾಡಬೇಕಾದದ್ದೆಲ್ಲವನ್ನು ಮಾಡಿ ದೃಢವಾಗಿ ನಿಲ್ಲುವುದಕ್ಕೂ ಶಕ್ತರಾಗುವಂತೆ ದೇವರು ದಯಪಾಲಿಸುವ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ.

14
6:14 1 ಪೇತ್ರ. 1:13; ಯೆಶಾ. 11:5
ಸತ್ಯವೆಂಬ ನಡುಕಟ್ಟನ್ನು ಸೊಂಟಕ್ಕೆ ಕಟ್ಟಿಕೊಂಡು,
6:14 ಯೆಶಾ. 59:17; 1 ಥೆಸ. 5:8; ಯೆಶಾ. 61:10; 2 ಕೊರಿ. 6:7:
ನೀತಿಯೆಂಬ ಎದೆಕವಚವನ್ನು ಧರಿಸಿಕೊಂಡು,
15
6:15 ಯೆಶಾ. 52:7; ರೋಮಾ. 10:15:
ಸಮಾಧಾನದ ಸುವಾರ್ತೆಯನ್ನು ಪ್ರಚುರಪಡಿಸುವುದಕ್ಕೆ ಸಿದ್ಧ ಮನಸ್ಸೆಂಬ ಕೆರಗಳನ್ನು ಮೆಟ್ಟಿಕೊಂಡು ನಿಲ್ಲಿರಿ.
16ಎಲ್ಲಾದಕ್ಕಿಂತ ಹೆಚ್ಚಾಗಿ
6:16 1 ಯೊಹಾ. 5:4:
ನಂಬಿಕೆಯೆಂಬ ಗುರಾಣಿಯನ್ನು ಹಿಡಿದುಕೊಳ್ಳಿರಿ. ಅದರಿಂದ ನೀವು
6:16 ಮತ್ತಾ 13:19; 1 ಯೊಹಾ. 2:14:
ಕೆಡುಕನ ಅಗ್ನಿಬಾಣಗಳನ್ನೆಲ್ಲಾ ನಂದಿಸುವುದಕ್ಕೆ ಶಕ್ತರಾಗುವಿರಿ.

17ಇದಲ್ಲದೆ
6:17 ಯೆಶಾ. 59:17; 1 ಥೆಸ. 5:8:
ರಕ್ಷಣೆಯೆಂಬ ಶಿರಸ್ತ್ರಾಣವನ್ನು ಇಟ್ಟುಕೊಂಡು
6:17 ಇಬ್ರಿ. 4:12; ಯೆಶಾ. 11:4; 49:2:
ಪವಿತ್ರಾತ್ಮನು ಕೊಡುವ ದೇವರ ವಾಕ್ಯವೆಂಬ ಕತ್ತಿಯನ್ನು ಹಿಡಿದುಕೊಳ್ಳಿರಿ.
18ನೀವು
6:18 ಯೂದ. 20:
ಪವಿತ್ರಾತ್ಮಪ್ರೇರಿತರಾಗಿ
6:18 ಲೂಕ. 18:1:
ಎಲ್ಲಾ ಸಮಯಗಳಲ್ಲಿ
6:18 ಕೊಲೊ. 4:2-4:
ಸಕಲವಿಧವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಗಳಿಂದಲೂ ದೇವರನ್ನು ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ದೇವಜನರೆಲ್ಲರ ವಿಷಯದಲ್ಲಿ
6:18 1 ತಿಮೊ. 2:1:
ವಿಜ್ಞಾಪನೆಮಾಡುತ್ತಾ
6:18 ಮಾರ್ಕ. 13:33:
ಎಚ್ಚರವಾಗಿರಿ. ನನಗಾಗಿಯೂ ಪ್ರಾರ್ಥನೆ ಮಾಡಿರಿ.

19ನಾನು ಮಾತನಾಡಲು ಬಾಯಿ ತೆರೆಯುವಾಗ ಪೂರ್ವಕಾಲದಲ್ಲಿ ಗುಪ್ತವಾಗಿದ್ದ
6:19 ಎಫೆ. 4:3.
ಸುವಾರ್ತಾಸತ್ಯಗಳನ್ನು ಭಯವಿಲ್ಲದೆ ತಿಳಿಸುವುದಕ್ಕೆ ಬೇಕಾದ ಮಾತುಗಳನ್ನು ದೇವರು
6:19 ಕೊಲೊ. 4:3; 1 ಥೆಸ. 5:25; 2 ಥೆಸ. 3:1.
ನನಗೆ ಅನುಗ್ರಹಿಸಬೇಕೆಂದು ಪ್ರಾರ್ಥಿಸಿರಿ.
20ಆ ಸುವಾರ್ತೆಯ ನಿಮಿತ್ತವಾಗಿ
6:20 2 ಕೊರಿ. 5:20.
ರಾಯಭಾರಿಯಾದ ನಾನು ಸೆರೆಮನೆಯಲ್ಲಿ ಬಿದ್ದಿದ್ದೇನಲ್ಲಾ. ಅದರ ವಿಷಯದಲ್ಲಿ ನಾನು ಮಾತನಾಡಬೇಕಾದ
6:20 ಅ. ಕೃ. 28:20.
ಹಾಗೆಯೇ ಧೈರ್ಯವಾಗಿ ನಾನು ಮಾತನಾಡುವಂತೆ ನನಗಾಗಿ ಬೇಡಿಕೊಳ್ಳಿರಿ.

ಕಡೆ ಮಾತುಗಳು

21
6:21 ಕೊಲೊ. 4:7-9:
ನನ್ನ ವಿಷಯವನ್ನೂ ನನ್ನ ಕೆಲಸಕಾರ್ಯಗಳನ್ನೂ ನಿಮಗೆ ಗೊತ್ತಾಗುವ ಹಾಗೆ ಪ್ರಿಯ ಸಹೋದರನೂ ಕರ್ತನಲ್ಲಿ ನಂಬಿಗಸ್ತ ಸೇವಕನಾಗಿರುವ
6:21 ಅ. ಕೃ. 20:4. 2 ತಿಮೊ. 4:12; ತೀತ. 3:12:
ತುಖಿಕನು ನಿಮಗೆ ಎಲ್ಲವನ್ನೂ ತಿಳಿಸಿಕೊಡುವನು.
22ನೀವು ನಮ್ಮ ಸಂಗತಿಗಳನ್ನು ತಿಳಿದುಕೊಳ್ಳುವಂತೆಯೂ, ಅವನು ನಿಮ್ಮ ಹೃದಯಗಳನ್ನು ಸಂತೈಸುವಂತೆಯೂ ಅವನನ್ನು ನಿಮ್ಮ ಬಳಿಗೆ ಕಳುಹಿಸಿದ್ದೇನೆ.

23ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ
6:23 ಗಲಾ. 6:16; ಥೆಸ. 3:16:
ಶಾಂತಿಯೂ, ನಂಬಿಕೆಯಿಂದ ಕೂಡಿದ ಪ್ರೀತಿಯೂ ಸಹೋದರರೆಲ್ಲರಿಗೆ ಉಂಟಾಗಲಿ.
24ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ನಿರಂತರವಾಗಿ
6:24 1 ಕೊರಿ. 16:22
ಪ್ರೀತಿಸುವವರೆಲ್ಲರ ಮೇಲೆ ದೇವರ ಕೃಪೆಯು ಇರಲಿ.

Copyright information for KanULB