Galatians 4

1ಆದರೆ ನಾನು ಹೇಳುವುದೇನಂದರೆ, ವಾರಸುದಾರನು, ತಾನು ಆಸ್ತಿಗೆಲ್ಲಾ ಒಡೆಯನಾಗಿದ್ದರೂ ಬಾಲಕನಾಗಿರುವ ತನಕ ದಾಸನಂತೆಯೇ ಇರುವನು. 2ತಂದೆಯು ಗೊತ್ತುಮಾಡಿದ ಸಮಯದವರೆಗೂ ಪಾಲಕರ ಮತ್ತು ಕಾರ್ಯನಿರ್ವಾಹಕರ ಅಧೀನದಲ್ಲಿರುವನು.

3ಹಾಗೆಯೇ ನಾವು ಸಹ ಬಾಲಕರಾಗಿದ್ದಾಗ
4:3 ಕೊಲೊ. 2:8,20
ಲೋಕದ ಮೂಲತತ್ವಗಳಿಗೆ ಅಧೀನರಾಗಿದ್ದೆವು.
4
This verse is empty because in this translation its contents have been moved to form part of verse Gal 4:5.
In this translation, this verse contains text which in some other translations appears in verses Gal 4:4-Gal 4:5.
5ಆದರೆ
4:4-5 ಮಾರ್ಕ. 1:15
ಸೂಕ್ತಸಮಯ ಬಂದಾಗ ದೇವರು ತನ್ನ ಮಗನನ್ನು ಕಳುಹಿಸಿಕೊಟ್ಟನು. ಧರ್ಮಶಾಸ್ತ್ರಕ್ಕೆ ಅಧೀನರಾದವರನ್ನು
4:4-5 ಗಲಾ. 3:13
ಬಿಡಿಸಬೇಕೆಂತಲೂ,
4:4-5 ಗಲಾ. 3:26; ರೋಮಾ. 8:16
ಪುತ್ರರ ಬಾಧ್ಯತೆಯ ಪದವಿಯನ್ನು ನಮಗೆ ದೊರಕಿಸಿಕೊಡಬೇಕೆಂತಲೂ ಆತನು
4:4-5 ಫಿಲಿ. 2:7, ಯೋಹಾ. 1:14
ಸ್ತ್ರೀಯಲ್ಲಿ ಹುಟ್ಟಿದವನಾಗಿಯೂ,
4:4-5 ಲೂಕ. 2:21-22,27
ಧರ್ಮಶಾಸ್ತ್ರಾಧೀನನಾಗಿಯೂ ಬಂದನು.

6ನೀವು ಪುತ್ರರಾಗಿರುವುದರಿಂದ ದೇವರು, <<ಅಪ್ಪಾ ತಂದೆಯೇ>> ಎಂದು ಕೂಗುವ
4:6 ಅ. ಕೃ. 16:7, ರೋಮಾ. 5:5; 8:9,15. 2 ಕೊರಿ. 3:17
ತನ್ನ ಮಗನ ಆತ್ಮನನ್ನು ನಮ್ಮ ಹೃದಯಗಳಲ್ಲಿ ಕಳುಹಿಸಿಕೊಟ್ಟನು.
7ಹೀಗಿರುವಲ್ಲಿ ಇನ್ನು ನೀನು ಸೇವಕನಲ್ಲ, ಮಗನಾಗಿದ್ದೀ. ಮಗನೆಂದ ಮೇಲೆ
4:7 ಗಲಾ. 3:29
ದೇವರ ಮೂಲಕ ವಾರಸುದಾರನು ಆಗಿದ್ದೀ.

ಗಲಾತ್ಯದವರ ಕುರಿತು ಪೌಲನ ಕಾಳಜಿ

8ಹಿಂದೆ
4:8 1 ಕೊರಿ. 1:21, 2 ಥೆಸ. 1:8
ನೀವು ದೇವರನ್ನು ಅರಿಯದೆ, ಸ್ವಾಭಾವಿಕವಾಗಿ
4:8 ಎಫೆ. 2:11-12, 1 ಥೆಸ. 1:9
ದೇವರಲ್ಲದವರುಗಳಿಗೆ ದಾಸರಾಗಿದ್ದೀರಿ.
9ಈಗಲಾದರೋ ನೀವು ದೇವರನ್ನು ತಿಳಿದುಕೊಂಡಿದ್ದೀರಿ. ವಿಶೇಷವಾಗಿ
4:9 1 ಕೊರಿ. 8:3
ದೇವರು ನಿಮ್ಮನ್ನು ತಿಳಿದುಕೊಂಡಿದ್ದಾನೆ. ಹೀಗಿರಲಾಗಿ ನೀವು ಬಲವಿಲ್ಲದ,
4:9 ರೋಮಾ. 8:3, ಇಬ್ರಿ. 7:18
ಕೆಲಸಕ್ಕೆ ಬಾರದ, ದರಿದ್ರವಾದ ಮೂಲತತ್ವಗಳಿಗೆ
4:9 ಗಲಾ. 3:3
ಹಿಂತಿರುಗಿ ಅದಕ್ಕೆ ದಾಸರಾಗುವುದಕ್ಕೆ ಏಕೆ ಬಯಸುತ್ತೀರಿ?

10
4:10 ರೋಮಾ. 14:5, ಕೊಲೊ. 2:16
ನೀವು ಆಯಾ ದಿನಗಳನ್ನೂ, ತಿಂಗಳುಗಳನ್ನೂ, ಕಾಲಗಳನ್ನೂ, ಸಂವತ್ಸರಗಳನ್ನೂ ನಿಷ್ಠೆಯಿಂದ ಆಚರಿಸಿದ್ದೀರಿ.
11
4:11 ಗಲಾ. 2:2, 5:2-4, 1 ಥೆಸ. 3:5
ನಾನು ನಿಮಗೋಸ್ಕರ ಪ್ರಯಾಸಪಟ್ಟದ್ದು ನಿಷ್ಫಲವಾಯಿತೋ ಏನೋ ಎಂದು ನಿಮ್ಮ ಕುರಿತು ಭಯಪಡುತ್ತೇನೆ.

12ಸಹೋದರರೇ, ನಾನು ನಿಮ್ಮಂತೆ ಆದಹಾಗೆ ನೀವು ನನ್ನಂತೆ ಹಾಗೆ ಆಗಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ನೀವು ನನಗೇನೂ ಅನ್ಯಾಯ ಮಾಡಲಿಲ್ಲ. 13ನಾನು ದೈಹಿಕವಾಗಿ ಅಸ್ವಸ್ಥನಾಗಿದ್ದುದರಿಂದ ನಿಮ್ಮಲ್ಲಿದ್ದು ಮೊದಲನೆಯ ಬಾರಿಗೆ ನಿಮಗೆ ಸುವಾರ್ತೆ ಸಾರಿದ್ದನ್ನು ನೀವು ಬಲ್ಲಿರಿ. 14ನನ್ನ ದೇಹಸ್ಥಿತಿಯಿಂದ ನಿಮಗೆ ಸಮಸ್ಯೆಗಳು ಬಂದಾಗ್ಯೂ ಕೂಡ, ನೀವು ನನ್ನನ್ನು ಹೀನೈಸಲಿಲ್ಲ, ತಿರಸ್ಕರಿಸಲಿಲ್ಲ. ನನ್ನನ್ನು
4:14 2 ಕೊರಿ. 5:20
ದೇವದೂತನಂತೆ,
4:14 ಮತ್ತಾ 10:40
ಕ್ರಿಸ್ತ ಯೇಸುವಿನಂತೆ ಸೇರಿಸಿಕೊಂಡಿದ್ದೀರಿ.

15ಆಗ ನಮಗೆ ಶುಭವಾಯಿತೆಂದು ನೀವು ಅಂದುಕೊಂಡಿರಲ್ಲಾ, ಆ ನಿಮ್ಮ ಶುಭವು ಎಲ್ಲಿ ಹೋಯಿತು? ಸಾಧ್ಯವಾಗಿದ್ದರೆ ನಿಮ್ಮ ಕಣ್ಣುಗಳನ್ನಾದರೂ ಕಿತ್ತು ನನಗೆ ಕೊಡುತ್ತಿದ್ದಿರೆಂದು ನಿಮ್ಮನ್ನು ಕುರಿತು ಸಾಕ್ಷಿ ಹೇಳುತ್ತೇನೆ. 16ಹೀಗಿರಲಾಗಿ ನಾನು ನಿಮಗೆ ಸತ್ಯವನ್ನು ಹೇಳುವುದರಿಂದ ನಿಮಗೆ ಶತ್ರುವಾಗಿದ್ದೇನೋ?

17ಅವರು ನಿಮ್ಮನ್ನು ಮೆಚ್ಚಿಸುವುದಕ್ಕೆ ಆಸಕ್ತಿಯನ್ನು ತೋರಿಸುತ್ತಿರುವುದು ಒಳಿತಾಗಿ ಅಲ್ಲ, ನೀವು ಅವರಿಗಾಗಿ ಆಸಕ್ತಿಯನ್ನು ತೋರಿಸಬೇಕೆಂದು ಅವರು ನಿಮ್ಮನ್ನು ಹೊರಗೆ ತಳ್ಳಿ ಬಿಡಲು ಬಯಸುತ್ತಿದ್ದಾರೆ. 18ನಾನು ನಿಮ್ಮ ಸಂಗಡ ಇರುವಾಗ ಮಾತ್ರವಲ್ಲದೆ ಯಾವಾಗಲೂ ಒಳ್ಳೆಯ ವಿಷಯಕ್ಕಾಗಿ ನೀವು ಆಸಕ್ತಿಯನ್ನು ತೋರಿಸುವುದು ಒಳ್ಳೆಯದೇ.

19
4:19 1 ಕೊರಿ. 4:15, ಫಿಲೆ. 10 ನೋಡಿರಿ
ನನ್ನ ಪ್ರಿಯರಾದ ಮಕ್ಕಳೇ,
4:19 ರೋಮಾ. 8:10, 2 ಕೊರಿ. 13:5
ಕ್ರಿಸ್ತನ ಸಾರೂಪ್ಯವು ನಿಮ್ಮಲ್ಲಿ ಉಂಟಾಗುವ ತನಕ ನಾನು ನಿಮಗಾಗಿ ಪ್ರಸವವೇದನೆ ಪಡುತ್ತಿರುವೆನು.
20ನಿಮ್ಮ ವಿಷಯದಲ್ಲಿ ಏನು ಮಾಡಬೇಕೋ ನನಗೆ ತೋಚುತ್ತಿಲ್ಲ. ಬಹುಶಃ ನೇರವಾಗಿ ನಿಮ್ಮ ಬಳಿಗೆ ಬಂದು, ನಿಮ್ಮ ಮಧ್ಯದಲ್ಲೇ ಇದ್ದು ನನ್ನ ಮಾತಿನ ವೈಖರಿಯನ್ನು ಬದಲಾಯಿಸಿದ್ದರೆ ಚೆನ್ನಾಗಿರುತ್ತಿತ್ತೇನೋ!

ಸಾರಳ ಮತ್ತು ಹಾಗಾರಳ ದೃಷ್ಟಾಂತ

21ಧರ್ಮಶಾಸ್ತ್ರಕ್ಕೆ ಅಧೀನರಾಗಿರುವುದಕ್ಕೆ ಬಯಸುವವರೇ, ಧರ್ಮಶಾಸ್ತ್ರವು ಏನು ಹೇಳುತ್ತದೆಂದು ನಿಮಗೆ ತಿಳಿದಿಲ್ಲವೋ? ನನಗೆ ತಿಳಿಯಪಡಿಸಿರಿ. 22ಅದರಲ್ಲಿ ಬರೆದಿರುವುದೇನಂದರೆ, ಅಬ್ರಹಾಮನಿಗೆ ಇಬ್ಬರು ಮಕ್ಕಳಿದ್ದರು.
4:22 ಆದಿ. 16:5,15
ಒಬ್ಬನು ದಾಸಿಯಲ್ಲಿ ಹುಟ್ಟಿದವನು,
4:22 ಆದಿ. 21:2
ಮತ್ತೊಬ್ಬನು ಸ್ವತಂತ್ರಳಾದವಳಲ್ಲಿ ಹುಟ್ಟಿದವನು.
23
4:23 ರೋಮಾ. 9:7-8
ದಾಸಿಯ ಮಗನು ಶರೀರಕ್ಕನುಸಾರವಾಗಿ ಹುಟ್ಟಿದವನು,
4:23 ವ. 28, ಆದಿ. 17:16-19, 18:10,14, ಇಬ್ರಿ. 11:11
ಸ್ವತಂತ್ರಳಾದವಳ ಮಗನಾದರೋ ವಾಗ್ದಾನದ ಮೂಲಕ ಹುಟ್ಟಿದವನು.

24ಈ ಸಂಗತಿಗಳು ಹೋಲಿಕೆಗಳಾಗಿವೆ. ಹೇಗೆಂದರೆ ಆ ಇಬ್ಬರು ಸ್ತ್ರೀಯರು ಎರಡು ಒಡಂಬಡಿಕೆಗಳೇ,
4:24 ಧರ್ಮೋ. 33:2
ಒಂದು ಒಡಂಬಡಿಕೆಯು ಸೀನಾಯಿ ಪರ್ವತದಿಂದ ಉಂಟಾಗಿ ದಾಸತ್ವದಲ್ಲಿರಬೇಕಾದ ಮಕ್ಕಳನ್ನು ಹೆರುವಂಥದು, ಅದೇ ಹಾಗರಳು.
25ಹಾಗರಳು ಅಂದರೆ ಅರಬಸ್ಥಾನದಲ್ಲಿರುವ ಸೀನಾಯಿ ಪರ್ವತವನ್ನು ಸೂಚಿಸುವಂತಹದ್ದು ಈಗಿನ ಯೆರೂಸಲೇಮಿಗೆ ಎಂಬುವಳಿಗೆ ಹೋಲಿಕೆಯಾಗಿದ್ದಾಳೆ, ಏಕೆಂದರೆ ಆಕೆಯು ತನ್ನ ಮಕ್ಕಳೊಂದಿಗೆ ಈಗ ದಾಸತ್ವದಲ್ಲಿದ್ದಾಳೆ.

26ಆದರೆ
4:26 ಇಬ್ರಿ. 12:22, ಪ್ರಕ. 3:12, 21:2,10
ಮೇಲಣ ಯೆರೂಸಲೇಮ್ ಎಂಬವಳು ಸ್ವತಂತ್ರಳು, ಇವಳೇ ನಮಗೆ ತಾಯಿ.

27
4:27 ಯೆಶಾ. 54:1
<<ಹೆರದ ಬಂಜೆಯೇ, ಆನಂದಿಸು.
ಪ್ರಸವವೇದನೆಯಿಲ್ಲದವಳೇ, ಹರ್ಷೋದ್ಗಾರಮಾಡು,
ಗಂಡನುಳ್ಳವಳಿಗಿಂತ ಗಂಡಬಿಟ್ಟವಳಿಗೆ ಮಕ್ಕಳು ಹೆಚ್ಚು>>

ಎಂದು ಬರೆದಿದೆಯಲ್ಲಾ.

28ಸಹೋದರರೇ,
4:28 ಗಲಾ. 4:23, ರೋಮಾ. 9:8
ನಾವು ಇಸಾಕನಂತೆ ವಾಗ್ದಾನದ ಫಲವಾಗಿ ಹುಟ್ಟಿದ ಮಕ್ಕಳಾಗಿದ್ದೇವೆ.
29ಆದರೆ ಪೂರ್ವದಲ್ಲಿ ಶಾರೀರಿಕವಾಗಿ ಹುಟ್ಟಿದವನು, ದೇವರಾತ್ಮಬಲದಿಂದ ಹುಟ್ಟಿದವನನ್ನು
4:29 ಆದಿ. 21:9, ಗಲಾ. 5:11
ಹಿಂಸೆಪಡಿಸಿದಂತೆಯೇ ಈಗಲೂ ಆಗುತ್ತಿದೆ.

30ಆದರೆ ದೇವರ ವಾಕ್ಯವು ಏನು ಹೇಳುತ್ತದೆ?
4:30 ಆದಿ. 21:10
<<ದಾಸಿಯನ್ನೂ ಅವಳ ಮಗನನ್ನೂ ಹೊರಗೆ ಹಾಕು. ದಾಸಿಯ ಮಗನು
4:30 ಸ್ವತಂತ್ರಳು
ಸ್ವತಂತ್ರಳ ಮಗನೊಂದಿಗೆ ಎಷ್ಟು ಮಾತ್ರಕ್ಕೂ ಬಾಧ್ಯಸ್ಥನಾಗಬಾರದು>> ಎಂದು ಹೇಳುತ್ತದೆ.
ಸಹೋದರರೇ, ನಾವು ದಾಸಿಯ ಮಕ್ಕಳಲ್ಲ,
4:31 1 ಪೇತ್ರ. 3:6
ಸ್ವತಂತ್ರಳಾದವಳ ಮಕ್ಕಳೇ ಎಂದು ತಿಳಿದುಕೊಳ್ಳಿರಿ.

31

Copyright information for KanULB