Galatians 5

ಕ್ರೈಸ್ತ ಸ್ವಾತಂತ್ರ್ಯ

1ಕ್ರಿಸ್ತನು ನಮ್ಮನ್ನು
5:1 ಗಲಾ. 2:4; 5:13
ಸ್ವತಂತ್ರರಾಗಿರಿಸಬೇಕೆಂದೇ ನಮಗೆ ಬಿಡುಗಡೆ ಮಾಡಿದನು. ಅದರಲ್ಲಿ ಸ್ಥಿರವಾಗಿ ನಿಲ್ಲಿರಿ,
5:1 ಅ. ಕೃ. 15:10
ದಾಸತ್ವದ ನೊಗದಲ್ಲಿ ತಿರುಗಿ ಸಿಕ್ಕಿಕೊಳ್ಳಬೇಡಿರಿ.

2ನೋಡಿರಿ, ಪೌಲನೆಂಬ ನಾನು ನಿಮಗೆ ಹೇಳುತ್ತೇನೆ,
5:2 ಅ. ಕೃ. 15:1; 1 ಕೊರಿ. 7:18; ಗಲಾ. 5:3-11
ನೀವು ಸುನ್ನತಿಮಾಡಿಸಿಕೊಂಡರೆ ಕ್ರಿಸ್ತನಿಂದ ನಿಮಗೆ ಏನೂ ಪ್ರಯೋಜನವಿಲ್ಲ.

3
5:3 ರೋಮಾ. 2:25
ಸುನ್ನತಿ ಮಾಡಿಸಿಕೊಳ್ಳುವ ಪ್ರತಿಯೊಬ್ಬನಿಗೆ, ನೀನು ಧರ್ಮಶಾಸ್ತ್ರದಲ್ಲಿ ಹೇಳಿರುವುದನ್ನೆಲ್ಲಾ ಮಾಡುವ ಹಂಗಿನಲ್ಲಿದ್ದೀ ಎಂದು ತಿರುಗಿ ಪ್ರಮಾಣವಾಗಿ ಹೇಳುತ್ತೇನೆ.
4
5:4 ಗಲಾ. 2:21; 3:10; ರೋಮಾ. 9:31,32
ನಿಮ್ಮಲ್ಲಿ ಯಾರಾರು ಧರ್ಮಶಾಸ್ತ್ರದಿಂದ ನೀತಿವಂತರಾಗಬೇಕೆಂದು ಬಯಸಿದ್ದೀರೋ ಅವರು ಕ್ರಿಸ್ತನಿಂದ ಅಗಲಿಹೋದವರಾಗಿದ್ದೀರಿ. ಕೃಪೆಯಿಂದ ಬಿದ್ದಹೋದವರಾಗಿದ್ದೀರಿ.

5ನಾವಾದರೋ ದೇವರಾತ್ಮನ ಮೂಲಕ ನಂಬಿಕೆಯಿಂದ ನೀತಿವಂತರಾಗುತ್ತೇವೆಂಬುವ
5:5 ರೋಮಾ. 8:23,25
ನಿರೀಕ್ಷೆ ಸಫಲವಾಗುವುದೆಂದು ಎದುರುನೋಡುವವರಾಗಿದ್ದೇವೆ.
6ಕ್ರಿಸ್ತ ಯೇಸುವಿನಲ್ಲಿರುವವರಿಗೆ
5:6 ಗಲಾ. 6:15; 1 ಕೊರಿ. 7:19; ಕೊಲೊ. 3:11; ಗಲಾ. 3:28
ಸುನ್ನತಿಯಾದರೂ ಆಗದಿದ್ದರೂ ಪ್ರಯೋಜನವಿಲ್ಲ, ಆದರೆ
5:6 ಎಫೆ. 6:23; 1 ಥೆಸ. 1:3; ಯಾಕೋಬ 2:18,20,22
ಅವರಲ್ಲಿ ಪ್ರೀತಿಯಿಂದ ಹೊರಹೊಮ್ಮುವ ನಂಬಿಕೆಯೇ ಪ್ರಯೋಜವಾಗಿದೆ.
7ಚೆನ್ನಾಗಿ ಓಡುತ್ತಾ ಇದ್ದೀರಿ. ಆದರೆ ನೀವು ಸತ್ಯವನ್ನು ಅನುಸರಿಸದಂತೆ ನಿಮ್ಮನ್ನು ತಡೆದವರು ಯಾರು? 8ಈ ಮನವೊಲಿಕೆಯು ನಿಮ್ಮನ್ನು ಕರೆದಾತನಿಂದ ಹುಟ್ಟಿದ್ದಲ್ಲ.

9
5:9 1 ಕೊರಿ. 5:6
ಸ್ವಲ್ಪ ಹುಳಿಯಿಂದ ಕಣಕವೆಲ್ಲಾ ಹುಳಿಯಾಗುವುದು.
10ನಿಮ್ಮಲ್ಲಿ ಭಿನ್ನಾಭಿಪ್ರಾಯಗಳು ಉಂಟಾಗುವುದಿಲ್ಲವೆಂದು ಕರ್ತನಲ್ಲಿ ನಿಮ್ಮನ್ನು ಕುರಿತಾಗಿ ನನಗೆ ಭರವಸೆ ಉಂಟು.
5:10 ಗಲಾ. 1:; 5:12
ನಿಮ್ಮಲ್ಲಿ ಬೇಧವನ್ನು ಹುಟ್ಟಿಸುವವನು ಯಾವನಾದರೂ ಸರಿಯೇ, ಅವನು ದಂಡನೆಯನ್ನು ಅನುಭವಿಸುವನು.

11ಸಹೋದರರೇ, ನಾನಾದರೋ ಸುನ್ನತಿಯಾಗಬೇಕೆಂದು ಇನ್ನೂ ಸಾರುವವನಾಗಿದ್ದರೆ
5:11 ಗಲಾ. 4:29; 6:12
ನನಗೆ ಹಿಂಸೆಯಾಗುವುದಾದರೂ ಯಾಕೆ?
5:11 1 ಕೊರಿ. 1:23
ಹಾಗಿದ್ದ ಪಕ್ಷದಲ್ಲಿ ಶಿಲುಬೆಯ ದೆಸೆಯಿಂದ ಉಂಟಾಗುವ ತೊಂದರೆಗಳು ನೀಗಿ ಹೋಯಿತಲ್ಲಾ?
12
5:12 ಗಲಾ. 5:10, 2:4
ನಿಮ್ಮನ್ನು ಕಳವಳಪಡಿಸುವವರು ತಮ್ಮನೇ ತಾವು
5:12 ಕಸಿ ಮಾಡುವುದು
ಅಂಗಚ್ಛೇದನೆಯನ್ನಾದರೂ ಮಾಡಿಕೊಂಡರೆ ಚೆನ್ನಾಗಿತ್ತು.

13ಸಹೋದರರೇ,
5:13 ಗಲಾ. 5:1
ನೀವು ಸ್ವತಂತ್ರರಾಗಿರಬೇಕೆಂದು ದೇವರು ನಿಮ್ಮನ್ನು ಕರೆದನು. ಆದರೆ
5:13 1 ಪೇತ್ರ. 2:1; ಯೂದ. 4
ನಿಮಗಿರುವ ಸ್ವಾತಂತ್ರ್ಯವನ್ನು ಶರೀರಾಧೀನ ಸ್ವಭಾವಕ್ಕೆ ಆಸ್ಪದವಾಗಿ ಬಳಸದೆ,
5:13 1 ಕೊರಿ. 9:19
ಪ್ರೀತಿಯಿಂದ ಒಬ್ಬರಿಗೊಬ್ಬರು ಸೇವೆ ಮಾಡಿರಿ.
14<<ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸು>> ಎಂಬ ಒಂದೇ ಮಾತಿನಲ್ಲಿ ಧರ್ಮಶಾಸ್ತ್ರವೆಲ್ಲಾ ಅಡಗಿದೆ. 15ಆದರೆ ನೀವು ಒಬ್ಬರನ್ನೊಬ್ಬರು ಕಚ್ಚಾಡಿ, ಹರಕೊಂಡು, ತಿನ್ನುವವರಾದರೆ ಒಬ್ಬರಿಂದೊಬ್ಬರು ನಾಶವಾದೀರಿ, ಎಚ್ಚರಿಕೆ.

ಆತ್ಮನ ಫಲವು ಮತ್ತು ದೇಹದ ದುಷ್ಫಲಗಳು

16ನಾನು ಹೇಳುವುದೇನಂದರೆ
5:16 ಗಲಾ. 5:24,25; ರೋಮಾ. 8:4
ಪವಿತ್ರಾತ್ಮನನ್ನು ಅನುಸರಿಸಿ ನಡೆದುಕೊಳ್ಳಿರಿ, ಆಗ ನೀವು
5:16 ಎಫೆ. 2:3
ಶರೀರಭಾವದ ಅಭಿಲಾಷೆಗಳನ್ನು ಎಷ್ಟು ಮಾತ್ರಕ್ಕೂ ನೆರವೇರಿಸುವುದಿಲ್ಲ.
17ಏಕೆಂದರೆ ಶರೀರಾಭಿಲಾಷೆಯೂ ಆತ್ಮನಿಗೆ ವಿರುದ್ಧವಾಗಿದೆ, ಆತ್ಮನ ಅಭಿಲಾಷೆಯು ಶರೀರಭಾವಕ್ಕೆ ವಿರುದ್ಧವಾಗಿದೆ.
5:17 ರೋಮಾ. 7:15, 18-20
ನೀವು ಮಾಡಲಿಚ್ಚಿಸುವುದನ್ನು ಮಾಡದಂತೆ ಇವು ಒಂದಕ್ಕೊಂದು ವಿರುದ್ಧವಾಗಿವೆ.
18ಆದರೆ
5:18 ರೋಮಾ. 8:14
ನೀವು ಆತ್ಮನಿಂದ ನಡಿಸಿಕೊಳ್ಳುವವರಾದರೆ
5:18 ರೋಮಾ. 7:4
ಧರ್ಮಶಾಸ್ತ್ರಕ್ಕೆ ಅಧೀನರಲ್ಲ.

19ಶರೀರಭಾವದ ಸ್ವಭಾವಗಳು ಪ್ರತ್ಯಕ್ಷವಾಗಿಯೇ ಇವೆ, ಅದು ಯಾವುವೆಂದರೆ, ಜಾರತ್ವ, ಬಂಡುತನ, ನಾಚಿಕೆಗೇಡಿತನ, 20ವಿಗ್ರಹಾರಾಧನೆ, ಮಾಟ, ಹಗೆತನ, ಜಗಳ, ಹೊಟ್ಟೆಕಿಚ್ಚು, ಸಿಟ್ಟು, ಪಕ್ಷಪಾತ,
5:20 1 ಕೊರಿ. 11:19
ಭಿನ್ನಮತ,
21ಮತ್ಸರ, ಕುಡುಕುತನ, ಗಲಭೆ, ಢಂಭಾಚಾರ ಇಂಥವುಗಳೇ.
5:21 ಕೊಲೊ. 3:6; 1 ಕೊರಿ. 6:9
ಇಂಥ ಕಾರ್ಯಗಳನ್ನು ನಡಿಸುವವರು ದೇವರ ರಾಜ್ಯಕ್ಕೆ ಬಾಧ್ಯಸ್ಥರಾಗುವುದಿಲ್ಲವೆಂದು ನಾನು ಈ ಮೊದಲು ಹೇಳಿದಂತೆಯೇ ಈಗಲೂ ನಿಮ್ಮನ್ನು ಎಚ್ಚರಿಸುತ್ತೇನೆ.

22ಆದರೆ
5:22 ರೋಮಾ. 7:4; 8:5; ಎಫೆ. 5:9
ದೇವರಾತ್ಮನಿಂದ ಉಂಟಾಗುವ ಫಲವೇನಂದರೆ, ಪ್ರೀತಿ, ಸಂತೋಷ, ಸಮಾಧಾನ, ದೀರ್ಘಶಾಂತಿ,
5:22 2 ಕೊರಿ. 6:6
ದಯೆ, ಪರೋಪಕಾರ, ನಂಬಿಕೆ,
23ಸಾಧುತ್ವ,
5:22 ಅ. ಕೃ. 24:5; 2 ಪೇತ್ರ 1:6
ಶಮೆದಮೆ ಇಂಥವುಗಳೇ.
5:23 1 ತಿಮೊ. 1:9
ಇವುಗಳಿಗೆ ವಿರುದ್ಧವಾಗಿ ಯಾವ ಧರ್ಮಶಾಸ್ತ್ರವೂ ಇಲ್ಲ.
24ಕ್ರಿಸ್ತ ಯೇಸುವಿನಲ್ಲಿರುವವರು
5:24 ಗಲಾ. 5:16; ರೋಮಾ. 6:6
ತಮ್ಮ ಶರೀರಭಾವವನ್ನು ಅದರ ವಿಷಯಾಭಿಲಾಷೆ, ಸ್ವೇಚ್ಛಾಭಿಲಾಷೆಗಳ ಸಹಿತವಾಗಿ ಶಿಲುಬೆಗೆ ಹಾಕಿದವರಾಗಿದ್ದಾರೆ.

25
5:25 ಗಲಾ. 5:16
ನಾವು ಆತ್ಮನಿಂದ ಜೀವಿಸುತ್ತಿರಲಾಗಿ ಆತ್ಮನನ್ನನುಸರಿಸಿ ನಡೆಯೋಣ.
5:26 ಫಿಲಿ. 2:3
ಅಹಂಕಾರಿಗಳೂ, ಒಬ್ಬರನ್ನೊಬ್ಬರು ಕೆಣಕುವವರೂ, ಒಬ್ಬರ ಮೇಲೊಬ್ಬರು ಮತ್ಸರವುಳ್ಳವರೂ ಆಗದೆ ಇರೋಣ.

26

Copyright information for KanULB