Galatians 6

ಪರಸ್ಪರ ಭಾರವನ್ನು ಹೊತ್ತುಕೊಳ್ಳಿರಿ

1ಸಹೋದರರೇ,
6:1 2 ಕೊರಿ. 2:7, ಇಬ್ರಿ. 12:13, ಯಾಕೋಬ. 5:19
ನಿಮ್ಮಲ್ಲಿ ಯಾರಾದರೂ ಯಾವುದಾದರೂ ಪಾಪದಲ್ಲಿ ಸಿಕ್ಕಿಹಾಕಿಕೊಂಡಿದ್ದರೆ
6:1 ರೋಮಾ. 15:1
ಅಂಥವರನ್ನು ಆತ್ಮಭರಿತರಾದ ನೀವು ಶಾಂತಭಾವದಿಂದ ತಿದ್ದಿ ಸರಿಮಾಡಿರಿ. ನೀವಾದರೂ ಶೋಧನೆಗೆ ಒಳಗಾಗದಂತೆ ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ.
2ಒಬ್ಬರು ಮತ್ತೊಬ್ಬರ ಭಾರವನ್ನು ಹೊತ್ತುಕೊಳ್ಳಲಿ, ಹೀಗೆ ಕ್ರಿಸ್ತನ
6:2 ಧರ್ಮಶಾಸ್ತ್ರವನ್ನು, ಗಲಾ. 5:14
ನೀತಿನಿಯಮಗಳನ್ನು ನೆರವೇರಿಸಿರಿ.

3
6:3 1 ಕೊರಿ. 3:18
ಯಾವನಾದರೂ ಅಲ್ಪನಾಗಿದ್ದು ತಾನು ದೊಡ್ಡವನೆಂದು ಭಾವಿಸಿಕೊಂಡರೆ ತನ್ನನ್ನು ತಾನೇ ಮೋಸಗೊಳಿಸಿಕೊಳ್ಳುವನಾಗಿದ್ದಾನೆ.
4
6:4 1 ಕೊರಿ. 11:28, 2 ಕೊರಿ. 13:5
ಪ್ರತಿಯೊಬ್ಬನು ತಾನು ಮಾಡಿದ ಕೆಲಸವನ್ನು ಪರೀಕ್ಷಿಸಿಕೊಳ್ಳಲಿ. ಆಗ ಅವನು ತನ್ನ ನಿಮಿತ್ತದಿಂದ ಹೆಚ್ಚಳಪಡಬಹುದೇ ಹೊರತು ಮತ್ತೊಬ್ಬನೊಂದಿಗೆ ಹೋಲಿಸಿಕೊಂಡು ಹೆಚ್ಚಳಪಡಬೇಕಾಗಿರುವುದಿಲ್ಲ.
5ಏಕೆಂದರೆ
6:5 ರೋಮಾ. 14:12
ಪ್ರತಿಯೊಬ್ಬನು ತನ್ನ ಸ್ವಂತ ಹೊರೆಯನ್ನು ತಾನೇ ಹೊತ್ತುಕೊಳ್ಳಬೇಕು.

6
6:6 ರೋಮಾ. 15:27, 1 ಕೊರಿ. 9:11
ದೇವರ ವಾಕ್ಯವನ್ನು ಕಲಿಯುವವನು, ಅದನ್ನು ಕಲಿಸುವವನಿಗೆ ತನ್ನಲ್ಲಿರುವ ಎಲ್ಲಾ ಮೇಲುಗಳಲ್ಲಿಯೂ ಪಾಲನ್ನು ಕೊಡಬೇಕು.
7ಮೋಸಹೋಗಬೇಡಿರಿ.
6:7 ಯೋಬ. 13:9
ದೇವರನ್ನು ಅಪಹಾಸ್ಯ ಮಾಡಲಾಗುವುದಿಲ್ಲ.
6:7 2 ಕೊರಿ. 9:6
ಮನುಷ್ಯನು ತಾನು ಏನು ಬಿತ್ತುತ್ತಾನೋ ಅದನ್ನೇ ಕೊಯ್ಯಬೇಕು.
8ತನ್ನ
6:8 ಶರೀರಭಾವದಲ್ಲಿ, ಹೋಶೇ. 8:7, ಯೋಬ. 4:8
ಶರೀರಭಾವವನ್ನು ಕುರಿತು ಬಿತ್ತುವವನು
6:8 ರೋಮಾ. 6:21
ಆ ಭಾವದಿಂದ ನಾಶವನ್ನು ಕೊಯ್ಯುವನು.
6:8 ಯಾಕೋಬ. 3:18
ಆತ್ಮನ ಕುರಿತಾಗಿ ಬಿತ್ತುವವನು ಆತ್ಮನಿಂದ ನಿತ್ಯಜೀವವನ್ನು ಕೊಯ್ಯುವನು.

9
6:9 2 ಥೆಸ. 3:13, 1 ಕೊರಿ. 15:58
ಒಳ್ಳೆಯದನ್ನು ಮಾಡುವುದರಲ್ಲಿ ಬೇಸರಗೊಳ್ಳದೇ ಇರೋಣ. ಏಕೆಂದರೆ ಮನಗುಂದದಿದ್ದರೆ ತಕ್ಕ ಸಮಯದಲ್ಲಿ ಬೆಳೆಯನ್ನು ಕೊಯ್ಯುವೆವು.
10ಆದ್ದರಿಂದ ಅವಕಾಶ ಸಿಕ್ಕಿದಾಗಲೆಲ್ಲಾ ಎಲ್ಲರಿಗೂ ಒಳ್ಳೆಯದನ್ನು ಮಾಡೋಣ, ವಿಶೇಷವಾಗಿ
6:10 ಎಫೆ. 2:19, ಇಬ್ರಿ. 3:6
ಒಂದೇ ಮನೆಯವರಂತಿರುವ ಕ್ರೈಸ್ತ ವಿಶ್ವಾಸಿಗಳಿಗೆ ಮಾಡೋಣ.

ಕಡೆ ಎಚ್ಚರಿಕೆಗಳು ಮತ್ತು ವಂದನೆಗಳು

11ಇಗೋ ನೋಡಿರಿ,
6:11 1 ಕೊರಿ. 16:21
ಸ್ವಂತ ಕೈಯಿಂದ ಎಂಥಾ ದೊಡ್ಡ ಅಕ್ಷರಗಳಲ್ಲಿ ನಿಮಗೆ ಬರೆಯುತ್ತಾ ಇದ್ದೇನೆ.
12ದೈಹಿಕವಾಗಿ ಪ್ರಶಂಸೆಯನ್ನು ಹೊಂದಬೇಕೆಂದಿರುವವರು ಸುನ್ನತಿ ಮಾಡಿಸಿಕೊಳ್ಳಿರಿ ಎಂಬುದಾಗಿ ನಿಮ್ಮನ್ನು ಒತ್ತಾಯಿಸುತ್ತಾರೆ.
6:12 ಗಲಾ. 5:11
ಏಕೆಂದರೆ ಕ್ರಿಸ್ತನ ಶಿಲುಬೆಯ ದೆಸೆಯಿಂದ ತಮಗೆ ಹಿಂಸೆಯಾಗಬಾರದೆಂಬುದೇ ಅವರ ಉದ್ದೇಶ.
13ಸುನ್ನತಿ ಮಾಡಿಸಿಕೊಂಡವರೇ ಧರ್ಮಶಾಸ್ತ್ರವನ್ನು ಕೈಕೊಂಡು ನಡೆಯುತ್ತಿಲ್ಲವಲ್ಲಾ. ಅವರು ನಿಮ್ಮ ಶರೀರದ ವಿಷಯದಲ್ಲಿ ಹೆಚ್ಚಳಪಡುವುದಕ್ಕಾಗಿ ನಿಮಗೆ ಸುನ್ನತಿಯಾಗಬೇಕೆಂದು ಅಪೇಕ್ಷಿಸುತ್ತಾರೆ.

14
6:14 1 ಕೊರಿ. 2:2, ಫಿಲಿ. 3:3, 7-8
ನನಗಾದರೋ ನಮ್ಮ ಕರ್ತನಾದ ಯೇಸು ಕ್ರಿಸ್ತನ ಶಿಲುಬೆಯ ವಿಷಯದಲ್ಲಿಯೇ ಹೊರತು ಬೇರೆ ಯಾವುದರಿಂದಲೂ ಹೆಚ್ಚಳಪಡುವುದು ಬೇಕಾಗಿಲ್ಲ. ಆತನ ಮೂಲಕ
6:14 ರೋಮಾ. 6:6
ನಾನು ಲೋಕಕ್ಕೂ, ಲೋಕವು ನನಗಾಗಿಯೂ ಶಿಲುಬೆಗೆ ಹಾಕಿಕೊಂಡು ಸತ್ತಿತು.
15
6:15 ರೋಮಾ. 2:28, ಗಲಾ. 5:6
ಸುನ್ನತಿ ಮಾಡಿಸಿಕೊಳ್ಳುವುದೋ ಅಥವಾ ಮಾಡಿಸಿಕೊಳ್ಳದಿರುವುದೋ ಏನು ಅಲ್ಲ, ಆದರೆ
6:15 ಯೋಹಾ 3:5-7, ರೋಮಾ. 6:4, 2 ಕೊರಿ. 5:17
ಹೊಸ ಸೃಷ್ಟಿಯಾಗುವುದೇ ಪ್ರಮುಖವಾದುದು.
16ಈ ನಿಯಮಗಳನ್ನು ಸರಿಯಾಗಿ ನಡೆಯುವವರೆಲ್ಲರಿಗೂ ಮತ್ತು ದೇವರ
6:16 ಗಲಾ. 3:7-9,29; ರೋಮಾ. 2:29, 4:12, 9:6-8
ಇಸ್ರಾಯೇಲ್ಯರಿಗೆ ಶಾಂತಿಯೂ, ಕರುಣೆಯೂ ಉಂಟಾಗಲಿ.

17ಇನ್ನು ಮೇಲೆ ಯಾರೂ ನನಗೆ ತೊಂದರೆಪಡಿಸಬಾರದು,
6:17 ಯೆಶಾ. 44:5, ಯೆಹೆ. 9:4, ಪ್ರಕ 13:16
ನನ್ನ ದೇಹದಲ್ಲಿ ಯೇಸುಕ್ರಿಸ್ತನ ಗುರುತುಗಳನ್ನು ಒತ್ತಿಸಿಕೊಂಡಿದ್ದೇನೆ.
18ಸಹೋದರರೇ,
6:18 ಫಿಲೆ. 25, ರೋಮಾ. 16:20
ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು
6:18 2 ತಿಮೊ. 4:22
ನಿಮ್ಮ ಆತ್ಮದೊಂದಿಗಿರಲಿ. ಆಮೆನ್.

Copyright information for KanULB