Hebrews 12

ದೇವರು ನಮ್ಮ ತಂದೆ

1
This verse is empty because in this translation its contents have been moved to form part of verse Heb 12:2.
In this translation, this verse contains text which in some other translations appears in verses Heb 12:1-Heb 12:2.
2ಆದಕಾರಣ ಇಷ್ಟು ಸಾಕ್ಷಿಗಳ ದೊಡ್ಡ ಗುಂಪು ಮೇಘದಂತೆ ನಮ್ಮ ಸುತ್ತಲು ಇರುವುದರಿಂದ ನಮಗೆ ಅಭ್ಯಂತರಪಡಿಸುವ ಎಲ್ಲಾ ಭಾರವನ್ನೂ, ಸುಲಭವಾಗಿ
12:1 ಎಫೆ. 4:22:
ಮುತ್ತಿಕೊಳ್ಳುವ ಪಾಪವನ್ನು ಸಹ ನಾವು ತೆಗೆದಿಟ್ಟು,
12:2 ಇಬ್ರಿ. 2:10:
ನಂಬಿಕೆಯನ್ನು ಹುಟ್ಟಿಸುವಾತನೂ ಅದನ್ನು ಪರಿಪೂರ್ಣಗೊಳಿಸುವಾತನೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮಗೆ ನೇಮಕವಾದ
12:2 1 ಕೊರಿ. 9:24:
ಓಟವನ್ನು ಸಹನೆಯಿಂದ ಓಡೋಣ.
12:2 ಲೂಕ 24:26; ಫಿಲಿ. 2:8; ಯೆಶಾ. 53:11:
ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ
12:2 ಕೀರ್ತ. 22:6,7; 69:19; ಯೆಶಾ. 53:3:
ಅಪಮಾನವನ್ನು ಅಲಕ್ಷ್ಯಮಾಡಿ, ಶಿಲುಬೆಯ ಮರಣವನ್ನು ಸಹಿಸಿಕೊಂಡು,
12:2 ಇಬ್ರಿ. 1:3:
ದೇವರ ಸಿಂಹಾಸನದ ಬಲಗಡೆಯಲ್ಲಿ ಆಸೀನನಾಗಿದ್ದಾನೆ.
3ನೀವು ಮನಗುಂದಿದವರಾಗಿ
12:3 ಗಲಾ. 6:9:
ಬೇಸರಗೊಳ್ಳದಂತೆ
12:3 ಮತ್ತಾ 10:24:
ಯೇಸುವನ್ನು ಕುರಿತು ಯೋಚಿಸಿರಿ.
12:3 ಕೆಲವು ಪ್ರತಿಗಳಲ್ಲಿ, ಪಾಪಿಗಳು ತಮ್ಮ ಸ್ವಂತ ಹಾನಿಗೆ ಮಾಡಿದ ವಿರೋಧವನ್ನು ಎಷ್ಟಾಗಿ ಸಹಿಸಿಕೊಂಡನು ಎಂದು ಬರೆದದೆ.
ಆತನು ಪಾಪಿಗಳಿಂದ ಎಷ್ಟೋ ವಿರೋಧವನ್ನು ಸಹಿಸಿಕೊಂಡನು.

4ನೀವು ಪಾಪಕ್ಕೆ ವಿರೋಧವಾಗಿ ಹೋರಾಡುವುದರಲ್ಲಿ ರಕ್ತವನ್ನು ಸುರಿಸುವಷ್ಟು ಹೋರಾಡಲಿಲ್ಲವಲ್ಲ. 5ಮಕ್ಕಳಿಗೆ ಹೇಳುವಂತೆ ನಿಮಗೆ ಹೇಳಿದ ಎಚ್ಚರಿಕೆಯ ಮಾತುಗಳನ್ನು ಮರೆತುಬಿಟ್ಟಿದ್ದೀರೋ? ಅದೇನೆಂದರೆ,

<<ನನ್ನ
12:5 ಜ್ಞಾ. 3:11,12; ಯೋಬ 5:17:
ಮಗನೇ, ಕರ್ತನ ಶಿಕ್ಷೆಯನ್ನು ಕಡೆಗಣಿಸಬೇಡ.
ಆತನು ನಿನ್ನನ್ನು ಗದರಿಸುವಾಗ ಬೇಸರಗೊಳ್ಳಬೇಡ.>>
6ಏಕೆಂದರೆ
12:6 ಕೀರ್ತ. 94:12; 119:67,75; ಪ್ರಕ. 3:19:
ಕರ್ತನು ಯಾರನ್ನು ಪ್ರೀತಿಸುತ್ತಾನೋ ಅವರನ್ನು ಶಿಕ್ಷಿಸುತ್ತಾನೆ.
ತಾನು ಮಗನಂತೆ ಸ್ವೀಕರಿಸುವ ಪ್ರತಿಯೊಬ್ಬನನ್ನು ದಂಡಿಸುತ್ತಾನೆ ಎಂಬುದಾಗಿದೆ.

7ನಿಮ್ಮ ಶಿಸ್ತಿಗಾಗಿಯೇ, ನಿಮಗೆ ಶಿಕ್ಷೆಯಾಗುತ್ತದೆಂದು ಅದನ್ನು ಸಹಿಸಿಕೊಳ್ಳಿರಿ.
12:7 ಧರ್ಮೋ. 8:5; 2 ಸಮು. 7:14; ಜ್ಞಾ. 13:24:
ದೇವರು ನಿಮ್ಮನ್ನು ಮಕ್ಕಳೆಂದು ನಡೆಸುತ್ತಾನೆ. ಯಾಕೆಂದರೆ ತಂದೆಯಿಂದ ಶಿಕ್ಷೆ ಹೊಂದದ ಮಗನೆಲ್ಲಿದ್ದಾನೆ?
8ಎಲ್ಲರೂ ಪಾಲುಗಾರರಬೇಕಾದ
12:8 1 ಪೇತ್ರ. 5:9:
ಶಿಕ್ಷೆಯು ನಿಮಗುಂಟಾಗದಿದ್ದರೆ ನೀವು ಹಾದರದಿಂದ ಹುಟ್ಟಿದವರೇ ಹೊರತು ಆತನ ಮಕ್ಕಳಲ್ಲ.

9ಇದು ಮಾತ್ರವಲ್ಲದೆ ನಮ್ಮನ್ನು ಶಿಕ್ಷಿಸಿದ ಲೌಕಿಕ ತಂದೆಗಳನ್ನು ನಾವು ಸನ್ಮಾನಿಸಿತ್ತೇವಲ್ಲ. ನಮ್ಮ ಆತ್ಮಗಳಿಗೆ
12:9 ಅರಣ್ಯ. 16:22:
ತಂದೆಯಾಗಿರುವಾತನಿಗೆ ನಾವು ಇನ್ನೂ ಹೆಚ್ಚಾಗಿ ಅಧೀನರಾಗಿ
12:9 ಯೆಶಾ. 38:16:
ಜೀವಿಸಬೇಕಲ್ಲವೇ?
10ನಮ್ಮ ಲೌಕಿಕ ತಂದೆಗಳು
12:10 ಅಥವಾ, ಕೆಲವು ದಿವಸಗಳ ತನಕ.
ಮನಸ್ಸಿಗೆ ಸರಿದೋರಿದಂತೆ ಕೆಲವು ಕಾಲ ಮಾತ್ರ ನಮ್ಮನ್ನು ಶಿಕ್ಷಿಸಿದರು. ಆದರೆ
12:10 2 ಪೇತ್ರ. 1:4; ಯಾಜ. 11:44:
ದೇವರು ತನ್ನ ಪರಿಶುದ್ಧತೆಯಲ್ಲಿ ನಾವು ಪಾಲುಗಾರರಾಗಬೇಕೆಂದು ನಮ್ಮ ಹಿತಕ್ಕಾಗಿಯೇ ಶಿಕ್ಷಿಸುತ್ತಾನೆ.
11ಯಾವ ಶಿಕ್ಷೆಯಾದರೂ
12:11 1 ಪೇತ್ರ. 1:6:
ತತ್ಕಾಲಕ್ಕೆ ಸಂತೋಷಕರವಾಗಿ ತೋರದೆ, ದುಃಖಕರವಾಗಿ ತೋರುತ್ತದೆ. ಆದರೆ ಶಿಸ್ತಿನ ಅಭ್ಯಾಸವನ್ನು ಹೊಂದಿದವರು, ಮುಂದೆ
12:11 ಯಾಕೋಬ. 3:17,18:
ಸಮಾಧಾನವುಳ್ಳ ನೀತಿಯ ಫಲವನ್ನು ಪಡೆಯುತ್ತಾರೆ.

12ಆದುದ್ದರಿಂದ
12:12 ಯೆಶಾ. 35:3; ಯೋಬ. 4:3,4:
ಜೋಲುಬಿದ್ದ ಕೈಗಳನ್ನೂ ಮತ್ತು ನಡುಗುವ ಮೊಣಕಾಲುಗಳನ್ನೂ ಬಲಪಡಿಸಿರಿ.
13
12:13 ಜ್ಞಾ. 4:26,27:
ನಿಮ್ಮ ಪಾದಗಳಿಗೆ ನೇರವಾದ ದಾರಿಯನ್ನು ಮಾಡಿಕೊಳ್ಳಿರಿ. ಹೀಗೆ ಮಾಡಿದರೆ ಕುಂಟುವ ಕಾಲು ಉಳುಕಿ ಹೋಗದೇ ವಾಸಿಯಾಗುವುದು.

ದೇವರ ಕೃಪೆಯನ್ನು ತಿರಸ್ಕರಿಸುವುದರ ಬಗ್ಗೆ ಎಚ್ಚರಿಕೆ

14
12:14 ರೋಮಾ. 14:19:
ಎಲ್ಲರೊಂದಿಗೆ ಸಮಾಧಾನದಿಂದ ಜೀವಿಸಲು ಮತ್ತು
12:14 1 ಥೆಸ. 4:7:
ಪರಿಶುದ್ಧರಾಗಿರಲು ಪ್ರಯತ್ನಮಾಡಿರಿ. ಪರಿಶುದ್ಧತೆಯಿಲ್ಲದೆ ಯಾವನೂ ಕರ್ತನನ್ನು ಕಾಣುವುದಿಲ್ಲ.
15ನಿಮ್ಮಲ್ಲಿ ಯಾವನೂ
12:15 ಇಬ್ರಿ. 4:1; 2 ಕೊರಿ. 6:1; ಗಲಾ. 5:4:
ದೇವರ ಕೃಪೆಯಿಂದ ತಪ್ಪಿ ಹಿಂಜಾರಿ ಹೋಗದಂತೆಯೂ,
12:15 ಧರ್ಮೋ. 29:18; ಅ. ಕೃ. 8:23:
ಯಾವ ಕಹಿಯಾದ ಬೇರೂ ನಿಮ್ಮಲ್ಲಿ ಚಿಗುರಿ ಅಸಮಾಧಾನವನ್ನು ಹುಟ್ಟಿಸಿ ಅನೇಕರನ್ನು ಮಲಿನಪಡಿಸದಂತೆ ನೋಡಿಕೊಳ್ಳಿರಿ.
16ಯಾವ ಜಾರನಾಗಲಿ, ಏಸಾವನಂಥ ಪ್ರಾಪಂಚಿಕನಾಗಲಿ ನಿಮ್ಮಲ್ಲಿ ಇರದಂತೆ ಜಾಗ್ರತೆ ವಹಿಸಿಕೊಳ್ಳಿರಿ.
12:16 ಆದಿ. 25:33:
ಆ ಏಸಾವನು ಒಂದೇ ಒಂದು ಊಟಕ್ಕೋಸ್ಕರ ತನ್ನ ಚೊಚ್ಚಲುತನದ ಹಕ್ಕನ್ನು ಮಾರಿಬಿಟ್ಟನು.
17
12:17 ಆದಿ. 27:34,36,38.
ಅನಂತರದಲ್ಲಿ ತನ್ನ ತಂದೆಯ ಆಶೀರ್ವಾದವನ್ನು ಬಾಧ್ಯವಾಗಿ ಹೊಂದಬೇಕೆಂದು ಕಣ್ಣೀರು ಸುರಿಸುತ್ತಾ ಬೇಡಿಕೊಂಡರೂ, ಪಶ್ಚಾತ್ತಾಪಕ್ಕೆ
12:17 ಅಥವಾ. ಮಾನಸಾಂತರಕ್ಕೆ.
ಮಾರ್ಗವಿಲ್ಲದೆ ನಿರಾಕರಿಸಲ್ಪಟ್ಟನೆಂದು ನೀವು ಬಲ್ಲವರಾಗಿದ್ದೀರಿ.

18
This verse is empty because in this translation its contents have been moved to form part of verse Heb 12:19.
In this translation, this verse contains text which in some other translations appears in verses Heb 12:18-Heb 12:19.
19ನೀವು
12:18 ವಿಮೋ. 19:18; 20:18; ಧರ್ಮೋ. 4:11; 5:22:
ಮುಟ್ಟಬಹುದಾದ ಮತ್ತು ಬೆಂಕಿ ಹೊತ್ತಿದಂಥ ಬೆಟ್ಟಕ್ಕೂ, ಕಾರ್ಮೋಡ, ಕಗ್ಗತ್ತಲೆ, ಬಿರುಗಾಳಿ,
12:18 ವಿಮೋ. 19:16,19:
ತುತ್ತೂರಿಯ ಶಬ್ದ, ಮಾತುಗಳ ಧ್ವನಿ ಎಂಬಿವುಗಳ ಬಳಿಗಲ್ಲ ನೀವು ಬಂದಿರುವುದು. ಆ ಧ್ವನಿಯನ್ನು ಕೇಳಿದವರು ಇನ್ನೆಂದಿಗೂ ಆ ಧ್ವನಿ
12:19 ವಿಮೋ. 20:19; ಧರ್ಮೋ. 5:5,23,25; 18:16:
ತಮ್ಮೊಂದಿಗೆ ಮಾತನಾಡುವುದೇ ಬೇಡವೆಂದು ಕೇಳಿಕೊಂಡರು.
20ಏಕೆಂದರೆ,
12:20 ವಿಮೋ. 19:12,13:
<<ಒಂದು ಮೃಗವಾದರೂ ಬೆಟ್ಟವನ್ನು ಮುಟ್ಟಿದರೆ ಅದನ್ನು ಕಲ್ಲೆಸೆದು ಕೊಲ್ಲಬೇಕೆಂಬ>> ವಿಧಿಯನ್ನು ಅವರಿಂದ ತಾಳಲಾಗಲಿಲ್ಲ.
21ಇದಲ್ಲದೆ ಆ ದೃಶ್ಯವು ಅತಿ ಭಯಾನಕವಾಗಿದ್ದದರಿಂದ ಮೋಶೆಯು,
12:21 ವಿಮೋ. 19:16; ಧರ್ಮೋ. 9:19:
<<ನಾನು ಹೆದರಿ, ನಡುಗುತ್ತಿದ್ದೇನೆ>> ಎಂದು ಹೇಳಿದನು.

22ಆದರೆ ನೀವು
12:22 ಪ್ರಕ. 14:1:
ಚೀಯೋನ್ ಪರ್ವತಕ್ಕೂ, ಜೀವಸ್ವರೂಪನಾದ ದೇವರ ಪಟ್ಟಣವಾಗಿರುವ
12:22 ಗಲಾ. 4:26:
ಪರಲೋಕದ ಯೆರೂಸಲೇಮಿಗೂ, ಉತ್ಸವ ಸಂಘದಲ್ಲಿ ಕೂಡಿರುವ
12:22 ಯೂದ. 14:
ಕೋಟ್ಯಾನುಕೋಟಿ ದೇವದೂತರ ಬಳಿಗೂ,
23ಪರಲೋಕದಲ್ಲಿ
12:23 ಲೂಕ 10:20:
ಹೆಸರು ಬರೆಸಿಕೊಂಡಿರುವ
12:23 ಇಬ್ರಿ. 2:12:
ಚೊಚ್ಚಲ ಮಕ್ಕಳ ಸಭೆಗೂ,
12:23 ಆದಿ. 18:25; ಕೀರ್ತ. 58:11:
ಎಲ್ಲರಿಗೆ ನ್ಯಾಯಾಧಿಪತಿಯಾಗಿರುವ ದೇವರ ಬಳಿಗೂ, ಪರಿಪೂರ್ಣರಾಗಿರುವ ನೀತಿವಂತರ ಆತ್ಮಗಳ ಬಳಿಗೂ,
24
12:24 ಇಬ್ರಿ. 8:6; 9:15
ಹೊಸ ಒಡಂಬಡಿಕೆಗೆ ಮಧ್ಯಸ್ಥನಾಗಿರುವ ಯೇಸುವಿನ ಬಳಿಗೂ,
12:24 ಇಬ್ರಿ. 11:4; ಆದಿ. 4:10:
ಹೇಬೆಲನ ರಕ್ತಕ್ಕಿಂತ ಉತ್ತಮವಾಗಿ ಮಾತನಾಡುವ
12:24 ಇಬ್ರಿ. 10:22:
ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.

25ಮಾತನಾಡುತ್ತಿರುವಾತನನ್ನು ನೀವು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ
12:25 ಅರಣ್ಯ. 16:24-35; ಇಬ್ರಿ. 2:3:
ಭೂಮಿಯ ಮೇಲೆ ದೈವೋಕ್ತಿಗಳನ್ನಾಡಿದವನನ್ನು ಅಸಡ್ಡೆಮಾಡಿದವರು ದಂಡನೆಗೆ ತಪ್ಪಿಸಿಕೊಳ್ಳಲಾಗದಿದ್ದರೆ, ಪರಲೋಕದಿಂದ ಮಾತನಾಡುವಾತನನ್ನು ಬಿಟ್ಟು ದೂರವಾಗಿ ನಾವು ಹೋದರೆ ದಂಡನೆಯಿಂದ ಹೇಗೆ ತಪ್ಪಿಸಿಕೊಂಡೆವು?
26
12:26 ವಿಮೋ. 19:18:
ಆತನ ಧ್ವನಿಯು ಆಗ ಭೂಮಿಯನ್ನು ಕದಲಿಸಿತು. ಈಗಲಾದರೋ ಆತನು,
12:26 ಹಗ್ಗಾ. 2:6:
<<ಇನ್ನೊಂದೇ ಸಾರಿ ನಾನು ಭೂಮಿಯನ್ನು ಮಾತ್ರವಲ್ಲದೆ ಪರಲೋಕವನ್ನೂ ಕದಲಿಸುತ್ತೇನೆ>> ಎಂದು ವಾಗ್ದಾನಮಾಡಿ ಹೇಳಿದ್ದಾನೆ.

27<<ಇನ್ನೊಂದೇ ಸಾರಿ,>> ಎಂಬ ಈ ಮಾತನ್ನು ಯೋಚಿಸಿದರೆ, ಕದಲಿಸಿರುವ ವಸ್ತುಗಳು ನಿರ್ಮಿತವಾದವುಗಳಾದ್ದರಿಂದ ತೆಗೆದುಹಾಕಲ್ಪಡುತ್ತವೆಂಬುದು ಸ್ಪಷ್ಟವಾಗುತ್ತದೆ.
12:27 ಕೀರ್ತ. 102:26:
ಆಗ, ಕದಲಿಸದೇ ಇರುವ ವಸ್ತುಗಳು ಸ್ಥಿರವಾಗಿ ನಿಲ್ಲುವವು.
28ಆದ್ದರಿಂದ
12:28 ದಾನಿ. 2:44:
ಯಾರೂ ಕದಲಿಸಲಾರದ ರಾಜ್ಯವನ್ನು ಪಡೆದುಕೊಳ್ಳುವವರಾದ ನಾವು
12:28 ಅಥವಾ, ದೇವರ ಕೃಪೆಯನ್ನು ಹಿಡಿದುಕೊಂಡು.
ಕೃತಜ್ಞತೆಯುಳ್ಳವರಾಗಿ, ಆತನಿಗೆ ಸಮರ್ಪಕವಾದ ಆರಾಧನೆಯನ್ನು ಭಕ್ತಿಯಿಂದಲೂ ಮತ್ತು ಭಯದಿಂದಲೂ ಮಾಡೋಣ.
ಏಕೆಂದರೆ
12:29 ಧರ್ಮೋ. 4:24; 2 ಥೆಸ. 1:8:
ನಮ್ಮ ದೇವರು ದಹಿಸುವ ಅಗ್ನಿಯಾಗಿದ್ದಾನೆ.

29

Copyright information for KanULB