Hebrews 7

ಯೇಸು ಮೆಲ್ಕಿಜೆದೇಕನ ತರಹದ ಮಹಾಯಾಜಕನಾಗಿದ್ದು ಲೇವಿವಂಶದ ಯಾಜಕರಿಗಿಂತಲೂ ಶ್ರೇಷ್ಠನು

1
7:1 ಆದಿ. 14:17-20:
ಈ ಮೆಲ್ಕಿಜೆದೇಕನು
7:1 ಆದಿ. 33:18; ಕೀರ್ತ. 76:2:
ಸಾಲೇಮಿನ ಅರಸನೂ
7:1 ಅರಣ್ಯ. 24:16; ಧರ್ಮೋ. 32:8; ಮಾರ್ಕ 5:7:
ಮಹೋನ್ನತನಾದ ದೇವರ ಯಾಜಕನೂ ಆಗಿದ್ದನು. ಈತನು ರಾಜರನ್ನು ಸಂಹಾರ ಮಾಡಿ ಹಿಂದಿರುಗಿ ಬರುತ್ತಿದ್ದ ಅಬ್ರಹಾಮನನ್ನು ಎದುರುಗೊಂಡು ಅವನನ್ನು ಆಶೀರ್ವದಿಸಿದನು.
2ಅವನಿಗೆ ಅಬ್ರಹಾಮನು ತಾನು ಜಯಿಸಿಕೊಂಡು ಬಂದಿದ್ದ ಎಲ್ಲಾ ವಸ್ತುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಕೊಟ್ಟನು. <<ಮೆಲ್ಕಿಜೆದೇಕ್>>, ಎಂಬ ಹೆಸರಿಗೆ ಮೊದಲು <<ನೀತಿಯ ರಾಜ>> ಎಂದೂ, ಅನಂತರ <<ಸಾಲೇಮಿನ ರಾಜ>> ಎಂದರೆ <<ಸಮಾಧಾನದ ರಾಜ>> ಎಂದೂ ಅರ್ಥ. 3ಅವನಿಗೆ ತಂದೆಯಿಲ್ಲ, ತಾಯಿಯಿಲ್ಲ, ವಂಶಾವಳಿಯೂ ಇಲ್ಲ.
7:3 ಅಥವಾ, ಅವನು ಹುಟ್ಟಿದ್ದಾಗಲಿ ಕಾಲವಾಗಿ ಹೋದದ್ದಾಗಲಿ ಬರೆದಿಲ್ಲ. ವ. 6:
ಹುಟ್ಟು, ಸಾವು ಇಲ್ಲ. ಆತನು ದೇವರ ಕುಮಾರನಿಗೆ ಹೋಲಿಕೆಯಾಗಿದು,
7:3 ಕೀರ್ತ. 110:4:
ನಿರಂತರವಾಗಿ ಯಾಜಕನಾಗಿರುವನು.

4ಈತನು ಎಷ್ಟು ಮಹಾನ್ ಆಗಿದ್ದನೆಂದು ಯೋಚಿಸಿರಿ.
7:4 ಅ. ಕೃ. 7:8,9:
ನಮ್ಮ ಮೂಲಪಿತೃವಾದ ಅಬ್ರಹಾಮನು ತಾನು ಯುದ್ಧದಲ್ಲಿ ಗೆದ್ದು ತಂದ ಶ್ರೇಷ್ಠ ವಸ್ತುಗಳಲ್ಲಿ ಹತ್ತರಲ್ಲಿ ಒಂದು ಭಾಗವನ್ನು ಅವನಿಗೆ ಕೊಟ್ಟನಲ್ಲಾ.
5ನಿಜವಾಗಿಯೂ
7:5 ಅರಣ್ಯ. 18:21,26; 2 ಪೂರ್ವ. 31:4,5:
ಲೇವಿಯ ಕುಲದವರಲ್ಲಿ ಯಾಜಕೋದ್ಯೋಗವನ್ನು ಹೊಂದುವವರು, ಜನರಿಂದ ಅಂದರೆ ಅಬ್ರಹಾಮನ ವಂಶಸ್ಥರಾಗಿರುವ ಸಹೋದರರಿಂದಲೇ ದಶಮ ಭಾಗಗಳನ್ನು ತೆಗೆದುಕೊಳ್ಳುವುದಕ್ಕೆ ಧರ್ಮಶಾಸ್ತ್ರದಲ್ಲಿ ಅಪ್ಪಣೆಯಿದೆ.
6ಆದರೆ ಮೆಲ್ಕಿಜೆದೇಕನು ಲೇವಿಯ
7:6 ವ. 3:
ವಂಶಾವಳಿಗೆ ಸೇರಿದವನಲ್ಲ, ಆದರೂ ಅಬ್ರಹಾಮನಿಂದ ದಶಮ ಭಾಗಗಳನ್ನು ತೆಗೆದುಕೊಂಡದ್ದಲ್ಲದೆ
7:6 ರೋಮಾ. 4:13:
ದೇವರಿಂದ ವಾಗ್ದಾನಗಳನ್ನು ಹೊಂದಿದವನನ್ನು ಆಶೀರ್ವದಿಸಿದನು.

7ಆಶೀರ್ವಾದ ಹೊಂದುವವನಿಗಿಂತ ಆಶೀರ್ವದಿಸುವವನೇ ಹೆಚ್ಚಿನವನು ಎಂಬುದನ್ನು ನಿರಾಕರಿಸುವಂತಿಲ್ಲ. 8ದಶಮ ಭಾಗವನ್ನು ತೆಗೆದುಕೊಳ್ಳುವ ಯಾಜಕರು ಒಂದಲ್ಲಾ ಒಂದು ದಿನ ಸಾಯುತ್ತಾರೆ. ಆದರೆ ಅಬ್ರಹಾಮನಿಂದ ದಶಮ ಭಾಗವನ್ನು ತೆಗೆದುಕೊಂಡಾತನು
7:8 ಇಬ್ರಿ. 5:6; 6:20; ಲೂಕ. 24:5:
ಚಿರಂಜೀವಿಯಾಗಿರುವನು.
9ಮತ್ತು ದಶಮ ಭಾಗಗಳನ್ನು ತೆಗೆದುಕೊಳ್ಳುವ ಲೇವಿಯು ಕೂಡ ಅಬ್ರಹಾಮನ ಮೂಲಕ ದಶಮ ಭಾಗಗಳನ್ನು ಕೊಟ್ಟ ಹಾಗಾಯಿತು. 10ಹೇಗಂದರೆ, ಮೆಲ್ಕಿಜೆದೇಕನು ಲೇವಿಯ ಮೂಲಪುರುಷನಾದ ಅಬ್ರಹಾಮನನ್ನು ಸಂಧಿಸಿದಾಗ ಲೇವಿಯು ಅಬ್ರಹಾಮನ ದೇಹದೊಳಗೆ ಅಡಕವಾಗಿದ್ದನಲ್ಲಾ.

11ಇಸ್ರಾಯೇಲರಿಗೆ ಕೊಡಲಾದ ಧರ್ಮಶಾಸ್ತ್ರ ಲೇವಿಯರ ಯಾಜಕತ್ವದ ಮೇಲೆ ಆಧಾರಗೊಂಡಿದೆ. ಲೇವಿಯರ ಈ
7:11 ಇಬ್ರಿ. 7:18,19; 8:7; ಗಲಾ. 2:21:
ಯಾಜಕತ್ವದಿಂದಲೇ ಸಂಪೂರ್ಣ ಸಿದ್ಧಿ ಪ್ರಾಪ್ತವಾಗುತ್ತಿದ್ದಾದರೆ, ಆರೋನನ ಪರಂಪರೆಗೆ ಸೇರದ, ಮೆಲ್ಕಿಜೆದೇಕನ ಪರಂಪರೆಗೆ ಸೇರಿದ ಬೇರೊಬ್ಬ ಯಾಜಕನು ಬರುವುದರ ಅಗತ್ಯವೇನಿತ್ತು?
12ಯಾಜಕತ್ವವು ಬದಲಾಗುವುದಾದರೆ ಧರ್ಮಶಾಸ್ತ್ರವೂ ಸಹ ಬದಲಾಗುವುದು ಅಗತ್ಯವಾಗಿದೆ.

13ಆದರೆ
7:13 ಎಂದರೆ ಕೀರ್ತ. 110:4:
ಇವು ಯಾರ ಕುರಿತಾಗಿ ಹೇಳಲ್ಪಟ್ಟಿವೆಯೋ ಆತನು ಬೇರೊಂದು ಗೋತ್ರಕ್ಕೆ ಸೇರಿದವನು. ಆ ಗೋತ್ರದಿಂದ ಒಬ್ಬನೂ ಯಜ್ಞವೇದಿಯ ಬಳಿ ಸೇವೆಮಾಡಿದ್ದಿಲ್ಲ.
14
7:14 ಯೆಶಾ. 11:1; ಮೀಕ 5:2; ಮತ್ತಾ 1:3; ಲೂಕ 3:33; ಪ್ರಕ. 5:5:
ನಮ್ಮ ಕರ್ತನು ಯೆಹೂದ ಗೋತ್ರದಲ್ಲಿ ಜನಿಸಿಬಂದವನೆಂಬುದು ಸ್ಪಷ್ಟವಾಗಿದೆ. ಈ ಗೋತ್ರಕ್ಕೆ ಸಂಬಂಧಿಸಿದಂತೆ ಮೋಶೆಯು ಯಾಜಕರ ಕುರಿತಾಗಿ ಏನನ್ನೂ ಹೇಳಲಿಲ್ಲ.

15
This verse is empty because in this translation its contents have been moved to form part of verse Heb 7:16.
In this translation, this verse contains text which in some other translations appears in verses Heb 7:15-Heb 7:16.
16ಈ ಯಾಜಕನು ಶರೀರದ ಸಂಬಂಧಪಟ್ಟಿರುವ ನಿಯಮದ ಪ್ರಕಾರವಾಗಿರದೆ, ಲಯವಾಗದ ಜೀವಶಕ್ತಿಯ ಮೇರೆಗೆ, ಮೆಲ್ಕಿಜೆದೇಕನಂತೆ ಇನ್ನೊಬ್ಬ ಯಾಜಕನು ಎಳುತ್ತಾನೆಂಬುದಾದರೆ ಅದು ಇನ್ನೂ ಹೆಚ್ಚು ಸ್ಪಷ್ಟವಾಗಿ ವ್ಯಕ್ತವಾಗುತ್ತದಲ್ಲಾ. 17ಆತನ ವಿಷಯದಲ್ಲಿ
7:17 ಕೀರ್ತ. 110:4; ಇಬ್ರಿ. 5:6; 7:21:
<<ನೀನು ಸದಾಕಾಲಕ್ಕೂ ಮೆಲ್ಕಿಜೆದೇಕನ ತರಹದ ಯಾಜಕನೇ>> ಎಂಬುದಾಗಿ ಧರ್ಮಶಾಸ್ತ್ರವು ಸಾಕ್ಷಿಕರಿಸುತ್ತದೆ.

18ಯಾಕೆಂದರೆ ಮೊದಲಿದ್ದ ಆಜ್ಞೆಯು
7:18 ರೋಮಾ. 8:3; ಗಲಾ. 4:9:
ದುರ್ಬಲವೂ, ನಿಷ್ಪ್ರಯೋಜಕವೂ ಆಗಿರುವ ಕಾರಣದಿಂದ ಅದು ರದ್ದಾಯಿತು.
19
7:19 ಇಬ್ರಿ. 9:9; 10:1; ಯಾಜ. 16:16; ಅ. ಕೃ. 13:39:
ಧರ್ಮಶಾಸ್ತ್ರವು ಯಾವುದನ್ನೂ ಪರಿಪೂರ್ಣ ಮಾಡುವುದಿಲ್ಲ. ಅದಕ್ಕೆ ಬದಲಾಗಿ ದೇವರ ಸಮೀಪಕ್ಕೆ ನಡೆಸಲ್ಪಡುವಂಥ
7:19 ಇಬ್ರಿ. 6:18:
ಉತ್ತಮವಾದ ಹೊಸ
7:19 ವ. 25; ಇಬ್ರಿ. 4:16:
ನಿರೀಕ್ಷೆಯೊಂದು ಕೊಡಲ್ಪಟ್ಟಿದೆ.

20ಇದು ಪ್ರತಿಜ್ಞೆ ರಹಿತವಾದ್ದದು ಅಲ್ಲ. ಇದಲ್ಲದೆ ಲೇವಿಯರು ಪ್ರತಿಜ್ಞೆಯಿಲ್ಲದೆ ಯಾಜಕರಾದರು. 21ಆತನಾದರೋ, ಪ್ರತಿಜ್ಞೆಯೊಡನೆ ಯಾಜಕನಾಗಿ ಮಾಡಲ್ಪಟ್ಟನು. ಆದರೆ ದೇವರು ಆತನಿಗೆ

7:21 ವ. 17:
<< <ನೀನು ಸದಾಕಾಲವೂ ಯಾಜಕನಾಗಿದ್ದೀ> ಎಂದು ನಾನು ಪ್ರಮಾಣಮಾಡಿ ನುಡಿದಿದ್ದೇನೆ ಮತ್ತು
ತನ್ನ ಮನಸ್ಸನ್ನು ಬದಲಾಯಿಸುವುದಿಲ್ಲ>> ಎಂಬುದಾಗಿ ಹೇಳಿದ್ದಾನೆ.

22ಯೇಸು ಪ್ರತಿಜ್ಞೆಯೊಡನೆಯೇ
7:22 ಇಬ್ರಿ. 8:6:
ಎಷ್ಟೋ ಶ್ರೇಷ್ಠವಾದ ಒಡಂಬಡಿಕೆಗೆ ಆಧಾರನಾದನು.
23ಲೇವಿಯರು ಶಾಶ್ವತವಾಗಿ ಉದ್ಯೋಗನಡಿಸುವುದಕ್ಕೆ ಮರಣವು ಅಡ್ಡಿಯಾಗಿರುವುದರಿಂದ ಅವರಲ್ಲಿ ಅನೇಕರು ಯಾಜಕರಾದರು. 24
7:24 ಇಬ್ರಿ. 7:21,28:
ಆತನಾದರೋ ಸದಾಕಾಲ ಜೀವಿಸುವುದರಿಂದ ಆತನ ಯಾಜಕತ್ವವನ್ನು ಶಾಶ್ವತವಾದ್ದದು.

25ಆದಕಾರಣ ಆತನು
7:25 ವ. 19; ಯೋಹಾ. 14:6:
ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವುದಕ್ಕೆ ಶಕ್ತನಾಗಿದ್ದಾನೆ. ಯಾಕೆಂದರೆ
7:25 ಇಬ್ರಿ. 9:24; ರೋಮಾ. 8:34:
ಅವರಿಗೋಸ್ಕರ ವಿಜ್ಞಾಪನೆ ಮಾಡುವುದಕ್ಕೆ ಯಾವಾಗಲೂ ಬದುಕುವವನಾಗಿದ್ದಾನೆ.

26ಇಂಥವನೇ ನಮಗೆ ಬೇಕಾಗಿರುವ ಮಹಾಯಾಜಕನು, ಈತನು
7:26 ಕೀರ್ತ. 16:10; ಪ್ರಕ. 15:4; 16:5:
ಪರಿಶುದ್ಧನೂ, ನಿರ್ದೋಷಿಯೂ, ನಿಷ್ಕಳಂಕನೂ,
7:26 ಇಬ್ರಿ. 4:15:
ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವವನು,
7:26 ಇಬ್ರಿ. 8:1; 4:14:
ಆಕಾಶಮಂಡಲಗಳಿಗಿಂತ ಉನ್ನತದಲ್ಲಿರುವವನೂ ಆಗಿರುವನು.

27
7:27 ಇಬ್ರಿ. 5:3:
ಮೊದಲು ತಮ್ಮ ಪಾಪಪರಿಹಾರಕ್ಕಾಗಿ ಆ ಮೇಲೆ ಜನರ ಪಾಪಪರಿಹಾರಕ್ಕಾಗಿ ಯಜ್ಞ ಸಮರ್ಪಣೆಮಾಡುವ ಲೇವಿ ಮಹಾಯಾಜಕರಂತೆ ಈತನು ಪ್ರತಿದಿನವೂ ಯಜ್ಞಗಳನ್ನು ಸಮರ್ಪಿಸಬೇಕಾದ ಅವಶ್ಯವಿಲ್ಲ. ಏಕೆಂದರೆ ಈತನು ತನ್ನನ್ನು ತಾನೇ ಸಮರ್ಪಿಸಿಕೊಂಡು
7:27 ಇಬ್ರಿ. 9:12,28; 10:10:
ಒಂದೇ ಸಾರಿ ಆ ಕೆಲಸವನ್ನು ಮಾಡಿ ಮುಗಿಸಿದನು.
ಧರ್ಮಶಾಸ್ತ್ರವು
7:28 ಇಬ್ರಿ. 5:2:
ದುರ್ಬಲರಾದ ಮನುಷ್ಯರನ್ನು ಮಹಾಯಾಜಕರನ್ನಾಗಿ ನೇಮಕ ಮಾಡುತ್ತದೆ. ಆದರೆ ಧರ್ಮಶಾಸ್ತ್ರದ ತರುವಾಯ ಪ್ರತಿಜ್ಞೆಯೊಡನೆ ಬಂದ ವಾಕ್ಯವು ಸದಾಕಾಲಕ್ಕೂ
7:28 ಇಬ್ರಿ. 2:10; 5:9:
ಸರ್ವಸಂಪೂರ್ಣನಾಗಿರುವ ಮಗನನ್ನೇ ಯಾಜಕನನ್ನಾಗಿ ನೇಮಕ ಮಾಡಿದೆ.

28

Copyright information for KanULB