Hebrews 8

ಯೇಸುವಿನ ಯಾಜಕತ್ವವು ಶಾಶ್ವತವಾದದ್ದು

1ನಾವು ಈಗ ಹೇಳುವ ಸಂಗತಿಗಳಲ್ಲಿ
8:1 ಅಥವಾ, ಮಾತೇನಂದರೆ, ಇಂಥ ಮಹಾಯಾಜಕನೇ ನಮಗಿದ್ದಾನೆ; ಈತನು ಪರಲೋಕದೊಳಗೆ ಬಲಪಾರ್ಶ್ವದಲ್ಲಿ ಕುಳಿತಿದ್ದು ಪವಿತ್ರಸ್ಥಾನದಲ್ಲಿ.
ಮುಖ್ಯವಾದ ಮಾತೇನೆಂದರೆ, ಪರಲೋಕದೊಳಗೆ
8:1 ಮಾರ್ಕ. 16:19:
ಮಹೋನ್ನತನ ಸಿಂಹಾಸನದ ಬಲಗಡೆಯಲ್ಲಿ ಆಸನಾರೂಢನಾದಂಥ ಮಹಾಯಾಜಕನು ನಮಗಿದ್ದಾನೆ.
2ಆತನು ಪವಿತ್ರ ಸ್ಥಾನದಲ್ಲಿ ಮನುಷ್ಯರಿಂದಲ್ಲ, ಕರ್ತನೇ ಹಾಕಿದ
8:2 ಇಬ್ರಿ. 9:11, 24:
ನಿಜವಾದ ದೇವದರ್ಶನ ಗುಡಾರದಲ್ಲಿ ಯಾಜಕೋದ್ಯೋಗ ನಡಿಸುವವನಾಗಿದ್ದಾನೆ.

3
8:3 ಇಬ್ರಿ. 5:1:
ಪ್ರತಿಯೊಬ್ಬ ಮಹಾಯಾಜಕನು ಕಾಣಿಕೆಗಳನ್ನೂ, ಯಜ್ಞಗಳನ್ನೂ ಸಮರ್ಪಿಸುವುದಕ್ಕೆ ನೇಮಕವಾಗಿರುತ್ತಾನೆ. ಆದ್ದರಿಂದ
8:3 ಇಬ್ರಿ. 9:12-14; 10:9-12; ಎಫೆ. 5:2:
ಸಮರ್ಪಿಸುವುದಕ್ಕೆ ಈತನಿಗೂ ಸಹ ಏನಾದರೂ ಇರುವುದು ಅಗತ್ಯವಾಗಿದೆ.
4ಆತನು ಇನ್ನೂ ಭೂಮಿಯ ಮೇಲೆ ಇದ್ದಿದ್ದರೆ ಯಾಜಕನಾಗುತ್ತಿರಲಿಲ್ಲ. ಯಾಕೆಂದರೆ ಧರ್ಮಶಾಸ್ತ್ರದ ಪ್ರಕಾರ ಕಾಣಿಕೆಗಳನ್ನು ಸಮರ್ಪಿಸುವವರು ಇದ್ದಾರಲ್ಲಾ. 5ಮೋಶೆಯು ಗುಡಾರವನ್ನು ಕಟ್ಟುವುದಕ್ಕಿದ್ದಾಗ, <<ನೋಡು, ನಾನು
8:5 ವಿಮೋ. 25:40.
ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಎಲ್ಲವನ್ನೂ ಮಾಡಬೇಕು>> ಎಂದು ದೇವರಿಂದ ಎಚ್ಚರಿಸಲ್ಪಟ್ಟಂತೆಯೇ ಪರಲೋಕದಲ್ಲಿರುವವುಗಳ
8:5 ಇಬ್ರಿ. 9:23:
ಪ್ರತಿರೂಪವೂ,
8:5 ಇಬ್ರಿ. 10:1; ಕೊಲೊ. 2:17:
ಛಾಯೆಯೂ ಆಗಿರುವ ಆಲಯದಲ್ಲಿ ಅವರು ಸೇವೆ ಸಲ್ಲಿಸುತ್ತಿದ್ದಾರೆ.

6ಆದರೆ ಯೇಸು ಕ್ರಿಸ್ತನು ಅದಕ್ಕಿಂತ
8:6 ಇಬ್ರಿ. 1:4; 2 ಕೊರಿ. 3:6-11:
ಶ್ರೇಷ್ಠವಾದ ಉತ್ತಮ ಸೇವೆಯನ್ನು ಹೊಂದಿದವನಾಗಿದ್ದಾನೆ, ಯಾಕೆಂದರೆ ಈತನು ಉತ್ತಮ ವಾಗ್ದಾನಗಳ ಮೇಲೆ ಸ್ಥಾಪಿತವಾದ
8:6 ಇಬ್ರಿ. 7:22:
ಉತ್ತಮವಾದ ಒಡಂಬಡಿಕೆಗೆ ಮಧ್ಯಸ್ಥನಾಗಿದ್ದಾನೆ.

7
8:7 ಇಬ್ರಿ. 7:11:
ಆ ಮೊದಲನೆಯ ಒಡಂಬಡಿಕೆಯು ದೋಷವಿಲ್ಲದ್ದಾಗಿದ್ದರೆ, ಎರಡನೆಯ ಒಡಂಬಡಿಕೆಯ ಅಗತ್ಯವಿರುತ್ತಿರಲಿಲ್ಲ.

8ಆದರೆ ದೇವರು ಆ ಜನರಲ್ಲಿ ತಪ್ಪು ಹೊರಿಸಿ ಹೀಗೆಂದನು,

8:8 ಯೆರೆ. 31:31-34:
<< <ಇಗೋ, ನಾನು ಇಸ್ರಾಯೇಲ್ ವಂಶದವರೊಂದಿಗೂ ಯೆಹೂದ ವಂಶದವರೊಂದಿಗೂ
ಹೊಸದಾಗಿರುವ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳುವ ದಿನಗಳು ಬರುವವು> ಎಂದು ಕರ್ತನು ಹೇಳುತ್ತಾನೆ.
9<ಈ ಒಡಂಬಡಿಕೆಯು ನಾನು ಇವರ ಪಿತೃಗಳನ್ನು ಕೈಹಿಡಿದು ಐಗುಪ್ತ ದೇಶದೊಳಗಿನಿಂದ ಕರೆದುಕೊಂಡು ಬಂದ ದಿನದಲ್ಲಿ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯ ಹಾಗಲ್ಲ.
ಏಕೆಂದರೆ ಅವರು ನನ್ನ ಒಡಂಬಡಿಕೆಯಲ್ಲಿ ಸ್ಥಿರವಾಗಿ ನಿಲ್ಲಲಿಲ್ಲವಾದ್ದರಿಂದ ನಾನು ಅವರನ್ನು ಲಕ್ಷಿಸಲಿಲ್ಲ> ಎಂದು ಕರ್ತನು ಹೇಳುತ್ತಾನೆ.

10
8:10 ಇಬ್ರಿ. 10:16; ರೋಮಾ. 11:27:
<ಆ ದಿನಗಳ ತರುವಾಯ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು> ಹೀಗಿರುವುದು,

<ನಾನು ನನ್ನ ಆಜ್ಞೆಗಳನ್ನು ಅವರ ಮನಸ್ಸಿನಲ್ಲಿ ಇಡುವೆನು.
ನಾನು
8:10 2 ಕೊರಿ. 3:3:
ಅವರ ಹೃದಯಗಳ ಮೇಲೆ ಅವುಗಳನ್ನು ಬರೆಯುವೆನು.
ನಾನು ಅವರಿಗೆ ದೇವರಾಗಿರುವೆನು.
ಅವರು ನನ್ನ ಜನರಾಗಿರುವರು.

11ಇದಲ್ಲದೆ ಪ್ರತಿಯೊಬ್ಬನು ತನ್ನ ನೆರೆಯವನಿಗೂ ತನ್ನ ಸಹೋದರನಿಗೂ

<<ಕರ್ತನನ್ನು ತಿಳಿದುಕೊಳ್ಳಿರಿ>> ಎಂದು ಬೋಧಿಸಬೇಕಾಗಿರುವುದಿಲ್ಲ.
ಏಕೆಂದರೆ
8:11 ಯೆಶಾ. 54:13; ಯೋಹಾ 6:45; 1 ಯೋಹಾ. 2:27:
ಹೀನರಾದವರು ಮೊದಲುಗೊಂಡು ಉನ್ನತರಾದವರ ತನಕ ಎಲ್ಲರೂ ನನ್ನನ್ನು ತಿಳಿದುಕೊಂಡಿರುವರು.
12ನಾನು ಅವರ ದುಷ್ಕೃತ್ಯಗಳನ್ನು ಕರುಣೆಯಿಂದ ಕ್ಷಮಿಸುವೆನು
ಮತ್ತು
8:12 ಇಬ್ರಿ. 10:17; ರೋಮಾ. 11:27:
ಅವರ ಪಾಪಗಳನ್ನು ಎಂದಿಗೂ ನೆನಪಿಗೆ ತಂದುಕೊಳ್ಳುವುದಿಲ್ಲ> >> ಎಂದು ಕರ್ತನು ನುಡಿಯುತ್ತಾನೆ.

ಆತನು <<ಹೊಸತು>> ಎಂದು ಹೇಳಿದ್ದರಲ್ಲಿ ಮೊದಲಿದ್ದ ಒಡಂಬಡಿಕೆಯನ್ನು
8:13 2 ಕೊರಿ. 5:17:
ಹಳೆಯದಾಗಿ ಮಾಡಿದ್ದಾನೆ. ಅದು ಹಳೆಯದಾಗುತ್ತಾ ಅಳಿದುಹೋಗುವುದಕ್ಕೆ ಸಮೀಪವಾಗಿದೆ.

13

Copyright information for KanULB