James 1

ಕಷ್ಟಗಳನ್ನೂ ದುಷ್ಪ್ರೇರಣೆಗಳನ್ನೂ ಕುರಿತದ್ದು

1ದೇವರಿಗೂ
1:1 ರೋಮಾ. 1:1; 2 ಪೇತ್ರ. 1:1; ಯೂದ 1:
ಕರ್ತನಾದ ಯೇಸು ಕ್ರಿಸ್ತನಿಗೂ ದಾಸನಾಗಿರುವ
1:1 ಅ. ಕೃ. 12:17:
ಯಾಕೋಬನು ಅನ್ಯದೇಶಗಳಲ್ಲಿ
1:1 1 ಪೇತ್ರ. 1:1:
ಚದುರಿರುವ ಇಸ್ರಾಯೇಲ್ಯರ
1:1 ಲೂಕ. 22:30; ಅ. ಕೃ. 26:7:
ಹನ್ನೆರಡು ಗೋತ್ರದವರಿಗೂ ಬರೆಯುವುದೇನೆಂದರೆ, <<ನಿಮಗೆ ಶುಭವಾಗಲಿ.>>
2ನನ್ನ ಸಹೋದರರೇ, ನೀವು
1:2 1 ಪೇತ್ರ. 1:6:
ನಾನಾವಿಧವಾದ ಕಷ್ಟಗಳನ್ನು ಅನುಭವಿಸುವಾಗ
1:2 ಮತ್ತಾ 5:12; ಅ. ಕೃ. 5:41; ಕೊಲೊ. 1:11:
ಅದನ್ನು ಕೇವಲ ಆನಂದಕರವಾದದ್ದೆಂದು ತಿಳಿಯಿರಿ.
3ಏಕೆಂದರೆ
1:3 1 ಪೇತ್ರ. 1:7:
ನಿಮ್ಮ ನಂಬಿಕೆಗೆ ಆಗುವ ಪರಿಶೋಧನೆಯು ನಿಮಗೆ
1:3 ರೋಮಾ. 5:6; ಯಾಕೋಬ 5:11; ಇಬ್ರಿ. 10:36; 2 ಪೇತ್ರ. 1:6
ತಾಳ್ಮೆಯನ್ನುಂಟು ಮಾಡುತ್ತದೆಂದು ನೀವು ತಿಳಿಯಿರಿ.

4ಆ ತಾಳ್ಮೆಯು ಸಂಪೂರ್ಣವಾಗಿ ನಿಮ್ಮಲ್ಲಿ ಫಲಿಸಲಿ, ಆಗ
1:4 1 ಥೆಸ. 5:23; ಮತ್ತಾ 5:48:
ನೀವು ಸರ್ವಸುಗುಣಸಂಪನ್ನರೂ, ಪರಿಪೂರ್ಣರೂ, ಯಾವುದಕ್ಕೂ ಕಡಿಮೆಯಿಲ್ಲದವರೂ ಆಗುವಿರಿ.
5
1:5 1 ಅರಸು. 3:9-12; ಜ್ಞಾ. 2:3-6:
ನಿಮ್ಮಲ್ಲಿ ಯಾರಿಗಾದರು ಜ್ಞಾನದ ಕೊರತೆಯಿರುವುದಾದರೆ ಅವರು ದೇವರನ್ನು ಬೇಡಿಕೊಳ್ಳಲಿ,
1:5 ಮಾರ್ಕ. 11:24; ಯೋಹಾ. 14:13; 1 ಯೋಹಾ 3:22; 5:14,15:
ಅದು ಅವರಿಗೆ ದೊರಕುವುದು. ಯಾಕೆಂದರೆ ದೇವರು ಗದರಿಸದೆ ಎಲ್ಲರಿಗೂ ಉದಾರವಾಗಿ ಕೊಡುವಾತನಾಗಿದ್ದಾನೆ.

6ಆದರೆ ದೇವರ ಬಳಿ ಬೇಡುವವನು
1:6 ಮತ್ತಾ 21:21:
ಸ್ವಲ್ಪವೂ ಸಂದೇಹಪಡದೆ
1:6 ಮಾರ್ಕ. 11:24:
ನಂಬಿಕೆಯಿಂದ ಬೇಡಿಕೊಳ್ಳಲಿ. ಸಂದೇಹಪಡುವವನು
1:6 ಯೆಶಾ. 57:20; ಎಫೆ. 4:14:
ಗಾಳಿಯಿಂದ ಬಡಿಯಲ್ಪಟ್ಟ ಸಮುದ್ರದ ಅಲೆಯಂತೆ ಅತ್ತಿತ್ತ ಅಲೆಯುತ್ತಿತ್ತಾನೆ.
7ಇಂತವನು ತಾನು ಕರ್ತನಿಂದ ಬೇಡಿಕೊಂಡಿದ್ದೆಲ್ಲವನ್ನು ಹೊಂದುವೆನೆಂದು ಭಾವಿಸದೆ ಇರಲಿ. 8ಏಕೆಂದರೆ ಅವನು
1:8 ಯಾಕೋಬ. 4:8:
ಎರಡು ಮನಸ್ಸುಳ್ಳವನು, ತನ್ನ ನಡತೆಯಲ್ಲಿ ಚಂಚಲನಾಗಿದ್ದಾನೆ.

9ದೀನಸ್ಥಿತಿಯಲ್ಲಿರುವ ಸಹೋದರನು ತಾನು ಉನ್ನತ ಸ್ಥಿತಿಗೆ ಬಂದೆನೆಂದು ಉಲ್ಲಾಸಪಡಲಿ. 10
1:10 ಯೆರೆ. 9:23:
ಐಶ್ವರ್ಯವಂತನಾದ ಸಹೋದರನು ತಾನು ದೀನಸ್ಥಿತಿಗೆ ಬಂದೆನೆಂದು ಉಲ್ಲಾಸಪಡಲಿ; ಏಕೆಂದರೆ ಐಶ್ವರ್ಯವಂತನು
1:10 ಕೀರ್ತ. 102:11; 1 ಕೊರಿ. 7:31; 1 ಪೇತ್ರ. 1:24:
ಹುಲ್ಲಿನ ಹೂವಿನಂತೆ ಗತಿಸಿ ಹೋಗುವನು.
11
1:11 ಯೆಶಾ. 40. 7:
ಸೂರ್ಯನು ಉದಯಿಸಿದ ಮೇಲೆ ಸುಡುವ ಬಿಸಿಲಿಗೆ ಸಸಿಯು ಬಾಡಿ, ಹೂವು ಉದುರಿ ಅದರ ಸೊಗಸು ನಾಶವಾಗುತ್ತದೆ; ಹಾಗೆಯೇ ಐಶ್ವರ್ಯವಂತನು ತನ್ನ ಪ್ರಯತ್ನಗಳಲ್ಲಿ ಕುಂದಿಹೋಗುವನು.

12
1:12 ಯಾಕೋಬ. 5:11; ಮತ್ತಾ 10:22; 1 ಪೇತ್ರ. 3:14:
ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು. ಅವನು ಪರಿಶೋಧಿತನಾದ ಮೇಲೆ ಕರ್ತನು
1:12 ಯಾಕೋಬ. 2:5:
ತನ್ನನ್ನು ಪ್ರೀತಿಸುವವರಿಗೆ ವಾಗ್ದಾನಮಾಡಿದಂತೆ ನಿತ್ಯ
1:12 ಪ್ರಕ. 2:10; 3:11; 1 ಕೊರಿ. 9:25; 1 ಪೇತ್ರ. 5:4
ಜೀವದ ಕಿರೀಟವನ್ನು ಹೊಂದುವನು.
13ಯಾರಾದರೂ ಶೋಧನೆಗೆ ಪ್ರೇರೇಪಿಸಲ್ಪಡುವಾಗ <<ಈ ಪ್ರೇರಣೆಯು ತನಗೆ ದೇವರಿಂದ ಉಂಟಾಯಿತೆಂದು>> ಹೇಳಬಾರದು. ಏಕೆಂದರೆ ದೇವರು ಕೆಟ್ಟದ್ದಕ್ಕೆ ಪ್ರೇರಣೆ ನೀಡುವವನಲ್ಲ. ಮತ್ತು ಆತನು ಯಾರನ್ನೂ ಪಾಪಕ್ಕೆ ಪ್ರೇರೇಪಿಸಿ ಶೋಧಿಸುವುದೂ ಇಲ್ಲ.

14ಆದರೆ ಪ್ರತಿಯೊಬ್ಬನು ತನ್ನ ಸ್ವಂತ ದುರಾಶೆಗಳಿಂದ ಸೆಳೆಯಲ್ಪಟ್ಟು ಮರುಳುಗೊಂಡವನಾಗಿ ಶೋಧಿಸಲ್ಪಡುತ್ತಾನೆ. 15ಆ ಮೇಲೆ
1:15 ರೋಮಾ. 5:12; 6:23:
ದುರಾಶೆಯು ಗರ್ಭಧರಿಸಿ ಪಾಪವನ್ನು ಹೆರುತ್ತದೆ. ಪಾಪವು
1:15 ಯೋಬ. 15:35; ಕೀರ್ತ. 7:14; ಯೆಶಾ. 59:4:
ಪೂರ್ಣವಾಗಿ ಬೆಳೆದು ಮರಣವನ್ನು ತರುತ್ತದೆ.

16ನನ್ನ ಪ್ರಿಯ ಸಹೋದರರೇ, ಮೋಸಹೋಗಬೇಡಿರಿ.

17
1:17 ಯೋಹಾ 3:27; 1 ಕೊರಿ. 4:7:
ಎಲ್ಲಾ ಒಳ್ಳೆಯ ವರಗಳು ಮತ್ತು ಪರಿಪೂರ್ಣವಾದ ವರಗಳು ಮೇಲಿನಿಂದ ಬಂದವುಗಳೇ, ಅವು
1:17 1 ಯೋಹಾ. 1:5
ಸಕಲ ವಿಧವಾದ ಬೆಳಕಿಗೆ ಮೂಲಕರ್ತನಾದ ದೇವರಿಂದ ಇಳಿದು ಬರುತ್ತವೆ;
1:17 ಮಲಾ. 3:6:
ಆತನು ನೆರಳಿನಂತೆ
1:17 ಅಥವಾ, ಗ್ರಹಣದಂತಿರುವ ನೆರಳೂ.
ಬದಲಾಗುವವನಲ್ಲ, ಚಂಚಲಚಿತ್ತನೂ ಅಲ್ಲ.
18ದೇವರು
1:18 ಯೋಹಾ. 1:13:
ತನ್ನ ಸುಚಿತ್ತದ ಪ್ರಕಾರ ಸತ್ಯವಾಕ್ಯದ ಮೂಲಕ ಜೀವಕೊಟ್ಟಿವುದರಿಂದ
1:18 ಯೆರೆ. 2:3; ಪ್ರಕ. 14:4; ರೋಮಾ. 8:19-23; ಎಫೆ. 1:12:
ನಾವು ಆತನ ಸರ್ವ ಸೃಷ್ಟಿಯಲ್ಲಿ ಪ್ರಥಮ ಫಲವಾದೆವು.

ದೇವರ ವಾಕ್ಯವನ್ನು ಕೇಳಿ ಅದನ್ನು ಅನುಸರಿಸುವ ವಿಧಾನ

19
1:19 1 ಯೋಹಾ 2:21:
ನನ್ನ ಪ್ರಿಯ ಸಹೋದರರೇ, ನೀವು ಇದನ್ನು ಚೆನ್ನಾಗಿ ತಿಳಿದುಕೊಳ್ಳಿರಿ, ಪ್ರತಿಯೊಬ್ಬನೂ
1:19 ಪ್ರಸಂಗಿ 5:1,2:
ಕಿವಿಗೊಡುವುದರಲ್ಲಿ ಚುರುಕಾಗಿಯೂ,
1:19 ಜ್ಞಾ. 10:19; 17:27:
ಮಾತನಾಡುವುದರಲ್ಲಿ ಮತ್ತು
1:19 ಜ್ಞಾ. 14:29:
ಕೋಪಿಸುವುದರಲ್ಲಿ ತಾಳ್ಮೆಯಿಂದಲೂ, ನಿಧಾನದಿಂದಲೂ ಇರಲಿ.
20ಏಕೆಂದರೆ ಮನುಷ್ಯನು ಕೋಪಗೊಂಡಾಗ ದೇವರು ಬಯಸುವ ನೀತಿ ಕಾರ್ಯಗಳನ್ನು ಮಾಡಲು ಸಾಧ್ಯವಾಗುವುದಿಲ್ಲ. 21ಆದಕಾರಣ
1:21 ಕೊಲೊ. 3:8; 1 ಪೇತ್ರ. 2:1:
ಎಲ್ಲಾ ನೀಚತನವನ್ನೂ, ಎಲ್ಲಾ ದುಷ್ಟತನವನ್ನೂ ತೆಗೆದುಹಾಕಿ ಮನಸ್ಸಿನೊಳಗೆ ಬೇರೂರಿರುವ ದೇವರ ವಾಕ್ಯವನ್ನು ನಮ್ರತೆಯಿಂದ ಸ್ವೀಕರಿಸಿರಿ.
1:21 1 ಕೊರಿ. 15:2; ಎಫೆ. 1:13:
ಅದು ನಿಮ್ಮ ಆತ್ಮಗಳನ್ನು ರಕ್ಷಿಸುವುದಕ್ಕೆ ಸಾಮರ್ಥ್ಯವುಳ್ಳದ್ದಾಗಿರುತ್ತದೆ.

22ದೇವರ ವಾಕ್ಯದ ಪ್ರಕಾರ ನಡೆಯುವವರಾಗಿರಿ, ಅದನ್ನು ಕೇವಲ
1:22 ರೋಮಾ. 2:13; ಮತ್ತಾ 7:21,24-27; ಯೋಹಾ. 13:17:
ಕೇಳುವವರು ಮಾತ್ರವೇ ಆಗಿದ್ದು ನಿಮ್ಮನ್ನು ನೀವೇ ಮೋಸಗೊಳಿಸಿಕೊಳ್ಳಬೇಡಿರಿ.
23ಯಾವನಾದರೂ ವಾಕ್ಯವನ್ನು ಕೇಳುವವನಾಗಿದ್ದು ಅದರ ಪ್ರಕಾರ ನಡೆಯದಿದ್ದರೆ ಅವನು ಕನ್ನಡಿಯಲ್ಲಿ ತನ್ನ ಸಹಜ ಮುಖವನ್ನು ನೋಡಿದ ಮನುಷ್ಯನಂತಿರುವನು. 24ಏಕೆಂದರೆ ಇವನು ತನ್ನನ್ನು ತಾನೇ ನೋಡಿ ನಂತರ ತಾನು ಹೀಗಿದ್ದೇನೆಂಬುದನ್ನು ಆ ಕ್ಷಣವೇ ಮರೆತುಬಿಡುವನು. 25ಆದರೆ
1:25 ಅಥವಾ, ಬಿಡುಗಡೆಯಾದವರಿಗೆ ಇರುವ. ಯೋಹಾ 8:32; ಗಲಾ. 2:4; 1 ಪೇತ್ರ. 2:16:
ಬಿಡುಗಡೆಯನ್ನು ಉಂಟುಮಾಡುವ ಪರಿಪೂರ್ಣವಾದ ಧರ್ಮಶಾಸ್ತ್ರವನ್ನು ಲಕ್ಷ್ಯಕೊಟ್ಟು ಓದಿ, ಮನನ ಮಾಡಿ ಅದನ್ನು ಅನುಸರಿಸುವವನು ವಾಕ್ಯವನ್ನು ಕೇಳಿ ಮರೆತು ಹೋಗದೆ ಅದರ ಪ್ರಕಾರ ನಡೆಯುತ್ತಾ
1:25 ಕೀರ್ತ. 1:1; ಲೂಕ. 11:28:
ತನ್ನ ನಡತೆಯಿಂದ, ಕ್ರಿಯೆಗಳಿಂದ ಧನ್ಯನಾಗುವನು.

26ತನ್ನನ್ನು ಸದ್ಭಕ್ತನೆಂದೆಣಿಸಿಕೊಳ್ಳುವ ಯಾವನಾದರೂ
1:26 ಕೀರ್ತ. 39:1; 141:3:
ತನ್ನ ನಾಲಿಗೆಯನ್ನು ಹತೋಟಿಯಲ್ಲಿ ಇಟ್ಟುಕೊಳ್ಳದೆ ತನ್ನ ಹೃದಯವನ್ನು ಮೋಸಗೊಳಿಸುವವನಾದರೆ ಅವನ ಭಕ್ತಿಯು ವ್ಯರ್ಥವಾಗಿದೆ.
ಸಂಕಟದಲ್ಲಿ ಬಿದ್ದಿರುವ
1:27 ಯೋಬ. 31:17,18; ಯೆಶಾ. 1:7,23:
ದಿಕ್ಕಿಲ್ಲದವರನ್ನೂ, ವಿಧವೆಯರನ್ನೂ ಪರಾಂಬರಿಸಿ ತನಗೆ
1:27 1 ತಿಮೊ. 5:22; 2 ಪೇತ್ರ. 3:14; 1 ಯೋಹಾ. 5:18:
ಇಹಲೋಕದ ದೋಷವು ಹತ್ತದಂತೆ ತನ್ನನ್ನು ತಾನು ಕಾಪಾಡಿಕೊಳ್ಳುವುದೇ ತಂದೆಯಾದ ದೇವರ ಸನ್ನಿಧಾನದಲ್ಲಿ ಶುದ್ಧವೂ, ನಿರ್ಮಲವೂ ಆಗಿರುವ ಭಕ್ತಿ.

27

Copyright information for KanULB