James 2

ಪಕ್ಷಪಾತವನ್ನು ಕುರಿತದ್ದು

1ನನ್ನ ಸಹೋದರರೇ,
2:1 1 ಕೊರಿ. 2:8,
ಮಹಿಮೆಯುಳ್ಳ ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟವರಾದ ನೀವು
2:1 ವ. 9; ಯಾಜ. 19:15; ಧರ್ಮೋ. 1:17; 10:17; ಜ್ಞಾ. 24:23; ರೋಮಾ. 2:11; ಎಫೆ. 6:9:
ಪಕ್ಷಪಾತಿಗಳಾಗಿರಬಾರದು.
2ಹೇಗೆಂದರೆ ಒಬ್ಬ ಮನುಷ್ಯನು ಚಿನ್ನದ ಉಂಗುರಗಳನ್ನು ಮತ್ತು ಉತ್ತಮವಾದ ವಸ್ತ್ರಗಳನ್ನೂ ಹಾಕಿಕೊಂಡು ನಿಮ್ಮ ಸಭೆಯೊಳಗೆ ಬಂದಾಗ ಮತ್ತು ಒಬ್ಬ ಬಡ ಮನುಷ್ಯನು ಕೊಳಕು ಬಟ್ಟೆಗಳನ್ನು ಧರಿಸಿಕೊಂಡು ಬಂದಾಗ, 3ನೀವು ಉತ್ತಮವಾದ ವಸ್ತ್ರಗಳನ್ನು ಧರಿಸಿಕೊಂಡು ಬಂದಿರುವವನನ್ನು ಗೌರವದಿಂದ ನೋಡಿ ಅವನಿಗೆ <<ನೀವು ಇಲ್ಲಿ ಈ ಗೌರವ ಆಸನದಲ್ಲಿ ಕುಳಿತುಕೊಳ್ಳಿರಿ>> ಎಂತಲೂ, ಆ ಬಡ ಮನುಷ್ಯನಿಗೆ
2:3 ಜ್ಞಾ. 18:23:
<<ನೀನು ಅಲ್ಲಿ ನಿಂತುಕೋ>> ಇಲ್ಲವೇ <<ಇಲ್ಲಿ ನನ್ನ ಕಾಲ್ಮಣೆಯ ಬಳಿ ಕುಳಿತುಕೋ>> ಎಂತಲೂ ಹೇಳಿದರೆ,
4ನೀವು ನಿಮ್ಮ ನಿಮ್ಮಲ್ಲಿ
2:4 ಯೋಹಾ 7:24:
ಬೇಧಬಾವ ಮಾಡುವವರಾಗಿದ್ದು, ತಾರತಮ್ಯ ಆಲೋಚನೆಗಳಂತೆ ನಡೆಯುವ ನಿರ್ಧಾರ ಮಾಡುವವರಾಗಿರುತ್ತೀರಿ ಅಲ್ಲವೇ?

5ನನ್ನ ಪ್ರಿಯ ಸಹೋದರರೇ, ಕೇಳಿರಿ ದೇವರು
2:5 1 ಕೊರಿ. 1:27,28; ಯೋಬ. 34:19:
ಈ ಲೋಕದಲ್ಲಿನ ಬಡವರನ್ನು
2:5 2 ಕೊರಿ. 8:9; ಪ್ರಕ. 2:9; ಲೂಕ. 12:21:
ನಂಬಿಕೆಯಲ್ಲಿ ಐಶ್ವರ್ಯವಂತರನ್ನಾಗಿಯೂ,
2:5 ಯಾಕೋಬ. 1:12:
ತನ್ನನ್ನು ಪ್ರೀತಿಸುವವರಿಗೆ
2:5 ಮತ್ತಾ 5:3; ಲೂಕ. 6:20; 12:32:
ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?
6ನೀವಾದರೋ
2:6 1 ಕೊರಿ. 11:22:
ಬಡವರನ್ನು ಅವಮಾನಪಡಿಸಿದ್ದೀರಿ. ನಿಮ್ಮನ್ನು ಬಾಧಿಸಿ
2:6 ಅ. ಕೃ. 8:3; 16:19; 18:12:
ನ್ಯಾಯಸ್ಥಾನದ ಮುಂದೆ ಎಳೆದುಕೊಂಡು ಹೋಗುವವರು ಐಶ್ವರ್ಯವಂತರಲ್ಲವೋ?
7ನೀವು ಕರೆಯಲ್ಪಟ್ಟ ಆ
2:7 ಯೆಶಾ. 63:19; ಆಮೋ. 9:12; ಅ. ಕೃ. 15:17:
ಶ್ರೇಷ್ಠವಾದ ನಾಮವನ್ನು ದೂಷಿಸುವವರು ಅವರಲ್ಲವೋ?

8ಆದರೂ ಧರ್ಮಶಾಸ್ತ್ರಕ್ಕೆ ಸರಿಯಾಗಿ
2:8 ಯಾಜ. 19:18:
<<ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು>> ಎಂಬ ರಾಜಾಜ್ಞೆಯನ್ನು ನೆರವೇರಿಸುವವರಾದರೆ, ನೀವು ಒಳ್ಳೆಯದನ್ನೇ ಮಾಡುವವರಾಗಿರುವಿರಿ.
9ಒಂದು ವೇಳೆ ಅದನ್ನು ಬಿಟ್ಟು ನೀವು
2:9 ವ. 1:
ಪಕ್ಷಪಾತಿಗಳಾಗಿದ್ದರೆ ಪಾಪಮಾಡುವವರಾಗಿದ್ದು ಅಪರಾಧಿಗಳೆಂದು ಧರ್ಮಶಾಸ್ತ್ರದ ಪ್ರಕಾರ ತೀರ್ಮಾನಿಸಲ್ಪಡುತ್ತೀರಿ.

10ಏಕೆಂದರೆ ಯಾರಾದರೂ ಧರ್ಮಶಾಸ್ತ್ರವನ್ನೆಲ್ಲಾ ಕೈಕೊಂಡು ನಡೆದು ಅದರಲ್ಲಿ ಒಂದೇ ಒಂದು ವಿಷಯದಲ್ಲಿ ತಪ್ಪಿದರೆ
2:10 ಮತ್ತಾ 5:19; ಗಲಾ. 3:10:
ಅಂತವರು ಎಲ್ಲಾ ವಿಷಯಗಳಲ್ಲಿಯೂ ಅಪರಾಧಿಯಾಗಿರುತ್ತಾರೆ.
11ಏಕೆಂದರೆ
2:11 ವಿಮೋ. 20:13,14:
ವ್ಯಭಿಚಾರ ಮಾಡಬಾರದೆಂದು ಹೇಳಿದವನೇ ನರಹತ್ಯ ಮಾಡಬಾರದೆಂತಲೂ ಹೇಳಿದನು. ಆದಕಾರಣ ನೀನು ವ್ಯಭಿಚಾರಮಾಡದೆ ಇದ್ದರೂ ನರಹತ್ಯ ಮಾಡಿದರೆ ಧರ್ಮಶಾಸ್ತ್ರವನ್ನು ಮೀರಿದವನಾಗಿರುತ್ತಿ.

12ನೀವು
2:12 ಅಥವಾ, ಬಿಡುಗಡೆಯಾದವರಿಗೆ ಇರುವ. ಯಾಕೋಬ. 1:25:
ಬಿಡುಗಡೆಯನ್ನುಂಟು ಮಾಡುವ ಧರ್ಮಶಾಸ್ತ್ರದ ಪ್ರಕಾರ ತೀರ್ಪುಹೊಂದುವವರಿಗೆ ತಕ್ಕಂತೆ ಮಾತನಾಡಿರಿ ಮತ್ತು ವಿಧೇಯರಾಗಿರಿ.
13ಏಕೆಂದರೆ
2:13 ಯೋಬ. 22:6-11; ಕೀರ್ತ. 18:25; ಜ್ಞಾ. 21:13; ಲೂಕ. 6:38:
ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವುದಿಲ್ಲ. ಕರುಣೆಯು ನ್ಯಾಯತೀರ್ಪಿನ ಮೇಲೆ ಜಯ ಹೊಂದುತ್ತದೆ.

ನಂಬಿಕೆಯೊಂದೇ ಸಾಲದು ಅದರಂತೆ ನಡೆಯಬೇಕೆಂಬ ಭೋದನೆ

14ನನ್ನ ಸಹೋದರರೇ, ಒಬ್ಬನು ತನಗೆ ನಂಬಿಕೆಯುಂಟೆಂದು ಹೇಳಿಕೊಂಡು
2:14 ಯಾಕೋಬ. 1:22:
ತಕ್ಕ ನಡತೆ, ಕ್ರಿಯೆಗಳಿಲ್ಲದವನಾಗಿದ್ದರೆ ಪ್ರಯೋಜನವೇನು? ಅಂಥ ನಂಬಿಕೆಯು ಅವನನ್ನು ರಕ್ಷಿಸುವುದೋ?
15ನಿಮ್ಮಲ್ಲಿ
2:15 ಯೋಬ. 31:19,20:
ಒಬ್ಬ ಸಹೋದರನಿಗೆ ಇಲ್ಲವೆ ಒಬ್ಬ ಸಹೋದರಿಗೆ ಉಡಲು ಬಟ್ಟೆಯೂ ಮತ್ತು ಆ ದಿನದ ಆಹಾರವೂ ಅಗತ್ಯವಾಗಿರುವಾಗ,
16ನಿಮ್ಮಲ್ಲಿ ಒಬ್ಬನು ಅವರಿಗೆ ದೈಹಿಕ ಅವಶ್ಯಕತೆಗಳನ್ನು ಪೂರೈಸದೆ <<ಸಮಾಧಾನದಿಂದ ಹೋಗಿರಿ, ಬೆಚ್ಚಗೆ ಬಂಕಿಕಾಯಿಸಿಕೊಳ್ಳಿ, ಹೊಟ್ಟೆ ತುಂಬಾ ಊಟಮಾಡಿ>> ಎಂದು
2:16 1 ಯೋಹಾ 3:17,18:
ಹೇಳಿದರೆ ಪ್ರಯೋಜನವೇನು?
17ಹಾಗೆಯೇ ಕ್ರಿಯೆಗಳಿಲ್ಲದ ನಂಬಿಕೆಯು ನಿರ್ಜೀವವಾದದು.

18ಆದರೂ ಒಬ್ಬನು; <<ನಿನಗೆ ನಂಬಿಕೆಯುಂಟು ಮತ್ತು ನನಗೆ ಕ್ರಿಯೆಗಳುಂಟು>>
2:18 ರೋಮಾ. 3:28; ಇಬ್ರಿ. 11:33:
ನೀನು ಕ್ರಿಯೆಗಳಿಲ್ಲದೆ ನಿನ್ನ ನಂಬಿಕೆಯನ್ನು ನನಗೆ ತೋರಿಸು.
2:18 ಮತ್ತಾ 7:16,17; ಗಲಾ. 5:6:
ನಾನು ನನ್ನ ಕ್ರಿಯೆಗಳ ಮುಖಾಂತರ ನನ್ನ ನಂಬಿಕೆಯನ್ನು ತೋರಿಸುತ್ತೇನೆ ಎಂದು ಹೇಳುವನಲ್ಲವೇ.
19
2:19 ಧರ್ಮೋ. 6:4; 1 ಕೊರಿ. 8:6:
ದೇವರು ಒಬ್ಬನೇ ಎಂದು ನೀನು ನಂಬುತ್ತೀ; ಹಾಗೆ ನಂಬುವುದು ಸರಿ. ಆದರೆ
2:19 ಮತ್ತಾ 8:29; ಲೂಕ. 4:33,34; ಅ. ಕೃ. 16:17; 19:15:
ದೆವ್ವಗಳು ಸಹ ಹಾಗೆಯೇ ನಂಬಿ ಹೆದರಿ ನಡುಗುತ್ತವೆ.
20ಅವಿವೇಕಿಯೇ, ಕ್ರಿಯೆಗಳಿಲ್ಲದ ನಂಬಿಕೆಯು ವ್ಯರ್ಥವಾದದ್ದು ಎಂದು ನಿನಗೆ ಸಾಬಿತುಪಡಿಸಬೇಕೋ?

21ನಮ್ಮ ಪಿತೃವಾದ ಅಬ್ರಹಾಮನು ತನ್ನ ಮಗನಾದ ಇಸಾಕನನ್ನು ಯಜ್ಞವೇದಿಯ ಮೇಲೆ ಅರ್ಪಿಸಿದಾಗ
2:21 ಆದಿ. 22:9,12,16-18
ನೀತಿವಂತನೆಂಬ ನಿರ್ಣಯವನ್ನು ಹೊಂದಿದ್ದು ನಂಬಿಕೆಯ ಕ್ರಿಯೆಗಳಿಂದಲ್ಲವೇ?
22ಅವನ ನಂಬಿಕೆಯು
2:22 ಇಬ್ರಿ. 11:17:
ಕ್ರಿಯೆಗಳೊಂದಿಗೆ ಕಾರ್ಯಮಾಡಿತ್ತು ಮತ್ತು ಆ
2:22 1 ಥೆಸ. 1:3:
ಕ್ರಿಯೆಗಳಿಂದಲೇ ಅವನ ನಂಬಿಕೆಯ ಉದ್ದೇಶವು ನೆರವೇರಿತು ಎಂದು ಕಾಣುತ್ತೇವಲ್ಲಾ.
23
2:23 ಆದಿ. 15:6; ರೋಮಾ. 4:3; ಗಲಾ. 3:6:
<<ಅಬ್ರಹಾಮನು ದೇವರನ್ನು ನಂಬಿದನು ಮತ್ತು ಆ ನಂಬಿಕೆ ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟಿತು>> ಎಂಬ ಧರ್ಮಶಾಸ್ತ್ರದ ಮಾತು ಹೀಗೆ ನೆರವೇರಿತು. ಆದ್ದರಿಂದ ಅಬ್ರಹಾಮನು
2:23 2 ಪೂರ್ವ. 20:7; ಯೆಶಾ. 41:8:
ದೇವರ ಸ್ನೇಹಿತನೆಂದು ಕರೆಯಲ್ಪಟ್ಟನು.
24ಆದುದರಿಂದ ಮನುಷ್ಯನು ನಡತೆಯಿಂದ, ಕ್ರಿಯೆಗಳಿಂದ ನೀತಿವಂತನೆಂದು ನಿರ್ಣಯಿಸಲ್ಪಡುತ್ತಾನೆ ಹೊರತು ಬರೀ ನಂಬಿಕೆಯಿಂದಲ್ಲ ಎಂದು ನೋಡುತ್ತೀರಿ.

25ಅದೇ ರೀತಿಯಾಗಿ ವೇಶ್ಯೆಯಾದ
2:25 ಇಬ್ರಿ. 11:31:
ರಾಹಾಬಳು
2:25 ಯೆಹೋ. 2:1-22; 6:23:
ಗೂಢಚಾರರನ್ನು ತನ್ನ ಮನೆಯಲ್ಲಿ ಸೇರಿಸಿಕೊಂಡು, ಬೇರೆ ದಾರಿಯಿಂದ ಅವರನ್ನು ಕಳುಹಿಸಿದ ಕ್ರಿಯೆಗಳಿಂದಲೇ ನೀತಿವಂತಳೆಂಬ, ನಿರ್ಣಯವನ್ನು ಹೊಂದಿದಳಲ್ಲವೇ?
ಆತ್ಮವಿಲ್ಲದ ದೇಹವು ಸತ್ತದ್ದಾಗಿರುವ ಪ್ರಕಾರವೇ ಕ್ರಿಯೆಗಳಿಲ್ಲದ ನಂಬಿಕೆಯೂ ಸತ್ತದ್ದಾಗಿದೆ.

26

Copyright information for KanULB