John 21

ಯೇಸು ತನ್ನ ಶಿಷ್ಯರಿಗೆ ಪುನಃ ದರ್ಶನಕೊಟ್ಟದ್ದು

1ತರುವಾಯ ಯೇಸು ತಿಬೇರಿಯ ಸಮುದ್ರದ ಬಳಿಯಲ್ಲಿ ಶಿಷ್ಯರಿಗೆ ಪುನಃ ಕಾಣಿಸಿಕೊಂಡನು: 2ಸೀಮೋನ್ ಪೇತ್ರನೂ, ದಿದುಮನೆಂಬ ತೋಮನೂ, ಗಲಿಲಾಯದ ಕಾನಾ ಊರಿನ ನತಾನಯೇಲನೂ, ಜೆಬೆದಾಯನ ಮಕ್ಕಳೂ ಮತ್ತು ಆತನ ಶಿಷ್ಯರಲ್ಲಿ ಇನ್ನಿಬ್ಬರೂ ಕೂಡಿಬಂದಿದ್ದರು. 3ಆಗ ಅವರಿಗೆ ಸೀಮೋನ ಪೇತ್ರನು, <<ನಾನು ಮೀನು ಹಿಡಿಯಲು ಹೋಗುತ್ತೇನೆ>> ಎಂದು ಹೇಳಲು ಅವರು ಅವನಿಗೆ, <<ನಾವೂ ಸಹ ನಿನ್ನ ಜೊತೆಯಲ್ಲಿ ಬರುತ್ತೇವೆ>> ಎಂದರು. ಅವರು ಹೊರಟು ದೋಣಿಯನ್ನು ಹತ್ತಿದರು. ಆದರೆ ಆ ರಾತ್ರಿ ಅವರಿಗೆ ಏನೂ ಸಿಗಲಿಲ್ಲ.

4ಬೆಳಗಾಗುವಾಗ ಯೇಸು ದಡದಲ್ಲಿ ನಿಂತಿದ್ದನು. ಆದಾಗ್ಯೂ ಶಿಷ್ಯರು ಆತನನ್ನು ಯೇಸುವೇ ಎಂದು ಗುರುತಿಸಲಿಲ್ಲ. 5ಆಗ ಯೇಸು ಅವರನ್ನು,
21:5 ಅಥವಾ, ಯುವಕರೇ.
<<ಮಕ್ಕಳಿರಾ, ನಿಮ್ಮಲ್ಲಿ ಮೀನುಗಳು ಉಂಟೋ?>> ಎಂದು ಕೇಳಲು, ಅವರು ಆತನಿಗೆ <<ಇಲ್ಲ>> ಎಂದು ಉತ್ತರಕೊಟ್ಟರು.
6ಆತನು ಅವರಿಗೆ, <<ನೀವು ದೋಣಿಯ ಬಲಗಡೆಯಲ್ಲಿ ಬಲೆಯನ್ನು ಬೀಸಿರಿ; ಆಗ ನಿಮಗೆ ಸಿಕ್ಕುತ್ತವೆ>> ಎಂದು ಹೇಳಿದನು.
21:6 ಲೂಕ 5:4,6,7:
ಅವರು ಬಲೆ ಬೀಸಿದಾಗ ಮೀನುಗಳು ರಾಶಿ ರಾಶಿಯಾಗಿ ಬಲೆಗೆ ಬಂದು ಸೇರಿದ್ದರಿಂದ, ಅವರಿಗೆ ಬಲೆಯನ್ನು ಎಳೆಯುವುದಕ್ಕೆ ಸಾಧ್ಯವಾಗದೆ ಹೋಯಿತು.

7ಆಗ ಯೇಸುವಿಗೆ ಪ್ರಿಯನಾಗಿದ್ದ ಶಿಷ್ಯನು ಪೇತ್ರನಿಗೆ, <<ಆತನು ಕರ್ತನೇ>> ಎಂದು ಹೇಳಿದನು. ಸೀಮೋನ್ ಪೇತ್ರನು ಅದನ್ನು ಕೇಳಿ ತಾನು ತೆಗೆದು ಬಿಟ್ಟಿದ್ದ ತನ್ನ ಮೇಲಂಗಿಯನ್ನು ಸುತ್ತಿಕೊಂಡು ಸಮುದ್ರದೊಳಗೆ ಧುಮುಕಿದನು. 8ದಡವು ದೂರವಿರಲಿಲ್ಲ, ಹೆಚ್ಚು ಕಡಿಮೆ ಇನ್ನೂರು ಅಡಿ ದೂರವಿತ್ತು. ಉಳಿದ ಶಿಷ್ಯರು ಮೀನು ತುಂಬಿದ್ದ ಆ ಬಲೆಯನ್ನು ಎಳೆಯುತ್ತಾ ದೋಣಿಯಲ್ಲಿಯೇ ಬಂದರು. 9ಅವರು ದಡಕ್ಕೆ ಬಂದು ಸೇರಿದಾಗ, ಕೆಂಡಗಳನ್ನೂ ಅವುಗಳ ಮೇಲೆ ಇಟ್ಟಿದ್ದ ಮೀನುಗಳನ್ನು ಮತ್ತು ರೊಟ್ಟಿಯನ್ನು ಕಂಡರು.

10ಯೇಸು ಅವರಿಗೆ, <<ನೀವು ಈಗ ಹಿಡಿದ ಮೀನುಗಳಲ್ಲಿ ಕೆಲವನ್ನು ತನ್ನಿರಿ>> ಎಂದು ಹೇಳಲು, 11ಸೀಮೋನ್ ಪೇತ್ರನು ದೋಣಿಯನ್ನು ಹತ್ತಿ ಬಲೆಯನ್ನು ದಡಕ್ಕೆ ಎಳದುಕೊಂಡು ಬಂದನು. ಅದು ನೂರೈವತ್ಮೂರು ದೊಡ್ಡ ಮೀನುಗಳಿಂದ ತುಂಬಿತ್ತು. ಅಷ್ಟು ಮೀನುಗಳು ಇದ್ದರೂ ಬಲೆಯು ಹರಿದಿರಲಿಲ್ಲ.

12ಯೇಸು ಅವರಿಗೆ, <<ಬಂದು ಊಟ ಮಾಡಿರಿ>> ಎಂದು ಹೇಳಿದನು. ಶಿಷ್ಯರು ಆತನನ್ನು ಕರ್ತನೆಂದು ತಿಳಿದಿದ್ದರಿಂದ <<ನೀನು ಯಾರು?>> ಎಂದು ಕೇಳುವುದಕ್ಕೆ ಅವರಲ್ಲಿ ಒಬ್ಬರಿಗೂ ಧೈರ್ಯವಿರಲಿಲ್ಲ. 13ಯೇಸು ಬಂದು ರೊಟ್ಟಿಯನ್ನು ತೆಗೆದುಕೊಂಡು ಅವರಿಗೆ ಕೊಟ್ಟನು. ಹಾಗೆಯೇ ಮೀನನ್ನೂ ಕೊಟ್ಟನು.

14ಯೇಸು ಸತ್ತವರೊಳಗಿಂದ ಜೀವಿತನಾಗಿ ಎದ್ದ ಮೇಲೆ, ತನ್ನ ಶಿಷ್ಯರಿಗೆ ಕಾಣಿಸಿಕೊಂಡದ್ದು
21:14 ಯೋಹಾ 20:19,26:
ಇದು ಮೂರನೆಯ ಸಾರಿ.

15ಅವರ ಊಟವಾದ ಮೇಲೆ ಯೇಸು ಸೀಮೋನ್ ಪೇತ್ರನಿಗೆ, <<ಯೋಹಾನನ ಮಗನಾದ ಸೀಮೋನನೇ,
21:15 ಮತ್ತಾ. 26:33; ಮಾರ್ಕ 14:29:
ನೀನು ಇವರಿಗಿಂತ ಹೆಚ್ಚಾಗಿ ನನ್ನನ್ನು ಪ್ರೀತಿಸುತ್ತಿಯೋ?>> ಎಂದು ಕೇಳಲು ಅವನು <<ಹೌದು, ಕರ್ತನೇ, ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂದು ನೀನೇ ಬಲ್ಲೆ>> ಎಂದನು. ಆತನು ಅವನಿಗೆ, <<ನನ್ನ ಕುರಿಮರಿಗಳನ್ನು ಮೇಯಿಸು>> ಎಂದು ಹೇಳಿದನು.
16ಆತನು ತಿರುಗಿ ಎರಡನೆಯ ಸಾರಿ ಅವನಿಗೆ, ಯೋಹಾನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯೋ? ಎಂದು ಕೇಳಲು, ಅವನು ಹೌದು ಕರ್ತನೇ, ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂದು ನೀನೇ ಬಲ್ಲೆ ಎಂದನು. ಆತನು ಅವನಿಗೆ <<ನನ್ನ ಕುರಿಗಳನ್ನು ಪಾಲಿಸು>> ಎಂದು ಹೇಳಿದನು.

17ಯೇಸು ಮೂರನೆಯ ಸಾರಿ, <<ಯೋಹಾನನ ಮಗನಾದ ಸೀಮೋನನೇ ನೀನು ನನ್ನ ಮೇಲೆ ಮಮತೆ ಇಟ್ಟಿದ್ದಿಯೋ?>> ಎಂದು ಕೇಳಿದನು, ಮೂರನೆಯ ಸಾರಿ ಆತನು, <<ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?>> ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು, <<ಕರ್ತನೇ,
21:17 ಯೋಹಾ 2:24,25:
ನಿನಗೆ ಎಲ್ಲವೂ ತಿಳಿದಿದೆ. ನಾನು ನಿನ್ನ ಮೇಲೆ ಮಮತೆ ಇಟ್ಟೀದ್ದೇನೆಂದು ನಿನಗೆ ತಿಳಿದಿದೆ>> ಎಂದನು. ಆಗ ಅವನಿಗೆ ಯೇಸು <<ನನ್ನ ಕುರಿಗಳನ್ನು ಮೇಯಿಸು>> ಎಂದನು.
18<<ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ನೀನು ಯುವಕನಾಗಿದ್ದಾಗ ನೀನೇ ನಿನ್ನ ಉಡುಪನ್ನು ಧರಿಸಿಕೊಂಡು ಇಷ್ಟಬಂದ ಕಡೆಗೆ ತಿರುಗಾಡುತ್ತಿದ್ದೀ. ಆದರೆ ನೀನು ಮುದುಕನಾದಾಗ ನಿನ್ನ ಕೈಗಳನ್ನು ಚಾಚುವಿ, ಆಗ ಮತ್ತೊಬ್ಬನು ನಿನ್ನ ನಡುವನ್ನು ಕಟ್ಟಿ ನಿನಗೆ ಇಷ್ಟವಿಲ್ಲದ ಕಡೆಗೆ ನಿನ್ನನ್ನು ಹೊತ್ತುಕೊಂಡು ಹೋಗುವನು>> ಎಂದು ಹೇಳಿದನು.

19ಅವನು ಎಂಥಾ ಮರಣದಿಂದ ದೇವರನ್ನು ಮಹಿಮೆ ಪಡಿಸುವನು ಎಂಬುದನ್ನು ಯೇಸು ಈ ಮಾತಿನಿಂದ ಸೂಚಿಸಿದನು. ಆತನು ಇದನ್ನು ಹೇಳಿ ಪೇತ್ರನಿಗೆ <<ನನ್ನನ್ನು ಹಿಂಬಾಲಿಸು>> ಎಂದು ಹೇಳಿದನು.

20ಪೇತ್ರನು ಹಿಂತಿರುಗಿ ನೋಡಿದಾಗ, ಯೇಸುವಿಗೆ
21:20 ಯೋಹಾ. 19:26; 21:7:
ಪ್ರಿಯನಾಗಿದ್ದ ಶಿಷ್ಯನು ಹಿಂದೆ ಬರುವುದನ್ನು ಕಂಡನು.
21:20 ಯೋಹಾ. 13:23:
ಆ ಶಿಷ್ಯನು ಊಟದ ಸಮಯದಲ್ಲಿ ಯೇಸುವಿನ ಎದೆಗೆ ಒರಗಿಕೊಂಡು, <<ಕರ್ತನೇ, ನಿನ್ನನ್ನು ಹಿಡಿದುಕೊಡುವವನು ಯಾರು?>> ಎಂದು ಕೇಳಿದವನೇ.
21ಇವನನ್ನು ಪೇತ್ರನು ನೋಡಿ ಯೇಸುವಿಗೆ, <<ಕರ್ತನೇ, ಇವನ ಬಗ್ಗೆ ಏನು ಹೇಳುತ್ತೀಯಾ?>> ಎಂದು ಕೇಳಲು,

22ಯೇಸು ಅವನಿಗೆ <<ನಾನು ಬರುವ ತನಕ ಇವನು ಉಳಿದಿರಬೇಕೆಂಬುದು ನನಗೆ ಮನಸ್ಸಾಗಿದ್ದರೆ ಅದರಿಂದ ನಿನಗೇನು? ನೀನು ನನ್ನನ್ನು ಹಿಂಬಾಲಿಸು>> ಎಂದು ಹೇಳಿದನು. 23ಆದುದರಿಂದ ಆ ಶಿಷ್ಯನು ಸಾಯುವುದಿಲ್ಲವೆಂಬ ಮಾತು ಸಹೋದರರಲ್ಲಿ ಹಬ್ಬಿತು. ಆದರೆ ಅವನು ಸಾಯುವುದಿಲ್ಲವೆಂದು ಯೇಸು ಅವನಿಗೆ ಹೇಳಲಿಲ್ಲ. <<ನಾನು ಬರುವ ತನಕ ಅವನು ಉಳಿದಿರಬೇಕೆಂದು ನನಗೆ ಮನಸ್ಸಿದ್ದರೆ ಅದು ನಿನಗೇನು?>> ಎಂದು ಮಾತ್ರ ಹೇಳಿದನು.

24ಈ ವಿಷಯವಾಗಿ ಸಾಕ್ಷಿಕೊಟ್ಟು, ಇವುಗಳನ್ನು ಬರೆದ ಶಿಷ್ಯನು ಇವನೇ. ಇವನ ಸಾಕ್ಷಿಯು ಸತ್ಯವೆಂದು ನಾವು ಬಲ್ಲೆವು. 25
21:25 ಯೋಹಾ 20:30.
ಇದಲ್ಲದೆ ಯೇಸುವು ಮಾಡಿದ ಇನ್ನೂ ಬೇರೆ ಅನೇಕ ಸಂಗತಿಗಳು ಸಹ ಇವೆ. ಅವುಗಳನ್ನೆಲ್ಲಾ ಒಂದೊಂದಾಗಿ ಬರೆಯುವುದಾದರೆ, ಆ ಪುಸ್ತಕಗಳು ಲೋಕವೇ ಹಿಡಿಸಲಾರದಷ್ಟಾಗುವುದು ಎಂದು ನಾನು ಭಾವಿಸುತ್ತೇನೆ.

Copyright information for KanULB