Joshua 12

ಇಸ್ರಾಯೇಲ್ಯರು ಸೋಲಿಸಿದ ಅರಸರ ಪಟ್ಟಿ

1ಇಸ್ರಾಯೇಲ್ಯರು ಯೋರ್ದನ್ ಹೊಳೆಯ ಪೂರ್ವ ದಿಕ್ಕಿನಲ್ಲಿ ಅರ್ನೋನ್ ಕಣಿವೆ ಮೊದಲುಗೊಂಡು ಹೆರ್ಮೋನ್ ಪರ್ವತದವರೆಗಿದ್ದ ಪ್ರದೇಶವನ್ನೂಮತ್ತು ಕಣಿವೆ ಪ್ರದೇಶದ ಪೂರ್ವಭಾಗವನ್ನೂ ಸ್ವಾಧೀನ ಮಾಡಿಕೊಂಡು ಅವುಗಳಲ್ಲಿದ್ದ ಅರಸರನ್ನು ಸಂಹರಿಸಿದರು. 2ಅವರಲ್ಲಿ ಮೊದಲನೆಯವನು ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸನಾಗಿದ್ದವನು ಸೀಹೋನ್. ಇವನು ಅರ್ನೋನ್ ಕಣಿವೆಯ ಅಂಚಿನಲ್ಲಿರುವ ಅರೋಯೇರ್ ಪಟ್ಟಣವು ಮತ್ತು ಕಣಿವೆಯಲ್ಲಿಯೇ ಇದ್ದ ಪಟ್ಟಣಗಳು ಇವುಗಳು ಮೊದಲುಗೊಂಡು ಅಮ್ಮೋನಿಯರ ಮೇರೆಯಾಗಿರುವ ಯಬ್ಬೋಕ್ ಹೊಳೆಯವರೆಗಿರುವ ಗಿಲ್ಯಾದಿನ ಅರ್ಧಪ್ರಾಂತ್ಯವು

3ಹಾಗೂ ಯೊರ್ದಾನ್ ಹೊಳೆಯ ಪೂರ್ವದಲ್ಲಿ ಕಿನ್ನೇರೋತ್ ಸಮುದ್ರದಿಂದ ಲವಣಸಮುದ್ರವೆನಿಸಿಕೊಳ್ಳುವ ಅರಾಬ್ ಸಮುದ್ರದ ಹತ್ತಿರವಿರುವ ಬೇತಯೆಷಿಮೋತಿನವರೆಗೂ ದಕ್ಷಿಣದಲ್ಲಿರುವ ಪಿಸ್ಗಾ ಬೆಟ್ಟದ ಬುಡದವರೆಗೂ ಇರುವ ಕಣಿವೆ ಪ್ರದೇಶವು ಇವೇ ಅವನರಾಜ್ಯ: 4ಅಷ್ಟರೋತ ಹಾಗೂ ಎದ್ರೈ ಎಂಬ ಊರುಗಳಲ್ಲಿ ವಾಸವಾಗಿದ್ದ ರೇಫಾಯರ ವಂಶಸ್ಥರು ಬಾಷಾನಿನ ಅರಸನೂ ಆದ ಓಗನು ಸಂಹರಿಸಲ್ಪಟ್ಟವರಲ್ಲಿ ಎರಡನೆಯವನು. 5ಇವನ ರಾಜ್ಯ- ಹೆರ್ಮೋನ್ ಬೆಟ್ಟದ ಮೇಲಿನ ಸೀಮೆ , ಸಲ್ಕಾ ಪಟ್ಟಣವು , ಗೆಷೂರಿಯರ ಮತ್ತು ಮಾಕತೀಯರ ಮೇರೆವರೆಗೆ ಇದ್ದ ಬಾಷಾನಿನ ಸೀಮೆ, ಹೆಷ್ಬೋನಿನ ಅರಸನಾದ ಸೀಹೋನನ ಮೇರೆಯವರೆಗೆ ಇದ್ದ ಗಿಲ್ಯಾದಿನ ಅರ್ಧ ಪ್ರಾಂತ್ಯದ ವರೆಗಿದ್ದಿತ್ತು.

6ಯೆಹೋವನ ಸೇವಕನಾದ ಮೋಶೆಯೂ, ಇಸ್ರಾಯೇಲ್ಯರ ಸಹಿತವಾಗಿ ಆ ಇಬ್ಬರನ್ನು ಸೋಲಿಸಿ ಅವರ ರಾಜ್ಯಗಳನ್ನು ರೂಬೇನ್ಯರಿಗೂ, ಗಾದ್ಯರಿಗೂ, ಮನಸ್ಸೆಯ ಅರ್ಧ ಗೋತ್ರದವರಿಗೂ ಸ್ವಾಸ್ಥ್ಯವಾಗಿ ಕೊಟ್ಟನು.

7ಯೆಹೋಶುವನು ಇಸ್ರಾಯೇಲರ ಸಹಿತವಾಗಿ ಯೋರ್ದನ್ ಹೊಳೆಯ ಪಶ್ಚಿಮದಲ್ಲಿ ಲೆಬನೋನ್ ಕಣಿವೆಯಲ್ಲಿದ್ದ ಬಾಲ್ಗಾದಿನಿಂದ ಸೇಯೀರಿನ ದಾರಿಯಲ್ಲಿದ್ದ ಹಾಲಾಕ್ ಪರ್ವತದವರೆಗೂ ವಿಸ್ತರಿಸಿಕೊಂಡಿದ್ದ ಬೆಟ್ಟದ ಮೇಲಿನ ಪ್ರದೇಶಗಳು, 8ಇಳುಕಲಿನ ಪ್ರದೇಶಗಳು, ಕಣಿವೆ ಪ್ರದೇಶಗಳು, ಬೆಟ್ಟಗಳ ಬುಡದಲ್ಲಿರುವ ಸೀಮೆಗಳು, ಅರಣ್ಯದ ದಕ್ಷಿಣ ಪ್ರಾಂತ್ಯ ಇವುಗಳನ್ನು ಆಳುತ್ತಿದ್ದ ಹಿತ್ತೀಯ, ಅಮೋರಿಯ, ಕಾನಾನ, ಪೆರಿಜ್ಜೀಯ, ಹಿವ್ವಿಯ, ಯೆಬೂಸಿಯ ಅರಸರನ್ನೂ ಸೋಲಿಸಿ, ಅವರ ದೇಶಗಳನ್ನು ಇಸ್ರಾಯಲರ ಕುಲದವರಿಗೆ ಶಾಶ್ವತ ಆಸ್ತಿಯಾಗಿ ಕೊಟ್ಟನು. ಆ ಅರಸರ ಪಟ್ಟಿಯು ಹೇಗೆಂದರೆ,


9ಯೆರಿಕೋವಿನ ಅರಸನು - 1

ಬೇತೇಲ್ ಬಳಿಯಲ್ಲಿರುವ ಆಯಿ ಎಂಬ ಊರಿನ ಅರಸನು - 1
10ಯೆರೂಸಲೇಮಿನ ಅರಸನು - 1
ಹೆಬ್ರೋನಿನ ಅರಸನು - 1
11ಯರ್ಮೂತಿನ ಅರಸನು - 1
ಲಾಕೀಷಿನ ಅರಸನು - 1
12ಎಗ್ಲೋನಿನ ಅರಸನು - 1
ಗೆಜೆರಿನ ಅರಸನು - 1

13ದೆಬೀರಿನ ಅರಸನು -1

ಗೆದೆರಿನ ಅರಸನು - 1
14ಹೊರ್ಮದ ಅರಸನು - 1
ಆರಾದಿನ ಅರಸನು - 1
15ಲಿಬ್ನದ ಅರಸನು - 1
ಅದುಲ್ಲಾಮಿನ ಅರಸನು - 1
16ಮಕ್ಕೇದದ ಅರಸನು - 1
ಬೇತೇಲಿನ ಅರಸನು - 1

17ತಪ್ಪೂಹದ ಅರಸನು - 1

ಹೇಫೆರಿನ ಅರಸನು - 1
18ಅಫೇಕದ ಅರಸನು - 1
ಲಷ್ಷಾರೋನಿನ ಅರಸನು - 1
19ಮಾದೋನಿನ ಅರಸನು - 1
ಹಾಚೋರಿನ ಅರಸನು.
20ಶಿಮ್ರೋನ್ಮೆರೋನಿನ ಅರಸನು - 1
ಅಕ್ಷಾಫಿನ ಅರಸನು - 1

21ತಾನಕದ ಅರಸನು - 1

ಮೆಗಿದ್ದೋವಿನ ಅರಸನು - 1
22ಕೆದೆಷಿನ ಅರಸನು - 1
ಕರ್ಮೆಲ್ ಬೆಟ್ಟದ ಯೊಕ್ನೆಯಾಮದ ಅರಸನು - 1
23ದೋರ್ ಪ್ರಾಂತ್ಯದ ದೋರಿನ ಅರಸನು - 1
ಗಿಲ್ಗಾಲಿನ ಅರಸನು - 1
ತಿರ್ಚದ ಅರಸನು - 1
ಒಟ್ಟು 31 ಮಂದಿ ಅರಸರು .
24

Copyright information for KanULB