Joshua 19

ಸಿಮೆಯೋನ್ ಕುಲದ ಸ್ವಾಸ್ಥ್ಯ

1ಚೀಟು ಎರಡನೆಯಸಾರಿ ಸಿಮೆಯೋನನ ಕುಲದವರಿಗೆ ಬಿದ್ದಿತು. ಸಿಮೆಯೋನನ ಕುಲದ ಗೋತ್ರಗಳ ಸ್ವಾಸ್ಥ್ಯವು ಯೆಹೂದ ಕುಲದವರ ಸ್ವಾಸ್ಥ್ಯದ ಮಧ್ಯದಲ್ಲಿತ್ತು.

2ಅವರ ಊರುಗಳು ಯಾವುವೆಂದರೆ: ಬೇರ್ಷೆಬ, ಶೆಬ, ಮೊಲಾದಾ, 3ಹಚರ್‌ಷೂವಾಲ್, ಬಾಲಾ, ಎಚೆಮ್, 4ಎಲ್ತೋಲದ್, ಬೆತೂಲ್, ಹೋರ್ಮಾ,

5ಚಿಕ್ಲಗ್, ಬೇತ್‌ಮರ್ಕಾಬೋತ್, ಹಚರ್‌ಸೂಸಾ, 6ಬೇತ್‌ಲೆಬಾವೋತ್, ಶಾರೂಹೆನ್ ಎಂಬ ಹದಿಮೂರು ಪಟ್ಟಣಗಳು ಮತ್ತು ಅವುಗಳ ಗ್ರಾಮಗಳು. 7ಆಯಿನ್, ರಿಮ್ಮೋನ್, ಏತೆರ್, ಅಷಾನ್ ಎಂಬ ನಾಲ್ಕು ಪಟ್ಟಣಗಳು ಮತ್ತು ಅವುಗಳ ಗ್ರಾಮಗಳು.

8ಅವುಗಳ ಸುತ್ತಣ ಪ್ರದೇಶದಲ್ಲಿ ರಾಮ ಎಂಬ ಬಾಲಾತ್ ಬೇರ್ ಎಂಬ ಊರಿನವರೆಗೂ ಇದ್ದ ಎಲ್ಲಾ ಗ್ರಾಮಗಳೂ ಆಗಿವೆ.

ಬಾಲಾತ್ ಬೇರ್ ಎಂಬದು ದಕ್ಷಿಣ ರಾಮ ಎನ್ನಿಸಿಕೊಳ್ಳುತ್ತದೆ. ಸಿಮೆಯೋನ ಕುಲದ ಗೋತ್ರಗಳಿಗೆ ಸಿಕ್ಕಿದ ಸ್ವಾಸ್ಥ್ಯವು ಇವೇ.
9ಸಿಮೆಯೋನ್ಯರ ಈ ಸ್ವಾಸ್ಥ್ಯವು ಯೆಹೂದ್ಯರ ಸ್ವಾಸ್ಥ್ಯದ ಒಂದು ಭಾಗವಾಗಿತ್ತು. ಯೆಹೂದ್ಯರಿಗೆ ದೊರಕಿದ ಪ್ರದೇಶವು ಹೆಚ್ಚಾಗಿದ್ದುದರಿಂದ ಸಿಮಿಯೋನ್ಯರಿಗೂ ಅದರಲ್ಲೇ ಪಾಲು ಸಿಕ್ಕಿತು.

10ಚೀಟು ಮೂರನೆಯ ಸಾರಿ ಜೆಬುಲೂನ್ಯರಿಗೆ ಬಿದ್ದಿತು. ಆ ಕುಲದ ಗೋತ್ರಗಳಿಗೆ ಸಿಕ್ಕಿದ ಸ್ವಾಸ್ಥ್ಯದ ಮೇರೆಯು 11ಸಾರೀದಿನಿಂದ ಪಶ್ಚಿಮ ದಿಕ್ಕಿನಲ್ಲಿರುವ ಮರ್ಗಲಾ, ದಬ್ಬೆಷೆತ್ ಇವುಗಳ ಮೇಲೆ ಯೊಕ್ನೆಯಾಮ ಊರಿನ ಈಚೆಯಲ್ಲಿರುವ ಹಳ್ಳಕ್ಕೆ ಹೋಗುತ್ತದೆ.

12ಅದೇ ಸಾರೀದಿನಿಂದ ಅದು ಪೂರ್ವ ದಿಕ್ಕಿನಲ್ಲಿ ಕಿಸ್ಲೋತ್ ತಾಬೋರಿನ ಮೇರೆಗೆ ಹತ್ತಿ ದಾಬೆರತಿಗೆ ಹೋಗುತ್ತದೆ. ಅಲ್ಲಿಂದ ಏರುತ್ತಾ ಯಾಫೀಯಕ್ಕೆ ಹೋಗುತ್ತದೆ. 13ಅಲ್ಲಿಂದ ಮತ್ತು ಪೂರ್ವಕ್ಕೆ ಮುಂದುವರೆದು ಗತ್‌ಹೇಫೆರನ್ನು ಎತ್‌ಕಾಚೀನ ಇವುಗಳ ಮೇಲೆ ಹಾದು ನೇಯದ ಪಕ್ಕದಲ್ಲಿ ಇರುವ ರಿಮ್ಮೋನಿಗೆ ಹೋಗುತ್ತದೆ.

14ಅಲ್ಲಿಂದ ಅದು ಉತ್ತರಕ್ಕೆ ತಿರುಗಿಕೊಂಡು ಹನ್ನಾತೋನಿನ ಮೇಲೆ ಇಫ್ತಹೇಲಿನ ಕಣಿವೆಗೆ ಹೋಗಿ ಅಲ್ಲಿ ಮುಕ್ತಾಯಗೊಳ್ಳುತ್ತದೆ . 15ಕಟ್ಟಾತ್, ನಹಲ್ಲಾಲ್, ಶಿಮ್ರೋನ್, ಇದಲಾ, ಬೇತ್‌ಹೇಮ್ ಇವೇ ಮೊದಲಾದ ಹನ್ನೆರಡು ಪಟ್ಟಣಗಳು, ಅವುಗಳಿಗೆ ಸೇರಿದ ಗ್ರಾಮಗಳು. 16ಜೆಬುಲೂನಿನ ಕುಲದ ಗೋತ್ರಗಳಿಗೆ ಸ್ವಾಸ್ಥ್ಯವಾಗಿ ದೊರಕಿದವು.

ಇಸ್ಸಾಕಾರ್ ಕುಲದವರಿಗೆ ಬಂದ ಪಾಲು

17ಚೀಟು ನಾಲ್ಕನೆಯ ಸಾರಿ ಇಸ್ಸಾಕಾರ ಕುಲದವರಿಗೆ ಬಿದ್ದಿತು. ಅವರ ಗೋತ್ರಗಳಿಗೆ ಸಿಕ್ಕಿದ ಪಟ್ಟಣಗಳು ಯಾವುವೆಂದರೆ- 18ಇಜ್ರೇಲ, ಕೆಸುಲೋತ್, ಶೂನೇಮ್, 19ಹಫರೆಯಿಮ್, ಶಿಯೋನ್, ಅನಾಹರತ್,

20ರಬ್ಬೀತ್, ಕಿಷ್ಯೋನ್, ಎಬೇಜ್, 21ರೆಮೆತ್, ಏಂಗನ್ನೀಮ್, ಏನ್‌ಹದ್ದಾ , ಬೇತ್ ಹಚ್ಚೇಚ್ ಇವುಗಳೆ. 22ತಾಬೋರ್‌, ಶಹಚೀಮಾ. ಬೇತ್‌ಷೆಮೆಷ್‌ ಎಂಬ ಊರುಗಳು ಅದರ ಮೇರೆಯೋಳಗಿದ್ದವು. ಮೇರೆಯು ಯೊರ್ದನ್ ಹೊಳೆಯ ತೀರದಲ್ಲಿ ಕೊನೆಗೊಳ್ಳುತ್ತದೆ. ಒಟ್ಟಾರೆ ಹದಿನಾರು ಪಟ್ಟಣಗಳು ಮತ್ತು ಅವುಗಳ ಗ್ರಾಮಗಳು,

23ಇಸ್ಸಾಕಾರನ ಕುಲದ ಗೋತ್ರಗಳಿಗೆ ಸಿಕ್ಕಿದವು.

24ಚೀಟು ಐದನೆಯ ಸಾರಿ ಅಶೇರ ಕುಲದವರಿಗೆ ಬಿದ್ದಿತು. ಅವರ ಗೋತ್ರಗಳಿಗೆ ಸಿಕ್ಕಿದ ಊರುಗಳು ಯಾವುದೆಂದರೆ - 25ಹೆಲ್ಕತ್, ಹಲೀ, ಬೆಟೆನ್, ಅಕ್ಷಾಫ್, 26ಅಲಮ್ಮೆಲೆಕ್, ಅಮಾದ್, ಮಿಷಾಯಲ್ ಇವುಗಳೇ ಇವರ ದೇಶದ ಮೇರೆಯು ಪಶ್ಚಿಮದಲ್ಲಿ ಕರ್ಮೆಲ ಬೆಟ್ಟಕ್ಕೂ , ಶೀಹೋರ್ ಲಿಬ್ನತ ಎಂಬ ಹಳ್ಳಕ್ಕೂ ತಗಲಿ ಅಲ್ಲಿಂದ ಪೂರ್ವಕ್ಕೆ ತಿರುಗಿ,

27ಬೇತ್‌ದಾಗೋನಿಗೆ ಹೋಗುತ್ತದೆ. ಅಲ್ಲಿಂದ ಜೆಬುಲೂನ್ಯರ ಮೇರೆಗೂ ಇಫ್ತಹೇಲಿನ ಕಣಿವೆಯ ಉತ್ತರ ದಿಕ್ಕಿನ ಮೂಲೆಗೂ ಹೊಂದಿಕೊಂಡು ಬೇತೇಮೇಕ ನೆಗೀಯೇಲ ಇವುಗಳ ಮೇಲೆ ಉತ್ತರಕ್ಕೆ ಮುಂದುವರಿದು 28ಕಾಬೂಲ್, ಎಬ್ರೋನಿಗೂ, ರೆಹೋಬ, ಹಮ್ಮೋನ, ಕಾನಾ ಇವುಗಳ ಮೇಲೆ ಚಿದೋನ ಎಂಬ ಮಹಾ ನಗರಕ್ಕೆ ಹೋಗುತ್ತದೆ.

29ಅಲ್ಲಿಂದ ಅದು ತಿರುಗಿಕೊಂಡು ರಾಮ, ತೂರ್ ಕೋಟೆ, ಹೋಸಾ ಇವುಗಳ ಮೇಲೆ ಅಕ್ಜೀಬ್ ಪ್ರಾಂತಕ್ಕೆ ಹೋಗಿ ಸಮುದ್ರ ತೀರದಲ್ಲಿ ಕೊನೆಗೊಳ್ಳುತ್ತದೆ. 30ಉಮ್ಮಾ, ಅಫೇಕ್‌, ರೆಹೋಬ್ ಇವೇ ಮೊದಲಾದ ಇಪ್ಪತ್ತೆರಡು ಪಟ್ಟಣಗಳು ಮತ್ತು ಅವುಗಳ ಗ್ರಾಮಗಳು.

31ಅಶೇರನ ಕುಲದ ಗೋತ್ರಗಳ ಸ್ವಾಸ್ಥ್ಯವಾಗಿವೆ.

32ಚೀಟು ಆರನೆಯ ಸಾರಿ ನಫ್ತಾಲಿಯ ಕುಲದವರಿಗೆ ಬಿದ್ದಿತು. ಆ ಕುಲದ ಗೋತ್ರಗಳಿಗೆ ಸಿಕ್ಕಿದ ಸ್ವಾಸ್ಥ್ಯದ ಮೇರೆಯು 33ಚಾನನ್ನೀಮಿನಲ್ಲಿರುವ ಹೆಲೇಫಿನ ಅಲ್ಲೋನ ಮರದಿಂದ ಆದಾಮಿನೆಕೆಬ್, ಎಬ್ನೆಯೇಲ್, ಇವುಗಳ ಮೇಲೆ ಲಕ್ಕೂಮಿಗೆ ಹೋಗಿ ಯೊರ್ದನ ಹೊಳೆಯ ತೀರದಲ್ಲಿ ಮುಕ್ತಾಯಗೊಳ್ಳುತ್ತದೆ. 34ಇದಲ್ಲದೆ ಮೇರೆಯು ತಿರುಗಿ ಅದೇ ಸ್ಥಳದಿಂದ ಅಜ್ನೊತ್-ತಾಬೋರಿನ ಮೇಲೆ ಹುಕ್ಕೋಕಿಗೆ ಹೋಗುತ್ತದೆ, ದಕ್ಷಿಣದಲ್ಲಿ ಜೆಬುಲೋನ್ಯರ ಮೇರೆಗೂ , ಪಶ್ಚಿಮದಲ್ಲಿ ಅಶೇರರ ಮತ್ತು ಯೆಹೂದ್ಯರ ಮೇರೆಗೂ ಪೂರ್ವದಲ್ಲಿ ಯೋರ್ದಾನ ಹೊಳೆಗೂ ಹೊಂದಿಕೊಂಡಿರುತ್ತದೆ.

35ಚಿದ್ದೀಮ್, ಚಿರ್, ಹಮ್ಮತ್, ರಕ್ಕತ್, ಕಿನ್ನೆರೆತ್, 36ಆದಾಮಾ, ರಾಮಾ, ಹಾಚೋರ್, 37ಕೆದೆಶ್, ಎದ್ರೆಯಿ, ಎನ್ ಹಾಚೋರ್,

38ಇರೋನ್, ಮಿಗ್ದಿಲೇಲ್, ಹೋರೇಮ್, ಬೇತ್ ಷೆಮೆಷ್, ಬೆತನಾತ್ಇವೇ ಮೊದಲಾದ ಹತ್ತೊಂಬತ್ತು ಕೋಟೆಕೊತ್ತಲುಗಳುಳ್ಳ ಪಟ್ಟಣಗಳು ಮತ್ತು ಅವುಗಳ ಗ್ರಾಮಗಳು, 39ನಫ್ತಾಲಿ ಕುಲದ ಗೋತ್ರಗಳಿಗೆ ಸಿಕ್ಕಿದ ಸ್ವಾಸ್ಥ್ಯವಾಗಿದೆ.

40ಚೀಟು ಏಳನೆಯ ಸಾರಿ ದಾನನ ಕುಲದವರಿಗೆ ಬಿದ್ದಿತು. ಅವರ ಗೋತ್ರಗಳಿಗೆ ಸ್ವಾಸ್ಥ್ಯವಾಗಿ ದೊರಕಿದ ಊರುಗಳು ಯಾವುವೆಂದರೆ- 41ಚೊರ್ಗಾ, ಎಷ್ಟಾವೋಲ್, ಈರ್ಷೆಮೆಷ್, 42ಶಹಲಬ್ಬೀನ್, ಐಯ್ಯಾಲೋನ್, ಇತ್ಲಾ ,

43ಏಲೋನ್, ತಿಮ್ಮೂ ಎಕ್ರೋನ್, 44ಎಲ್ತೆಕೇ, ಗಿಬ್ಬೆತೋನ್, ಬಾಲತ್, 45ಯೆಹೂದ್, ಬೆನೇಬೆರಕ್, ಗತ್ ರಿಮ್ಮೋನ್, 46ಮೆಯರ್ ಕೊನ್, ರಕ್ಕೋನ್ ಇವೇ. ಯೊಪ್ಪಕ್ಕೆ ಹೊಂದಿರುವ ಪ್ರದೇಶವೂ ಇವರಿಗೇ ದೊರಕಿತು.

47ದಾನ್ ಕುಲದವರು ತಮ್ಮ ಪ್ರಾಂತ್ಯವನ್ನು ವಿಸ್ತರಿಸುವದಕ್ಕಾಗಿ ಹೊರಟು ಲೆಷೆಮಿನವರೊಡನೆ ಯುದ್ದಮಾಡಿ ಜಯಿಸಿ ಆ ಜನರನ್ನು ಕತ್ತಿಯಿಂದ ಸಂಹರಿಸಿ ಪಟ್ಟಣವನ್ನು ಸ್ವಾಧೀನ ಮಾಡಿಕೊಂಡು ಅದರಲ್ಲಿ ವಾಸಿಸಿದರು. ಅದಕ್ಕೆ ತಮ್ಮ ಮೂಲಪುರುಷನ ಹೆಸರಾದ ದಾನ್ ಎಂಬ ಹೆಸರಿಟ್ಟರು. 48ದಾನ್ ಕುಲದ ಗೋತ್ರಗಳಿಗೆ ಸಿಕ್ಕಿದ ಸ್ವಾಸ್ಥ್ಯವು ಅದರಲ್ಲಿದ್ದ ಗ್ರಾಮ ಮತ್ತು ನಗರಗಳು ಇವೇ.

49ಇಸ್ರಾಯೇಲ್ಯರು ದೇಶವನ್ನು ಮೇರೆಗಳ ಪ್ರಕಾರ ತಮ್ಮೊಳಗೆ ಹಂಚಿಕೊಂಡ ಮೇಲೆ ನೂನನ ಮಗನಾದ ಯೆಹೋಶುವನಿಗೂ ತಮ್ಮದರಲ್ಲಿ ಪಾಲು ಕೊಟ್ಟರು. 50ಅವನು ತನಗೋಸ್ಕರ ಎಫ್ರಾಯೀಮ್ ಪರ್ವತ ಪ್ರದೇಶದಲ್ಲಿರುವ ತಿಮ್ನತ್ ಸೆರಹ ಎಂಬ ಪಟ್ಟಣವನ್ನು ಕೇಳಿಕೊಳ್ಳಲು ಅವರು ಯೆಹೋವನ ಆಜ್ಞೆಯಂತೆ ಅದನ್ನು ಅವನಿಗೆ ಕೊಟ್ಟು ಬಿಟ್ಟರು. ಅವನು ಅದನ್ನು ಹೊಸದಾಗಿ ಕಟ್ಟಿಕೊಂಡು ಅದರಲ್ಲೇ ವಾಸವಾಗಿದ್ದನು.

ಯಾಜಕನಾದ ಎಲಿಯಾಜರನೂ, ನೂನನ ಮಗ ಯೆಹೋಶುವನೂ, ಇಸ್ರಾಯೇಲ್ಯರ ಕುಲಮುಖ್ಯಸ್ಥರೂ ಸೇರಿ ಇಸ್ರಾಯೇಲ್ಯರಿಗೆ ಶೀಲೋವಿನಲ್ಲಿದ್ದ ದೇವದರ್ಶನ ಗುಡಾರದ ಬಾಗಿಲಲ್ಲಿ ಯೆಹೋವನ ಸನ್ನಧಿಯಲ್ಲೇ ಚೀಟು ಹಾಕಿ ಹಂಚಿಕೊಟ್ಟ ಪ್ರಾಂತಗಳು ಇವೇ. ಹೀಗೆ ದೇಶ ವಿಭಜನೆಯ ಕಾರ್ಯವು ಪೂರ್ಣಗೊಂಡಿತು.

51

Copyright information for KanULB