Mark 16

ಯೇಸುವಿನ ಪುನರುತ್ಥಾನ

(ಮತ್ತಾ. 28:1-8; ಲೂಕ 24:1-10; ಯೋಹಾ. 20:1)

1ಸಬ್ಬತ್ ದಿನ ಕಳೆದ ಮೇಲೆ ಮಗ್ದಲದ ಮರಿಯಳೂ ಯಾಕೋಬನ ತಾಯಿ ಮರಿಯಳೂ ಮತ್ತು ಸಲೋಮಿಯೂ ಯೇಸುವಿನ ದೇಹಕ್ಕೆ ಹಚ್ಚುವುದಕ್ಕಾಗಿ ಸುಗಂಧ ದ್ರವ್ಯಗಳನ್ನು ಕೊಂಡರು. 2ಮತ್ತು ವಾರದ ಮೊದಲನೆಯ ದಿನದ ಬೆಳಿಗ್ಗೆ ಹೊತ್ತು ಮೂಡುವಾಗ ಅವರು ಸಮಾಧಿಯ ಬಳಿಗೆ ಬಂದರು.

3<<ಸಮಾಧಿಯ ಬಾಗಿಲಿನಿಂದ ಕಲ್ಲನ್ನು ನಮಗೋಸ್ಕರ ಉರುಳಿಸುವವರು ಯಾರು?>> ಎಂದು ತಮ್ಮತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು. 4ಸಮಾಧಿಯ ಕಡೆಗೆ ನೋಡಿದಾಗ ಆ ದೊಡ್ಡ ಕಲ್ಲು ಉರುಳಿಸಲ್ಪಟ್ಟಿರುವುದನ್ನು ಕಂಡರು.

5ಅವರು ಸಮಾಧಿಯೊಳಗೆ ಹೋಗಿ, ಒಬ್ಬ ಯೌವನಸ್ಥನು ಬಿಳಿ ಉಡುಪನ್ನು ಧರಿಸಿಕೊಂಡು ಬಲ ಭಾಗದಲ್ಲಿ ಕುಳಿತಿರುವುದನ್ನು ಕಂಡು ಬೆಚ್ಚಿಬೆರಗಾದರು.

6ಅವನು ಅವರಿಗೆ, <<ಭಯಪಡಬೇಡಿರಿ, ಶಿಲುಬೆಗೆ ಹಾಕಲ್ಪಟ್ಟಿದ್ದ ನಜರೇತಿನ ಯೇಸುವನ್ನು ಹುಡುಕುತ್ತಿರಲ್ಲವೇ. ಆತನು ಇಲ್ಲಿ ಇಲ್ಲ, ಜೀವಿತನಾಗಿ ಎದ್ದಿದ್ದಾನೆ; ಆತನನ್ನು ಇಟ್ಟಿದ್ದ ಸ್ಥಳ ಇದೇ ನೋಡಿರಿ, 7ಆದರೆ ನೀವು ಹೋಗಿ ಆತನ ಶಿಷ್ಯರಿಗೂ ಪೇತ್ರನಿಗೂ ಆತನು ನಿಮಗೆ ಹೇಳಿದಂತೆ ನಿಮಗಿಂತ ಮೊದಲು ಗಲಿಲಾಯಕ್ಕೆ ಹೋಗುತ್ತಾನೆ, ಅಲ್ಲಿ ಆತನನ್ನು ಕಾಣುವಿರಿ ಎಂದು ತಿಳಿಸಿರಿ>> ಎಂದು ಹೇಳಿದನು.

8ಅವರು ವಿಸ್ಮಯಗೊಂಡು ನಡುಗುತ್ತಾ ಹೊರಕ್ಕೆ ಬಂದು ಸಮಾಧಿಯ ಬಳಿಯಿಂದ ಓಡಿಹೋದರು; ಅವರು ಹೆದರಿಕೊಂಡಿದ್ದರಿಂದ ಯಾರಿಗೂ ಏನೂ ಹೇಳಲಿಲ್ಲ.

9
16:9 ಯೋಹಾ 20:14-18:
ವಾರದ ಮೊದಲನೆಯ ದಿನ ಬೆಳಿಗ್ಗೆ ಯೇಸು ಜೀವಿತನಾಗಿ ಎದ್ದ ಮೇಲೆ ಮಗ್ದಲದ ಮರಿಯಳಿಗೆ ಮೊದಲು ಕಾಣಿಸಿಕೊಂಡನು. ಆತನು ಆಕೆಯನ್ನು ಏಳು ದೆವ್ವಗಳಿಂದ ಬಿಡಿಸಿದ್ದನು.
10ಆಕೆ ಹೋಗಿ ಆತನು ಕಾಣಿಸಿಕೊಂಡದ್ದನ್ನು ಆತನ ಜೊತೆಯಲ್ಲಿದ್ದವರಿಗೆ ತಿಳಿಸಿದಳು; ಅವರು ಶೋಕಿಸುತ್ತಾ ಅಳುತ್ತಿದ್ದರು. 11<<ಆತನು ಬದುಕಿದ್ದಾನೆ ನನಗೆ ಕಾಣಿಸಿಕೊಂಡನು>> ಎಂದು ಅವಳು ಹೇಳಿದ ಮಾತನ್ನು ಅವರು ನಂಬಲಿಲ್ಲ.

ಯೇಸು ಜೀವಿತನಾಗಿ ಎದ್ದ ಮೇಲೆ ತನ್ನ ಶಿಷ್ಯರಿಗೆ ಕಾಣಿಸಿಕೊಂಡಿದ್ದು

12
16:12 ಲೂಕ 24:13, 15
ಇದಾದ ಮೇಲೆ ಶಿಷ್ಯರಲ್ಲಿ ಇಬ್ಬರು ಊರಿಗೆ ಪ್ರಯಾಣ ಮಾಡುತ್ತಿರುವಾಗ ಆತನು ಅವರಿಗೆ ಬೇರೆ ರೂಪದಲ್ಲಿ ಕಾಣಿಸಿಕೊಂಡನು.
13ಅವರು ಹೋಗಿ ಉಳಿದ ಶಿಷ್ಯರಿಗೆ ತಿಳಿಸಿದರು. ಆದರೆ ಶಿಷ್ಯರು ಅವರನ್ನೂ ನಂಬಲಿಲ್ಲ.

14ಅನಂತರ
16:14 ಯೋಹಾ 20:19:
ಹನ್ನೊಂದು ಮಂದಿ ಶಿಷ್ಯರು ಊಟಕ್ಕೆ ಕುಳಿತಿದ್ದಾಗ ಆತನು ಅವರಿಗೂ ಕಾಣಿಸಿಕೊಂಡನು. ತಾನು ಜೀವಿತನಾಗಿ ಎದ್ದು ಬಂದ ಮೇಲೆ ತನ್ನನ್ನು ನೋಡಿದವರ ಮಾತನ್ನು ಅವರು ನಂಬಲಿಲ್ಲವಾದ ಕಾರಣ ಆತನು ಅವರ ಅಪನಂಬಿಕೆಗೂ ಅವರ ಮನಸ್ಸಿನ ಕಾಠಿಣ್ಯಕ್ಕೂ ಅವರನ್ನು ಗದರಿಸಿದನು.
15ಆ ಮೇಲೆ ಅವರಿಗೆ, <<
16:15 ಮತ್ತಾ. 28:19:
ನೀವು ಲೋಕದ ಎಲ್ಲಾ ಕಡೆಗಳಿಗೂ ಹೋಗಿ ಸೃಷ್ಟಿಗಳಿಗೆಲ್ಲಾ ಸುವಾರ್ತೆಯನ್ನು ಸಾರಿರಿ.
16ನಂಬಿ ದೀಕ್ಷಾಸ್ನಾನ ಮಾಡಿಸಿಕೊಳ್ಳುವವನು ರಕ್ಷಣೆ ಹೊಂದುವನು; ನಂಬದೇ ಹೋಗುವವನು ದಂಡನೆಗೆ ಗುರಿಯಾಗುವನು.

17ಇದಲ್ಲದೆ ನಂಬುವವರಿಂದ ಈ ಸೂಚಕಕಾರ್ಯಗಳು ಉಂಟಾಗುವವು; ಅವರು ನನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವರು, ಹೊಸ ಭಾಷೆಗಳಲ್ಲಿ ಮಾತನಾಡುವರು; 18ಹಾವುಗಳನ್ನು ಕೈಗಳಿಂದ ಎತ್ತಿಕೊಳ್ಳುವರು; ವಿಷಪದಾರ್ಥಗಳನ್ನೇನಾದರು ಕುಡಿದರೂ ಅವರಿಗೆ ಯಾವ ಹಾನಿಯೂ ಆಗುವುದಿಲ್ಲ. ಅವರು ರೋಗಿಗಳ ಮೇಲೆ ಕೈಯಿಟ್ಟರೆ ಅವರಿಗೆ ಸ್ವಸ್ಥವಾಗುವುದು>> ಎಂದು ಹೇಳಿದನು.

ಯೇಸು ಪರಲೋಕಕ್ಕೆ ಒಯ್ಯಲ್ಪಟ್ಟದ್ದು

19ಕರ್ತನಾದ ಯೇಸು ಅವರೊಂದಿಗೆ ಮಾತನಾಡಿದ ಮೇಲೆ
16:19 ಲೂಕ. 24:51; ಅ. ಕೃ. 1:9:
ಪರಲೋಕಕ್ಕೆ ಒಯ್ಯಲ್ಪಟ್ಟು ದೇವರ ಬಲಗಡೆಯಲ್ಲಿ ಆಸನಾರೂಢನಾದನು.
20ಅನಂತರ ಅವರು ಹೊರಟುಹೋಗಿ ಎಲ್ಲಾ ಕಡೆಗಳಲ್ಲಿಯೂ ಸುವಾರ್ತೆಯನ್ನು ಸಾರಿದರು; ಮತ್ತು
16:20 ಇಬ್ರಿ. 2:3, 4:
ಕರ್ತನು ಅವರ ಸಂಗಡ ಕೆಲಸ ಮಾಡುತ್ತಾ
16:20 ಅ. ಕೃ. 5:12:
ಸೂಚಕಕಾರ್ಯಗಳಿಂದ ಸುವಾರ್ತೆಯ ವಾಕ್ಯವನ್ನು ದೃಢಪಡಿಸುತ್ತಾ ಇದ್ದನು.
16:20 9 ನೆಯ ವಚನದಿಂದ 20 ನೆಯ ವಚನದ ಪರ್ಯಂತರ ಬರೆದಿರುವ ಮಾತುಗಳು ಕೆಲವು ಪುರಾತನ ಪ್ರತಿಗಳಲ್ಲಿ ಇಲ್ಲ. ಕೆಲವು ಪ್ರತಿಗಳಲ್ಲಿ ಅವುಗಳಿಗೆ ಬದಲಾಗಿ ಬೇರೊಂದು ಸಮಾಪ್ತಿ ವಾಕ್ಯಗಳಿವೆ; ಅದೇನಂದರೆ- ಆದರೆ ತಮಗೆ ಆಜ್ಞಾಪಿಸಲ್ಪಟ್ಟ ಮಾತುಗಳನ್ನೆಲ್ಲಾ ಪೇತ್ರನ ಸಂಗಡವಿದ್ದವರಿಗೆ ಸಂಕ್ಷೇಪವಾಗಿ ತಿಳಿಸಿದರು. ತರುವಾಯ ಯೇಸು ತಾನೇ ನಿರಂತರವಾದ ರಕ್ಷಣೆಯನ್ನು ತಿಳಿಸುವ ಲಯವಾಗದ ದಿವ್ಯ ಪ್ರಕಟಣೆಯನ್ನು ಪೂರ್ವದಿಂದ ಪಶ್ಚಿಮದವರೆಗೂ ಇವರ ಮುಖಾಂತರ ಪ್ರಚುರಪಡಿಸಿದನು ಎಂಬುದೇ.

Copyright information for KanULB