Matthew 28

ಯೇಸುವಿನ ಪುನರುತ್ಥಾನ

(ಮಾರ್ಕ 16:1-10; ಲೂಕ 24:1-10; ಯೋಹಾ. 20:1-18)

1ಸಬ್ಬತ್ ದಿನ ಆದ ಮೇಲೆ ವಾರದ ಮೊದಲನೆಯ ದಿನ
28:1 ಪ್ರಾರಂಭವಾಗುವುದಕ್ಕೆ ಸ್ವಲ್ಪ ಹೊತ್ತು ಮಾತ್ರ ಇದ್ದಾಗ
ಬೆಳಗಾಗುತ್ತಿರುವಾಗಲೇ ಮಗ್ದಲದ ಮರಿಯಳೂ ಮತ್ತು ಆ ಬೇರೆ ಮರಿಯಳೂ ಸಮಾಧಿಯನ್ನು ನೋಡಲು ಬಂದರು.
2ಇಗೋ, ಮಹಾ ಭೂಕಂಪವುಂಟಾಯಿತು, ಕರ್ತನ ದೂತನು ಆಕಾಶದಿಂದ ಇಳಿದು ಬಂದು ಆ ಕಲ್ಲನ್ನು ಬಾಗಿಲಿನಿಂದ ಉರುಳಿಸಿ ಅದರ ಮೇಲೆ ಕುಳಿತುಕೊಂಡಿದ್ದನು.

3ಅವನ ಮುಖಭಾವವು ಮಿಂಚಿನಂತೆ ಇತ್ತು. ಅವನ ಉಡುಪು ಹಿಮದಂತೆ ಬೆಳ್ಳಗಿತ್ತು; 4ಕಾವಲುಗಾರರು ಹೆದರಿ ನಡುಗಿ ಸತ್ತವರ ಹಾಗಾದರು.

5ಆಗ ದೂತನು ಆ ಹೆಂಗಸರಿಗೆ, <<ನೀವು ಹೆದರಬೇಡಿರಿ; ಶಿಲುಬೆಗೆ ಹಾಕಲ್ಪಟ್ಟಿದ್ದ ಯೇಸುವನ್ನು ನೀವು ಹುಡುಕುತ್ತಿದ್ದೀರೆಂದು ನಾನು ಬಲ್ಲೆನು; 6ಆತನು ಇಲ್ಲಿ ಇಲ್ಲ, ತಾನು ಹೇಳಿದಂತೆಯೇ ಎದ್ದಿದ್ದಾನೆ. ಬನ್ನಿ, ಕರ್ತನು ಮಲಗಿದ್ದ ಸ್ಥಳವನ್ನು ನೋಡಿರಿ; 7ಮತ್ತು ಬೇಗ ಹೋಗಿ ಆತನ ಶಿಷ್ಯರಿಗೆ, <ಆತನು ಸತ್ತವರೊಳಗಿಂದ ಎದ್ದಿದ್ದಾನೆಂದು,
28:7 ಮತ್ತಾ. 28:10,16; 26:32
ಆತನು ನಿಮಗಿಂತಲೂ ಮೊದಲೇ ಗಲಿಲಾಯಕ್ಕೆ ಹೋಗುತ್ತಾನೆ, ಅಲ್ಲಿ ಆತನನ್ನು ಕಾಣುವಿರಿ> ಎಂದು ತಿಳಿಸಿರಿ; ನೋಡಿರಿ, ನಾನು ನಿಮಗೆ ಹೇಳಿದ್ದೇನೆ,>> ಎಂದು ಹೇಳಿದನು.

8ಅವರು ಭಯದಿಂದಲೂ, ಮಹಾ ಸಂತೋಷದಿಂದಲೂ ಬೇಗ ಸಮಾಧಿಯ ಬಳಿಯಿಂದ ಹೊರಟು ಆತನ ಶಿಷ್ಯರಿಗೆ ಅದನ್ನು ತಿಳಿಸುವುದಕ್ಕೆ ಓಡಿಹೋದರು. 9ಆಗ ಯೇಸು ಅವರನ್ನು ಭೇಟಿಯಾಗಿ, <<ನಿಮಗೆ ಶುಭವಾಗಲಿ>> ಅಂದನು. ಅವರು ಹತ್ತಿರಕ್ಕೆ ಬಂದು ಆತನ ಪಾದಗಳಿಗೆ ಅಡ್ಡಬಿದ್ದು ಆತನನ್ನು ಆರಾಧಿಸಿದರು. 10ಆಗ ಯೇಸು ಅವರಿಗೆ, <<ಹೆದರಬೇಡಿರಿ; ನನ್ನ ಸಹೋದರರ ಬಳಿಗೆ ಹೋಗಿ ಅವರು ಗಲಿಲಾಯಕ್ಕೆ ಹೋಗಬೇಕೆಂದು ಹೇಳಿರಿ; ಅಲ್ಲಿ ಅವರು ನನ್ನನ್ನು ನೋಡುವರು>> ಎಂದು ಹೇಳಿದನು.

ಕಾವಲು ಗಾರನ ಸುದ್ಧಿ

11ಆಗ ಹೆಂಗಸರು ಹೋಗುತ್ತಿರುವಾಗ, ಇಗೋ, ಕಾವಲುಗಾರರಲ್ಲಿ ಕೆಲವರು ಪಟ್ಟಣದೊಳಕ್ಕೆ ಬಂದು ನಡೆದ ಸಂಗತಿಗಳನ್ನೆಲ್ಲಾ ಮುಖ್ಯಯಾಜಕರಿಗೆ ತಿಳಿಸಿದರು. 12ಯಾಜಕರು ಹಿರಿಯರ ಸಂಗಡ ಕೂಡಿಕೊಂಡು ಆಲೋಚನೆ ಮಾಡಿ ಆ ಸಿಪಾಯಿಗಳಿಗೆ ಬಹಳ ಹಣಕೊಟ್ಟು, 13<< <ಯೇಸುವಿನ ಶಿಷ್ಯರು ರಾತ್ರಿಯಲ್ಲಿ ಬಂದು ನಾವು ನಿದ್ದೆಮಾಡುತ್ತಿದ್ದಾಗ ಅವನ ಮೃತದೇಹವನ್ನು ಕದ್ದುಕೊಂಡು ಹೋದರು> ಎಂದು ಹೇಳಿರಿ;

14ಈ ಸುದ್ದಿಯು ಶತಾಧಿಪತಿಯ ಕಿವಿಗೆ ಬಿದ್ದರೆ ನಾವು ಅವನನ್ನು ಸಮಾಧಾನಪಡಿಸಿ ನಿಮಗೆ ತೊಂದರೆ ಆಗದಂತೆ ನೋಡಿಕೊಳ್ಳುತ್ತೇವೆ>> ಎಂದರು. 15ಅದರಂತೆ ಕಾವಲುಗಾರರು ಆ ಹಣವನ್ನು ತೆಗೆದುಕೊಂಡು ತಮಗೆ ಹೇಳಿಕೊಟ್ಟ ಹಾಗೆಯೇ ಮಾಡಿದರು. ಈ ಮಾತು ಇಂದಿನವರೆಗೂ ಯೆಹೂದ್ಯರಲ್ಲಿ ಹರಡಿಕೊಂಡಿದೆ.

ಯೇಸುವಿನ ಕಡೆಯ ಅಪ್ಪಣೆ

16ಆದರೆ ಹನ್ನೊಂದು ಮಂದಿ ಶಿಷ್ಯರು ಗಲಿಲಾಯಕ್ಕೆ ಹೋಗಿ, ಯೇಸು ತಮಗೆ ಗೊತ್ತುಮಾಡಿದ್ದ ಬೆಟ್ಟಕ್ಕೆ ಹೋಗಿ ಸೇರಿದರು. 17ಅವರು ಅಲ್ಲಿ ಯೇಸುವನ್ನು ಕಂಡು ಆತನನ್ನು ಆರಾಧಿಸಿದರು; ಆದರೆ ಕೆಲವರು ಸಂದೇಹಪಟ್ಟರು.

18ಯೇಸು ಅವರ ಹತ್ತಿರಕ್ಕೆ ಬಂದು, <<ಪರಲೋಕದಲ್ಲಿಯೂ, ಭೂಲೋಕದಲ್ಲಿಯೂ ಇರುವ ಎಲ್ಲಾ ಅಧಿಕಾರವು ನನಗೆ ಕೊಡಲ್ಪಟ್ಟಿದೆ. 19
28:19 ಮಾರ್ಕ 16:15,16; ಲೂಕ 24:47
ಆದುದರಿಂದ ನೀವು ಹೊರಟುಹೋಗಿ ಎಲ್ಲಾ ಜನಾಂಗಗಳನ್ನು ಶಿಷ್ಯರನ್ನಾಗಿ ಮಾಡಿ; ಅವರಿಗೆ ತಂದೆ, ಮಗ, ಪವಿತ್ರಾತ್ಮನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿರಿ.

20ನಾನು ನಿಮಗೆ ಆಜ್ಞಾಪಿಸಿದ ಎಲ್ಲವನ್ನು ಅನುಸರಿಸುವುದಕ್ಕೆ ಅವರಿಗೆ ಉಪದೇಶ ಮಾಡಿರಿ. ಹಾಗು
28:20 ಮತ್ತಾ. 18:20; ಯೋಹಾ. 14:18,19
ಇಗೋ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿನವೂ ನಿಮ್ಮ ಸಂಗಡ ಇರುತ್ತೇನೆ>> ಎಂದು ಹೇಳಿದನು.

Copyright information for KanULB