Philippians 4

1ಹೀಗಿರಲಾಗಿ, ನನ್ನ ಪ್ರಿಯರೇ ಹಾಗೂ
4:1 ಫಿಲಿ. 1:8
ಆಪ್ತರೇ, ನನಗೆ
4:1 ಫಿಲಿ. 1:4, 2:16
ಸಂತೋಷವೂ ಕಿರೀಟವೂ ಆಗಿರುವವರೇ, ನಾನು ಹೇಳಿದಂತೆ ಕರ್ತನಲ್ಲಿ
4:1 ಫಿಲಿ. 1:27
ದೃಢವಾಗಿ ನಿಲ್ಲಿರಿ, ಪ್ರಿಯರೇ.

ಉತ್ತೇಜನದ ಮಾತುಗಳು

2ಕರ್ತನಲ್ಲಿ
4:2 ಫಿಲಿ. 2:2
ಒಂದೇ ಮನಸ್ಸುಳ್ಳವರಾಗಿರಿ ಎಂದು ಯುವೊದ್ಯಳನ್ನೂ ಹಾಗೂ ಸಂತುಕೆಯನ್ನೂ ಬೇಡಿಕೊಳ್ಳುತ್ತೇನೆ.
3ನನ್ನ ನಿಜವಾದ ಜೊತೆ ಸೇವಕನೇ, ಆ ಸ್ತ್ರೀಯರಿಗೆ ಸಹಾಯಕನಾಗಿರಬೇಕೆಂದು ನಿನ್ನನ್ನೂ ಕೇಳಿಕೊಳ್ಳುತ್ತೇನೆ. ಅವರು ಕ್ಲೇಮೆನ್ಸ್ ಮುಂತಾದ ನನ್ನ ಜೊತೆಕೆಲಸದವರ ಸಹಿತವಾಗಿ ನನ್ನ ಜೊತೆ ಸುವಾರ್ತೆಗೋಸ್ಕರ ಪ್ರಯಾಸಪಟ್ಟವರು.
4:3 ಲೂಕ. 10:20
ಅವರವರ ಹೆಸರುಗಳು ಜೀವಬಾಧ್ಯರ ಪಟ್ಟಿಯಲ್ಲಿ ಬರೆದಿವೆ.

4
4:4 ಫಿಲಿ. 3:1
ಯಾವಾಗಲೂ ಕರ್ತನಲ್ಲಿ ಸಂತೋಷಿಸಿರಿ, ಸಂತೋಷಪಡಿರಿ ಎಂದು ಪುನಃ ಹೇಳುತ್ತೇನೆ.
5ನಿಮ್ಮ ಸೈರಣೆಯು ಎಲ್ಲಾ ಮನುಷ್ಯರಿಗೆ ಗೊತ್ತಾಗಲಿ,
4:5 1 ಕೊರಿ. 16:23, ಯಾಕೋಬ. 5:8
ಕರ್ತನು ಹತ್ತಿರವಾಗಿದ್ದಾನೆ.
6
4:6 ಮತ್ತಾ 6:25
ಯಾವ ಸಂಬಂಧವಾಗಿಯೂ ಚಿಂತೆಮಾಡದೆ
4:6 ಜ್ಞಾ. 16:3
ಸರ್ವವಿಷಯಗಳಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ಕರ್ತನಿಗೆ ತಿಳಿಯಪಡಿಸಿರಿ.
7
4:7 ಎಫೆ. 3:19
ಆಗ ಎಲ್ಲಾ ಗ್ರಹಿಕೆಯನ್ನು ಮೀರುವ
4:7 ವ. 9, ಯೆಶಾ. 26:3, ಕೊಲೊ. 3:15, ಯೋಹಾ. 14:27
ದಿವ್ಯಶಾಂತಿಯು ನಿಮ್ಮ ಹೃದಯಗಳನ್ನೂ, ಯೋಚನೆಗಳನ್ನೂ ಕ್ರಿಸ್ತ ಯೇಸುವಿನಲ್ಲಿ ಕಾಪಾಡುವುದು.

8ಕಡೆಯದಾಗಿ, ಸಹೋದರರೇ, ಯಾವುದು ಸತ್ಯವೂ, ಮಾನ್ಯವೂ, ನ್ಯಾಯವೂ, ಶುದ್ಧವೂ, ಪ್ರೀತಿಕರವೂ, ಮನೋಹರವೂ ಆಗಿದೆಯೋ, ಯಾವುದು ಸದ್ಗುಣವಾಗಿದೆಯೋ, ಯಾವುದು ಕೀರ್ತಿಗೆ ಯೋಗ್ಯವೋ, ಅವೆಲ್ಲವುಗಳ ಬಗ್ಗೆ ಚಿಂತಿಸುವವರಾಗಿರಿ. 9
4:9 1 ಥೆಸ. 4:1
ನೀವು ಯಾವುದನ್ನು ನನ್ನಿಂದ ಕಲಿತು ಹೊಂದಿದ್ದೀರೋ, ಮತ್ತು
4:9 ಫಿಲಿ. 3:17
ಯಾವುದನ್ನು ನನ್ನಲ್ಲಿ ಕೇಳಿ ಕಂಡಿರುವಿರೋ ಅದನ್ನೇ ಮಾಡುತ್ತಾ ಬನ್ನಿರಿ. ಹೀಗೆ ಮಾಡಿದರೆ
4:9 ಫಿಲಿ. 4:7, ರೋಮಾ. 15:33
ಶಾಂತಿದಾಯಕನಾದ ದೇವರು ನಿಮ್ಮೊಂದಿಗಿರುವನು.

ಅವರು ದಾನಕ್ಕಾಗಿ ಕೃತಜ್ಞತೆ

10
4:10 2 ಕೊರಿ. 11:9, ಫಿಲಿ. 2:30
ನನ್ನ ವಿಷಯದಲ್ಲಿ ನಿಮಗಿರುವ ಕಾಳಜಿಯು ಇಷ್ಟು ದಿನಗಳಾದ ಮೇಲೆ ಪುನಃ ಚಿಗುರಿದಕ್ಕೆ ನಾನು ಕರ್ತನಲ್ಲಿ ಹೆಚ್ಚಾಗಿ ಸಂತೋಷಪಡುತ್ತೇನೆ. ಇಂಥ ಯೋಚನೆ ನಿಮ್ಮಲ್ಲಿ ಈ ಮೊದಲೇ ಇದ್ದಿದ್ದರೂ, ಸಹಾಯ ಮಾಡುವುದಕ್ಕೆ ಸರಿಯಾದ ಸಂದರ್ಭ ಒದಗಿ ಬಂದಿರಲಿಲ್ಲ.
11ನನ್ನ ಅಗತ್ಯಗಳ ಕುರಿತಾಗಿ ನಾನು ಇದನ್ನು ಹೇಳುತ್ತಿಲ್ಲ, ನಾನಂತೂ ಇದ್ದ ಸ್ಥಿತಿಯಲ್ಲಿಯೇ
4:11 1 ತಿಮೊ. 6:6-8, 2 ಕೊರಿ. 9:8, ಇಬ್ರಿ. 13:5
ಸಂತೃಪ್ತನಾಗಿರುವುದನ್ನು ಕಲಿತುಕೊಂಡಿದ್ದೇನೆ.
12ಬಡವನಾಗಿರಲೂ ಬಲ್ಲೆನು, ಸಮೃದ್ಧಿಯುಳ್ಳವನಾಗಿರಲೂ ಬಲ್ಲೆನು. ನಾನು ತೃಪ್ತನಾಗಿದ್ದರೂ,
4:12 1 ಕೊರಿ. 4:11, 2 ಕೊರಿ. 11:27
ಹಸಿದವನಾಗಿದ್ದರೂ, ಸಮೃದ್ಧಿಯುಳ್ಳವನಾದರೂ,
4:12 2 ಕೊರಿ. 11:9
ಕೊರತೆಯುಳ್ಳವನಾದರೂ ಯಾವ ತರದ ಸ್ಥಿತಿಯಲ್ಲಿರುವವನಾದರೂ ಅದರ ಗುಟ್ಟು ನನಗೆ ತಿಳಿದಿದೆ.
13
4:13 2 ಕೊರಿ. 12:9, ಎಫೆ. 3:16, 1 ತಿಮೊ. 1:12
ನನ್ನನ್ನು ಬಲಪಡಿಸುವವನ ಮುಖಾಂತರ ನಾನು ಎಲ್ಲವನ್ನೂ ಮಾಡಲು ಶಕ್ತನಾಗಿದ್ದೇನೆ.

14ಹೀಗಿದ್ದರೂ
4:14 ಫಿಲಿ. 1:7
ನೀವು ನನ್ನ ಸಂಕಟದಲ್ಲಿ ಸಹಭಾಗಿಗಳಾಗಿದ್ದದ್ದು ಒಳ್ಳೆಯದಾಯಿತು.
15ಫಿಲಿಪ್ಪಿಯವರೇ, ನಾನು ಪ್ರಾರಂಭದಲ್ಲಿ ನಿಮ್ಮಲ್ಲಿ ಸುವಾರ್ತೆಯನ್ನು ಸಾರಿ, ಮಕೆದೋನ್ಯದಿಂದ ಹೊರಟುಹೋದಾಗ
4:15 2 ಕೊರಿ. 11:8-9
ಕೊಡುವ, ಕೊಳ್ಳುವ ವಿಷಯದಲ್ಲಿ ನಿಮ್ಮ ಹೊರತು ಬೇರೆ ಯಾವ ಸಭೆಯೂ ನನಗೆ ಬೆಂಬಲಿಸಲ್ಲಿಲ್ಲವೆಂಬುದನ್ನು ನೀವೂ ಬಲ್ಲಿರಿ.
16ನಾನು ಥೆಸಲೋನಿಕದಲ್ಲಿದ್ದಾಗಲೂ ನೀವು ಒಂದೆರಡು ಸಾರಿ ನನ್ನ ಕೊರತೆಯನ್ನು ನೀಗಿಸುವುದಕ್ಕೆ ಸಹಾಯವನ್ನು ಕೊಟ್ಟುಕಳುಹಿಸಿದಿರಲ್ಲಾ. 17
4:17 2 ಕೊರಿ. 9:5
ನಾನು ನಿಮ್ಮಿಂದ ದಾನವನ್ನು ಅಪೇಕ್ಷಿಸುವುದಿಲ್ಲ,
4:17 ರೋಮಾ. 1:13
ನಿಮ್ಮ ಖಾತೆಯನ್ನು ವರ್ಧಿಸುವಂಥ ಸಮೃದ್ಧಿಯಾದ ಫಲವನ್ನೇ ಅಪೇಕ್ಷಿಸುತ್ತೇನೆ.

18ಬೇಕಾದದ್ದೆಲ್ಲಾ ನನಗುಂಟು, ಸಮೃದ್ಧಿಹೊಂದಿದ್ದೇನೆ.
4:18 ಫಿಲಿ. 2:25
ಎಪಫ್ರೊದೀತನ ಕೈಯಿಂದ ನೀವು ಕೊಟ್ಟು ಕಳುಹಿಸಿದ್ದು ನನಗೆ ತಲುಪಲಾಗಿ ನಾನು ತುಂಬಿತುಳುಕಿದವನಾಗಿದ್ದೇನೆ. ಅದು ದೇವರಿಗೆ
4:18 ಇಬ್ರಿ. 13:16
ಮೆಚ್ಚಿಕೆಯಾದದ್ದು,
4:18 ಆದಿ. 8:21
ಸುಗಂಧವಾಸನೆಯೇ, ಇಷ್ಟ ಯಜ್ಞವೇ.
19
4:19 ಕೀರ್ತ. 23:1, 2 ಕೊರಿ. 9:8
ನನ್ನ ದೇವರು ಕ್ರಿಸ್ತ ಯೇಸುವಿನ ಮೂಲಕ ತನ್ನ ಪ್ರಭಾವದ
4:19 ರೋಮಾ. 2:4, 9:23, 10:12, ಎಫೆ. 1:7,18,
ಐಶ್ವರ್ಯಕ್ಕೆ ತಕ್ಕ ಹಾಗೆ ನಿಮ್ಮ ಪ್ರತಿಯೊಂದು ಕೊರತೆಗಳನ್ನೂ ನೀಗಿಸುವನು.
20
4:20 ಗಲಾ. 1:5, ರೋಮಾ. 11:36
ನಮ್ಮ ತಂದೆಯಾದ ದೇವರಿಗೆ ಯುಗಯುಗಾಂತರಗಳಲ್ಲಿಯೂ ಮಹಿಮೆಯುಂಟಾಗಲಿ. ಆಮೆನ್‍.

ವಂದನೆಗಳು

21ಕ್ರಿಸ್ತ ಯೇಸುವಿನಲ್ಲಿರುವ ಪ್ರತಿಯೊಬ್ಬ ಭಕ್ತರಿಗೂ ನನ್ನ ವಂದನೆಯನ್ನು ಹೇಳಿರಿ.
4:21 ಗಲಾ. 1:2
ನನ್ನ ಜೊತೆಯಲ್ಲಿರುವ ಸಹೋದರರು ನಿಮ್ಮನ್ನು ವಂದಿಸುತ್ತಾರೆ.
22
4:22 2 ಕೊರಿ. 13:13
ಇಲ್ಲಿರುವ ದೇವಜನರೆಲ್ಲರು ನಿಮ್ಮನ್ನು ವಂದಿಸುತ್ತಾರೆ. ವಿಶೇಷವಾಗಿ ಕೈಸರನ ಅರಮನೆಗೆ ಸೇರಿದವರು ನಿಮಗೆ ವಂದನೆಗಳನ್ನು ತಿಳಿಸಿದ್ದಾರೆ.

23
4:23 ರೋಮಾ. 16:20
ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮ ಆತ್ಮದೊಂದಿಗೆ ಇರಲಿ.

Copyright information for KanULB