Philippians 1

ಪೀಠಿಕೆ

1ಕ್ರಿಸ್ತ ಯೇಸುವಿನ ದಾಸರಾದ ಪೌಲ ಮತ್ತು ತಿಮೊಥೆಯರು, ಫಿಲಿಪ್ಪಿಯದಲ್ಲಿ ಕ್ರಿಸ್ತ ಯೇಸುವಿನ ಮೂಲಕ
1:1 2 ಕೊರಿ. 1:1; ಕೊಲೊ. 1:2
ದೇವಜನರಾಗಿರುವವರೆಲ್ಲರಿಗೂ ಮತ್ತು ಅವರೊಂದಿಗಿರುವ
1:1 ಅ. ಕೃ. 20:28; 1 ತಿಮೊ. 3:1-7; ತೀತ. 1:6-9
ಸಭಾಧ್ಯಕ್ಷರಿಗೂ ಹಾಗೂ
1:1 1 ತಿಮೊ. 3:8,12
ಸಭಾಸೇವಕರಿಗೂ ಬರೆಯುವುದೇನೆಂದರೆ,
2ನಮ್ಮ ತಂದೆಯಾದ ದೇವರಿಂದಲೂ, ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ, ಶಾಂತಿಯೂ ಲಭಿಸಲಿ.

ಕೃತಜ್ಞತಾಸ್ತುತಿಯೂ ಪ್ರಾರ್ಥನೆಗಳೂ

3
This verse is empty because in this translation its contents have been moved to form part of verse Php 1:4.
In this translation, this verse contains text which in some other translations appears in verses Php 1:3-Php 1:4.
4
1:3-4 ರೋಮಾ. 1:9; ಎಫೆ. 1:16
ನಾನು ನಿಮ್ಮನ್ನು ನೆನಪಿಸಿಕೊಳ್ಳುವಾಗೆಲ್ಲಾ ನನ್ನ ದೇವರಿಗೆ ಸ್ತೋತ್ರಸಲ್ಲಿಸುತ್ತೇನೆ, ನಾನು ನಿಮಗಾಗಿ ದೇವರನ್ನು ಪ್ರಾರ್ಥಿಸುವ ಎಲ್ಲಾ ಸಮಯಗಳಲ್ಲಿಯೂ ಸಂತೋಷದಿಂದಲೇ ಪ್ರಾರ್ಥಿಸುವವನಾಗಿದ್ದೇನೆ.
5ನೀವು ಮೊದಲಿನಿಂದ ಇಂದಿನವರೆಗೂ
1:5 ಫಿಲಿ. 2:12; 4:15; ಅ. ಕೃ. 16:12-40
ಸುವಾರ್ತಾಪ್ರಚಾರದಲ್ಲಿ ಸಹಕಾರಿಗಳಾಗಿದ್ದೀರೆಂದು
1:5 ರೋಮಾ. 1:8
ನನ್ನ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇನೆ.
6ಈ ಒಳ್ಳೆಯ ಕೆಲಸವನ್ನು ನಿಮ್ಮಲ್ಲಿ ಪ್ರಾರಂಭಿಸಿದಾತನು ಅದನ್ನು ನಡಿಸಿಕೊಂಡು ಯೇಸು ಕ್ರಿಸ್ತನು ಬರುವ ದಿನದೊಳಗಾಗಿ
1:6 ಕೀರ್ತ. 138:8; 1 ಥೆಸ. 5:24
ಪೂರ್ಣತೆಗೆ ತರುವನೆಂದು ನನಗೆ ಭರವಸವುಂಟು.

7ನಿಮ್ಮೆಲ್ಲರನ್ನು ಕುರಿತು ನನಗೆ ಹೀಗನ್ನಿಸುವುದು ಸೂಕ್ತವೇ ಸರಿ.
1:7 ಅ. ಕೃ. 20:23; 26:29; ಕೊಲೊ. 4:18; 2 ತಿಮೊ. 2:9; ಎಫೆ. 3:1
ನಾನು ಬಂಧನದಲ್ಲಿರುವಾಗಲೂ,
1:7 ವ. 16
ಸುವಾರ್ತೆಯ ಕುರಿತಾದ ವಾದ-ಪ್ರತಿವಾದಗಳಲ್ಲಿಯು ನೀವೆಲ್ಲರೂ ನನ್ನೊಂದಿಗೆ ದೇವರ ಕೃಪೆಯಲ್ಲಿ ಪಾಲುಗಾರರಾಗಿದ್ದೀರೆಂದು
1:7 2 ಕೊರಿ. 7:3
ನಿಮ್ಮನ್ನು ನನ್ನ ಹೃದಯದಲ್ಲಿರಿಸಿಕೊಂಡಿದ್ದೇನೆ.
8ಕ್ರಿಸ್ತ ಯೇಸುವಿಗಿರುವಂಥ ಕನಿಕರದಿಂದ
1:8 ಫಿಲಿ. 4:1; ರೋಮಾ. 1:11; 1 ಥೆಸ. 3:6; 2 ತಿಮೊ. 1:4
ನಿಮ್ಮೆಲ್ಲರಿಗೋಸ್ಕರ ಎಷ್ಟೋ ಹಂಬಲಿಸುತ್ತೇನೆ.
1:8 ರೋಮಾ. 1:9; 9:1
ಇದಕ್ಕೆ ದೇವರೇ ಸಾಕ್ಷಿ.

9ಮತ್ತು
1:9 1 ಥೆಸ. 3:12; 2 ಥೆಸ. 1:3
ನಿಮ್ಮ ಪ್ರೀತಿಯು ಇನ್ನೂ ಅಧಿಕವಾಗಿ ಹೆಚ್ಚುತ್ತಾ
1:9 ಕೊಲೊ. 1:9; 3:10; ಫಿಲೆ. 6
ಪೂರ್ಣ ಜ್ಞಾನ ವಿವೇಕಗಳಿಂದ ಕೂಡಿರಬೇಕೆಂದು ನಾನು ನಿಮಗೋಸ್ಕರ ಪ್ರಾರ್ಥಿಸುತ್ತೇನೆ.
10ಹೀಗೆ
1:10 ರೋಮಾ. 2:18
ಉತ್ತಮ ಕಾರ್ಯಗಳು ಯಾವವೆಂಬುದನ್ನು ನೀವು ವಿವೇಚಿಸುವವರಾಗಬೇಕೆಂತಲೂ ಹಾಗೂ ಕ್ರಿಸ್ತನು ಬರುವ ದಿನದಲ್ಲಿ ನೀವು
1:10 1 ಥೆಸ. 3:13; 5:23
ಸರಳರಾಗಿಯೂ, ನಿರ್ಮಲರಾಗಿಯೂ,
11ಯೇಸು ಕ್ರಿಸ್ತನ ಮೂಲಕವಾಗಿರುವ
1:11 ಕೊಲೊ. 1:6,10; ಯಾಕೋಬ 3:18
ನೀತಿಯೆಂಬ ಫಲದಿಂದ ತುಂಬಿದವರಾಗಿಯೂ ಇರಬೇಕೆಂದು
1:11 ಎಫೆ. 1:12,14
ದೇವರಿಗೆ ಘನತೆಯನ್ನೂ ಸ್ತೋತ್ರವನ್ನೂ ಸಲ್ಲಿಸಬೇಕೆಂತಲೂ ಬೇಡಿಕೊಳ್ಳುತ್ತೇನೆ.

ಸುವಾರ್ತೆಯ ಅಭಿವೃದ್ಧಿ

12ಸಹೋದರರೇ, ನನಗೆ ಸಂಭವಿಸಿರುವಂಥವುಗಳೆಲ್ಲವೂ ಸುವಾರ್ತೆಯ ಪ್ರಸಾರಣೆಗೆ ಸಹಾಯವಾಯಿತೆಂದು ನೀವು ತಿಳಿಯಬೇಕೆಂಬುದಾಗಿ ಅಪೇಕ್ಷಿಸುತ್ತೇನೆ. 13
1:13 ಲೂಕ. 21:13
ಹೇಗೆಂದರೆ ನನ್ನ ಸೆರೆವಾಸವು ಕ್ರಿಸ್ತನ ನಿಮಿತ್ತವೇ ಎಂದು
1:13 ಅ. ಕೃ. 28:30,31; 2 ಕೊರಿ. 2:9
ಅರಮನೆಯ ಕಾವಲುಗಾರರೆಲ್ಲರಿಗೂ ಹಾಗೂ ಉಳಿದವರೆಲ್ಲರಿಗೂ ತಿಳಿಯಲ್ಪಟ್ಟಿತು.
14ಇದಲ್ಲದೆ ಸಹೋದರರಲ್ಲಿ ಬಹಳ ಜನರು ನನ್ನ ಬಂಧನದಿಂದಲೇ ಕರ್ತನಲ್ಲಿ ಭರವಸವುಳ್ಳವರಾಗಿ
1:14 ಅ. ಕೃ. 4:31
ದೇವರ ವಾಕ್ಯವನ್ನು ನಿರ್ಭಯದಿಂದ ಹೇಳುವುದಕ್ಕೆ ಇನ್ನೂ ಹೆಚ್ಚು ಧೈರ್ಯಹೊಂದಿದ್ದಾರೆ.

15
1:15 2 ಕೊರಿ. 11:13
ಕೆಲವರು ಹೊಟ್ಟೆಕಿಚ್ಚುಪಟ್ಟು ಭೇದ ಹುಟ್ಟಿಸಬೇಕೆಂಬ ಮನಸ್ಸಿನಿಂದ ಮತ್ತು ಬೇರೆ ಕೆಲವರು ಒಳ್ಳೆಯ ಭಾವದಿಂದ ಕ್ರಿಸ್ತನನ್ನು ಪ್ರಚುರಪಡಿಸುತ್ತಾರೆ.
16ಇವರಂತೂ ನಾನು
1:16 ವ. 7
ಸುವಾರ್ತೆಯ ವಿಷಯದಲ್ಲಿ ಉತ್ತರ ಹೇಳುವುದಕ್ಕಾಗಿ ಇಲ್ಲಿ ಹಾಕಲ್ಪಟ್ಟಿದ್ದೆನೆಂದು ತಿಳಿದು ಪ್ರೀತಿಯಿಂದ ಪ್ರಸಿದ್ಧಿಪಡಿಸುತ್ತಿದ್ದಾರೆ.
17ಆ ಬೇರೆ ತರದವರಾದರೋ ನಾನು ಬೇಡಿಯಿಂದ ಬಂಧಿತನಾಗಿರುವಾಗಲೂ ನನಗೆ ಸಂಕಟವನ್ನು ಹೆಚ್ಚಿಸಬೇಕೆಂದು ಯೋಚಿಸಿ, ಪ್ರಾಮಾಣಿಕವಲ್ಲದ ಸ್ವಾರ್ಥ ಉದ್ದೇಶದಿಂದ ಕ್ರಿಸ್ತನನ್ನು
1:17 ಫಿಲಿ. 2:3; ಯಾಕೋಬ 3:14
ಪ್ರಸಿದ್ಧಿಪಡಿಸುತ್ತಾರೆ.

18ಹೇಗಾದರೇನು? ಯಾವ ರೀತಿಯಿಂದಾದರೂ ಸರಿಯೇ ಕಪಟದಿಂದಾಗಲಿ ಅಥವಾ ಸತ್ಯದಿಂದಾಗಲಿ ಕ್ರಿಸ್ತನನ್ನು ಪ್ರಸಿದ್ಧಿಪಡಿಸುವುದುಂಟು, ಇದಕ್ಕೆ ನಾನು ಸಂತೋಷಿಸುತ್ತೇನೆ, ಮುಂದೆಯೂ ಸಂತೋಷಿಸುವೆನು. 19ಯಾಕೆಂದರೆ
1:19 2 ಕೊರಿ. 1:11
ನಿಮ್ಮ ವಿಜ್ಞಾಪನೆಯಿಂದಲೂ ಮತ್ತು
1:19 ಅ. ಕೃ. 16:7; ಗಲಾ. 3:5
ಯೇಸುಕ್ರಿಸ್ತನ ಆತ್ಮನ ಸಹಾಯದಿಂದಲೂ ಇದು ನನ್ನ ಬಿಡುಗಡೆಗೆ ಅನುಕೂಲವಾಗುವುದೆಂದು ಬಲ್ಲೆನು.

20ಹೇಗೆಂದರೆ
1:20 ರೋಮಾ. 5:5; 2 ತಿಮೊ. 2:15
ನಾನು ಯಾವ ವಿಷಯದಲ್ಲಾದರೂ ನಾಚಿಕೆಪಡದೆ ಎಂದಿನಂತೆ ಈಗಲೂ ಸಹ ತುಂಬಾ ಧೈರ್ಯದಿಂದಿರುವುದರಿಂದ
1:20 ರೋಮಾ. 14:8
ಬದುಕಿದರೂ ಸರಿಯೇ ಅಥವಾ ಸತ್ತರೂ ಸರಿಯೇ
1:20 1 ಕೊರಿ. 6:20
ನನ್ನ ಶರೀರದ ಮೂಲಕ ಕ್ರಿಸ್ತನಿಗೆ ಮಹಿಮೆಯುಂಟಾಗಬೇಕೆಂದು ನನ್ನ ಬಹು ಅಭಿಲಾಷೆಯಾಗಿದೆ, ಹಾಗೆಯೇ ಆಗುವುದೆಂಬ ಭರವಸೆವುಂಟು.
21
1:21 ಗಲಾ. 2:20
ನನಗಂತೂ ಬದುಕುವುದೆಂದರೆ ಕ್ರಿಸ್ತನೇ, ಸಾಯುವುದು ಲಾಭವೇ.

22ಶರೀರದಲ್ಲಿಯೇ ಬದುಕಬೇಕಾದ್ದಲ್ಲಿ ನನ್ನ ಕೆಲಸಮಾಡಿ ಫಲಹೊಂದಲು ನನಗೆ ಸಾಧ್ಯವಾಗುವುದು. ಹೀಗಿರಲಾಗಿ ನಾನು ಯಾವುದನ್ನಾರಿಸಿಕೊಳ್ಳಬೇಕೆನ್ನುವುದು ನನಗೆ ತಿಳಿಯದು. 23
1:23 2 ಕೊರಿ. 5:8
ಈ ಎರಡರ ನಡುವೆ ಸಿಕ್ಕಿಕೊಂಡಿದ್ದೇನೆ,
1:23 2 ತಿಮೊ. 4:6
ಇಲ್ಲಿಂದ ಹೊರಟು
1:23 ಯೋಹಾ. 12:26
ಕ್ರಿಸ್ತನ ಜೊತೆಯಲ್ಲಿರಬೇಕೆಂಬುದೇ ನನ್ನ ಅಭಿಲಾಷೆ, ಅದು ಅತ್ಯುತ್ತಮವಾಗಿದೆ.
24ಆದರೆ ನಾನಿನ್ನೂ ಶರೀರದಲ್ಲಿ ವಾಸಮಾಡಿಕೊಂಡಿರುವುದು ನಿಮಗೋಸ್ಕರ ಬಹು ಅವಶ್ಯಕವಾಗಿದೆ.

25ಆದ್ದರಿಂದ ನಿಮಗೆ ಕ್ರಿಸ್ತನಂಬಿಕೆಯಲ್ಲಿ ಅಭಿವೃದ್ಧಿಯೂ
1:25 ರೋಮಾ. 15:13
ಆನಂದವೂ ಉಂಟಾಗುವುದಕ್ಕೋಸ್ಕರ ನಾನು ಜೀವದಿಂದುಳಿದು ನಿಮ್ಮೆಲ್ಲರ ಬಳಿಯಲ್ಲಿರುವೆನೆಂದು ದೃಢವಾಗಿ ನಂಬಿದ್ದೇನೆ.
26ಹೀಗೆ ನಾನು ತಿರುಗಿ ನಿಮ್ಮ ಬಳಿಗೆ ಬರುವುದರಿಂದ
1:26 2 ಕೊರಿ. 1:14
ನೀವು ಕ್ರಿಸ್ತ ಯೇಸುವಿನ ವಿಷಯವಾಗಿ ಉಲ್ಲಾಸಪಡುವುದಕ್ಕೆ ನನ್ನಿಂದ ಅಧಿಕ ಆಸ್ಪದವಿರುವುದು.

ಕ್ರೈಸ್ತರು ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳಬೇಕೆಂಬ ಬೋಧನೆ

27
1:27 ಎಫೆ. 4:1
ಹೇಗೂ ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳಿರಿ. ಆಗ ನಾನು ಬಂದು ನಿಮ್ಮನ್ನು ನೋಡಿದರೂ ಸರಿಯೇ, ದೂರದಲ್ಲಿದ್ದು ನಿಮ್ಮ ಸುದ್ದಿಯನ್ನು ಕೇಳಿದರೂ ಸರಿಯೇ, ನೀವು ನಿಮ್ಮ ವಿರೋಧಿಗಳಿಗೆ ಯಾವ ವಿಷಯದಲ್ಲಾದರೂ ಹೆದರದೆ ಏಕಮನಸ್ಸಿನಿಂದ
1:27 1 ಕೊರಿ. 16:13
ದೃಢವಾಗಿ ನಿಂತು ಸುವಾರ್ತೆಯಲ್ಲಿಟ್ಟ ನಂಬಿಕೆಗೋಸ್ಕರ
1:27 ಫಿಲಿ. 2:2
ಐಕಮತ್ಯದಿಂದ ಹೋರಾಡುವವರಾಗಿದ್ದೀರೆಂದು ನಾನು ತಿಳಿದುಕೊಳ್ಳುವೆನು.

28ನೀವು ಹೀಗಿರುವುದು ವಿರೋಧಿಗಳ ನಾಶನಕ್ಕೂ,
1:28 ಅ. ಕೃ. 14:22
ನಿಮ್ಮ ರಕ್ಷಣೆಗೂ ಒಂದು ಗುರುತಾಗಿದೆ. ಅದು ದೇವರಿಂದಾದ ಮುನ್ಸೂಚನೆಯಾಗಿದೆ.
29ಕ್ರಿಸ್ತನ ಮೇಲೆ ನಂಬಿಕೆಯಿಡುವುದು ಮಾತ್ರವಲ್ಲ
1:29 ಮತ್ತಾ 5:12; ಅ. ಕೃ. 14:22
ಆತನಿಗೋಸ್ಕರ ಬಾಧೆಯನ್ನನುಭವಿಸುವುದು ನಿಮಗೆ ವರವಾಗಿ ದೊರಕಿದೆ.
ಹೀಗೆ ನೀವು
1:30 ಅ. ಕೃ. 16:19-40
ನನ್ನಲ್ಲಿ ಕಂಡಂಥ ಮತ್ತು ಈಗ ನನ್ನ ಕುರಿತಾಗಿ ಕೇಳುವಂಥ
1:30 ಕೊಲೊ. 1:29; 2:1
ಅದೇ ಹೋರಾಟವು ನಿಮಗೂ ಉಂಟು.

30

Copyright information for KanULB